Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಉಪ ಚುನಾವಣೆ ನಡೆಯಲಿದ್ದು, ಮತದಾನದ ಸಂಬಂಧ ಮತಗಟ್ಟೆ ಸ್ಥಾಪಿಸಿರುವ ಶಾಲೆಗಳಿಗೆ ಚುನಾವಣೆ ದಿನದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಗಡದವರಿಗೆ ಮೀಸಲಿಟ್ಟಿರುವ ಸ್ಮಶಾನ ಭೂಮಿಯನ್ನು ಸರ್ವೇ ಮಾಡಿ, ಸ್ಮಶಾನ ಭೂಮಿ ಒತ್ತುವರಿಯಾಗದಂತೆ ಅಗತ್ಯ ಕ್ರಮ ಕೈಗೊಂಡು ಅಭಿವೃದ್ಧಿ ಪಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ತ್ರೈಮಾಸಿಕ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸ್ಮಶಾನ ಭೂಮಿ ಮೀಸಲಿಡಲು ಈಗಾಗಲೇ ಸೂಚನೆ ನೀಡಲಾಗಿದ್ದು ಮುಂದಿನ ಸಭೆಯೊಳಗೆ ಸ್ಮಶಾನ ಭೂಮಿ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು. ಕೊರಟಗೆರೆ ಬಸ್ ನಿಲ್ದಾಣದಲ್ಲಿ ನಡೆದ ದಲಿತ ಬಾಲಕ ಮಲ ಹೊತ್ತ ಘಟನೆಗೆ ಸಂಬಂಧಿಸಿದಂತೆ ದಲಿತ ಮುಖಂಡರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ತಪ್ಪಿತಸ್ಥರು ಕೂಡ…
ತುಮಕೂರು: ಡಿಜಿಟಲ್ ಕೌಶಲ್ಯಗಳನ್ನು ಹೆಚ್ಚಾಗಿ ರೂಢಿಸಿಕೊಂಡರೆ ಮಾಧ್ಯಮರಂಗದಲ್ಲಿ ಉತ್ತಮ ಭವಿಷ್ಯವಿದೆ. ಇದರೊಂದಿಗೆ ಪ್ರಚಲಿತ ವಿದ್ಯಮಾನಗಳ ತಿಳುವಳಿಕೆ, ಉತ್ತಮ ಭಾಷಾಜ್ಞಾನಕೂಡ ಮುಖ್ಯ ಎಂದು ದೂರದರ್ಶನ ಕೇಂದ್ರದ ಹಿರಿಯ ವಾರ್ತಾವಾಚಕಿ ಚೇತನಾ ರಾಜೇಂದ್ರ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ‘ಮಾಧ್ಯಮರಂಗದ ಉದ್ಯೋಗಾವಕಾಶಗಳು’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಡಿಜಿಟಲ್ ಸಾಧ್ಯತೆಗಳಿಂದಾಗಿ ಮಾಧ್ಯಮರಂಗ ವಿಸ್ತಾರವಾಗಿ ಬೆಳೆದಿದೆ; ಆದರೆ ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಬದಲಾಗಬೇಕಿದೆ ಎಂದರು. ಮಾಧ್ಯಮದ ವ್ಯಾಪ್ತಿ ಮತ್ತು ಪರಿಭಾಷೆ ಬದಲಾಗಿದೆ. ಸಾಂಪ್ರದಾಯಿಕ ಪತ್ರಿಕೋದ್ಯಮ ಬದಲಾವಣೆ ಹೊಂದಿಡಿಜಿಟಲ್ ನ ವಿವಿಧ ಆಯಾಮಗಳು ಬದುಕನ್ನು ಆವರಿಸಿಕೊಂಡಿದೆ. ಜಾಹೀರಾತು, ಸಾರ್ವಜನಿಕ ಸಂಪರ್ಕ, ಕಾರ್ಪೋರೇಟ್ ಸಂವಹನ, ಗ್ರಾಫಿಕ್ಸ್ ಮತ್ತು ಅನಿಮೇಶನ್, ಡಿಜಿಟಲ್ ಮಾರ್ಕೆಟಿಂಗ್,ಈವೆಂಟ್ ಮ್ಯಾನೇಜ್ಮೆಂಟ್, ಮೀಡಿಯಾ ಪ್ಲಾನಿಂಗ್, ಬ್ರಾಂಡಿಂಗ್, ಕಂಟೆಂಟ್ ರೈಟಿಂಗ್ ನಂತಹ ಕ್ಷೇತ್ರಗಳತ್ತ ಯುವಕರು ಗಮನ ಹರಿಸಬೇಕು ಎಂದರು. ಭಾಷೆ ಎಲ್ಲದಕ್ಕೂ ಜೀವಾಳ. ಉತ್ತಮ ಪುಸ್ತಕಗಳು ಹಾಗೂ ದಿನಪತ್ರಿಕೆಗಳನ್ನು ಪ್ರತಿದಿನ ಓದುವುದರಿಂದ ಭಾಷಾಕೌಶಲ್ಯ ಬೆಳೆಯುತ್ತದೆ, ತಿಳುವಳಿಕೆ ವಿಸ್ತಾರವಾಗುತ್ತದೆ. ರಾಷ್ಟ್ರೀಯ,ಅಂತಾರಾಷ್ಟ್ರೀಯ ಮಟ್ಟದ ರಾಜಕೀಯ,…
ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತುಮಕೂರು ವಿಭಾಗದ ಸಾರಿಗೆಗಳ ನಿರ್ವಾಹಕರು ಮತ್ತು ಪ್ರಯಾಣಿಕರ ನಡುವಿನ ಚಿಲ್ಲರೆ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಡಿಜಿಟಲ್ ಪಾವತಿ ಸೌಲಭ್ಯವನ್ನು ಅನುಷ್ಠಾನಗೊಳಿಸಿದೆ. ಇನ್ನು ಮುಂದೆ ತುಮಕೂರು ವಿಭಾಗದ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ನಿರ್ವಾಹಕರಿಂದ ಡೈನಮಿಕ್ ಯು.ಪಿ.ಐ. ಕ್ಯೂ.ಆರ್ ಕೋಡ್ ಮೂಲಕ ಡಿಟಿಟಲ್ ಪಾವತಿ ಮಾಡಿ ಟಿಕೆಟ್ ಪಡೆಯಬಹುದಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಮೂಲಕ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದರು. ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ ಹಾಗೂ ತುಮಕೂರು ವಿಜ್ಞಾನ ಕೇಂದ್ರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ “ವನ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಮಾಲಿನ್ಯದಿಂದ ಜೀವ ಸಂಕುಲಗಳಿಗೆ ಹಾನಿ ಉಂಟಾಗುತ್ತಿದ್ದು, ಪ್ಲಾಸ್ಟಿಕ್ ಬದಲಿಗೆ ಜೈವಿಕ ವಸ್ತುಗಳನ್ನು ಬಳಸಬೇಕೆಂದು ಕರೆ ನೀಡಿದರು. ಅರಣ್ಯ ನಾಶದಿಂದ ಪರಿಸರ ಅಸಮತೋಲನ ಉಂಟಾಗಿ ಚಂಡಮಾರುತ, ಭೂಕಂಪ, ಅತೀವೃಷ್ಠಿ, ಅನಾವೃಷ್ಠಿಗೆ ಕಾರಣವಾಗಿ ಜೀವಸಂಕುಲಗಳು ಅಳಿವಿನಂಚಿಗೆ ತಲುಪುತ್ತಿವೆ. ಮನುಷ್ಯನು ತನ್ನ ಸ್ವಾರ್ಥಕ್ಕಾಗಿ ಅರಣ್ಯ ನಾಶ ಮಾಡುತ್ತಿದ್ದಾನೆ. ಉತ್ತಮ ಪರಿಸರ ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಶುದ್ಧ ನೀರು, ಗಾಳಿ, ಆಹಾರ ದೊರೆಯುವಂತೆ ಮಾಡಬೇಕೆಂದು ತಿಳಿಸಿದರು.…
ಬೆಂಗಳೂರು: ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಕ್ಫ್ ಮಂಡಳಿಯಿಂದ ರೈತರ ಜಮೀನು ಕಬಳಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಫ್ರೀಡಂ ಪಾರ್ಕ್ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಧರಣಿಯನ್ನುದ್ದೇಶಿಸಿ ಮಾತನಾಡಿದ ಅವರು, ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಏನೂ ಇಲ್ಲ ಎನ್ನುತ್ತಾರೆ. ಹಾಗಿದ್ದರೆ ಏನೂ ಇಲ್ಲದೆ ಹೋರಾಟಗಳು ನಡೆಯುತ್ತಿವೆಯೇ? ಮಠ, ಮಂದಿರಗಳ ಪ್ರಮುಖರೂ ಹೋರಾಟಕ್ಕೆ ಬಂದಿದ್ದಾರೆ. ಬಿಜೆಪಿಯಿಂದ, ರೈತರಿಂದ ಇವತ್ತು ರಾಜ್ಯಾದ್ಯಂತ ಹೋರಾಟ ನಡೆಯುತ್ತಿದೆ ಎಂದರು. ಶ್ರೀರಂಗಪಟ್ಟಣದಲ್ಲಿ 400 ವರ್ಷ ಹಳೆಯ ದೇವಸ್ಥಾನ ಇದೆ. ಅಲ್ಲಿ ಮುಸ್ಲಿಮರ ಮನೆ ಇಲ್ಲ; ಮಸೀದಿಯೂ ಇಲ್ಲ. ಆದರೆ, ಆ ದೇವಸ್ಥಾನದ ಪಹಣಿಯಲ್ಲಿ ವಕ್ಫ್ ಬೋರ್ಡ್ ಆಸ್ತಿ ಎಂದು ನಮೂದಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಆಸ್ತಿ, ನಮ್ಮ ಹಕ್ಕು ಘೋಷವಾಕ್ಯದಡಿ ಹೋರಾಟ ನಡೆಯುತ್ತಿದೆ. ನಮ್ಮ ತೆರಿಗೆ ನಮ್ಮ ಹಕ್ಕು…
ದೆಹಲಿ: ಸಿದ್ದರಾಮಯ್ಯನವರು ಪ್ರಾಮಾಣಿಕರಾಗಿದ್ದರೆ ಗ್ಯಾರಂಟಿ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿಷಯದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಅನರ್ಹರ ಕಾರ್ಡ್ ಬದಲಿಸಲು ಆಕ್ಷೇಪವಿಲ್ಲ, ಆದರೆ ರಾಜ್ಯ ಸರಕಾರವು ಸಮರ್ಪಕ ಮಾನದಂಡವೇ ಇಲ್ಲದೆ ಪ್ಯಾನ್ ಕಾರ್ಡ್, ಆದಾಯ ತೆರಿಗೆ ವಿಚಾರಗಳನ್ನು ಮುಂದಿಟ್ಟುಕೊಂಡು 10ರಿಂದ 20 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ವಜಾ ಮಾಡಿದೆ ಎಂದು ಟೀಕಿಸಿದರು. ಬಿಪಿಎಲ್ ಕಾರ್ಡಿಗೆ ಕತ್ತರಿ ಹಾಕಿದರೆ, ಗೃಹಲಕ್ಷ್ಮಿ ಹಣ ಉಳಿತಾಯ ಉಳಿತಾಯ ಆಗುತ್ತದೆ. ಗೃಹಲಕ್ಷ್ಮೀ ಹಣ ಇವರಿಗೆ ಕೊಡಲು ಸಾಧ್ಯವಾಗುತ್ತಿಲ್ಲ. 5 ಕೆಜಿ ಅಕ್ಕಿಗೆ ಕೊಡುವ ಹಣವೂ ಉಳಿಯಲಿದೆ. ಸಾವಿರಾರು ಕೋಟಿ ರೂ. ಉಳಿತಾಯಕ್ಕಾಗಿ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಬಿಪಿಎಲ್ ಕಾರ್ಡ್ ರದ್ದು ಮಾಡಿ ವಂಚನೆ ಮಾಡುವ ಸರಕಾರ ಇದು. ಮನುಷ್ಯತ್ವ…
ಬೆಂಗಳೂರು: ವಕ್ಫ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ವಕ್ಫ್ ಕಾಯ್ದೆ ವಿರುದ್ಧ ಬಿಜೆಪಿ ಹೋರಾಟ ಮುಂದುವರಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1994ರಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರೈತರ ಜಮೀನು, ಮಠಮಾನ್ಯ ಮತ್ತು ದೇವಸ್ಥಾನಗಳಿಗೆ ಸೇರಿದ ಜಮೀನುಗಳನ್ನು ಅಪಾಯಕ್ಕೆ ಸಿಲುಕಿಸಲಾಗಿದೆ ಎಂದು ಆರೋಪಿಸಿದರು. ವಕ್ಫ್ ಬೋರ್ಡ್ ಯಾವುದೇ ಜಮೀನನ್ನು ತನಗೆ ಸೇರಿದ್ದು ಅಂತ ಹೇಳಿದರೆ ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಬೇರೆ ಜನ ಸಿವಿಲ್ ಕೋರ್ಟ್ಗೆ ಹೋಗಲಾಗದು, ಎಲ್ಲ ಮುಸ್ಲಿಮರೇ ಇರುವ ವಕ್ಫ್ ಟ್ರಿಬ್ಯೂನಲ್ ಮುಂದೆ ಗೋಗರೆಯಬೇಕು, ಹಾಗಾಗಿ ವಕ್ಫ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಬಿಜೆಪಿಯ ಹೋರಾಟ ನಡೆಯಲಿದೆ ಎಂದು ಹೇಳಿದರು. ಅಷ್ಟ ಮಠದ ಜಾಗವನ್ನೂ ವಕ್ಫ್ ಬೋರ್ಡಿಗೆ ಸೇರಿದ್ದು ಎನ್ನುತ್ತಾರೆ. ಆಳಂದ ತಾಲ್ಲೂಕಿನಲ್ಲಿ ಸಿದ್ದರಾಮಯ್ಯನವರ ಕುಲದೇವರಾದ ಬೀರಲಿಂಗೇಶ್ವರರ ಗುಡಿ, ಸಾವಿರಾರು ಎಕರೆ ರೈತರ ಜಮೀನು, ಹಿಂದೂಗಳ ಸ್ಮಶಾನವನ್ನೂ ವಕ್ಫ್ಗೆ ಸೇರಿದ್ದು ಎನ್ನುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ರಾಯ್ಪುರ: ಛತ್ತೀಸ್ ಗಡದ ಸುಕಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 10 ಜನ ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ನಕ್ಸಲೀಯರು ಒಡಿಶಾ ಮೂಲಕ ಛತ್ತೀಸ್ಗಢ ಪ್ರವೇಶಿಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿ ಮೇರೆಗೆ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಕಾರ್ಯಾಚರಣೆ ಆರಂಭಿಸಿದೆ. ಇಂದು ಬೆಳ್ಳಂಬೆಳಗ್ಗೆ ಸುಕಾ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 10ಮಾವೋವಾದಿಗಳನ್ನು ಭದ್ರತಾ ಪಡೆ ಎನ್ಕೌಂಟರ್ ಮಾಡಿದೆ ಎಂದು ಬಸ್ತಾರ್ ಇನ್ಸ್ ಪೆಕ್ಟರ್–ಜನರಲ್ ಆಫ್ ಪೊಲೀಸ್ ಪಿ. ಸುಂದರರಾಜ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಾಷಿಂಗ್ಟನ್: ಗೌತಮ್ ಅದಾನಿ ವಿರುದ್ಧದ ಲಂಚ ಮತ್ತು ವಂಚನೆ ಆರೋಪಗಳು ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯಕ್ಕೆ ಧಕ್ಕೆ ಉಂಟು ಮಾಡುವುದಿಲ್ಲ ಎಂದು ಶ್ವೇತಭವನ ಹೇಳಿದೆ. ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಅದಾನಿ ಗ್ರೂಪ್ ನ ಅಧ್ಯಕ್ಷ ಅದಾನಿ ವಿರುದ್ಧದ ಆರೋಪಗಳ ಬಗ್ಗೆ ಬಿಡೆನ್ ಆಡಳಿತಕ್ಕೆ ತಿಳಿದಿದೆ ಎಂದು ಹೇಳಿದ್ದಾರೆ. ಅದಾನಿ ತನ್ನ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಕಾರ್ಯ ನಿರ್ವಾಹಕರೊಂದಿಗೆ ನ್ಯೂಯಾರ್ಕ್ ನಲ್ಲಿ ಲಾಭದಾಯಕ ಸೌರ ಶಕ್ತಿಯ ಒಪ್ಪಂದಗಳನ್ನು ಪಡೆಯಲು ಬಹು–ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಯೋಜನೆಯಲ್ಲಿ ಅವರ ಪಾತ್ರಗಳಿಗಾಗಿ ದೋಷಾರೋಪ ಮಾಡಲಾಗಿದೆ. ಈ ಆರೋಪಗಳ ಬಗ್ಗೆ ನಮಗೆ ತಿಳಿದಿದೆ ಮತ್ತು ಅದಾನಿ ಗ್ರೂಪ್ ವಿರುದ್ಧದ ಆ ಆರೋಪಗಳ ನಿಶ್ಚಿತಗಳ ಬಗ್ಗೆ ನಾನು ನಿಮನ್ನು ಸೆಬಿ (ಸೆಕ್ಯುರಿಟೀಸ್ ಮತ್ತು ಎಕ್ಸ್ ಚೇಂಜ್ ಕಮಿಷನ್) ಮತ್ತು ಡಿಒಜೆ (ನ್ಯಾಯಾಂಗ ಇಲಾಖೆ) ಗೆ ಉಲ್ಲೇಖಿಸಬೇಕಾಗಿದೆ ಎಂದು ಜೀನ್-ಪಿಯರ್ ಹೇಳಿದರು. ಲಂಚ ಹಗರಣದ…