Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: ನಗರ ವ್ಯಾಪ್ತಿಯ 9 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 24ರಂದು ಕೆ-ಸೆಟ್(K–SET) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ನವೆಂಬರ್ 24ರ ಬೆಳಿಗ್ಗೆ 9 ರಿಂದ ಸಂಜೆ 3 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಝೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 24ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗುಬ್ಬಿ, ಕಡಬ, ನಿಟ್ಟೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನವೆಂಬರ್ 23 ಹಾಗೂ 24ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ವಿಶೇಷ ಆಂದೋಲನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಒ)ಗಳು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಹಾಜರಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ತೆಗೆದುಹಾಕುವಿಕೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಮತದಾರರ ಸೇರ್ಪಡೆಗೆ ನಮೂನೆ 6, ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ 6ಎ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ 7 ಮತ್ತು ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿ ಎಂದು ಗುರುತಿಸಲು…
ತುಮಕೂರು: ನಾಡಿನ ಜನರು ಒಗ್ಗಟ್ಟಿನಿಂದ ಕನ್ನಡ ನಾಡು ನುಡಿಗಾಗಿ ಶ್ರಮಿಸಬೇಕು, ತುಮಕೂರು ನಗರದ 35 ವಾರ್ಡುಗಳಲ್ಲಿ ವರ್ಷದ 365 ದಿನವೂ ಕನ್ನಡ ಭಾಷೆ, ಗಡಿ, ಜಲದ ವಿಚಾರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಕನ್ನಡಕ್ಕೆ ಒತ್ತು ನೀಡಿ ಸ್ವಸ್ಥ ಸಮಾಜಕ್ಕಾಗಿ ಕನ್ನಡವನ್ನು ಎಲ್ಲರೂ ಹೆಚ್ಚಾಗಿ ಬಳಸಬೇಕು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕರೆ ನೀಡಿದರು. ಅವರು ಇಂದು ತುಮಕೂರಿನ ನಿರ್ಭಯ ಮಹಿಳಾ ಜಾಗೃತಿ ವೇದಿಕೆ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್, ತುಮಕೂರು ನಗರ ಘಟಕ ಮತ್ತು ಚಿದಂಬರ ಸೌಹಾರ್ಧ ಪತ್ತಿನ ಸಹಕಾರಿ ನಿಯಮಿತ, ತುಮಕೂರು ಶಾಖೆಯ ಸಹಯೋಗದಲ್ಲಿ ಜಯನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ 31ನೇ ವಾರ್ಡಿನಲ್ಲಿ ಕನ್ನಡ ಜಾಗೃತಿ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷದಾಯಕ,ಎಲ್ಲ ಭಾಷೆಗಳನ್ನು ಗೌರವಿಸುವ ಔದಾರ್ಯ ಕನ್ನಡಿಗರದ್ದು ಆದರೆ ಕನ್ನಡವನ್ನು ಬೆಳೆಸಿ ಉಳಿಸಬೇಕಾದ ಕರ್ತವ್ಯ ಎಲ್ಲರ ಮೇಲಿದೆ ಎಂದು ಎಚ್ಚರಿಸಿದರು. ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ…
ತುಮಕೂರು: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರ ಪಾಲಿಕೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನವೆಂಬರ್ 24ರಂದು ನಡೆಯಲಿರುವ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು ಶಾಂತಿಯ ಸಂದೇಶ ಸಾರುವ ಸಲುವಾಗಿ ಜಿಲ್ಲೆಯಾದ್ಯಂತ ಕ್ರೀಡಾಜ್ಯೋತಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕ್ರೀಡಾಜ್ಯೋತಿಯು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವ ಭಾವನೆಯಿಂದ ಬಾಳಬೇಕೆಂಬ ಸಂದೇಶ ಸಾರಲಿದೆ. ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು ಎಂದು ತಿಳಿಸಿದರು. ನಾನೂ ಒಬ್ಬ ಕ್ರೀಡಾಪಟುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿರುವುದು ಸಂತೋಷ ತಂದಿದೆ. ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ತುಮಕೂರು ಬೆಂಗಳೂರಿನಂತೆ ಬಹಳ ವೇಗವಾಗಿ…
ತುಮಕೂರು: ದಲಿತ ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ನಂತರ ಹಲ್ಲೆ ನಡೆಸಿ ಕೊಲೆ ಮಾಡಿದ್ದ 21 ಮಂದಿ ಅಪರಾಧಿಗಳಿಗೆ ತುಮಕೂರು 3 ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 1) ರಂಗನಾಥ್ ಜಿ.ಎಸ್ ಬಿನ್ ಸುಬ್ಬಣ್ಣ, 2)ಮಂಜುಳ ಕೋಂ ರಂಗನಾಥ, 3)ರಾಜು @ ದೇವರಾಜು ಬಿನ್ ಅಪ್ಪಯ್ಯ 4)ಶ್ರೀನಿವಾಸ ಬಿನ್ ದೊಡ್ಡಮನೆ ರಾಮಯ್ಯ, 5)ಸ್ವಾಮಿ @ ಆನಂದಸ್ವಾಮಿ ಬಿನ್ ಗಂಗಣ್ಣ, 6)ವೆಂಕಟಸ್ವಾಮಿ ಬಿನ್ ಗಂಗಪ್ಪ, 7) ವೆಂಕಟೇಶ್ ಬಿನ್ ತಿಮ್ಮಣ್ಣ, 8) ನಾಗರಾಜು ಬಿನ್ ಸಿದ್ದರಾಮಶೆಟ್ಟಿ, 9)ರಾಜಪ್ಪ @ ರಾಮಯ್ಯ ಬಿನ್ ಸಿದ್ದರಾಮಶೆಟ್ಟಿ, 10)ಮೀಸೆ ಹನುಮಂತಯ್ಯ ಬಿನ್ ರಾಮಶೆಟ್ಟಿ, 11) ಗಂಗಾಧರ @ ಗಂಗಣ್ಣ ಬಿನ್ ಸುಬ್ಬಶೆಟ್ಟಿ, 12) ಸತ್ಯಪ್ಪ @ ಸತೀಶ ಬಿನ್ ನಂಜಪ್ಪ, 13)ನಂಜುಂಡಯ್ಯ ಬಿನ್ ನಂಜಪ್ಪ, 14) ಚಂದ್ರಶೇಖರ್ @ ಚಂದ್ರಯ್ಯ ಬಿನ್ ಕುರುಡ ಗಂಗಪ್ಪ, 15)ರಂಗಣ್ಣ @ ರಾಮಯ್ಯ ಬಿನ್ ಸಿದ್ದರಾಮಶೆಟ್ಟರು. 16)…
ಕೊರಟಗೆರೆ: ತುಮಕೂರು ಜಿಲ್ಲಾಧಿಕಾರಿ ಮುಂದೆಯೇ ಬಫರ್ ಡ್ಯಾಂ ಕಾಮಗಾರಿಗೆ ಸ್ಥಳೀಯ ರೈತರಿಂದ ವಿರೋಧ ವ್ಯಕ್ತವಾಗಿದೆ. ಎತ್ತಿನಹೊಳೆ ಯೋಜನೆಯ ಬಫರ್ ಡ್ಯಾಂ ಗುದ್ದಲಿ ಪೂಜೆ ಬಿಡುವುದಿಲ್ಲ ಎಂದು 12 ಗ್ರಾಮದ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಕೊರಟಗೆರೆ ಮತ್ತು ದೊಡ್ಡಬಳ್ಳಾಪುರದ 5 ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣವಾಗಲಿದೆ. ಇದರಿಂದಾಗಿ ಬೈರಗೊಂಡ್ಲು ಸಮೀಪ ಬಫರ್ ಡ್ಯಾಂನಿಂದ ಕೋಳಾಲ ಹೋಬಳಿಯ 12 ಗ್ರಾಮಗಳ ರೈತರಿಗೆ ಸಂಕಷ್ಟ ಎದುರಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಆಗಮಿಸಿದ್ದು, ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಚಿನ್ನಹಳ್ಳಿ ಗ್ರಾಮ ಪಂಚಾಯಿತಿಯ ಬೂಚನಹಳ್ಳಿಯ ಹೆಲಿಪ್ಯಾಡ್ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬೂಚನಹಳ್ಳಿ ಗ್ರಾಮದಲ್ಲಿ ನ.26 ರಂದು ನಡೆಯುವ ಸಮಾವೇಶದ ರೂಪುರೇಖೆ ಪರಿಶೀಲನೆ ನಡೆಸಲಾಗಿದೆ. ಹೆಲಿಪ್ಯಾಡ್ ಸ್ಥಳ ಪರಿಶೀಲನೆ ವೇಳೆ ತುಮಕೂರು ಜಿಲ್ಲಾಧಿಕಾರಿಗೆ 12 ಗ್ರಾಮಗಳ ನೂರಾರು ರೈತರು ಮನವಿ ಸಲ್ಲಿಸಿದ್ದಾರೆ. ಇನ್ನೂ ತುಮಕೂರು ಜಿಲ್ಲಾಧಿಕಾರಿ ಮತ್ತು ಕೊರಟಗೆರೆ ಅಧಿಕಾರಿಗಳ ತಂಡ ಕಾರ್ಯಕ್ರಮದ ಗುಟ್ಟು ಬಿಟ್ಟುಕೊಟ್ಟಿಲ್ಲ ಎಂದು…
ತುಮಕೂರು: ಇಲ್ಲಿನ ಶಿರಾ ಗೇಟ್ ನ ಶ್ರೀ ಮಹಾವೀರ ಸ್ವಾಮಿ ಶ್ವೇತಾಂಬರ ಜೈನ ಆಗಮ ಮಂದಿರದಲ್ಲಿ ಇತ್ತೀಚೆಗೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನವನ್ನ ಸ್ವಚ್ಛಗೊಳಿಸುವ ಸಲುವಾಗಿ ಶ್ವೇತಾಂಬರ ಜೈನ ಸಮಾಜದಿಂದ ಶುಚಿತ್ವ ಕಾರ್ಯಕ್ರಮಗಳು ಜರುಗಿದವು. ಶ್ರೀ ವಿಮಲ್ ಗುರೂಜಿ ಮಾರ್ಗದರ್ಶನದಲ್ಲಿ ನಡೆದ 18 ರೀತಿಯ ಅಭಿಷೇಕ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ದೇವಸ್ಥಾನವನ್ನು ಶುದ್ಧೀಕರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಪೂಜೆ, ಅಭಿಷೇಕ, ಆರಾಧನೆಗಳು ಜರುಗಿದವು. ಕಾರ್ಯಕ್ರಮದಲ್ಲಿ ತುಮಕೂರಿನ ಶ್ವೇತಾಂಬರ ಜೈನ ಸಮಾಜದ ಮುಖಂಡರು, ಶ್ರೀ ಅಜಿತನಾಥ ಶ್ವೇತಾಂಬರ ಮೂರ್ತಿ ಪೂಜ್ಯಕ ಸಂಘ, ಶ್ವೇತಾಂಬರ ಜೈನ ಸಮಾಜದ ಬಂಧುಗಳು, ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು. ವರದಿ: ಜೆ.ರಂಗನಾಥ, ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ವಲಯದ ರಟ್ಟೆನಹಳ್ಳಿ ಒಕ್ಕೂಟದವರು ಎರಡೂ ಕಣ್ಣುಗಳನ್ನು ಕಳೆದುಕೊಂಡು ಕಷ್ಟದಲ್ಲಿ ಜೀವನ ಸಾಗಿಸುತ್ತಿರುವ ಗ್ರಾಮದ ಸೀತಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಯವರಾದ ಪರಮ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಪ್ರತೀ ತಿಂಗಳು ನೀಡುತ್ತಿರುವ 1 ಸಾವಿರ ರೂಪಾಯಿ ಮಾಸಾಶನವನ್ನು ವಿತರಿಸಿದರು. ಜೊತೆಯಲ್ಲಿ ಸೀತಮ್ಮ ಹಾಗೂ ಪರಶುರವರಿಗೆ ಒಕ್ಕೂಟದವರು ಒಂದು ತಿಂಗಳಿಗೆ ಸಾಕಾಗುವಷ್ಟು ದಿನಸಿ ಸಾಮಗ್ರಿಗಳನ್ನ ಉಚಿತವಾಗಿ ವಿತರಿಸಿ ಮಾನವೀಯತೆ ಮೆರೆದರು. ತಾಲೂಕು ಯೋಜನಾಧಿಕಾರಿ ಉದಯ್ ಕೆ. ಈ ಸಂದರ್ಭದಲ್ಲಿ ಮಾತನಾಡಿ, ರಟ್ಟೆನಹಳ್ಳಿಯ ಒಕ್ಕೂಟದ ಕಾರ್ಯವು ಶ್ರೀ ಮಂಜುನಾಥಸ್ವಾಮಿಯ ಸೇವೆ ಮಾಡಿದಂತಿದ್ದು, ಈ ರೀತಿಯಲ್ಲಿ ಸಮಾಜದಲ್ಲಿ ನೊಂದವರಿಗೆ ಸಹಾಯ ಹಸ್ತಚಾಚುದರಿಂದ ಮಾನವೀಯತೆಗೊಂದು ನಿಜವಾದ ಅರ್ಥ ಸಿಕ್ಕಿದಂತಾಗುತ್ತದೆ ಎಂದರು. ಪೂಜ್ಯರು ನಮ್ಮ ತಾಲೂಕಿನಲ್ಲಿ ನೊಂದ 101 ಪಾಲಾನುಭವಿಗಳಿಗೆ ರೂ 1,000/- ದಂತೆ ಒಂದು ಲಕ್ಷಕ್ಕೂ ಮಿಕ್ಕಿ ಮಾಸಾಶನದ ಸಹಾಯಧನವನ್ನು ಪ್ರತೀ ತಿಂಗಳು ನೀಡುತ್ತಿದ್ದು, ನೊಂದವರ ಪಾಲಿಗೆ ಆಶಾಕಿರಣವಾಗಿದ್ದಾರೆ ಹಾಗೂ ಹುಟ್ಟು ವಿಕಲ…
ಬೀದರ್: ಜಿಲ್ಲೆಯ ಕೆಲವೊಂದು ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಭೋದಿಸುತ್ತಿಲ್ಲ, ಇದರ ವಿರುದ್ಧ ಕ್ರಮಕೈಗೊಳ್ಳುವಂತೆ ದಲಿತ ಸಂಘರ್ಷ ಸಮಿತಿ(ಭೀಮವಾದ) ಬೀದರ್ ಜಿಲ್ಲಾ ಶಾಖೆ ವತಿಯಿಂದ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿತು. ಸಂವಿಧಾನ ಪೀಠಿಕೆ ಬೋಧಿಸದ ಶಾಲಾ—ಕಾಲೇಜುಗಳ ಪರವಾನಗಿಯನ್ನು ರದ್ದುಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರು ಸಂಜು ಕುಮಾರ್ ಮೇತ್ರ ಮತ್ತು ದಶರತ್ ದೊಡ್ಡಮನಿ ಬೀದರ್ ಜಿಲ್ಲಾ ಸಂಘಟನಾ ಸಂಚಾಲಕರು, ಭೀಮವಾದ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕರು ಔರಾದ್, ತುಕಾರಾಮ ಹಸನ್ಮುಖಿ , ಬಸವರಾಜ್ ಅಲ್ಲಾಪುರ್, ಮಲ್ಲಿಕಾರ್ಜುನ್ ಜೋನ್ಕೇರಿ ಹಾಗೂ ಇನ್ನಿತರರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296