Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: 4 ಚೀಲ ಅಡಿಕೆ ಕಳವು ಮಾಡಿದ್ದ ಆರೋಪಿಯನ್ನು ಹೆಬ್ಬೂರು ಪೊಲೀಸ್ ಠಾಣೆ ಸಿಬ್ಬಂದಿ ಬಂಧಿಸಿದ್ದಾರೆ. ಅಕ್ಟೋಬರ್ 28ರಂದು ಶೆಟ್ಟಳಯ್ಯ ಎಂಬುವರ ಮನೆ ಪಕ್ಕದ ಶೆಡ್ ನಲ್ಲಿ ಒಣಗಿಸಿ ಇಟ್ಟಿದ್ದು 4 ಚೀಲ ಅಡಿಕೆಯನ್ನು ಕಳ್ಳರು ಕಳವು ಮಾಡಿದ್ದರು. ಈ ಸಂಬಂಧ ಶೆಟ್ಟಳಯ್ಯ ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಿಡುವಳು ಗ್ರಾಮದ ಆರೋಪಿ ಪ್ರಸನ್ನಕುಮಾರ್ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು, ಕಳವು ಮಾಡಿದ್ದ ಸುಮಾರು 700 ಕೆ.ಜಿ. ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ ಕೆ.ಎ.29 .ಸಿ.0747 ಬಜಾಜ್ ಮ್ಯಾಕ್ಸಿಮಾ ಗೂಡ್ಸ್ ವಾಹನ ವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಂದಾಜು ಮೌಲ್ಯ 6 ಲಕ್ಷರೂ ಆಗಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಸಕಾಲದಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಎಕ್ಸರೇ, ಇಸಿಜಿ ಯಂತ್ರಗಳು ಕೆಟ್ಟುಹೋಗಿವೆ. ಲಭ್ಯವಿರುವ ಬೆರಳೆಣಿಕೆಯಷ್ಟು ವೈದ್ಯರು ಕ್ಲಿನಿಕ್ ಗಳನ್ನು ತೆರೆದು ರೋಗಿಗಳನ್ನು ತಮ್ಮ ಕ್ಲಿನಿಕ್ ಗಳಿಗೆ ಶಿಫಾರಸ್ಸು ಮಾಡುತ್ತಿದ್ದಾರೆಂದು ತಾಲ್ಲೂಕು ಆಸ್ಪತ್ರೆಯ ವೈಫಲ್ಯಗಳ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಬಳಿ ದೂರುಗಳ ಸುರಿಮಳೆಗೈದರು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ನವೆಂಬರ್ 12ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿರುವ ಆಸ್ಪತ್ರೆ, ವಿದ್ಯಾರ್ಥಿನಿಲಯ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುರುವೇಕೆರೆ ತಾಲ್ಲೂಕು ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆ ಸೇವೆಯ ಬಗ್ಗೆ ಸಾರ್ವಜನಿಕರು ದೂರುಗಳನ್ನು ಹೇಳಿಕೊಂಡರು. ತಾಲ್ಲೂಕು ಆಸ್ಪತ್ರೆಯಲ್ಲಿ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಗಮನಿಸಿದ ಜಿಲ್ಲಾಧಿಕಾರಿಗಳು ಕೂಡಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರಿಗೆ ಆಸ್ಪತ್ರೆ ಸಮಸ್ಯೆಗಳ ಚಿತ್ರಣದ ಬಗ್ಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ಆಸ್ಪತ್ರೆಯಲ್ಲಿ…
ತುಮಕೂರು: ಕೇಂದ್ರ ಸರ್ಕಾರದ ನಗರಾಭಿವೃದ್ಧಿ ಮಂತ್ರಾಲಯವು ಸ್ವಚ್ಚ ಭಾರತ ಅಭಿಯಾನದಡಿ ತುಮಕೂರು ನಗರವನ್ನು 3 Star ಬಯಲು ಶೌಚ ಮುಕ್ತ+ (ಓ.ಡಿ.ಎಫ್+) ನಗರವೆಂದು ಕಳೆದ ಸಾಲಿನಲ್ಲಿ ಘೋಷಿಸಿ ಪ್ರಮಾಣೀಕರಿಸಿದೆ. ಪ್ರಸ್ತುತ ಪಾಲಿಕೆಯು ನಗರವನ್ನು ಬಯಲು ಶೌಚಮುಕ್ತ+ ನಗರದಿಂದ “5 Star” ಬಯಲು ಶೌಚಮುಕ್ತ++ (ಓ.ಡಿ.ಎಫ್++) ನಗರವೆಂದು ಘೋಷಿಸಿ ಉನ್ನತೀಕರಿಸಲು ಉದ್ದೇಶಿಸಿದ್ದು, “5 Star ” ಬಯಲು ಶೌಚಮುಕ್ತ++ (ಓ.ಡಿ.ಎಫ್++) ನಗರವೆಂದು ಘೋಷಿಸುವ ಬಗ್ಗೆ ಆಕ್ಷೇಪಣೆ ಹಾಗೂ ಪ್ರತಿಕ್ರಿಯೆ ಇದ್ದಲ್ಲಿ ಸಾರ್ವಜನಿಕರು ನವೆಂಬರ್ 22ರೊಳಗಾಗಿ ಮಹಾನಗರಪಾಲಿಕೆ ಆಯುಕ್ತರ ಕಚೇರಿಗೆ ಸಲ್ಲಿಸಬಹುದೆಂದು ಆರೋಗ್ಯಾಧಿಕಾರಿ ವೀರೇಶ್ ಕಲ್ಮಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದತಿ ಮಾಡುವಾಗ ಕಂದಾಯ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿಯಾಗಿ ಪರಿಶೀಲನೆ ನಡೆಸಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ. ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಶಿರಾ ಮತ್ತು ಪಾವಗಡ ತಾಲ್ಲೂಕುಗಳ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗದಂತೆ ಸರ್ಕಾರದ ನಿಯಮಾವಳಿಯನ್ವಯ ಅನರ್ಹ ಬಿಪಿಎಲ್ ಕಾರ್ಡುಗಳ ರದ್ದತಿ ಬಗ್ಗೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ 12,804 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದ್ದು. ರದ್ದುಗೊಳಿಸುವ ಸಂದರ್ಭದಲ್ಲಿ ಅರ್ಹ ಪಡಿತರ ಚೀಟಿಗಳು ರದ್ದಾಗದಂತೆ ಎಚ್ಚರವಹಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ರೈತರು ಬೇಸಿಗೆಯಲ್ಲೂ ಸಹ ಬೆಳೆಗಳನ್ನು ಬೆಳೆಯುವ ನಿರೀಕ್ಷೆಯಿದ್ದು, ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿರುವುದರಿಂದ ಬೇಸಿಗೆಯಲ್ಲಿ ವಿದ್ಯುತ್ ಸರರಾಜಿನಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ…
ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮವು ಐತಿಹಾಸಿಕ ಪಾರಂಪರಿಕ ಪ್ರದೇಶವಾಗಿದ್ದು ಈ ಪಾರಂಪರಿಕ ಗ್ರಾಮದಲ್ಲಿ ಸಾಕಷ್ಟು ಶಿಲೆಗಳು, ಶಾಸನಗಳು ಮತ್ತು ಪ್ರಾಚ್ಯಾವಶೇಷಗಳು ಗ್ರಾಮದಲ್ಲಿ ಹಾಗೂ ಗ್ರಾಮಸ್ಥರ ಮನೆಗಳಲ್ಲಿ ಲಭ್ಯವಿರುತ್ತವೆ. ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಪಟ್ಟಿಗೆ ಸೇರಿಸಿ ಜಾಗತಿಕ ಮಟ್ಟದಲ್ಲಿ ಗುರುತಿಸುವ ಕಾರ್ಯ ಪರಿಣಾಮಕಾರಿಯಾಗಬೇಕು. ಈ ನಿಟ್ಟಿನಲ್ಲಿ ಪೂರಕ ಚಟುವಟಿಕೆಗಳನ್ನು ಕೈಗೊಳ್ಳುವ ಸಲುವಾಗಿ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂತಹ ಅವಶೇಷಗಳನ್ನು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿಪ್ರಾಧಿಕಾರ ಜೊತೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಲಕ್ಕುಂಡಿ ಗ್ರಾಮದಲ್ಲಿ 10 ತಂಡಗಳನ್ನು ಅಭಿಯಾನದ ರೂಪದಲ್ಲಿ ಗ್ರಾಮದ ಮನೆ, ಕಟ್ಟೆ, ತಿಪ್ಪಿ, ಒಳಗಟ್ಟಿ ಇತರೆಡೆಗಳಲ್ಲಿರುವ ಪ್ರಾಚ್ಯಾವೇಶಗಳನ್ನು ಸಂಗ್ರಹಿಸಲು ನಿರ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ನವೆಂಬರ್ 22 ರಿಂದ 24 ರವರೆಗೆ ಮೂರು ದಿನಗಳ ಕಾಲ ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಾಚ್ಯಾವಶೇಷಗಳ (ಸಂಗ್ರಹಣಾ ಅಭಿಯಾನವನ್ನು) ಅನ್ವೇಷಣೆಯನ್ನು ಹಮ್ಮಿಕೊಳ್ಳಲಾಗಿದೆ. ತಂಡಗಳ…
ಬೆಂಗಳೂರು: ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂದರ್ಭದಲ್ಲಿ ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನ ಮಡಿವಾಳ ಹಾಗೂ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಮೊಹಿಸಿನ್ ಬರಬುಯಾ(25), ಒಡಿಶಾದ ಅಭಯ್ ಕುಮಾರ್ (26), ಚಿರೋನ್ ನಾಯಕ್(26) ಬಂಧಿತ ಆರೋಪಿಗಳಾಗಿದ್ದಾರೆ. ಇವರು ಒಡಿಶಾದಿಂದ ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟಕ್ಕೆ ಮುಂದಾಗಿದ್ದರು ಎನ್ನಲಾಗಿದೆ. ಆರೋಪಿಗಳಿಂದ 14.20 ಲಕ್ಷ ಮೌಲ್ಯದ 7 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಡಿವಾಳ ಸಮೀಪದ ಪಬ್ ವೊಂದರಲ್ಲಿ ಆರೋಪಿಗಳಾದ ಮೊಹಿಸಿನ್ ಮತ್ತು ಅಭಯ್ ಕೆಲಸ ಮಾಡುತ್ತಿದ್ದರು. ಕ್ರಿಸ್‍ಮಸ್, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಗಾಂಜಾಕ್ಕೆ ಭಾರೀ ಬೇಡಿಕೆ ಇರುತ್ತದೆ. ಪಬ್ ಗಳಲ್ಲಿ ಗಾಂಜಾ ಮಾರಾಟ ಮಾಡಬಹುದು ಎಂದು ಯೋಜಿಸಿದ್ದರು. ಗಾಂಜಾ ತಂದು ಕೊಡು ಎಂದು ಮತ್ತೊಬ್ಬ ಆರೋಪಿ ಚಿರೋನ್ ಗೆ ಸೂಚಿಸಿದ್ದರು. ಆತ ಕೆಲವು ದಿನಗಳ ಹಿಂದೆ ಗಾಂಜಾ ತಂದಿದ್ದ. ಈ ಖಚಿತ ಮಾಹಿತಿ ಆಧರಿಸಿ ಸಿಲ್ಕ್ ಬೋರ್ಡ್…
ಬಾಗಲಕೋಟೆ : ಮಹಿಳೆ ಒಬ್ಬರು ಹೇರ್ ಡ್ರೈಯರ್ ಬಳಸುತ್ತಿರುವ ಸಂದರ್ಭದಲ್ಲಿ ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈಗಳ ಬೆರಳುಗಳು ಛಿದ್ರ ಛಿದ್ರವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಭವಿಸಿದೆ. ಬಸಮ್ಮ ಎಂಬ ಮಹಿಳೆ ಗಾಯಗೊಂಡ ಮಹಿಳೆಯಾಗಿದ್ದಾರೆ. ಹೇರ್ ಡ್ರೈಯರ್ ಸ್ಫೋಟವಾದ ಪರಿಣಾಮ ಮಹಿಳೆಯ ಎರಡು ಕೈಗಳು ಛಿದ್ರವಾಗಿವೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾ ಎನ್ನುವವರು ಹೇರ್ ಡ್ರೈಯರ್ ಅನ್ನುವವರ ಹೆಸರಿಗೆ ಹೇರ್ ಡ್ರೈಯರ್ ಕೊರಿಯರ್ ಬಂದಿತ್ತು. ಆದರೆ ಅವರು ಇಲ್ಲದ ವೇಳೆ ಬಸಮ್ಮ ಎನ್ನುವವರು ಆ ಹೇರ್ ಡ್ರೈಯರ್ ಪಾರ್ಸಲ್ ಅನ್ನು ತೆಗೆದುಕೊಂಡಿದ್ದರು. ಈ ವೇಳೆ ಅವರು ಹೇರ್ ಡ್ರೈಯರ್ ಅನ್ನು ಓಪನ್ ಮಾಡಿ ಸ್ವಿಚ್ ಆನ್ ಮಾಡಿದ ಕೂಡಲೇ ಬ್ಲಾಸ್ಟ್ ಆಗಿದೆ. ಬಸಮ್ಮ ಅವರ ಪತಿ ಯೋಧರಾಗಿದ್ದು, ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಬಸಮಗೆ ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ…
ವಿಧಾನಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ನೀಟ್ ಜೆಇಇ, ಸಿಇಟಿ ಪರೀಕ್ಷೆಗಳ ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ವೇಳೆ ವಿದ್ಯಾರ್ಥಿಯೊಬ್ಬ ವಿದ್ಯಾಮಂತ್ರಿಗೆ ಕನ್ನಡ ಬರಲ್ಲ ಎಂದು ಕೂಗಿದ ಘಟನೆ ನಡೆದಿದ್ದು, ಇದರಿಂದಾಗಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಎಲ್ಲರ ಸಮ್ಮುಖದಲ್ಲೇ ಮುಜುಗರಕ್ಕೀಡಾದರು. ಆರಂಭದಲ್ಲಿ ಈ ಹೇಳಿಕೆಯನ್ನು ಅಷ್ಟೊಂದು ಗಂಭೀರವಾಗಿ ಮಧುಬಂಗಾರಪ್ಪ ಪರಿಗಣಿಸಿರಲಿಲ್ಲ. ಅವರು ನಗುತ್ತಲೇ, ಯಾರೋ ಅದು? ನಾನೇನು ಉರ್ದುವಿನಲ್ಲಿ ಮಾತಾಡಿದ್ನಾ? ಎಂದು ಮರು ಪ್ರಶ್ನೆ ಹಾಕಿದರು. ಆದರೆ ಅವಮಾನಿಸಲು ಈ ರೀತಿಯಾಗಿ ವಿದ್ಯಾರ್ಥಿ ಕೂಗಿದ್ದಾನೆ ಎನ್ನುವುದು ಅರಿವಾಗುತ್ತಿದ್ದಂತೆಯೇ ಆ ರೀತಿ ಕೂಗಿದವನ ವಿರುದ್ಧ ಆಕ್ಷನ್ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸರಿಯಾಗಿ ಕನ್ನಡ ಬರೋದಿಲ್ಲ ಎನ್ನುವ ಆರೋಪವಿದೆ. ಬಿಜೆಪಿ ನಾಯಕರು ಕೂಡ ಬಗ್ಗೆ ಹಲವು ಬಾರಿ ಆರೋಪ ಮಾಡಿ, ರಾಜೀನಾಮೆಗೆ ಒತ್ತಾಯಿಸಿದ್ದರು. ಆದರೆ ಈ ವಿಚಾರ ತಣ್ಣಗಾಗಿತ್ತು. ಇದೀಗ ವಿದ್ಯಾರ್ಥಿಯೊಬ್ಬ ಮತ್ತೆ ವಿದ್ಯಾಮಂತ್ರಿಗೆ…
ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ. ಈಗಿನಂತೆ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿಯಲ್ಲಿ ತಿರಿಗುವಿಕೆ ಆರಂಭವಾಗಿದ್ದು, ನವೆಂಬರ್ 22 ಅಥವಾ 23ರಿಂದ ಪ್ರಭಲವಾಗಿ ನವೆಂಬರ್ 24ರಂದು ದಕ್ಷಿಣ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ದಿನ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು, ವಿಕ್ರಂಗೌಡ ಒಪ್ಪಿರಲಿಲ್ಲ ಎಂದರು. ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು. ಎನ್ ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ…