Author: admin

ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ಕಸಬಾ ವಲಯದ ಸಿ ಬಡಾವಣೆ ಕಾರ್ಯಕ್ಷೇತ್ರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ವಾಸವಾಗಿರುವ ಕವಿತ ರವರ ಮನೆ ರಿಪೇರಿ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ಸ್ಥಳೀಯ ನಗರ ಸಭೆಯ ಸದಸ್ಯರಾದ ಮುನ್ನಾಫ್ H ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯ ಕಾರ್ಯಕ್ರಮದಿಂದ ಸಮಾಜದಲ್ಲಿ ಇರುವ ಬ್ಯಾಂಕ್ ಸೌಲಭ್ಯದಿಂದ ವಂಚಿತರಾದ ಕುಟುಂಬದವರಿಗೆ ಯಾವುದೇ ದಾಖಲಾತಿ ಇಲ್ಲದೆ ಬ್ಯಾಂಕ್ ಸೌಲಭ್ಯ ಒದಗಿಸುತ್ತಿರುವ ಸಂಸ್ಥೆ ಧರ್ಮಸ್ಥಳ ಆಗಿದೆ. ಈ ಸಂಸ್ಥೆಯಿಂದಾಗಿ ಜನರು ಸ್ವ– ಉದ್ಯೋಗ, ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ. ಹಾಗೆ ತಿಂಗಳ ಮಾಶಾಸನ, ಮನೆರಚನೆ, ಮನೆ ರಿಪೇರಿ, ಶೌಚಾಲಯ, ಸುಜ್ಞಾನ ನಿಧಿ, ನೆಲ್ಲಿನೀರು ವಾತ್ಸಲ್ಯ ಕಿಟ್ ಇತ್ಯಾದಿ ಸೌಲಭ್ಯ ಒದಗಿಸಿ ನಿರ್ಗತಿಕರ ಕುಟುಂಬಗಳಿಗೆ ಆಶ್ರಯ ಆಗಿರುವುದು ನಿಜಕ್ಕೂ ಹೆಮ್ಮೆ ಆಗಿದೆ. ಇಂತಹ ಸಂಸ್ಥೆಯನ್ನು ಬೆಳಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಶುಭ ನುಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಾಜಿ ನಗರ…

Read More

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ / ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾA., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ನವೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: 0816-2955580, 9844506629, 9886112434, 7349474339ನ್ನು ಸಂಪರ್ಕಿಸಬೇಕೆAದು ಪ್ರಾದೇಶಿಕ ನಿರ್ದೇಶಕ ಡಾ.ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಪರವಾನಗಿ ಹೊಂದಿರುವುದು ಕಡ್ಡಾಯವೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚನೆ ನೀಡಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುವ ಉದ್ದಿಮೆದಾರರು ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಉದ್ದಿಮೆಗಳಿಗೆ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಅನಧಿಕೃತವಾಗಿ ನಡೆಸುತ್ತಿರುವ ಉದ್ದಿಮೆಗಳಿಗೆ ಕೂಡಲೇ ಪರವಾನಗಿ ಪಡೆಯತಕ್ಕದ್ದು. ಉದ್ದಿಮೆ ಪರವಾನಗಿ ಪಡೆಯಲು ಹಾಗೂ ಪರವಾನಗಿ ನವೀಕರಣ ಮಾಡಿಕೊಳ್ಳಲು ನವೆಂಬರ್ 10 ಕಡೆಯ ದಿನವಾಗಿದೆ. ಪರವಾನಗಿ ಪಡೆಯದ ಉದ್ದಿಮೆಗಳ ವಿರುದ್ಧ ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ 1976 ನಿಯಮದ ಪ್ರಕಾರ ಪರವಾನಗಿ ಮೊತ್ತಕ್ಕೆ ತಕ್ಕಂತೆ ದಂಡ ವಿಧಿಸಿ ನಿರ್ದಾಕ್ಷಿಣ್ಯವಾಗಿ ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳು ಮತ್ತು ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನವಂಬರ್ 27ರಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜರ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸುವ ಬಗ್ಗೆ ಅಕ್ಟೋಬರ್ 28 ರಿಂದ ನಗರ/ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಸುತ್ತೋಲೆಯನ್ನು ಪ್ರಕಟಿಸಿ ಸಮೀಕ್ಷೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ. ಸಮೀಕ್ಷೆಯಲ್ಲಿ ಕಂಡು ಬಂದ ಅನೈರ್ಮಲ್ಯ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆ ಮಾಡುತ್ತಿರುವ ಮಾಲೀಕರಿಗೆ ಅನೈರ್ಮಲ್ಯ ಶೌಚಾಲಯಗಳನ್ನು ನಾಶಪಡಿಸಿ ನೈರ್ಮಲ್ಯ ಶೌಚಾಲಯಗಳನ್ನಾಗಿ ಮಾರ್ಪಡಿಸಲು ಡಿಸೆಂಬರ್ 5ರೊಳಗಾಗಿ ನೋಟೀಸ್ ನೀಡಬೇಕು. ಅನೈರ್ಮಲ್ಯ ಶೌಚಾಲಯಗಳು ಕಂಡು ಬರದ ಪ್ರದೇಶಗಳನ್ನು ಅನೈರ್ಮಲ್ಯ ಶೌಚಾಲಯಗಳ ರಹಿತ ಪ್ರದೇಶವೆಂದು ಘೋಷಿಸಲಾಗುವುದು. ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದ ಪ್ರದೇಶಗಳಲ್ಲಿ ಮಲ ಸ್ವಚ್ಛ ಮಾಡುವ ವೃತ್ತಿಯಲ್ಲಿರುವ…

Read More

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಆಗಸ್ಟ್ 28, 2014ರಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಗೊಂಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯ 101 ಅಪರಾಧಿಗಳ ಪೈಕಿ 98 ಮಂದಿಗೆ 9 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಚಂದ್ರಶೇಖರ್ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ. 117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು, ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ನ್ಯಾಯಧೀಶರಾದ ಚಂದ್ರಶೇಖರ್ ರಿಂದ ಮಹತ್ವದ ತೀರ್ಪು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರಿನ ಹೇಮಾವತಿ ನಾಲಾ ಉಪವಿಭಾಗ ವ್ಯಾಪ್ತಿಯಲ್ಲಿರುವ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳ ಜಲಾಶಯವು ಭರ್ತಿಯಾಗಿದೆ. ಜಿಲಾಶಯದ ಒಳ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುವ ಸಂಭವವಿದ್ದು, ಒಳ ಹರಿವಿಗೆ ತಕ್ಕಂತೆ ಜಲಾಶಯದಿಂದ ನೀರನ್ನು ಹೊರ ಬಿಡಲಾಗುವುದು. ಮಂಗಳ ಜಲಾಶಯದ ಕೆಳಭಾಗದ ಹಾಗೂ ನದಿ ಪಾತ್ರದ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಹೇಮಾವತಿ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಅಕ್ಟೋಬರ್ 28 ಮತ್ತು 29ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ 46 ಎಕರೆ ವಿಸ್ತೀರ್ಣದ ಮಾರನಕಟ್ಟೆ ಕೆರೆಯ 21 ಎಕರೆ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳನ್ನು ಸೇರಿದಂತೆ, ಖಾಸಗಿ ಸಂಘ–ಸಂಸ್ಥೆಗಳು ಕಟ್ಟಡಗಳನ್ನು ನಿರ್ಮಿಸಿ ಭಾಗಶಃ ಕೆರೆಯನ್ನು ನಾಶಪಡಿಸಿರುವ ಕುರಿತು ಇಂದು ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಈ ದೂರುವನ್ನು ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಮಾಜಸೇವಕ ಹೆಚ್.ಎಂ.ವೆಂಕಟೇಶ್, ಕಾಳಜಿ ಫೌಂಡೇಶನ್‌ನ ಜಿ.ಎಲ್. ನಟರಾಜ್, ಮಾಹಿತಿ ಹಕ್ಕು ರಾಜ್ಯ ವೇದಿಕೆಯ ಹೆಚ್.ಎಸ್. ಸ್ವಾಮಿ ಮತ್ತು ಮಾಹಿತಿ ಅಧ್ಯಯನ ಕೇಂದ್ರದ ಎಲ್.ಎಸ್. ಮಲ್ಲಿಕಾರ್ಜುನ್ ಅವರು ಸಲ್ಲಿಸಿದ್ದಾರೆ. ಕಾನೂನು ಉಲ್ಲಂಘಿಸಿ ಕೆರೆಯೊಳಗೆ ನಿರ್ಮಿಸಿದ ನ್ಯಾಯಾಧೀಶರ ವಸತಿಗೃಹ, ಶಿಕ್ಷಣ ಇಲಾಖೆಯ ಕಟ್ಟಡಗಳು ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳನ್ನು ತೆರವುಗೊಳಿಸಿ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಉಪಲೋಕಾಯುಕ್ತರು ಕೆರೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ಭೇಟಿ ನೀಡಿದ್ದು, ಅಲ್ಲಿನ ಹಂದಿ ಜೋಗಿ ಜನಾಂಗದ 42 ಕುಟುಂಬಗಳನ್ನು ಸ್ಥಳಾಂತರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ…

Read More

ಕೊರಟಗೆರೆ:  ಕಲ್ಲುಬಂಡೆ ಕ್ರಷರ್ ಲಾರಿಗಳ ಹಾವಳಿಯಿಂದ ಕೊರಟಗೆರೆಯ ಪಿಡ್ಲ್ಯೂಡಿ ಮುಖ್ಯ ರಸ್ತೆಯೇ ಮಾಯವಾಗಿದೆ.  ಹಗಲಿನಲ್ಲಿ ಅಪಘಾತ ಆದ್ರೆ ಸಣ್ಣ–ಪುಟ್ಟ ಗಾಯ ಆಗುತ್ತೇ..!!  ರಾತ್ರಿವೇಳೆ ಸಂಚರಿಸಿದ್ರೇ ಸಾವು ಖಚಿತವಾಗುತ್ತೆ ಎನ್ನುವಂತಿದೆ ಈ ರಸ್ತೆ. ಜೆಟ್ಟಿಅಗ್ರಹಾರದಿಂದ ಜಂಪೇನಹಳ್ಳಿ ಮಾರ್ಗವಾಗಿ ತೋವಿನಕೆರೆ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ 250 ಲಾರಿಗಳು  ಸಂಚಾರ ನಡೆಸುತ್ತಿದೆ.  ಜಂಪೇನಹಳ್ಳಿ ಕ್ರಾಸಿನಿಂದ ಗಟ್ಲಗೊಲ್ಲಹಳ್ಳಿಯ ವರೆಗಿನ 4 ಕಿ.ಮೀ. ರಸ್ತೆಯಲ್ಲಿ 40ಕ್ಕೂ ಅಧಿಕ ಗುಂಡಿಗಳು ಕಾಣುತ್ತದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ–ಜಂಪೇನಹಳ್ಳಿ ಮುಖ್ಯರಸ್ತೆಯಲ್ಲಿ ಇಂತಹದ್ದೊಂದು ಅವ್ಯವಸ್ಥೆ ಕಂಡು ಬಂದರೂ  ಸಾರಿಗೆ, ಪಿಡ್ಲ್ಯೂಡಿ ಹಾಗೂ ಗಣಿ, ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಕಚೇರಿಯಲ್ಲೇ ಕಣ್ಮುಚ್ಚಿ ಕುಳಿತಿದ್ದಾರೆ. ಕೊರಟಗೆರೆಯಲ್ಲಿ ಎಗ್ಗೀಲ್ಲದೇ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣವೇ ಇಲ್ಲವೇ.!  ಮಳೆ ಬಂದರೆ ರಸ್ತೆಯಲ್ಲಿ ಗುಂಡಿಗಳ ದರ್ಬಾರ್, ಬಿಸಿಲು ಬಂದರೇ ಸಾರ್ವಜನಿಕರಿಗೆ ಧೂಳಿನ ಶಾಪ.  ಸಾರ್ವಜನಿಕರು ಪ್ರಶ್ನೆ ಮಾಡಿದರೇ ಗಣಿಗಾರಿಕೆ ಮಾಲೀಕರ ಸಹಚರರಿಂದ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಆರೋಪ ಕೂಡ ಇದೆ. ಪಿಡ್ಲ್ಯೂಡಿ ಇಲಾಖೆಗೆ ಸ್ಥಳೀಯರು ದೂರು…

Read More

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್  ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ಪ್ರಮುಖ ಶೂಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿ ಸುಜಿತ್ ಸುಶೀಲ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಗ್ಯಾಂಗ್ ನ ಏಳು ‘ಶೂಟರ್’ಗಳನ್ನು ಕಳೆದ 48 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಾದ್ಯಂತ ಬಂಧಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಆರು ಅರೆ–ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಬಿಷ್ಣೋಯ್ ಗ್ಯಾಂಗ್ ನ ಇತರ ಕಾರ್ಯಾಚರಣೆಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More