Author: admin

ತುಮಕೂರು : ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 25ರಂದು ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 25ರಂದು ಜಿಲ್ಲೆಯ ಶಿರಾ ತಾಲೂಕಿನ ಬೇವಿನಹಳ್ಳಿ; ತುರುವೇಕೆರೆ ತಾಲೂಕಿನ ಅರೇಮಲ್ಲೇನಹಳ್ಳಿ; ತಿಪಟೂರು ತಾಲೂಕಿನ ಗುಡಿಗೊಂಡನಹಳ್ಳಿ; ಮಧುಗಿರಿ ತಾಲೂಕಿನ ಬೇಡತ್ತೂರು; ತುಮಕೂರು ತಾಲೂಕಿನ ಚನ್ನೇನಹಳ್ಳಿ; ಕುಣಿಗಲ್ ತಾಲೂಕಿನ ಹಳೇವೂರು; ಕೊರಟಗೆರೆ ತಾಲೂಕಿನ ಬೂದಗವಿ; ಪಾವಗಡ ತಾಲೂಕಿನ ಸಾಸಲಕುಂಟೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯಾದ್ಯಂತ ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಬಹುತೇಕ ಕಡೆ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಲ್ಲಪ್ಪನಹಳ್ಳಿ ಬಳಿ ಅಪಾರ ಪ್ರಮಾಣದ ನೀರು ರಸ್ತೆ ಮೇಲೆ ಹರಿಯುತ್ತಿರುವ ಪರಿಣಾಮ ರಸ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ. ಎಚ್ಚರಿಕೆಯ ನಾಮಫಲಕಗಳನ್ನು ಅಳವಡಿಸಲಾಗಿದ್ದು ಜನ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೊಂದು ರಾಶಿಯವರಿಗೆ ರಾಶಿ ಚಕ್ರದಲ್ಲಿ ಹಣವನ್ನು ಗಳಿಸುವುದಕ್ಕೆ ಕಷ್ಟ ಪಡಬೇಕಾದ ಅಗತ್ಯವಿಲ್ಲ ಹುಟ್ಟಿನಿಂದಲೇ ಅವರು ಹಣ ಗಳಿಸುವಂತಹ ಅದೃಷ್ಟವನ್ನು ತಮ್ಮ ಜೊತೆಗೆ ತಂದಿರುತ್ತಾರೆ ಅನ್ನೋದನ್ನ ಹೇಳಲಾಗುತ್ತೆ. ಹಾಗಿದ್ರೆ ಬನ್ನಿ ಇವತ್ತಿನ ಈ ಲೇಖನದ ಮೂಲಕ ಯಾರೆಲ್ಲಾ ಹಣ ಗಳಿಸುವುದಕ್ಕೆ ಅಂತಾನೇ ಹುಟ್ಟಿದ್ದಾರೆ ಅನ್ನೋದನ್ನ ತಿಳಿದುಕೊಳ್ಳೋಣ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490. ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…

Read More

ತುಮಕೂರು:  ಧೈರ್ಯ, ಶೌರ್ಯ, ಪ್ರೀತಿ, ಮಮತೆಗಳಂತಹ ಅಸಂಖ್ಯ ಗುಣಗಳನ್ನೊಂದಿದ್ದ ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅಗಣಿತ ಗುಣಗಳ ಆದರ್ಶದ ಗಣಿ ಎಂದು ಬಣ್ಣಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ತಿಳಿಸಿದರು. ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ, ಬಸವ ಸೇವಾ ಸಮಿತಿ, ಮೈತ್ರಿ ಮಹಿಳಾ ಸಮಾಜ, ಕದಳಿ ವೇದಿಕೆ ವತಿಯಿಂದ ಆಚರಿಸಲಾದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ. ಅವರ ಬದುಕು, ಸಾಧನೆಗಳನ್ನು ನೆನಪಿಸಿಕೊಳ್ಳಲು ಸರ್ಕಾರದ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಇಂಥಹ ಸಾಧಕರ ಜಯಂತಿಗಳನ್ನು ಯಾವುದೇ ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ ಎಲ್ಲರೂ ಒಗ್ಗೂಡಿ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. ಸ್ವಾಭಿಮಾನದ ಪ್ರತೀಕವಾಗಿದ್ದ…

Read More

ಪಾವಗಡ: ತಾಲ್ಲೂಕಿನ ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ 2024 — 25 ನೇ ಸಾಲಿನ  ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇದೇ ಅಕ್ಟೋಬರ್ 25, 26 ರಂದು ಬೀದರ್ ನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಕ್ರೀಡಾ ಸಾಧಕರಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಎಸ್.ನರಸಿಂಹಪ್ಪ, ದೈಹಿಕ ಶಿಕ್ಷಕರಾದ ಎಸ್.ಮಲ್ಲಿಕಾರ್ಜುನ್, ಸಹ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಮಂಗಳೂರು:  ಇಲ್ಲಿನ  ಎಸ್. ಡಿ.ಎಂ. ಕಾನೂನು ಕಾಲೇಜಿನ ಎರಡನೇ ವರ್ಷದ  ಎಲ್. ಎಲ್.ಬಿ. ವಿದ್ಯಾರ್ಥಿನಿ  ಪ್ರಮಯಿ ಜೈನ್, 2024 –25 ನೇ ಸಾಲಿನ  ಅಂತರ್ ವಿಶ್ವವಿದ್ಯಾಲಯ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಗಳ ಬ್ಯಾಡ್ಮಿಂಟನ್ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ವರದಿ: ಜೆ.ರಂಗನಾಥ   ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಗ್ರಾಮೀಣ ಪ್ರದೇಶಗಳ ಕಡೆ ಆತ್ಮಹತ್ಯೆಗಳು ಅಪಘಾತಗಳು ಹಾಗೂ ಇತರೆ ಸಂಬಂಧಪಟ್ಟಂತೆ ಸರ್ಕಾರದಿಂದ ಮರಣೋತ್ತರ ಪರೀಕ್ಷೆ ಆಗಬೇಕೆಂಬ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸುತ್ತಿರುವುದು ಕಂಡು ಬರುತ್ತದೆ. ಇಂಥ ಸಂದರ್ಭದಲ್ಲಿ ನಿಧನ ಹೊಂದಿದ ಕುಟುಂಬದವರು, ಸಂಬಂಧಿಕರು, ಗೆಳೆಯರು ತುಂಬಾ ತೊಂದರೆಯನ್ನು ಅನುಭವಿಸುವುದು ಕಂಡುಬರುತ್ತದೆ. ಮರಣೋತ್ತರ ಪರೀಕ್ಷೆ ನಡೆಸಬೇಕಾದರೆ ತುಂಬಾ ವಿಳಂಬ ಮಾಡುತ್ತಾರೆ ಎಂಬುದು ಸಹ ಕೇಳಿ ಬರುತ್ತದೆ. ಈ ಕಾರಣದಿಂದ ಇಡೀ ಕುಟುಂಬ ಸಾರ್ವಜನಿಕ ಆಸ್ಪತ್ರೆ ಹತ್ತಿರ ಇರುವುದನ್ನು ನೋಡಬಹುದು, ಹಾಗೂ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳು ಕಾಳಜಿ ವಹಿಸುವುದಿಲ್ಲ ಎಂಬ ಮಾತು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ವಕೀಲರು ಸಹ ಅಪಘಾತ ವಿಮೆಯನ್ನು ಕೊಡಿಸಲು ಸ್ಪರ್ಧೆ ಇರುತ್ತದೆ ಎಂಬುದು ಕೇಳಿ ಬರುತ್ತದೆ. ಇಂಥ ಸಂದರ್ಭದಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ಕೆಲವು ವಕೀಲರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದ ಮೇಲೆ ಅಥವಾ ನಿಧನ ಹೊಂದಿದ ವ್ಯಕ್ತಿಯ ಪ್ರಭಾವಿ ಸಂಬಂಧಿಕರು ಅಥವಾ ಪರಿಚಯಸ್ಥರು ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡಿದರೆ ಮಾತ್ರ ಅಲ್ಲಿ ಕೈ…

Read More

ತುಮಕೂರು: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ ಶ್ರೇಷ್ಠ ತೋಟಗಾರಿಕೆ ರೈತ / ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಯಸುವವರು ನಿಗಧಿತ ಅರ್ಜಿ ನಮೂನೆಯನ್ನು ತೋ. ವಿ. ವಿ. ಯ ವೆಬ್ ಸೈಟ್ www.uhsbagalkot.karnataka.gov.in ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 5ರೊಳಗಾಗಿ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಚೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋ.ವಿ.ವಿ. ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು-560065 ಇವರಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಇಟಿಗಿ ಪ್ರಭಾಕರ, ವಿಸ್ತರಣಾ ಮುಂದಾಳು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು (9538771475), ಡಾ. ದೊಡ್ಡಬಸಪ್ಪ ಬಿ. ಸಹಾಯಕ ಪ್ರಾಧ್ಯಾಪಕರು, ಕೃಷಿ ಕೀಟಶಾಸ್ತ್ರ, ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು (7795072699), ಸೀಮಾ ಎಂ. ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು (7411228096) ಅಥವಾ ಸಹಾಯವಾಣಿ 18004257910ಗೆ ಸಂಪರ್ಕಿಸಬಹುದು. ನಮ್ಮತುಮಕೂರಿನ…

Read More

ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಸಾಂಸ್ಥಿಕೇತರ(ಆಸ್ಪತ್ರೆ ಹೊರತುಪಡಿಸಿ ಮನೆ ಹಾಗೂ ಇತರೆ ಸ್ಥಳ) ಮರಣ ಘಟನೆ ಸಂಭವಿಸಿದ 21 ದಿನದೊಳಗಾಗಿ ನಿಗದಿತ ನಮೂನೆ 4ಎಯಲ್ಲಿ ಮರಣ ಕಾರಣದ ಮಾಹಿತಿಯನ್ನು ಭರ್ತಿ ಮಾಡಿ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಪಾಲಿಕೆಯ ಜನನ ಮರಣ ಶಾಖೆಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ. ಸಂಬಂಧಿತರು ನಿಗದಿತ ಅವಧಿಯೊಳಗೆ ಪಾಲಿಕೆಯ ಜನನ ಮರಣ ಶಾಖೆಗೆ ಅರ್ಜಿ ಸಲ್ಲಿಸುವ ಮೂಲಕ ಉಚಿತ ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ನಿಗದಿತ ಅವಧಿ ನಂತರ ಮರಣ ಪ್ರಮಾಣ ಪತ್ರ ಪಡೆಯಲು ತಡ ಶುಲ್ಕವನ್ನು ಸಂದಾಯ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ 20 ವರ್ಷ ಮೇಲ್ಪಟ್ಟವರಲ್ಲಿ ಫೈಲೇರಿಯ ರೋಗ ಪತ್ತೆ ಹಚ್ಚುವ ಉದ್ದೇಶದಿಂದ ಅಕ್ಟೋಬರ್ 23 ರಿಂದ 25ರವರೆಗೆ ಫೈಲೇರಿಯ ರಕ್ತಲೇಪನ ಸಂಗ್ರಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ರಕ್ತಲೇಪನ ಸಂಗ್ರಹಣಾ ಕಾರ್ಯಕ್ಕಾಗಿ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ತಲಾ 2 ತಂಡಗಳನ್ನು ನಿಯೋಜಿಸಲಾಗಿದ್ದು, ಸಂಗ್ರಹಣಾ ಕಾರ್ಯಕ್ಕಾಗಿ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More