Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ನವದೆಹಲಿ: 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾರ್ಯದರ್ಶಿಯಾದ ಲಕ್ಕಪ್ಪ ಸಿ.ಬಿ. ಸೆಕ್ರಟರಿಯಟ್ ಸದಸ್ಯರಾದ ಪಲ್ಲವಿ ಮತ್ತು ಭರತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಳುವಳಿಯ ಉದ್ದೇಶ: ನಮ್ಮ ದೇಶದ ನವೋದಯ ಚಳುವಳಿಯ ಮೂಲ ಉದ್ದೇಶ ಎಲ್ಲಾ ಹಳೆಯ ಕಂದಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಅವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವ ಹೆಣ್ಣು ಮಗುವು ಅಭದ್ರತೆಯಿಂದ ಬಳಲದ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧೈಯದೊಂದಿಗೆ ಹೋರಾಡಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದಿವೆ. ಆದರೆ ಇಂದಿಗೂ ಅಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕಿತ್ತು ತಿನ್ನುವ ಬಡತನ, ಹಸಿವೆಯಿಂದ ನರಳುತ್ತಿರುವ ಕಂದಮ್ಮಗಳು ಬೀದಿ ಹೆಣವಾಗುತ್ತಿದ್ದಾರೆ. ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಬಾಲ ಕಾರ್ಮಿಕರಾಗಿದ್ದಾರೆ. ಹೀಗೆ ಹತ್ತು ಹಲವು ಸಾಮಾಜಿಕ ಪಿಡುಗುಗಳಿಂದ ದೇಶ…
ಸರಗೂರು: ರಾಜ್ಯದ ಮೂರು ಕಡೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಸಾಧನೆಗೆ ರಾಜ್ಯದ ಜನತೆ ಬೆಂಬಲಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ನಾಗರಾಜು ಸಂಭ್ರಮ ವ್ಯಕ್ತಪಡಿಸಿದರು. ತಾಲೂಕಿನ ಪಟ್ಟಣದ ಪಂಚಾಯಿತಿ ಮುಂಭಾಗದಲ್ಲಿ ಶನಿವಾರ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಸಾಧಿಸಿದ ಅಂಗವಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜೆಡಿಎಸ್ ಸಮಬಲ ಹೋರಾಟಕ್ಕೆ ಸಜ್ಜಾಗಿ ನಿಂತಿದ್ದವು. ಚುನಾವಣೆ ಪೂರ್ವ ಸಮೀಕ್ಷೆಗಳು ಒಂದೊಂದು ಕ್ಷೇತ್ರದ ಸಮೀಕ್ಷೆಗಳನ್ನು ಡೋಲಾಯಮಾನವಾಗಿ ಬಿಂಬಿಸಿದ್ದವು. ಆದರೆ ಅವೆಲ್ಲವುಗಳನ್ನು ತಲೆ ಕಳಗಾಗಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನೇತಾರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರ ನೇತೃತ್ವದಲ್ಲಿ ಮತ್ತು ಡಿ.ಕೆ.ಶಿವಕುಮಾರ್ ಅವರ ಸೋದರ ಡಿ.ಕೆ.ಸುರೇಶ್ ಅವರ ನಿರ್ದೇಶನದಲ್ಲಿ ಚುನಾವಣೆ ಎದುರಿಸಲಾಯಿತು. ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ನ ಕೈ ಹಿಡಿದಿದೆ ಎಂದರು. ಈ…
ಪಾವಗಡ: ಈ ಬಾಲಕನ ಹೆಸರು ಅಯಾನ್. ಕಳೆದ ಎರಡು ತಿಂಗಳ ಹಿಂದೆ ಜ್ವರ ಬರುತ್ತಿದೆ ಎಂದು ಮನೆಯವರಿಗೆ ಗೊತ್ತಿಲ್ಲದೆ ನಾಲ್ಕೈದು ದಿನಗಳ ಕಾಲ ಡೈಕ್ಲೋ ಇಂಜೆಕ್ಷನ್ ಹಾಕಿಸಿಕೊಂಡಿದ್ದು, ಕಂಟಿನ್ಯೂಯಾಗಿ ಇಂಜೆಕ್ಷನ್ ಹಾಕಿಸಿಕೊಂಡಿರುವುದರಿಂದ ಈತನ ಒಂದು ಕಾಲು ಇನ್ಫೆಕ್ಷನ್ ಗೆ ತುತ್ತಾಗಿದೆ. ಸದ್ಯ ಮೂರು ಬಾರಿ ಇತರ ಕಾಲಿಗೆ ಆಪರೇಷನ್ ಮಾಡಿಸಲಾಗಿದೆ, ಸೋಮವಾರ ಮತ್ತೊಮ್ಮೆ ಸರ್ಜರಿ ಮಾಡುವ ಅಗತ್ಯ ಇರುವುದರಿಂದ ಇದಕ್ಕೆ 2 ಲಕ್ಷಕ್ಕೂ ಅಧಿಕ ಹಣ ಬೇಕಾಗಿರುತ್ತದೆ. ಈತನ ತಂದೆ ಕಲೀಮ್ ಸಾಬ್ ಅವರು ಆಟೋ ಚಾಲನೆ ಮಾಡುತ್ತಾರೆ ತಾಯಿ ನಸ್ರಿನ್ ಅವರು ಮನೆಯಲ್ಲಿ ಹೂವಿನ ಹಾರಗಳನ್ನು ಹೊಲಿಯುತ್ತಾ ಜೀವನ ಸಾಗಿಸುತ್ತಾರೆ. ತಮ್ಮ ಬಳಿ ಇರುವಂತಹ ಹಣ ಮತ್ತು ನೆರೆಹೊರೆಯವರಿಂದ ಸಾಕಷ್ಟು ಸಾಲ ಮಾಡಿ ಇಲ್ಲಿಯವರೆಗೂ ಚಿಕಿತ್ಸೆ ಕೊಡಿಸಿದ್ದು ಸರ್ಜರಿಗೆ ಬೇಕಾದ ಹಣ ಹೊಂದಿಸಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಇವರಿದ್ದಾರೆ. ಈ ನಡುವೆ ಇವರ ಬಿಪಿಎಲ್ ಕಾರ್ಡ್ ನಲ್ಲಿ ಐಯಾನ್ ಹೆಸರನ್ನು ತೆಗೆದು ಹಾಕಲಾಗಿದೆ. ಹೀಗಾಗಿ ಇವರು ಇದೀಗ ತಮ್ಮ ಮಗನ ಚಿಕಿತ್ಸೆಗೆ…
ಬೆಳ್ತಂಗಡಿ: ಸಾಹಿತ್ಯ ಹಾಗೂ ಸಂಗೀತಗಳು ಒಂದು ಮರದ ಎರಡು ಕೊಂಬೆಗಳು ಇದ್ದಂತೆ ಇವುಗಳ ಬೆಳವಣಿಗೆಗೆ, ಜಿನಭಜನೆ ಅತಿ ಅಗತ್ಯವಾಗಿದೆ, ಭಾಷಾ ಸಂಗೀತಕ್ಕೆ ಮೂಲ ಬೇರಾಗಿರುವ ಜಿನಭಜನೆಗೆ ಪ್ರೋತ್ಸಾಹ ಅಗತ್ಯ ಎಂದು ರಾಜ್ಯಸಭಾ ಸದಸ್ಯರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ, ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದರು. ಅವರಿಂದು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ– 8 ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆ– 20 24 ಉದ್ಘಾಟಿಸಿ ಮಾತನಾಡಿದರು. ಇಂದು ಸಾಹಿತ್ಯದ ಬೆಳವಣಿಗೆಗೆ ಜಿನ ಭಜನೆ ಅಗತ್ಯವಾಗಿದೆ, ಅಂತರಾತ್ಮದ ಕೂಗಿನ ಜೊತೆಯಲ್ಲಿ ಭಜನೆ ಸ್ಮರಿಸುವುದು ಅಗತ್ಯ ಇದರಿಂದ ತೀರ್ಥಂಕರ ಸ್ಮರಣೆ ಅವರ ತತ್ವಗಳು ಆದರ್ಶಗಳ ಆಚರಣೆ ಸಾಧ್ಯವಾಗಲಿದೆ ಎಂದರು. ಜನಿವಾರ ಒಂದು ಮೂಗುದಾರ ವಿದ್ದಂತೆ, ಇದರಿಂದ ತಪ್ಪನ್ನು ತಿದ್ದಲು ಸಾಧ್ಯವಾಗಲಿದೆ, ಸಾಹಿತ್ಯದ ಮೂಲಕ ಸಂಗೀತ ಪ್ರವೇಶ ಸಾಧ್ಯವಾಗಲಿದ್ದು , ಸಂಗೀತ ಎಲ್ಲವನ್ನು ವಿವರಿಸಿದೆ ಎಂದರು . ಈ ಹಿಂದೆ ಸಿನಿಮಾ ಹಾಡಿಗೆ ಜನರು ಸಂಗೀತವನ್ನು…
ಅನಂತಪುರ: ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಆಟೋಗೆ ಸರ್ಕಾರಿ ಸಾರಿಗೆ ಬಸ್ ಡಿಕ್ಕಿಯಾದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗಾರ್ಲ್ದಿನ್ನೆ ಮಂಡಲದ ತಲಗಸ್ಪಲ್ಲಿ ಬಳಿ ಇಂದು ಬೆಳಗ್ಗೆ ನಡೆದಿದೆ. ಕುತ್ಲೂರು ಮಂಡಲದ ನೆಲ್ಲುಟ್ಲ ಗ್ರಾಮದ 12 ಕೃಷಿ ಕಾರ್ಮಿಕರು ಗಾರ್ಲ್ದಿನ್ನೆ ಬಳಿ ಗದ್ದೆಯಲ್ಲಿ ಕೆಲಸ ಮಾಡಿ ಆಟೋದಲ್ಲಿ ಹಿಂತಿರುಗುವಾಗ ಎದುರುಗಡೆಯಿಂದ ಬಂದ ಎಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಮೃತರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆನೀಡುವ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಅನಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸಂಭಾಲ್: ಸಂಭಾಲ್ ಮಸೀದಿ ಸಮೀಕ್ಷೆಯ ವೇಳೆ ಕಲ್ಲು ತೂರಾಟ ನಡೆದ ಘಟನೆ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಲಘುಲಾಠಿ ಪ್ರಹಾರ ನಡೆಸಿದ್ದಾರೆ. ಇದು ಪುರಾತನ ಹಿಂದೂ ಹರಿಹರ ದೇವಾಲಯವಾಗಿದ್ದು ಸಂಭಾಲ್ ಮಸೀದಿ ನಿರ್ಮಿಸಲಾಗಿದೆ ಎಂಬ ಪ್ರಕರಣ ಕುರಿತು ಸ್ಥಳೀಯ ನ್ಯಾಯಾಲಯದ ಸಮೀಕ್ಷೆಗೆ ಆದೇಶದ ನೀಡಿತ್ತು. ಸ್ಥಳೀಯ ಆಡಳಿತದ ಪ್ರಕಾರ, ವಿವಾದಿತ ಜಾಗದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಅಧಿಕಾರಿಗಳು ಬೆಳಿಗ್ಗೆ 7 ಗಂಟೆಗೆ ಸಮೀಕ್ಷೆ ಪ್ರಾರಂಭವಾದಾಗ ಜನಸಂದಣಿ ನೆರೆದಿದೆ. ಸ್ಥಳದಲ್ಲಿ ಜಮಾಯಿಸಿದ ಜನಸಂದಣಿಯಿಂದ ಕೆಲವು ದುಷ್ಕರ್ಮಿಗಳು ಭದ್ರತೆಗೆ ಇದ್ದ ಪೊಲೀಸ್ ಮೇಲೆ ಕಲ್ಲು ತೂರಿದರು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿ ನಂತರಅಶ್ರುವಾಯು ಬಳಸಿದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ವಿಷ್ಣೋಯ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಕಾರ್ತಿಕ ಮಾಸದ ಕಡೆ ಸೋಮವಾರದ ಅಂಗವಾಗಿ ವಿವಿಧ ಶಿವನ ದೇವಾಲಯಗಳಲ್ಲಿ ದೀಪೋತ್ಸವ ಹಾಗೂ ವಿಶೇಷ ಪೂಜಾ ಮಹೋತ್ಸವ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ನಂಜನಗೂಡಿನ ನಂಜುಂಡೇಶ್ವರ, ಯಡಿಯೂರು ಸಿದ್ದಲಿಂಗೇಶ್ವರ, ಬೆಂಗಳೂರಿನ ಗವಿಗಂಗಾಧರೇಶ್ವರ, ಕಾಡುಮಲ್ಲೇಶ್ವರ, ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ಹೊಳೆನಂಜುಂಡೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ ದೀಪೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಐತಿಹಾಸಿಕ ಬೆಂಗಳೂರಿನ ಬಸವನಗುಡಿಯ ಕಡಲೆಕಾಯಿ ಪರಿಷೆ ಕಳೆಗಟ್ಟಿದ್ದು, ವಿದ್ಯುತ್ ದೀಪಾಲಂಕಾರಗಳಿಂದ ಜಘಮಘಿಸುತ್ತಿದೆ.ನಾಳೆಯಿಂದ ಪರಿಷೆ ಪ್ರಾರಂಭವಾಗಲಿದೆ. ಆದರೆ ಎರಡು ದಿನಕ್ಕೂ ಮುಂಚಿತವಾಗಿಯೇ ಜಾತ್ರೆ ಜೋರಾಗಿ ನಡೆಯುತ್ತಿದೆ. ರಾಮಕೃಷ್ಣ ಆಶ್ರಮ ವೃತ್ತದಿಂದ ಬ್ಯೂಗಲ್ರಾಕ್, ಬುಲ್ ಟೆಂಪಲ್ ರಸ್ತೆ, ದೊಡ್ಡಗಣಪತಿ ದೇವಸ್ಥಾನಕ್ಕೆ ಹೊಂದಿಕೊಂಡಂತಿರುವ ರಸ್ತೆಗಳ ಬದಿಗಳಲ್ಲಿ ರಾಶಿರಾಶಿ ಕಡಲೆಕಾಯಿ, ಮಕ್ಕಳ ಆಟಿಕೆ ಸಾಮಾನುಗಳು ಸೇರಿದಂತೆ ಇತರೆ ಸಾಮಗ್ರಿಗಳ ವ್ಯಾಪಾರ ಜೋರಾಗಿದೆ. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಪರಿಷೆಯ…
ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನಾ ಕಾರ್ಯಕ್ರಮವು ಮನೆಯೊಂದು ಹಲವು ಬಾಗಿಲು ಎನ್ನುವಂತಾಗಿದೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣಕ್ಕೆ ಬಿಜೆಪಿಯ ಖಾಯಂ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಸವಾಲಾಗಿದ್ದಾರೆ. ವಕ್ಫ್ ನೋಟಿಸ್ ವಿರುದ್ಧ ನಾಳೆಯಿಂದ ಯತ್ನಾಳ್ ನೇತೃತ್ವದಲ್ಲಿ ಜಾಗೃತಿ ಅಭಿಯಾನ ಆರಂಭವಾಗಲಿದೆ. ಇದೇ ವೇಳೆ ಯತ್ನಾಳ್ ನೇತೃತ್ವದಲ್ಲಿ ನಡೆಯಲಿರುವ ಜಾಗೃತಿ ಅಭಿಯಾನಕ್ಕೆ ಪಕ್ಷದ ಯಾವುದೇ ಶಾಸಕರು, ಸಂಸದರು, ಪದಾಧಿಕಾರಿಗಳು, ಕಾರ್ಯಕರ್ತರು ಸೇರಿದಂತೆ ಯಾರೊಬ್ಬರೂ ಪಾಲ್ಗೊಳ್ಳಬಾರದು ಎಂದು ವಿಜಯೇಂದ್ರ ಮೌಖಿಕವಾಗಿ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ವರಿಷ್ಟರ ಅನುಮತಿ ಪಡೆಯದೇ, ಪಕ್ಷದ ಚಿಹ್ನೆಯನ್ನು ಬಳಸದೆ ಒಬ್ಬ ವ್ಯಕ್ತಿಯ ಪ್ರತಿಷ್ಟೆಗಾಗಿ ನಡೆಸಲು ಮುಂದಾಗಿರುವ ಈ ಅಭಿಯಾನದಿಂದ ದೂರ ಉಳಿಯುವಂತೆ ಸೂಚನೆ ಕೊಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ವಕ್ಫ್ ವಿರುದ್ಧ ಹೋರಾಟ ಹಮಿಕೊಂಡರೆ, ಯತ್ನಾಳ್ ಟೀಂ ಪ್ರತ್ಯೇಕ ಹೋರಾಟ ಹಮ್ಮಿಕೊಂಡಿದೆ. ಯತ್ನಾಳ್ ಟೀಂ ಬೀದರ್ನಿಂದ ಚಾಮರಾಜನಗರದವರೆಗೆ ಹೋರಾಟ ಜಾಥಾ ಹಮಿಕೊಂಡಿದೆ. ಈ ನಡುವೆ 3 ತಂಡವಾಗಿ ವಕ್ಫ್ ವಿರುದ್ಧ ಬಿ.ವೈ.ವಿಜಯೇಂದ್ರ ತಂಡ…
ಬೆಂಗಳೂರು: ಇವಿಎಂ ಹ್ಯಾಕ್ ನಿಂದ ಮಹಾರಾಷ್ಟ್ರವನ್ನು ಕಳೆದುಕೊಂಡಿದ್ದೇವೆ ಅನ್ನಿಸ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಸ್ಟ್ರಾಟಜೀ ಮಾಡುವುದರಲ್ಲಿಯೂ ಫೇಲ್ ಆಗಿದ್ದೇವೆ. ಮಹಾವಿಕಾಸ ಅಘಾಡಿ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಆದರೆ ಎಲ್ಲವೂ ಉಲ್ಟಾ ಆಗಿದೆ ಎಂದು ಹೇಳಿದ್ದಾರೆ. ಬಹಳಷ್ಟು ಕಡೆ ಇವಿಎಂ ಮ್ಯಾನಿಪುಲೇಟ್ ಮಾಡಿದ್ದಾರೆ ಎನ್ನುವ ಶಂಕೆ ಇದೆ. ಆದರೆ, ಜಾರ್ಖಂಡ್ ಚುನಾವಣೆಯಲ್ಲಿ ಯಾಕೆ ಹಾಗಾಗಲಿಲ್ಲ ಅಂದರೆ ಬಿಜೆಪಿಯವರು ಪ್ಲಾನ್ ಆಫ್ ಅಕ್ಷನ್ ರೀತಿ ಇದನ್ನು ಮಾಡುತ್ತಾರೆ. ನಂಬಿಕೆ ಬರಬೇಕೆಂದು ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಒಂದು ಸಮುದಾಯದ ಮತ ಗಳಿಸಿ ಉಪಚುನಾವಣೆ ಗೆದ್ದ ಮಾತ್ರಕ್ಕೆ ಮೂರು ಲೋಕವನ್ನೇ ಗೆದ್ದು ಬಿಟ್ಟೆವು ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಾಲೆಳೆದಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಯಾವುದು ಸುಳ್ಳು, ಯಾವುದು ಅಪಪ್ರಚಾರ? ವಾಲ್ಮೀಕಿ ನಿಗಮದಲ್ಲಿ ಕೋಟಿ ಕೋಟಿ ಹಣ ಅವ್ಯವಹಾರ ಆಗಿದೆ ಎಂದು ಸ್ವತಃ ತಾವೇ ಸದನದಲ್ಲಿ ಒಪ್ಪಿಕೊಂಡರಲ್ಲ, ಅದು ಸುಳ್ಳಾ? ಮೂಡಾ ಹಗರಣದಲ್ಲಿ ತಮ್ಮ 14 ಸೈಟು ವಾಪಸ್ಸು ಕೊಡುವ ಮೂಲಕ ಪರೋಕ್ಷವಾಗಿ ತಮ್ಮ ಪತ್ನಿಯವರ ಹೆಸರಿನಲ್ಲಿರುವ ತಪ್ಪನ್ನ ಒಪ್ಪಿಕೊಂಡಿದ್ದೀರಲ್ಲ ಅದು ಸುಳ್ಳಾ? ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ತನಿಖೆ ಅಗತ್ಯ ಇದೆ ಮಾನ್ಯ ಹೈಕೋರ್ಟ್ ಘಂಟಾಘೋಷವಾಗಿ ಹೇಳಿದ್ದು ಸುಳ್ಳಾ? ಎಂದು ಪ್ರಶ್ನಿಸಿದ್ದಾರೆ. ಮದ್ಯ ಮಾರಾಟಗಾರರ ಸಂಘ ತಮಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಇಲಾಖೆಯಲ್ಲಿ ತಿಂಗಳ ಮನಿ ಹೆಸರಿನಲ್ಲಿ, ವರ್ಗಾವಣೆ ದಂಧೆಯಲ್ಲಿ, ಲೈಸೆನ್ಸ್ ನವೀಕರಣದಲ್ಲಿ 700 ಕೋಟಿ ರೂಪಾಯಿ ಲಂಚದ ವ್ಯವಹಾರ ನಡೆದಿದೆ ಎಂದು ಹೇಳಿರುವುದು ಸುಳ್ಳಾ? ವಕ್ಸ್ ಮಂಡಳಿ ಹೆಸರಿನಲ್ಲಿ ಸರ್ಕಾರಿ…