Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
2008ರ ನವೆಂಬರ್ 7ರಂದು ಮೊದಲ ಬಾರಿಗೆ ಚಿತ್ರ ತೆರೆಕಂಡಿದ್ದ ನಟ ದರ್ಶನ್ ಅಭಿನಯದ ‘ನವಗ್ರಹ’ ಚಿತ್ರ ನ. 8 ರಂದು ಮರು ಬಿಡುಗಡೆಯಾಗಲಿದೆ. ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಾಣ ಮಾಡಿರುವ ಈ ಚಿತ್ರವನ್ನು ದಿನಕರ್ ತೂಗುದೀಪ ನಿರ್ದೇಶದ್ದಾರೆ. ವಿ. ಹರಿಕೃಷ್ಣ ಸಂಗೀತ ನೀಡಿದ್ದಾರೆ. ಎ.ವಿ. ಕೃಷ್ಣಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಭರ್ಜರಿ ಯಶಸ್ಸು ಕಂಡಿದ್ದ ಈ ಚಿತ್ರ ಮತ್ತೊಮ್ಮೆ ತೆರೆ ಕಾಣುತ್ತಿರುವುದು ದರ್ಶನ್ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ. ನನ್ನ ನಿರ್ದೇಶನದ 2ನೇ ಚಿತ್ರ ‘ನವಗ್ರಹ’, ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳ್ಳಿತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8 ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ ಎಂದು ದಿನಕರ್ ತೂಗುದೀಪ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಕಡಲೆಕಾಯಿಯಲ್ಲಿ ಪ್ರೋಟೀನ್, ಕಾರ್ಬ್ಸ್, ಫೈಬರ್ ಮತ್ತು ಕೊಬ್ಬಿನಾಮ್ಲಗಳ ಗುಣಲಕ್ಷಣಗಳಿವೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಆದರೆ ಕೆಲವರಿಗೆ ಇದು ಹಾನಿಕಾರಕವೂ ಹೌದು. ಥೈರಾಯ್ಡ್: ನೀವು ಹೈಪೋಥೈರಾಯ್ಡ್ ಹೊಂದಿದ್ದರೆ ಕಡಲೆಕಾಯಿಯು ನಿಮಗೆ ಹಾನಿ ಮಾಡುತ್ತದೆ. ಕಡಲೆಕಾಯಿಯನ್ನು ತಿನ್ನುವುದರಿಂದ TSH (ಥೈರಾಯ್ಡ್-ಉತ್ತೇಜಿಸುವ ಹಾರ್ಮೋನ್) ಮಟ್ಟ ಹೆಚ್ಚಾಗುತ್ತದೆ. ಇದು ಹೈಪೋಥೈರಾಯ್ಡಿಸಮ್ ಅನ್ನು ಹೆಚ್ಚಿಸುತ್ತದೆ. ಆದರೆ ಕಡಲೆಕಾಯಿಯನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಬಹುದು. ಯಕೃತ್ತಿನ ಸಮಸ್ಯೆ: ಯಕೃತ್ತಿನ ಸಮಸ್ಯೆ ಇದ್ದರೆ ನೀವು ಕಡಲೆಕಾಯಿಯನ್ನು ತಿನ್ನುವುದನ್ನು ತಪ್ಪಿಸಬೇಕು. ಕಡಲೆಕಾಯಿಯಲ್ಲಿರುವ ಅಂಶಗಳು ಯಕೃತ್ತಿನ ಆರೋಗ್ಯಕ್ಕೆ ಹಾನಿಕಾರಕ ಮತ್ತು ಇದನ್ನು ತಿನ್ನುವುದರಿಂದ ಯಕೃತ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಕಡಲೆಕಾಯಿಯನ್ನು ಹೆಚ್ಚು ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಹಾನಿಯಾಗುತ್ತದೆ ಮತ್ತು ಅಜೀರ್ಣ ಉಂಟಾಗುತ್ತದೆ. ಅಲರ್ಜಿ: ಕೆಲವರಿಗೆ ಕೆಲವು ಬಗೆಯ ಆಹಾರಗಳೆಂದರೆ ಅಲರ್ಜಿ. ಅನೇಕರಿಗೆ ಕಡಲೆಕಾಯಿ ತಿಂದರೆ ಅಲರ್ಜಿಯಾಗುತ್ತದೆ. ಅಂಥವರು ಅದರಿಂದ ದೂರವಿರಿ. ಅಲರ್ಜಿ ಸಮಸ್ಯೆ ಇದ್ದರೂ ಕಡಲೆಕಾಯಿ ತಿಂದರೆ ಉಸಿರಾಟದ ತೊಂದರೆ ಮತ್ತು ಚರ್ಮದ ತುರಿಕೆಗೆ ಒಳಗಾಗಬಹುದು. ತೂಕ ಹೆಚ್ಚಳ: ಕಡಲೆಕಾಯಿಯಲ್ಲಿ ಪೋಷಕಾಂಶಗಳು…
ಥಾಣೆ: ಕಾರು ಮತ್ತು ಡಂಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನವಿ ಮುಂಬೈನಲ್ಲಿ ಇಂದು ಮುಂಜಾನೆ ನಡೆದಿದೆ. ಮೃತಪಟ್ಟವರಲ್ಲಿ ಓರ್ವ ಮಹಿಳೆ ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ವಾಶಿ ಕ್ರೀಕ್ ಸೇತುವೆಯ ಮೇಲೆ ಮುಂಜಾನೆ 4:15 ರ ಸುಮಾರಿಗೆ ಅವರ ಕಾರು ಅಪಘಾತಕ್ಕೀಡಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರು ಡಂಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆದರೆ, ಅಪಘಾತ ಹೇಗೆ ಸಂಭವಿಸಿತು ಎಂಬುದು ಪೊಲೀಸರಿಗೆ ಇನ್ನೂ ಖಚಿತವಾಗಿಲ್ಲ ಎನ್ನಲಾಗಿದೆ. ಇಬ್ಬರು ಪುರುಷರು ಮತ್ತು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ, ಪೊಲೀಸರು ಎಫ್‌ಐಆರ್ ದಾಖಲಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚನ್ನರಾಯಪಟ್ಟಣ: ಕೆರೆಯಲ್ಲಿ ಮುಳುಗಿ ತಾಯಿ-ಮಗಳು ಸಾವನ್ನಪ್ಪಿರುವ ದಾರುಣ ಘಟನೆ ತಾಲ್ಲೂಕಿನ ಸಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ನಂಜಮ (60), ಮಗಳು ಗೀತಾ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹಸು ತೊಳೆಯಲು ಗ್ರಾಮದ ಕೆರೆಗೆ ಹೋಗಿದ್ದು, ಈ ವೇಳೆ ಕಾಲುಜಾರಿ ಕೆರೆಗೆ ಬಿದ್ದ ಮಗಳು ಗೀತಾಳನ್ನು ರಕ್ಷಿಸಲು ತಾಯಿ ನಂಜಮ ನೀರಿಗಿಳಿದಿದ್ದಾರೆ. ದುರದೃಷ್ಟವಶಾತ್ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪುಣೆ: ಸಾಕು ನಾಯಿಯನ್ನು ಮರಕ್ಕೆ ನೇತುಹಾಕಿ ಕೊಂದ ಆರೋಪದ ಮೇಲೆ ತಾಯಿ–ಮಗನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮುಲ್ಶಿ ತಹಸಿಲ್ನ ಪಿರಂಗುಟ್ ಪ್ರದೇಶದಲ್ಲಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಪ್ರಭಾವತಿ ಜಗತಾಪ್ ಮತ್ತು ಅವರ ಪುತ್ರ ಓಂಕಾರ್ ಜಗತಾಪ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನೆ ಕುರಿತು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದು, ಕೃತ್ಯಕ್ಕೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪುಣೆ ನಗರ ಪೊಲೀಸರಿಗೆ ಮನವಿ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಮಿಷನ್ ಪಾಸಿಬಲ್ ಫೌಂಡೇಶನ್ ಎಂಬ ನಾಯಿಗಳ ಆಶ್ರಯಧಾಮ ನಡೆಸುತ್ತಿರುವ ಪ್ರಾಣಿ ಕಾರ್ಯಕರ್ತೆ ಪದ್ಮಿನಿ ಸ್ಟಂಪ್ ಅವರು ತಾಯಿ ಮತ್ತು ಮಗನ ವಿರುದ್ಧ ಪುಣೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ. ‘ಅಕ್ಟೋಬರ್ 22ರಂದು ಪ್ರಭಾವತಿ ಅವರು ತಮ್ಮ ಸಾಕು ನಾಯಿಯ ಮೇಲೆ ಕೋಲಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದರು. ಬಳಿಕ…
ಮೀರತ್ : ಮಹಿಳೆಯ ಮೊಬೈಲ್ ಕದ್ದ ಕಳ್ಳನಿಗೆ ಸ್ಥಳೀಯರು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಮಾರುಕಟ್ಟೆ ಪ್ರದೇಶದಲ್ಲಿ ಯುವಕ ಮಹಿಳೆಯ ಫೋನ್ ಕಸಿದು ಕೊಂಡು ಸ್ಥಳದಿಂದ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆತ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಸ್ಥಳೀಯರು ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಲ್ಲೆ ನಡೆಸುತ್ತಿರುವ ಜನರೊಂದಿಗೆ ಸೇರಿ ಮೊಬೈಲ್ ಕಳೆದುಕೊಂಡು ಮಹಿಳೆ ಕೂಡ ಯುವಕನಿಗೆ ಥಳಿಸಿದ್ದಾಳೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಡೆಯಬೇಡಿ ಎಂದು ಯುವಕ ಬೇಡಿಕೊಂಡರೂ, ಕ್ಷಮೆಯಾಚಿಸಿದರೂ, ಮಹಿಳೆ ಮತ್ತು ಜನರು ಹಲ್ಲೆ ನಡೆಸುತ್ತಲೇ ಇದ್ದರು. ಈ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಬೇಗಂಪುಲ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ಅರ್ಮಾನ್ ಎಂದು ಗುರುತಿಸಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಮಕ್ಕಳನ್ನು ಕೆಲಸಕ್ಕಲ್ಲ. ಶಾಲೆಗೆ ಕಳುಹಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಅವರು ಪೋಷಕರಲ್ಲಿ ಮನವಿ ಮಾಡಿದರು. ಕಾರ್ಮಿಕ ಇಲಾಖೆಯಿಂದ ನಗರದ ಕುರಿ ಪಾಳ್ಯದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಗುರುವಾರ ಬಾಲಕಾರ್ಮಿಕ ವಿರೋಧಿ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 18 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಕಳುಹಿಸದೆ ಶಿಕ್ಷಣ ನೀಡಬೇಕು. ಶಿಕ್ಷಣವಿಲ್ಲದೆ ಮಕ್ಕಳ ಭವಿಷ್ಯವನ್ನು ಹಾಳು ಮಾಡಬಾರದು ಎಂದು ಜಾಗೃತಿ ಮೂಡಿಸಿದರು. ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯುವ ನಿಟ್ಟಿನಲ್ಲಿ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಕಾರ್ಮಿಕ ನಿರೀಕ್ಷಕರಾದ ನಾಗಭೂಷಣ, ಚಂದ್ರು ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಜರಿದ್ದರು.
ತುಮಕೂರು: ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೋಡಿ ನೀರಿನಿಂದ 2 ಮನೆಗಳು ಬಿದ್ದಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತ–ವ್ಯಸ್ತವಾಗಿರುವುದನ್ನು ಕಂಡ ಜಿಲ್ಲಾಧಿಕಾರಿಗಳು ಕೂಡಲೇ ಜಲಾವೃತವಾಗಿರುವ ಮನೆಗಳ ಕುಟುಂಬದ ಸದಸ್ಯರನ್ನು ಜಿಲ್ಲಾಡಳಿತದ ವತಿಯಿಂದ ದಿಬ್ಬೂರು ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು. ಸ್ಥಳದಲ್ಲಿದ್ದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಳೆದ 2019 ಹಾಗೂ 2022ರಲ್ಲಿ ಅಮಾನಿಕೆರೆ ಕೋಡಿ ನೀರು ನುಗ್ಗಿ ಇಲ್ಲಿನ ನಿವಾಸಿಗಳ ಜೀವನ ಅಸ್ತ–ವ್ಯಸ್ತವಾಗಿತ್ತು. ಇದೇ ಬಡಾವಣೆಯ ಸರ್ವೇ ನಂಬರ್ 207 ಹಾಗೂ 208ರಲ್ಲಿರುವ ರಾಜಗಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲದ ಕಾರಣ ದಿಬ್ಬೂರು ಬಡಾವಣೆ ಜಲಾವೃತಗೊಂಡಿದೆ. ಅಲ್ಲದೆ ನಗರದಲ್ಲಿರುವ ಮುಖ್ಯ ರಾಜಗಾಲುವೆಗಳು ಒತ್ತುವರಿಯಾಗಿರುವುದರಿಂದಲೂ…
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 28ರಂದು ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 28ರಂದು ಜಿಲ್ಲೆಯ ತಿಪಟೂರು ತಾಲೂಕಿನ ಕರಡಿ; ತುಮಕೂರು ತಾಲೂಕಿನ ಹೆಬ್ಬೂರು; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಾಣದಾಳು, ರಾಮನಹಳ್ಳಿ, ಕುಪ್ಪೂರು ಹಾಗೂ ಹೊನ್ನೇಭಾಗಿ; ಕುಣಿಗಲ್ ತಾಲೂಕಿನ ಮಡಿಕೆಹಳ್ಳಿ; ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು–ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಾಹಿತ್ಯವಾರ ಆಚರಣೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡುವುದಲ್ಲದೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಕವಿಗಳ ಇತಿಹಾಸದ ಪರಿಚಯವಾಗುತ್ತದೆ. ಭಾರತದ ಇತರೆ ಭಾಷೆಗಳಿಗಿಂತ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದ್ದು, ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ…