Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ, ಕುಣಿಗಲ್, ತುಮಕೂರು, ಗುಬ್ಬಿ, ಶಿರಾ, ಪಾವಗಡ ಮತ್ತು ಮಧುಗಿರಿ ತಾಲ್ಲೂಕುಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ 29 ವಿವಿಧ ಗ್ರಾಮ ಪಂಚಾಯತಿಯ 30 ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಉಪ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಈ ಆದೇಶವು ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಅಂದರೆ ನವೆಂಬರ್ 21ರ ಸಂಜೆ 5 ರಿಂದ ನವೆಂಬರ್ 23ರ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಒಂದು ವೇಳೆ ಸದರಿ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಅವರು ಆದೇಶಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅಖಿಲ ಕರ್ನಾಟಕ ಕುಳುವ ಮಹಾಸಂಘದ ಸಹಯೋಗದಲ್ಲಿ ನವೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡಭವನದಲ್ಲಿ “ಶ್ರೀ ನುಲಿಯ ಚಂದಯ್ಯ ಜಯಂತಿ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹಿರೇಮಠಾಧ್ಯಕ್ಷ ಡಾ.ಶ್ರೀಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಘನ ಉಪಸ್ಥಿತರಿರುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಜಂಟಿ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ ಅವರು ನುಲಿಯ ಚಂದಯ್ಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಜಿಲ್ಲಾ ಕುಳುವ ಸಮುದಾಯದ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9:30ಗಂಟೆಗೆ ಬಿ.ಜಿ.ಎಸ್ ವೃತ್ತದಿಂದ ಎಂ.ಜಿ.ರಸ್ತೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಕಾಳಿದಾಸ ವಿದ್ಯಾವರ್ಧಕ ಸಂಘ ಮತ್ತು ಜಿಲ್ಲೆಯ ಸಮಸ್ತ ಕುರುಬರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನವೆಂಬರ್ 18ರಂದು ಮಧ್ಯಾಹ್ನ 12:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಸಂತಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತುಮಕೂರು ತಾಲ್ಲೂಕು ಡಿ.ಎಂ.ಪಾಳ್ಯ ಶ್ರೀ ಗುರುರೇವಣಸಿದ್ದೇಶ್ವರ ಮಠದ ಪೀಠಾಧಿಪತಿ ಶ್ರೀಶ್ರೀ ಬಿಂಧುಶೇಖರ ಒಡೆಯರ್ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಘನ ಉಪಸ್ಥಿತರಿರುವರು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಲೇಖಕರಾದ ಎನ್.ಆರ್. ಲಲಿತಾಂಬ ಅವರಿಂದ ಕನಕದಾಸರ ಕುರಿತು ಉಪನ್ಯಾಸ ಏರ್ಪಡಿಸಲಾಗಿದ್ದು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9:30 ಗಂಟೆಗೆ ನಗರದ…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ ಸೌಲಭ್ಯಕ್ಕಾಗಿ ಅರ್ಹ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್.ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ 8050770004ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 17ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುಮಕೂರಿನ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅಂತರಸನಹಳ್ಳಿ ಸ್ವೀಕರಣಾ ಕೇಂದ್ರ, ವಿಪ್ರೋ, ಬೆಳ್ಳಾವಿ, ಹೆಗ್ಗೆರೆ, ದೊಡ್ಡಸಾರಂಗಿ, ಸಿ.ಟಿ.ಕೆರೆ, ಚೇಳೂರು, ಹಾಗಲವಾಡಿ, ಹೊಸಕೆರೆ, ನಂದಿಹಳ್ಳಿ ಕ್ರಾಸ್, ಮಲ್ಲಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ಸಿರಾ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ವತಿಯಿಂದ ಹಮ್ಮಿಕೊಂಡಿದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾನ್ಯ ಸದಸ್ಯರಾದ ಡಾ.ತಿಪ್ಪೇಸ್ವಾಮಿ ಕೆ.ಟಿ. ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಿರಾ ತಾಲ್ಲೂಕಿನ ಇಓ, ಬಿಇಓ, 42 ಗ್ರಾಮ ಪಂಚಾಯ್ತಿಗಳ ಪಿಡಿಓಗಳು, CRP / BRP ಗಳು ಅಂಗನವಾಡಿ ಮೇಲ್ವಿಚಾರಕಿಯರು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಾ.ಚಿ ರಾಜ್ ಕುಮಾರ್ ರವರು ಹಾಗೂ ಮಕ್ಕಳ ರಕ್ಷಣಾಧಿಕಾರಿ ಶಿವಣ್ಣನವರು ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ, ಸಂಬಂಧದಲ್ಲಿ ಸಹೋದರನಾಗಿರುವ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) ನ್ಯಾಯಾಲಯವು ಜೀವಾವಧಿ ಶಿಕ್ಷೆ(ಸಾಯುವವರೆಗೂ) ಹಾಗೂ 3.50 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಗುಬ್ಬಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು.ಲೋಹಿತ್ ಕುಮಾರ್ ಎಂಬಾತ ಜೀವಾವಧಿ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತನಿಗೆ ಈಗಾಗಲೇ ಮದುವೆಯಾಗಿದ್ದರೂ, ಸಂಬಂಧದಲ್ಲಿ ತನಗೆ ತಂಗಿಯಾಗುವ 13 ವರ್ಷದ ಬಾಲಕಿಯನ್ನು ಮಾತನಾಡಿಸುತ್ತಿದ್ದ. ಆತನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೊಂದ ಬಾಲಕಿಯನ್ನಯನ್ನು ಕರೆದುಕೊಂಡು ಹೋಗಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಬಳಿಕ ಈ ವಿಚಾರ ಯಾರಿಗಾದರೂ ತಿಳಿಸಿದರೆ, ತಂದೆ—ತಾಯಿಯನ್ನು ಸಾಯಿಸುವುದಾಗಿ ಬಾಲಕಿಯನ್ನು ಬೆದರಿಸಿ ಹಲವಾರು ಬಾರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಇದರ ಪರಿಣಾಮ ನೊಂದ ಬಾಲಕಿ ಗರ್ಭಿಣಿಯಾಗಿದ್ದಾಳೆ ಎಂದು ತನಿಖಾಧಿಕಾರಿಗಳಾದ ಗೋಪಿನಾಥ್ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ …
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಸಂಪಿಗೆ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಸಂಜೆ ಪರಿವೀಕ್ಷಣೆ ಹಾಗೂ ಯಶವಂತಪುರ–ಚಿಕ್ಕಮಗಳೂರು ಎಕ್ಸ್ ಪ್ರೆಸ್ ಗೆ ಹೆಚ್ಚುವರಿ ರೈಲು ನಿಲುಗಡೆಗೆ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಮಾಜಿ ಶಾಸಕ ಮಸಾಲ ಜಯರಾಮ, ಬೆಂಗಳೂರು ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಯೋಗೇಶ್ ಮೋಹನ್, ನೈರುತ್ಯ ರೈಲ್ವೆ ಮುಖ್ಯ ವಾಣಿಜ್ಯ ವ್ಯವಸ್ಥಾಪಕ ಡಾ.ಅನೂಪ್ ದಯಾನಂದ ಸಾಧು, ಕಾರ್ಯಕ್ರಮದ ವ್ಯವಸ್ಥಾಪಕ ಶ್ರೀನಿವಾಸ್ ಸೇರಿದಂತೆ ರೈಲ್ವೇ ಇಲಾಖೆಯ ಅಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಸರಗೂರು: ಪ್ರತ್ಯೇಕ ತಾಲ್ಲೂಕೆಂದು ಘೋಷಣೆಯಾಗಿ 7 ರಿಂದ 8 ವರ್ಷಗಳ ಕಳೆದು ಹೋಗಿದೆ. ಹೆಸರುವಾಸಿಯಾದ ಊರಾಗಿದ್ದರೂ ತಾಲೂಕು ಕೇಂದ್ರವಾಗಿ ಬಿಂಬಿಸುವಂತಹ ಮೂಲಭೂತ ಸೌಕರ್ಯಗಳನ್ನು ಇದುವರೆಗೂ ಯಾವುದೇ ಸರ್ಕಾರ ಬಂದರೂ ಕಲ್ಪಿಸದೇ, ಹೆಸರಿಗೆ ಮಾತ್ರ ತಾಲೂಕು ಎಂದು ಕರೆಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ಒತ್ತಾಯಿಸಿದರು. ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ರೈತ ಸಂಘ ಕಾರ್ಯಕರ್ತರ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರಗೂರು ತಾಲೂಕಿನ ಸರ್ವತೋಮುಖ ಬೆಳವಣಿಗಾಗಿ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯನ್ನು ಬಡಗಲಪುರ ನಾಗೇಂದ್ರ ಅವರು ಅಧ್ಯಕ್ಷತೆಯಲ್ಲಿ ಸಭೆ ಕರೆದು ಮಾತನಾಡಿದರು. ತಾಲೂಕು ಎಂದು ಕಾಂಗ್ರೆಸ್ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇತೃತ್ವದಲ್ಲಿ ಮಾಡಿದ್ದಾರೆ. ಆದರೆ ಇನ್ನೂ ಅಭಿವೃದ್ಧಿ ಕಂಡಿಲ್ಲ, ಈ ತಾಲೂಕಿನಲ್ಲಿ 2 ಎರಡು ಹೋಬಳಿಗಳಲ್ಲೂ ಅರಣ್ಯ ಪ್ರದೇಶವಿದೆ. ಇದ್ದರೂ ಅಭಿವೃದ್ಧಿ ಕಂಡಿಲ್ಲ. ತಾಲೂಕಿನ ಎರಡು ಹೋಬಳಿಯಲ್ಲಿ ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಬರುವ ಗ್ರಾಮಗಳು ಹೆಚ್ಚು ಕಾಡಂಚಿನ ಭಾಗದ ಪ್ರದೇಶದಲ್ಲಿ…
ಮೈಸೂರು: ನಾನ್ಯಾವತ್ತೂ ಜಮೀರ್ ಅಹಮದ್ ಖಾನ್ ಅವರನ್ನು ಕುಳ್ಳ ಎಂದು ಕರೆದಿಲ್ಲ, ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜಮೀರ್ ಅವರು ನನ್ನನ್ನು ಕರಿಯ ಎಂದು ಸಂಬೋಧಿಸಿಲ್ಲ. ನಮಿಬ್ಬರ ನಡುವೆ ರಾಜಕೀಯವಾಗಿ ಆತ್ಮೀಯತೆ ಇತ್ತೇ ಹೊರತು, ಈ ಹೇಳಿಕೆಗಲ್ಲ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು. ಅವರ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಒಮ್ಮೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ನನ್ನನ್ನು ಕುಮಾರ ಎಂದು ಕರೆದಾಗ ಹೊಡೆಯಲು ಹೋಗಿದ್ದರು. ಈ ರೀತಿಯ ಪದಬಳಕೆ ಎಂದಿಗೂ ನನ್ನಿಂದಲೂ ಆಗಿಲ್ಲ, ಅವರಿಂದಲೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ದುಡ್ಡಿನ ಮದದಿಂದ ಕೊಂಡುಕೊಳ್ಳುತ್ತೇನೆ ಎಂಬ ರೀತಿ ಮಾತನಾಡಿದ್ದಾರೆ. ಇವರು ಎಲ್ಲಿದ್ದರು, ಯಾವ ಸಂದರ್ಭದಲ್ಲಿ, ಯಾರ ಕಾಲು ಹಿಡಿದಿದ್ದಾರೆ ಎಂಬುದು ಗೊತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು. ಜಮೀರ್ ಅವರ ಹೇಳಿಕೆಯನ್ನು ಮುಖ್ಯಮಂತ್ರಿ, ಗೃಹಸಚಿವರು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಸರ್ಕಾರಕ್ಕೆ ಮಾನ, ಮರ್ಯಾದೆ ಏನಾದರೂ ಇದೆಯೇ?, ನಾಗರಿಕ ಸಮಾಜವೆಂದು ಕರೆಯಬೇಕೇ? ಎಂದು ಟೀಕಾಪ್ರಹಾರ ನಡೆಸಿದ ಅವರು, ವರ್ಣಭೇದದ ಕುರಿತಂತೆ ಚರ್ಚೆ ಮಾಡುವುದು…