Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ಮಾಹೆಯ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ಮೇ–2026ರ ಮಾಹೆಯಲ್ಲಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ಅಂತ್ಯೋದಯ ಪಡಿತರ ಚೀಟಿ(ಎಎವೈ) ಗೆ ಮಾಹೆಯಾನ 21 ಕೆ.ಜಿ.ಯಂತೆ 42 ಕೆ.ಜಿ. ರಾಗಿ; ಮಾಹೆಯಾನ 14 ಕೆ.ಜಿ.ಯಂತೆ 28 ಕೆ.ಜಿ. ಅಕ್ಕಿ ಸೇರಿದಂತೆ ಒಟ್ಟು 70 ಕೆ.ಜಿ. ರಾಗಿ ಹಾಗೂ ಅಕ್ಕಿಯನ್ನು ವಿತರಣೆ ಮಾಡಲಾಗುವುದು. ಆದ್ಯತಾ(ಕೇಂದ್ರ) ಪಡಿತರ ಚೀಟಿ(ಪಿ.ಹೆಚ್.ಹೆಚ್.)ಯ ಪ್ರತಿ ಸದಸ್ಯರಿಗೆ ಮಾಹೆಯಾನ 3 ಕೆ.ಜಿ.ಯಂತೆ 6 ಕೆ.ಜಿ. ರಾಗಿ ಹಾಗೂ ಮಾಹೆಯಾನ 2 ಕೆ.ಜಿ.ಯಂತೆ 4 ಕೆ.ಜಿ. ಅಕ್ಕಿ ಸೇರಿದಂತೆ ಒಟ್ಟು 10 ಕೆ.ಜಿ. ರಾಗಿ ಹಾಗೂ ಅಕ್ಕಿಯನ್ನು ವಿತರಣೆ ಮಾಡಲಾಗುವುದು. ಆದ್ಯತಾ(ರಾಜ್ಯ) ಪಡಿತರ ಚೀಟಿ(ಪಿ.ಹೆಚ್.ಹೆಚ್.)ಯ ಪ್ರತಿ ಸದಸ್ಯರಿಗೆ ಮಾಹೆಯಾನ 5 ಕೆ.ಜಿ.ಯಂತೆ ಒಟ್ಟು 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುವುದು. ಜಿಲ್ಲೆಯ ಪಡಿತರ ಚೀಟಿದಾರರು ಮೇ ಮತ್ತು ಜೂನ್ ಮಾಹೆಗೆ ಸಂಬಂಧಿಸಿದ…
ತುಮಕೂರು: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಪೊಲೀಸರು ಬುಧವಾರ ಮಧ್ಯಾಹ್ನ ವಶಕ್ಕೆ ಪಡೆದಿದ್ದಾರೆ. ನಗರದ ಖಾದರ್ ನಗರದ ಕಲ್ಲೇಶ್ವರ ಆಸ್ಪತ್ರೆ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಜಯನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (SI) ತಿಪ್ಪೇಸ್ವಾಮಿ ಮತ್ತು ಸಿಬ್ಬಂದಿ ಸ್ಥಳದ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸ್ ದಾಳಿಯ ವೇಳೆ ಶ್ರೀಕಾಂತ್ (34 ವರ್ಷ), ಗೌತಮ್ ಬಿ.ಎಸ್. (28 ವರ್ಷ), ಆಕಾಶ್ ಆರ್.ಬಿ. (36 ವರ್ಷ) ಎಂಬ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ‘ಎಂ ಎಂ’ (MDMA) ಎನ್ನಲಾದ ಮಾದಕ ವಸ್ತುವನ್ನು ಮಾರಾಟ ಮಾಡಲು ಸಜ್ಜಾಗಿದ್ದರು. ದಾಳಿಯ ವೇಳೆ ಪೊಲೀಸರು ಸುಮಾರು 5 ಗ್ರಾಂ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಜಯನಗರ ಪೊಲೀಸ್ ಠಾಣೆಯ ಎಸ್‌ಐ ತಿಪ್ಪೇಸ್ವಾಮಿ ಹಾಗೂ ಹೆಡ್ ಕಾನ್ಸ್…
ತುಮಕೂರು: ಜಿಲ್ಲೆಯ ಕದ್ರಿಹಳ್ಳಿ ತಾಂಡಾದಲ್ಲಿ ಮಹಿಳೆಯೊಬ್ಬರನ್ನು ಗೃಹಬಂಧನದಲ್ಲಿಟ್ಟು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ ಪ್ರಕರಣವೊಂದನ್ನು ಭೇದಿಸಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು, ಸಂತ್ರಸ್ತೆಯನ್ನು ಯಶಸ್ವಿಯಾಗಿ ರಕ್ಷಿಸಿದೆ. ಕದ್ರಿಹಳ್ಳಿ ತಾಂಡಾದ ಮಹಿಳೆಯ ತಂದೆ ದೇವೇಂದ್ರನಾಯ್ಕ ಅವರು ಪ್ರಾಧಿಕಾರಕ್ಕೆ ಲಿಖಿತ ದೂರು ಸಲ್ಲಿಸಿದ್ದರು. ಸುಮಾರು 14 ವರ್ಷಗಳ ಹಿಂದೆ ತಮ್ಮ ಮಗಳನ್ನು ತುಮಕೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಗಂಡ ಹಾಗೂ ಆತನ ಕುಟುಂಬದವರು ಮಗಳಿಗೆ ತೀವ್ರ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದು, ಆಕೆಯನ್ನು ಮನೆಯಲ್ಲೇ ಕೂಡಿಹಾಕಿದ್ದಾರೆ. ಇದರಿಂದ ಆಕೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದಾಳೆ ಎಂದು ದೂರಿನಲ್ಲಿ ವಿವರಿಸಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಪ್ರಾಧಿಕಾರವು ಇದನ್ನು ವ್ಯಾಜ್ಯಪೂರ್ವ ಪ್ರಕರಣವನ್ನಾಗಿ ದಾಖಲಿಸಿಕೊಂಡಿತ್ತು. ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಎದುರುದಾರರಿಗೆ (ಗಂಡನ ಮನೆಯವರಿಗೆ) ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ನೋಟಿಸ್ ನೀಡಲು ಹೋದ ದಲಾಯತ್ ಅವರೊಂದಿಗೆ ವ್ಯಂಗ್ಯವಾಗಿ ವರ್ತಿಸಿದ ಆರೋಪಿಗಳು ನೋಟಿಸ್ ಸ್ವೀಕರಿಸಲು ನಿರಾಕರಿಸಿದ್ದರು. ಆರೋಪಿಗಳ ಉದ್ಧಟತನವನ್ನು ಗಮನಿಸಿದ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ…
ತಿಪಟೂರು: ನಗರದ ನಿವೃತ್ತ ನೌಕರ ಸಂಘದ ಕಚೇರಿಯಲ್ಲಿ ನಡೆದ ತಾಲ್ಲೂಕು ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯಲ್ಲಿ ಬಸವಣ್ಣ ವಿಚಾರಧಾರೆ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ಟೇಶ್ ಎಸ್. ಉಪ್ಪಾರ್ ಮಾತನಾಡಿ, ಬಸವಣ್ಣನನ್ನು ನಿರ್ದಿಷ್ಟ ಜಾತಿಗೆ ಸೀಮಿತಗೊಳಿಸಿ ದೇವರೆಂದು ಪೂಜಿಸುವುದು ಅವರ ಮೂಲ ತತ್ವಗಳಿಗೆ ವಿರುದ್ಧ ಎಂದು ವಿಷಾದ ವ್ಯಕ್ತಪಡಿಸಿದರು. ಅಲ್ಲದೆ ಜಾತಿ, ವರ್ಣ, ಲಿಂಗ ಭೇದಗಳನ್ನು ತಿರಸ್ಕರಿಸಿ, ಮೌಢ್ಯ ವಿರೋಧಿಸಿ ಸಾಮಾಜಿಕ ಸಮಾನತೆಯನ್ನು ಸಾರಿದ ಮಹಾನ್ ಮಾನವತಾವಾದಿಯನ್ನು ಸ್ಥಾವರ ರೂಪದಲ್ಲಿ ಕಾಣುವುದು ವಿಪರ್ಯಾಸ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ.ಎಂ. ರಾಜಣ್ಣ ಬಸವಣ್ಣರು ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದು, ಅವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕ ನಾಗರಾಜುರವರನ್ನು ಗೌರವಿಸಲಾಯಿತು. ಉಪನ್ಯಾಸದಲ್ಲಿ ಎಚ್.ಜಿ. ನರಸಿಂಹಮೂರ್ತಿ, ಪಿ.ಆರ್. ಗುರುಸ್ವಾಮಿ, ಎಚ್. ಎಸ್. ಮಂಜಪ್ಪ, ಡಿ.ಎಸ್. ಮರುಳಪ್ಪ, ಕೇಂದ್ರ ಸಾಹಿತ್ಯ ವೇದಿಕೆಯ ತಾ.…
ತುಮಕೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ, ಪರೀಕ್ಷಾ ಪಾವಿತ್ರ್ಯತೆ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಈ ವೈಫಲ್ಯಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಬಗ್ಗೆ ಸಂಸದರು ಸಂಸತ್ತಿನಲ್ಲಿ ಧ್ವನಿ ಮಾಡಬೇಕು ಎಂದು ಒತ್ತಾಯಿಸಿ ತುಮಕೂರು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಬಿಜಿಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕನಸು, ಭವಿಷ್ಯ ಕೇಂದ್ರ ಸರ್ಕಾರ ಹಾಳು ಮಾಡಿದೆ ಎಂದು ಕಾರ್ಯಕರ್ತರು ಆರೋಪಿಸಿದರು. ಬಿತ್ತಿ ಪತ್ರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಇಲಾಹಿ ಸಿಕಂದರ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನೀಟ್ ಪರೀಕ್ಷೆ…
ತುಮಕೂರು: ಕೇಂದ್ರ ಸರ್ಕಾರದ ಆನ್ ಲೈನ್ ಔಷಧ ಮಾರಾಟ ನೀತಿಯನ್ನು ವಿರೋಧಿಸಿ ಹಾಗೂ ಔಷಧ ವ್ಯಾಪಾರಿಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ನಿವಾರಣೆಗೆ ಆಗ್ರಹಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ವ್ಯಾಪಾರ ಬಂದ್ ಮಾಡಿ ಪ್ರತಿಭಟನೆ ನಡೆಸಲು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘ ನಿರ್ಧರಿಸಿದೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಂಘದ ಪದಾಧಿಕಾರಿಗಳು, ಆನ್‌ಲೈನ್ ಮೂಲಕ ಔಷಧ ಮಾರಾಟ ಮಾಡುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಅಲ್ಲದೆ, ಇದರಿಂದ ಸಾಂಪ್ರದಾಯಿಕ ಔಷಧ ವ್ಯಾಪಾರಿಗಳ ಜೀವನೋಪಾಯಕ್ಕೆ ಸಂಕಷ್ಟ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ತುಮಕೂರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದ ಔಷಧ ಅಂಗಡಿಗಳು ಅಂದು ಪೂರ್ಣ ಪ್ರಮಾಣದಲ್ಲಿ ಬಂದ್ ಆಗಲಿವೆ. ಆನ್‌ಲೈನ್ ಔಷಧ ಮಾರಾಟಕ್ಕೆ ಪರವಾನಗಿ ನೀಡಬಾರದು, ಔಷಧಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಮತ್ತು ಔಷಧ ವ್ಯಾಪಾರಿಗಳಿಗೆ ರಕ್ಷಣೆ ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ. “ಆನ್ ಲೈನ್‌ನಲ್ಲಿ ವೈದ್ಯರ ಚೀಟಿ ಇಲ್ಲದೆ ಔಷಧಗಳು…
ತುಮಕೂರು: NEET UG ಪ್ರಶ್ನೆ ಪತ್ರಿಕೆ ಸೋರಿಕೆಯ ಹಿನ್ನಲೆಯಲ್ಲಿ ಪರೀಕ್ಷೆ ರದ್ದುಗೊಳಿಸಿದ್ದು, ಈ ಕುರಿತು ಕೂಡಲೇ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವವರಿಗೆ ನಿದರ್ಶನೀಯ ಶಿಕ್ಷೆ ವಿಧಿಸಿ ಹಾಗೂ NTAಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಎಐಡಿಎಸ್ ಓ ವತಿಯಿಂದ ನಗರದ ಕೋತಿತೋಪು ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಇಂದು ಎಲ್ಲಾ ಸರ್ಕಾರಗಳು ಶಿಕ್ಷಣವನ್ನ ವ್ಯಾಪಾರದ ವಸ್ತುವನ್ನಾಗಿಸುತ್ತಿವೆ. ಅದರಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವುದು ಬಡ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಗಗನ ಕುಸುಮವೇ ಆಗುತ್ತಿದೆ. ತಂದೆ ತಾಯಿಗಳು ಕೂಡ ಮಕ್ಕಳ ಕನಸನ್ನು ಈಡೇರಿಸಲು ಸಾಲ-ಸೂಲಾ ಮಾಡಿ ಓದಿಸುತ್ತಾರೆ. ತಮ್ಮ – ವೈದ್ಯಕೀಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹಗಲಿರುಳೆನ್ನದೇ ಪರಿಶ್ರಮ ಹಾಕಿ ನೀಟ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಅನ್ಯವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) “ಕೋಚಿಂಗ್ ಮಾಫಿಯಾ”ದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಇಡೀ ವ್ಯವಸ್ಥೆಯ ಹದಗೆಟ್ಟ ಸ್ಥಿತಿಯನ್ನು ತೋರಿಸುತ್ತಿದೆ. ಈ ವ್ಯವಸ್ಥೆಯು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ದೇಶದಲ್ಲಿ ತೀವ್ರ ಬೇಸಿಗೆಯಿಂದ ಜನ ಹಾಗೂ ಜಾನುವಾರುಗಳು ಸಂಕಷ್ಟ ಅನುಭವಿಸುತ್ತಿದ್ದು, ಮಹಾಶಕ್ತಿ ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆಯ ಆಗಮನವಾಗಿ ಸಮಸ್ತ ಜನತೆಗೆ ನೆಮ್ಮದಿ ದೊರಕಲಿ ಎಂದು ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಸಿದರು. ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದ ಶ್ರೀಮಹಾಶಕ್ತಿ ಮಾರಮ್ಮ ದೇವಿ ಹಾಗೂ ಶ್ರೀ ಅಥವರ್ಣ ಭದ್ರಕಾಳಿ ಅಮ್ಮನವರ ವರಧಂತಿ ಕಾರ್ಯಕ್ರಮ ಹಾಗೂ 77ನೇ ದಿನದ ಮಂಡಲದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಎಲೆರಾಂಪುರ ನರಸಿಂಹಗಿರಿ ಸುಕ್ಷೇತ್ರ ಪರಮಪೂಜ್ಯ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಮಾತನಾಡಿ, ಭಾರತ ದೇಶದಲ್ಲಿ ಧಾರ್ಮಿಕ ಕ್ಷೇತ್ರವು ವಿಶೇಷ ಪಾವಿತ್ರ್ಯತೆ ಹೊಂದಿದೆ. ಧಾರ್ಮಿಕ ಶ್ರದ್ಧಾ ಕೇಂದ್ರಗಳು ಹೆಚ್ಚಾದಷ್ಟು ಅಧರ್ಮ ಅಂತ್ಯವಾಗಿ ಧರ್ಮ ಉಳಿಯಲಿದೆ. ತಾಯಿಯ ಮಹಿಮೆ ಜಗತ್ತಿಗೆ ಅರಳಿ ಭಕ್ತರ ಕಷ್ಟಗಳಿಗೆ ಪರಿಹಾರ ಸಿಗಲಿ ಎಂಬುದು ನಮ್ಮೆಲ್ಲರ ಪ್ರಾರ್ಥನೆಯಾಗಿದೆ ಎಂದು ಹೇಳಿದರು. ಕನ್ನಡ ಚಲನಚಿತ್ರ ನಿರ್ದೇಶಕ ಶಶಾಂಕ್ ರಾಜ್…
ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಎಂಬಿಕೆ , ಎಲ್ ಸಿ ಆರ್ ಪಿ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು, ಸಭೆಯಲ್ಲಿ ಗ್ರಾಮವಾರು ಇರುವ ಕೊಳವೆಬಾವಿಗಳಲ್ಲಿನ ನೀರಿನ ಲಭ್ಯತೆ, ಕುಡಿಯುವ ನೀರಿನ ವಿತರಣೆ ಹಾಗೂ ಜನರಿಗೆ ತೊಂದರೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಯಿತು. ಬೇಸಿಗೆ ಹಿನ್ನೆಲೆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ನೀಡಲಾಯಿತು. ಇದೇ ವೇಳೆ ಇದೇ ತಿಂಗಳ 20ರಂದು ತುಮಕೂರು ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡುತ್ತಿರುವ ಹಿನ್ನೆಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಆಹ್ವಾನಿಸುವ ಕುರಿತು ಚರ್ಚೆ ನಡೆಯಿತು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ತಾಲೂಕು ಶಿಶು ಅಭಿವೃದ್ಧಿ…
ತುಮಕೂರು: ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ಕದರೇನಳ್ಳಿ ಲಂಬಾಣಿ ತಾಂಡಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ವಸತಿ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿರುವ 25 ಕುಟುಂಬಗಳಿಗೆ ತುಮಕೂರಿನಲ್ಲಿ 2026ರ ಮೇ 20ರಂದು ನಡೆಯಲಿರುವ ಮುಖ್ಯಮಂತ್ರಿಗಳ ಮೂರನೇ ವರ್ಷದ ಸಾಧನೆ ಸಂಭ್ರಮ ಸಮಾವೇಶಕ್ಕೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಯಿತು. ಗ್ರಾಮದ ಮೂಲಭೂತ ಸೌಲಭ್ಯಗಳು ಹಾಗೂ ವಸತಿ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ತುಮಕೂರು ಉಪ ವಿಭಾಗಾಧಿಕಾರಿ ನಹಿದಾ ಜಮ್ ಜಮ್, ತಹಶೀಲ್ದಾರ್ ರಾಜೇಶ್ವರಿ ಹಾಗೂ ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC