Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಪ್ರೇಮಾಂಜಲಿ ಕನ್ನಡ ಪ್ರೌಢಶಾಲೆ, ಉಜನಿ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ ಶಾಲಾ ಸಾಂಸ್ಕೃತಿಕ ಮತ್ತು ಸಾಹಿತ್ಯ ಉತ್ಸವ ಮತ್ತು ಸ್ಪೋರ್ಟ್ ಕಾರ್ಯಕ್ರಮದಲ್ಲಿ 10 ಶಾಲೆಗಳಿಂದ 500 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಿರಂಗಾ ಕಾರ್ಯಕ್ರಮದಲ್ಲಿ ಅಂತರ್ ಶಾಲಾ ಕ್ರೀಡೋತ್ಸವ, ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಸ್ ಎಲ್ ಸಿ ನೋಡಲ್ ಅಧಿಕಾರಿ ECO ಬಲ ಭೀಮ್ ಕುಲಕರ್ಣಿ ಮಾತನಾಡಿ, ಕಾರ್ಯಕ್ರಮವು ಸಹಯೋಗ ತತ್ವ, ಸಕಾರಾತ್ಮಕ ಮನೋಭಾವ, ಕೌಶಲ ಪ್ರದರ್ಶನ, ಆರೋಗ್ಯಕರ ಸ್ಪರ್ಧೆ, ಸಹಿಷ್ಣುತೆ, ಸಂಯಮ, ಬುದ್ಧಿವಂತಿಕೆ, ಶಕ್ತಿ ಪ್ರದರ್ಶನ, ಕ್ರೀಡಾ ಮನೋಭಾವ, ಎಲ್ಲದಕ್ಕಿಂತ ಹೆಚ್ಚಾಗಿ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿತ್ತು ಎಂದು ಹೇಳಿದರು. ಅದೇ ರೀತಿ ದೈಹಿಕ ಶಿಕ್ಷಣ ಪರಿವಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ TPO ಜೋಯಲ್ ಜಯರಾಜ್ ಇವರು ಮಾತನಾಡಿ, ಮಕ್ಕಳಿಗೆ ದೈಹಿಕ ಆಟಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿದರು ಹಾಗೂ ಆಟಗಳು ಆಧುನಿಕಯುಗದಲ್ಲಿ ಬಹಳಷ್ಟು ಮಹತ್ವ ಎಂದು ಈ ರೀತಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಂಪನ್ಮೂಲ…
ಕೊರಟಗೆರೆ: ಗಾಂಜಾ ಮಾರಾಟ ಜಾಲವನ್ನು ಭೇದಿಸಿದ ಕೊರಟಗೆರೆ ಪೊಲೀಸರು 5 ಗ್ರಾಂ ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೊರಟಗೆರೆ ಪಟ್ಟಣದ ಬೈಲಾಂಜನೇಯ ದೇವಾಲಯದ ಬಳಿ ಗಾಂಜಾ ಪಾಕೇಟ್ ವಹಿವಾಟು ನಡೆಸಲಾಗುತ್ತಿತ್ತು. 5 ಗ್ರಾಂ ಗಾಂಜಾ ಸೊಪ್ಪಿಗೆ 500ರೂ. ದರ ನಿಗದಿ ಮಾಡಿದ್ದು, ದ್ವಿಚಕ್ರವಾಹನದಲ್ಲಿ ಎಲೆಕ್ಟ್ರಾನಿಕ್ ತಕ್ಕಡಿ ಜೊತೆಗೆ ಆರೋಪಿಗಳು ಮಾರಾಟಕ್ಕೆ ಬಂದಿದ್ದರು. ಮಾದಕ ವಸ್ತುಗಳ ಪತ್ತೆ ಮತ್ತು ತಡೆಗೆ ಹದ್ದಿನ ಕಣ್ಣಿಟ್ಟಿರುವ ತುಮಕೂರು ಎಸ್ಪಿ ಅಶೋಕ ವೆಂಕಟ್ ಮಾರ್ಗದರ್ಶನದಲ್ಲಿ ಕೊರಟಗೆರೆ ಸಿಪಿಐ ಅನಿಲ್ ಮತ್ತು ಪಿಎಸೈ ಚೇತನ್ ನೇತೃತ್ವದ ಪೊಲೀಸರ ತಂಡದಿಂದ ದಿಡಿರ್ ದಾಳಿ ನಡೆಸಿದೆ. ಈ ವೇಳೆ ಅಂತರ್ ಜಿಲ್ಲೆಯ 4 ಜನರ ಆರೋಪಿಗಳ ಜೊತೆ 960 ಗ್ರಾಂ ಗಾಂಜಾ ಸೊಪ್ಪಿನ ಪಾಕೆಟ್ ಗಳು ಪೊಲೀಸರ ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯದಿಂದ ಗುಲ್ಬರ್ಗಾ ಮಾರ್ಗವಾಗಿ ತುಮಕೂರು ಜಿಲ್ಲೆಗೆ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿತ್ತು. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಮತ್ತು ಮಧುಗಿರಿ ಡಿವೈಎಸ್ಪಿ ರಾಮಚಂದ್ರಯ್ಯ ಭೇಟಿ ಪರಿಶೀಲನೆ ನಡೆಸಿದ್ದಾರೆ.…
ಬೆಂಗಳೂರು: ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್ ಎದುರು ಸೋಲನುಭವಿಸಿದ್ದಾರೆ. ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಭರತ್ ಬೊಮ್ಮಾಯಿ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ. ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ– ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ನವೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟದ ಪ್ರಯುಕ್ತ ಅಂದು ಬೆಳಿಗ್ಗೆ 8 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಕ್ರೀಡಾಜ್ಯೋತಿಯ ಭವ್ಯ ಮೆರವಣಿಗೆ ನಡೆಯಲಿದೆ. ರಾಜ್ಯ ಜಲಶಕ್ತಿ ಹಾಗೂ ರೈಲ್ವೆ ಖಾತೆ ಕೇಂದ್ರ ಸಚಿವರು ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಾಧಕರನ್ನು ಸನ್ಮಾನಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆವಹಿಸಲಿದ್ದು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಹಿರಿಯ ಕ್ರಿಕೆಟ್ ಆಟಗಾರರು ಹಾಗೂ ಭಾರತ ಕ್ರಿಕೆಟ್…
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ತುಮಕೂರು ವಿಶ್ವವಿದ್ಯಾನಿಲಯದ ಬಿದರಕಟ್ಟೆಯ ನೂತನ ಜ್ಞಾನಸಿರಿ ಕ್ಯಾಂಪಸ್ ಗೆ ಸಾರಿಗೆ ಸೇವೆ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ತುಮಕೂರು ನಗರ ಬಸ್ ನಿಲ್ದಾಣದಿಂದ ಜ್ಞಾನಸಿರಿ ಕ್ಯಾಂಪಸ್ಗೆ ಬೆಳಿಗ್ಗೆ 8:30, 9, 9:30, 10, 10:30, 11, 11:30, 12, ಮಧ್ಯಾಹ್ನ 1:15, 1:40, 2:45, 3, 3:05, 3:30, 4:10, 4:30 ಗಂಟೆಗೆ ಹಾಗೂ ಜ್ಞಾನಸಿರಿ ಕ್ಯಾಂಪಸ್ನಿAದ ತುಮಕೂರಿಗೆ ಬೆಳಿಗ್ಗೆ 9:45, 10:15, 10:45, 11:15, 11:45, ಮಧ್ಯಾಹ್ನ 12:15, 12:45, 2, 2:20, 3:30, 3:45, 4, 4:15, 4:55, 5:30 ಗಂಟೆಗೆ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ರುಡ್ ಸೆಟ್ ಸಂಸ್ಥೆಯು ಡಿಸೆಂಬರ್ ಎರಡನೇ ವಾರದಲ್ಲಿ ಹಸು ಸಾಕಾಣಿಕೆ(ಹೈನುಗಾರಿಕೆ) ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ತಿಪಟೂರು ನಗರಸಭೆಯ 2025–26ನೇ ಸಾಲಿನ ಆಯವ್ಯಯ ಅಂದಾಜು ಪಟ್ಟಿ ತಯಾರಿಸಲು ಅಧ್ಯಕ್ಷ ಯಮುನಾ ಎ.ಎಸ್. ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತಿಪಟೂರು ನಗರಸಭಾ ಸಭಾಂಗಣದಲ್ಲಿ ಮೊದಲನೇ ಸುತ್ತಿನ ಸಾರ್ವಜನಿಕ ಸಮಾಲೋಚನಾ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ತಿಪಟೂರು ನಗರದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೊಟೇಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ನರ್ಸಿಂಗ್ ಹೋಮ್ಸ್ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಪದಾಧಿಕಾರಿಗಳು, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಆಯವ್ಯಯ ತಯಾರಿಕೆಗೆ ಸಲಹೆ/ಅಭಿಪ್ರಾಯಗಳನ್ನು ನೀಡಬೇಕೆಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1, 2, 3; ಗ್ರಾಮೀಣ ಉಪವಿಭಾಗ–1, 2; ಗುಬ್ಬಿ ಹಾಗೂ ನಿಟ್ಟೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಕೃಷಿ ನೀರಾವರಿ ಪಂಪ್ ಸೆಟ್ ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಂಡಿರುವ ರೈತರು ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಸಕ್ರಮೀಕರಣಗೊಳಿಸಿಕೊಳ್ಳಬಹುದಾಗಿದೆ. ಗ್ರಾಹಕರು ನಿಗಧಿತ ಶುಲ್ಕ ಹಾಗೂ ಅಗತ್ಯ ದಾಖಲೆಗಳನ್ನು ನವೆಂಬರ್ 30ರೊಳಗಾಗಿ ಸಂಬಂಧಿಸಿದ ಉಪವಿಭಾಗ/ಶಾಖೆಗಳಿಗೆ ಸಲ್ಲಿಸಿ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು ಸಕ್ರಮೀಕರಣಗೊಳಿಸಿಕೊಳ್ಳಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬಗಾಡಿಯ ಚೈತ್ರ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ರಾಣಿ ಇಂಜಿನ್ ವಾಲ್ವ್ ಲಿಮಿಟೆಡ್, ಅನ್ ಲಿಮಿಟೆಡ್, ವೆಕ್ಸ್ಫೋರ್ಡ್, ಫರ್ನಿಚರ್ ಫಿಟ್ಟಿಂಗ್ ಸ್ಕಿಲ್ಡ್ ಕೌನ್ಸಿಲ್ ಹಾಗೂ ವಾಯ್ಸ್ ಆಫ್ ನೀಡಿ ಫೌಂಡೇಶನ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ನವೆಂಬರ್ 25ರಂದು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಉತ್ತೀರ್ಣ/ಅನುತ್ತೀರ್ಣ; ಐಟಿಐ, ಡಿಪ್ಲೋಮಾ, ಯಾವುದೇ ಪದವಿ, ಜಿ.ಎನ್.ಎಂ., ಬಿ.ಎಸ್ಸಿ(ನರ್ಸಿಂಗ್), ಬಿ.ಫಾರ್ಮ, ಎಂ.ಫಾರ್ಮ, ಎಂ.ಎಸ್ಸಿ(ನರ್ಸಿಂಗ್), ಬಿ.ಇ.(ಮೆಕಾನಿಕಲ್ ನಲ್ಲಿ 1 ರಿಂದ 2 ವರ್ಷಗಳ ಅನುಭವ ಕಡ್ಡಾಯ) ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನವೆಂಬರ್ 25ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, 9071021143. 9513136642ನ್ನು ಸಂಪರ್ಕಿಸಬೇಕೆಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಡಿಸೆಂಬರ್ 1ರಂದು ಸಂಜೆ 5:30 ಗಂಟೆಗೆ 39ನೇ ವರ್ಷದ ಲಕ್ಷದೀಪೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ಸ್ವಾಮೀಜಿಗಳು, ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಲಕ್ಷದೀಪೋತ್ಸವ ವಿಶೇಷ ಸೇವೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಮಹೇಶ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q