Author: admin

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು    ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸೇನಾಪತಿ ಆಗಿರುವಂತಹ ಮಂಗಳ ಅಕ್ಟೋಬರ್ 22ರಂದು ಕರ್ಕ ರಾಶಿಗೆ ಪ್ರವೇಶಿಸಲಿದ್ದಾನೆ. ಮಂಗಳನ ರಾಶಿ ಪರಿವರ್ತನೆ ಎನ್ನುವುದು ನಾಲ್ಕು ರಾಶಿಯವರ ಜೀವನದಲ್ಲಿ ಅದೃಷ್ಟದ ಫಲಿತಾಂಶಗಳನ್ನ ಕಾಣುವ ಹಾಗೆ ಮಾಡಲಿದ್ದು,…

Read More

ಪಾವಗಡ: ತಾಲ್ಲೂಕು ಆಡಳಿತ ವತಿಯಿಂದ 2024–25 ನೇ ಸಾಲಿನ ನವೆಂಬರ್ 1 ರಂದು ನಡೆಯುವ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ ಪಾವಗಡ ತಾಲ್ಲೂಕು ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 10 ಕ್ಷೇತ್ರಗಳಾದ,ಸಾಹಿತ್ಯಕ್ಷೇತ್ರ ,ಜಾನಪದ ಕಲೆ, ಕ್ರೀಡಾಕ್ಷೇತ್ರ , ರಂಗಭೂಮಿ ಕಲಾವಿದರು, ಸಮಾಜಸೇವೆ, ಪೌರಾಕಾರ್ಮಿಕರು, ಪತ್ರಿಕಾ ಮಾಧ್ಯಮ, ಗಡಿನಾಡು ಕನ್ನಡ ಸೇವೆ, ಆರೋಗ್ಯ /ಪಾರಂಪರಿಕ ವೈದ್ಯರು, ಗ್ರಾಮೀಣ ಕಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪುರಸ್ಕಾರ ಮಾಡಲು ನಿರ್ಣಯಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸ್ವವಿವರಗಳೊಂದಿಗೆ ಅ.25 ರ ಸಂಜೆ 5ಗಂಟೆ ರೊಳಗಾಗಿ ತಹಶೀಲ್ದಾರ್ ರವರ ಕಚೇರಿ ಪಾವಗಡ ಇವರಿಗೆ ಸಲ್ಲಿಸಬೇಕು ಎಂದು ಪಾವಗಡ ತಹಶೀಲ್ದಾರ್ ವರದರಾಜ್ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಋತುಸ್ರಾವದ ಸಂದರ್ಭದಲ್ಲಿ ಆಗುವ ವಿಪರೀತ ನೋವುಗಳಿಗೆ ಮನೆಮದ್ದುಗಳ ಸಲಹೆಯನ್ನು ಅಶ್ವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ.ಮೇಘ ಹಂಚಿಕೊಂಡರು. ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದೊಂದಿಗೆ ಡಾ.ಎಚ್.ಎಮ್.ಗಂಗಾಧರಯ್ಯರವರ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು . ಹೆಣ್ಣು ಮಕ್ಕಳು ಪ್ರೌಢಾವಸ್ಥೆಯಲ್ಲಿದ್ದಾಗ ಆರೋಗ್ಯದಲ್ಲಿ ಕೆಲವು ಬದಲಾವಣೆಗಳಾಗುತ್ತವೆ ಹಾಗೆ ಆ ಬದಲಾವಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು ಮತ್ತು 12ರಿಂದ 21ನೇ ವಯಸ್ಸಿನ ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದವು ಮಹತ್ವವನ್ನು ವಹಿಸುತ್ತದೆ ಎಂದು ಅಶ್ವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಬಲರೋಗ ವಿಭಾಗದ ಸಹಾಪ್ರಾಧ್ಯಪಕರಾದ ಮೀನಾಕ್ಷಿ ರವರು ನುಡಿದರು. ವ್ಯಾಸ ಯೂನಿವರ್ಸಿಟಿಯಲ್ಲಿ ದ್ವಿತೀಯ ವರ್ಷದ ನ್ಯಾಚುರೋಪತಿ ಮೆಡಿಸಿನ್ ವ್ಯಾಸಂಗ ಮಾಡುತ್ತಿರುವ ಕುಮಾರಿ ಋತುಂಭರಾ ಜೆ.ಎಂ. ರವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಹೆಣ್ಣು ಮಕ್ಕಳಿಗೆ ಯೋಗಾಸನದ ಮಹತ್ವ ಹಾಗೂ ಮನೆಮದ್ದುಗಳ ಮೂಲಕ ಋತುಸ್ರಾವದಿಂದ ಯಾವ ರೀತಿ ನೋವು ಕಡಿಮೆ ಮಾಡಬಹುದೆಂದು ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾರವರು ಕಾರ್ಯಕ್ರಮವನ್ನು…

Read More

ತುಮಕೂರು: ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ವತಿಯಿಂದ ಅಕ್ಟೋಬರ್ 22 ರಿಂದ 31ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ರಾತ್ರಿ 9 ಗಂಟೆಯವರೆಗೆ ನಗರದ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮೈಸೂರು ಸ್ಯಾಂಡಲ್ ಸಾಬೂನು ಮೇಳವನ್ನು ಆಯೋಜಿಸಲಾಗಿದೆ ಎಂದು ಮಾರುಕಟ್ಟೆ ಪ್ರಧಾನ ವ್ಯವಸ್ಥಾಪಕ ಕೆ.ಎಸ್.ಗಂಗಪ್ಪ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಸ್ಯಾಂಡಲ್ ಸಾಬೂನು ವಿಶ್ವ ವಿಖ್ಯಾತಿ ಪಡೆದಿದ್ದು, ನಮ್ಮ ಸಂಸ್ಥೆಯು ಕೇಂದ್ರ ಸರ್ಕಾರದಿಂದ ಭೌಗೋಳಿಕ ಸ್ವಾಮ್ಯ ಪ್ರಮಾಣ ಪತ್ರವನ್ನು ಪಡೆದು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು. ಬಹುರಾಷ್ಟ್ರೀಯ ಸಂಸ್ಥೆಗಳ ತೀವ್ರ ಪೈಪೋಟಿಯ ನಡುವೆಯೂ ನಮ್ಮ ಸಂಸ್ಥೆ ಹೆಚ್ಚಿನ ವಹಿವಾಟು ಹೊಂದಿದ್ದು, 2023–24 ಸಾಲಿನಲ್ಲಿ 1570 ಕೋಟಿ ರೂ. ವಹಿವಾಟು ನಡೆಸಿ ಅಂದಾಜು ನಿವ್ವಳ 362 ಕೋಟಿ ರೂ.ಗಳ ಲಾಭ ಗಳಿಸಿದೆ. ಪ್ರಸ್ತುತ ಆರ್ಥಿಕ ವರ್ಷ 2024–25ರಲ್ಲಿ ನಮ್ಮ ಉತ್ಪನ್ನಗಳ ಮಾರಾಟದಲ್ಲಿ ಎಲ್ಲಾ ರಾಜ್ಯಗಳಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಸೆಪ್ಟೆಂಬರ್ 24ರವರೆಗಿನ ಮಾರಾಟದಲ್ಲಿ…

Read More

ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005, ದೂ.ವಾ.ಸಂ.1902 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯಲ್ಲಿ ಮುಂದಿನ 3 ದಿನಗಳು ಅಧಿಕ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಾದ್ಯಂತ ಶೇಂಗಾ ಬೆಳೆಯು ಕಟಾವು ಕಾರ್ಯ ಪ್ರಗತಿಯಲ್ಲಿರುವುದರಿಂದ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಕೊಳ್ಳಬೇಕು. ತಗ್ಗು ಪ್ರದೇಶದ ಹೊಲಗಳಲ್ಲಿರುವ ಇತರೆ ಎಲ್ಲಾ ಬೆಳೆಗಳ ತಾಕುಗಳಲ್ಲಿ ಬಸಿಗಾಲುವೆಗಳನ್ನು ತೆಗೆದು ಹೊಲದಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ರೈತರಿಗೆ ಸಲಹೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಸಂಭ್ರಮ–50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು ಯುವಕವಿ ಗೋಷ್ಠಿಯನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಅಕ್ಟೋಬರ್ 30ರೊಳಗಾಗಿ ಕಳುಹಿಸಿಕೊಡಬೇಕು. ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಾಲತಾಣ http://karnatakasahithyaacademy.org ನಿಂದ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 23ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ” ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು. ಜಿಲ್ಲೆಯ ಸಾಹಿತಿಗಳು, ಕಲಾವಿದರು, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು, ಮಹಿಳಾ ಸಂಘಟನೆಗಳು, ಜಿಲ್ಲೆಯ ವಿವಿಧ ಸಮುದಾಯದ ಸಂಘ–ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ 3 ದಿನಗಳ ಕಾಲ ಲೋಕಾಯುಕ್ತ ಕುಂದು–ಕೊರತೆ ಸಭೆ, ಬಾಕಿ ದೂರು ಅರ್ಜಿಗಳ ವಿಲೇವಾರಿ, ಕಾನೂನು ಅರಿವು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ತಿಳಿಸಿದರು. ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ನಡೆದ ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ 299 ಹೊಸ ದೂರುಗಳಿಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಬಾಕಿ ಇದ್ದ 183 ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಮತ್ತು ಪ್ರತಿ ದೂರುದಾರರ…

Read More

ವಿಶೇಷ ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ತುಮಕೂರು : ಗುಬ್ಬಿ ತಾಲೂಕಿನಲ್ಲಿ ಕಳೆದ 40 ವರ್ಷಗಳಿಂದಲೂ ಸಹ ಅಲೆಮಾರಿ ಹಂದಿಜೋಗಿ ಸಮುದಾಯದ ಜನರು ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗದ ಗುಡಿಸಲಿನಲ್ಲಿಯೇ ವಾಸವಾಗಿದ್ದರು. ಮಳೆಗಾಲ ಬಂದರೆ ತಗ್ಗು ಪ್ರದರ್ಶನದ ಗುಡಿಸಲಿಗೆ ನೀರು ಬರುತ್ತಿತ್ತು. ಮೂಲಭೂತ ಸೌಕರ್ಯಗಳಿಲ್ಲದೆ ಪ್ರತಿನಿತ್ಯ ತೀವ್ರ ನಿಕೃಷ್ಟ ಸ್ಥಿತಿಯಲ್ಲಿ ಬಿಸಿಲು ಮಳೆ ಎನ್ನದೆ ಜೀವನ ಸಾಗಿಸುತ್ತಿದ್ದರು. ಒಂದೆಡೆ ಪುಟ್ಟ ಮಕ್ಕಳಿಗೆ ವಿದ್ಯಾಭ್ಯಾಸವಿಲ್ಲದೆ ಅನಕ್ಷರಸ್ಥರಾಗಿ ಜೀವನ ಸಾಗಿಸುತ್ತಿದ್ದರು ಸಾಂಕ್ರಾಮಿಕ ರೋಗಗಳಿಂದ ಕೆಲವು ಮಂದಿ ಚಿಕಿತ್ಸೆ ಸಿಗದೇ ಪ್ರಾಣ ಬಿಟ್ಟಿದ್ದರು. ಇದನ್ನೆಲ್ಲಾ ಗಮನಿಸಿದ ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಮತ್ತು ಕಾಳಜಿ ಫೌಂಡೇಶನ್ ತುಮಕೂರು ಈ ಎರಡು ಸಂಘಟನೆಯ ದಿಟ್ಟ ಹೋರಾಟಗಾರರು ಸ್ಥಳ ಪರಿಶೀಲನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಸಕಲ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿದ್ದರು. ಕಾಳಜಿ ಫೌಂಡೇಶನ್ ತುಮಕೂರು ಮತ್ತು ನೈಜ್ಯ ಹೋರಾಟಗಾರರ ವೇದಿಕೆಯ ಕಾರ್ಯಕರ್ತರು ಗುಬ್ಬಿ ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಇ ಓ ಮತ್ತು ಪ.ಪಂ.…

Read More