Subscribe to Updates
Get the latest creative news from FooBar about art, design and business.
- ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
- ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
- ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
- ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
- ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
Author: admin
ಪಾವಗಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಹೇಶ್ ಅವರು, ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಆರ್.ಡಿ.ರೋಪ್ಪ ಗ್ರಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಶ್ರೀ ಚಿಕ್ಕ ಪಾಲವಾಯಪ್ಪ ಸ್ವಾಮಿ ಮತ್ತು ಎಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಮಂಜೂರು ಮಾಡಲಾದ 2 ಲಕ್ಷ ರೂಪಾಯಿಗಳ ಡಿಡಿಯನ್ನು ಕಮಿಟಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗಣ್ಯರ ಸಮ್ಮುಖದಲ್ಲಿ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕೂಡ ಸೇರಿದೆ. ಪಾವಗಡ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 1.47 ಕೋಟಿ ಅನುದಾನ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ(ಸುಜ್ಞಾನ ನಿಧಿ), ನಿರ್ಗತಿಗಳಿಗೆ ಮಾಶಾಸನ, ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ವದಗನೆ, ಕುಡಿಯ ನೀರಿನ ಸಮಸ್ಯೆ ನಿವಾರಿಸಲು ಶುದ್ಧ ನೀರಿನ ಘಟಕ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾಗಿದೆ ಎಂದು…
ಪಾವಗಡ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಭಾರತ ರತ್ನ ಜವಾಹರ ಲಾಲ್ ನೆಹರು ರವರ 135 ನೇ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿದರು. ಈ ಸಂದರ್ಭದಲ್ಲಿ ನೆಹರೂ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ದಲ್ಲಿ ಶಾಲಾ ಸಂಸತ್ತಿನ ಎಲ್ಲಾ ಪ್ರತಿನಿಧಿಗಳನ್ನು ಸಭೆಯಲ್ಲಿ ಕೂರಿಸಿ ಅವರುಗಳಿಂದಲೇ ವಿನೂತನವಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ಜವಾಹರಲಾಲ್ ನೆಹರೂ ಬಗ್ಗೆ ಭಾಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಹಿಂದಿನ ದಿನ ಶಿಕ್ಷಕರುಗಳಿಂದ ವಿದ್ಯಾರ್ಥಿಗಳಿಗೆ ಕೆಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಮ್ಯೂಜಿಕಲ್ ಚೇರ್, ನದಿ–ದಡ ಎಂಬ ಸ್ಪರ್ಧೆಗಳನ್ನು ಆಯೋಜಿಸುವುದರ ಮೂಲಕ ಸಾರ್ಥಕವಾದ ಮಕ್ಕಳ ದಿನಾಚರಣೆಯನ್ನು ಆಚರಿಸಿ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೇಣುಕರಾಜ್ .ಜಿ.ಹೆಚ್., ಮಕ್ಕಳ ದಿನಾಚರಣೆಯ ಮಹತ್ವ, ಹಿನ್ನೆಲೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಗಳಾಗಿ ರೂಪುಗೊಂಡು ತಂದೆ ತಾಯಿಗಳಿಗೆ ಕೀರ್ತಿಯನ್ನು ತನ್ನಿ ಎಂಬ ಕಿವಿ ಮಾತನ್ನು ಹೇಳಿದರು.…
ತುಮಕೂರು: ಅಕ್ಷಯ ಬಯೋಟೆಕ್ ಕಂಪನಿಯಿಂದ ಹೋಬಳಿ ಮಟ್ಟದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳಿವೆ. ಯುವಜನರಿಗಾಗಿ ಉದ್ಯೋಗಾವಕಾಶವನ್ನು ಒದಗಿಸುವ ನಿಟ್ಟಿನಲ್ಲಿ, ಅಕ್ಷಯ ಬಯೋಟೆಕ್ ಸಂಸ್ಥೆಯು ಹೋಬಳಿಯ ವಿವಿಧ ಕ್ಷೇತ್ರಗಳಲ್ಲಿ ಫೀಲ್ಡ್ ಆಫೀಸರ್ ಮತ್ತು ಟೀಮ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ. ಈ ಹೊಸ ಹುದ್ದೆಗಳಿಗಾಗಿ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ಹೊಂದಿರಬೇಕು. ವೇತನ ಮತ್ತು ಸೌಲಭ್ಯಗಳು: ಅಕ್ಷಯ ಬಯೋಟೆಕ್, ಆಯ್ಕೆಯಾದ ಅಭ್ಯರ್ಥಿಗಳಿಗೆ ₹13,500 ರಿಂದ ₹21,000 ವೇತನದೊಂದಿಗೆ ಪ್ರೋತ್ಸಾಹ ಧನದ ಅನುಕೂಲ ಕಲ್ಪಿಸುತ್ತದೆ. ವಸತಿ ಸೌಲಭ್ಯ, ಇಎಸ್ ಐ, ಪಿಎಫ್, ಮತ್ತು ಪೆಟ್ರೋಲ್ ಅಲಯನ್ಸ್ ಸೌಲಭ್ಯಗಳು ಸಹ ಈ ಹುದ್ದೆಗಳೊಂದಿಗೆ ಲಭ್ಯವಿರುತ್ತವೆ. ಸಂದರ್ಶನದ ವಿವರಗಳು: ಅಭ್ಯರ್ಥಿಗಳಿಗೆ ನೇರ ಸಂದರ್ಶನವು ದಿನಾಂಕ:18—11–2024 ರಂದು ವಿವಿಧ ಹೋಬಳಿ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಹೋಬಳಿ ಮಟ್ಟದ ಸಂಪರ್ಕ ಮಾಹಿತಿ: ಅಭ್ಯರ್ಥಿಗಳು ತಮ್ಮ ಹೋಬಳಿ ಕೇಂದ್ರಕ್ಕೆ ಅನುಗುಣವಾಗಿ ಸಂಪರ್ಕಿಸಲು ಈ ಕೆಳಗಿನ ಸಂಖ್ಯೆಗಳ ಮೂಲಕ ಮಾಹಿತಿಯನ್ನು ಪಡೆಯಬಹುದು: ಶಿರಾ –…
ಶಿರಾ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಉಳಿಯುವುದೇ ಕಷ್ಟ ಅವುಗಳಿಗೆ ಮಕ್ಕಳು ಸೇರುವುದೇ ಕಷ್ಟ ಎಂಬುವಂತಹ ಕಾಲದಲ್ಲಿ ಇಲ್ಲೊಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅರ್ಧ ಶತಮಾನ ಕಳೆದರೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ. ಅದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆದರೆ ಇಲ್ಲಿನ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ಕೊಠಡಿಯ ವ್ಯವಸ್ಥೆಗಳೆಲ್ಲ ಇರುವ ಕೊಠಡಿಗಳು ಶೀತಲ ಅವಸ್ಥೆಯಲ್ಲಿದ್ದು ಮಳೆ ಬಂದರೆ ಸೋರುವ ಹಾಗೂ ಬಿದ್ದು ಹೋಗುವ ಸ್ಥಿತಿಯಲ್ಲಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುಮಾರು 90 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ತರಗತಿಗಳು ನಡೆಯಲು ಇಲ್ಲಿ ಕೊಠಡಿ ವ್ಯವಸ್ಥೆಗಳಿಲ್ಲ. ಕೇವಲ ನಾಲ್ಕು ಕೊಠಡಿಗಳಿಗೆ ಮಾತ್ರ ಇವೆ ನಾಲ್ಕರಲ್ಲಿ ಒಂದು ಶಿಥಿಲಗೊಂಡಿದ್ದು, ಒಂದು ಕೊಠಡಿಯಲ್ಲಿ ಆಫೀಸ್…
ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು. ರಾಕೇಶ್ ಅಲಿಯಾಸ್ ರೇವಂತ್ ಎಂಬಾತ 13ವರೆ ವರ್ಷದ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ತಂದೆ ತಾಯಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ರಾಕೇಶ್ ನಡೆಸಿದ ಲೈಂಗಿಕ ದೌರ್ಜನ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ದಾಖಲಾದ ಪ್ರಕರಣದ ತನಿಖಾಧಿಕಾರಿ ಡಾ.ನವೀನ್ ಕುಮಾರ್ ಎಂ.ಬಿ. ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿ ರಾಕೇಶ್ ಅಲಿಯಾಸ್…
ತುಮಕೂರು: ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ದಸರಾ ಉತ್ಸವದಲ್ಲಿ ಭಾಗವಹಿಸಿದ್ದ ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳಿಗೆ ಈವರೆಗೂ ಸಂಭಾವನೆಯನ್ನೇ ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟದ ಅಧ್ಯಕ್ಷ ವೀರೇಶ್ ಪ್ರಸಾದ್ ತಿಳಿಸಿದ್ದಾರೆ. ದಸರಾ ಆಚರಣೆ ಅದ್ದೂರಿಯಾಗಿ ನಡೆಯಬೇಕು, ಯಾವುದೇ ಕಾರಣಕ್ಕೂ ಕೊರತೆಯಾಗಬಾರದು, ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾಡಳಿತ ಹೇಳಿತ್ತು. ಜಿಲ್ಲಾಡಳಿತದ ಕಾರ್ಯಕ್ರಮವಾದ ಕಾರಣ ಕಲಾವಿದರು ಹಾಗೂ ಕಲಾತಂಡಗಳು ಸಹ ಉತ್ಸಾಹದಿಂದ ಭಾಗವಹಿಸಿದ್ದೆವು. ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ದಸರಾ ಮುಗಿದು ಒಂದು ತಿಂಗಳು ಕಳೆದರೂ ಸಹ ಕಲಾವಿದರಿಗೆ ಸಂಭಾವನೆ ನೀಡಲು ಜಿಲ್ಲಾಡಳಿತ ಮನಸ್ಸು ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಯುವ ದಸರಾದಲ್ಲಿ ಭಾಗವಹಿಸಿದ್ದ 16 ತಂಡಗಳ ಸಂಭಾವನೆ 5 ಲಕ್ಷ, ಧಾರ್ಮಿಕ ವಿಧಿ ವಿಧಾನದ 27 ತಂಡಗಳಿಗೆ 5 ಲಕ್ಷ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ…
ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಂತದ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ಚಟದಿಂದ ಮುಕ್ತಿ ಹೊಂದುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಲಕ್ಷ್ಮೀಕಾಂತ್, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಹೆಚ್. ಬಿ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ, ಎನ್ ಸಿಸಿ,…
ತುಮಕೂರು: ಪ್ರತಿನಿತ್ಯ ದೈಹಿಕ ಚಟುವಟಿಕೆಗಳನ್ನು ರೂಢಿಸಿಕೊಳ್ಳುವುದರಿಂದ ಮಧುಮೇಹ ರೋಗವನ್ನು ನಿಯಂತ್ರಣ ಮಾಡಲು ಸಾಧ್ಯವೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ “ವಿಶ್ವ ಮಧುಮೇಹ ದಿನಾಚರಣೆ” ಅಂಗವಾಗಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸೈಕಲ್ ಜಾಥಾ ಹಾಗೂ ತಂಬಾಕು ಮುಕ್ತ ಅಭಿಯಾನ 2.0 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಧುಮೇಹ ಒಮ್ಮೆ ಬಂದರೆ ಜೀವನ ಪರ್ಯಂತ ಹೆಣಗಬೇಕಾದ ಗುಣವಾಗದ ಖಾಯಿಲೆ. ನಿಯಮಿತ ಧ್ಯಾನ, ವ್ಯಾಯಾಮ, ಒತ್ತಡ ರಹಿತ ಜೀವನ, ಆಹಾರ ಪದ್ಧತಿ, ಜೀವನಶೈಲಿ ಬದಲಾವಣೆಯಿಂದ ಮಧುಮೇಹವನ್ನು ನಿಯಂತ್ರಿಸಬಹುದು. ಸುಮಾರು 30–40 ವರ್ಷಗಳ ಹಿಂದೆ ಕಡಿಮೆ ಪ್ರಮಾಣದಲ್ಲಿ ಕಂಡು ಬರುತ್ತಿದ್ದ ಮಧುಮೇಹ ರೋಗವು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಎಲ್ಲಾ ಕೆಲಸಗಳಿಗೂ ಯಂತ್ರಗಳ ಬಳಕೆ, ದೈಹಿಕ ಶ್ರಮವಿಲ್ಲದ ಕೆಲಸಗಳಿಂದ ಮಧುಮೇಹಗಳ ಸಂಖ್ಯೆ ಹೆಚ್ಚಾಗಲು ಕಾರಣ. ಹೊರಗಡೆ ಲವಲವಿಕೆಯಿಂದ ಆಡಬೇಕಾದ…
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾಡಳಿತದ ಸಹಯೋಗದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯ ಮಟ್ಟದ ಕ್ರೀಡಾಕೂಟದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಗೃಹ ಕಚೇರಿ ಕಾವೇರಿಯಲ್ಲಿ ಅನಾವರಣಗೊಳಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ತುಮಕೂರಿನಲ್ಲಿ ಆಯೋಜಿಸಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಈ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆಯನ್ನು ನಡೆಸಲಾಗುತ್ತಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಮುಖ್ಯಮಂತ್ರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ.ಎನ್.ಮಧುಕರ್ , ಡಿ.ಎಂ.ಸತೀಶ್ ಮತ್ತು ಪದಾಧಿಕಾರಿಗಳು ಆಹ್ವಾನ ನೀಡಿದರು. ಆಹ್ವಾನಕ್ಕೆ ಸ್ಪಂದಿಸಿದ ಮುಖ್ಯ ಮಂತ್ರಿಗಳು ಜನವರಿಯಲ್ಲಿ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿ ಅಗತ್ಯ ಸಹಕಾರದ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು ಜಿ.,…
ತುಮಕೂರು: ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಪೋಷಕರಿಗೆ ಕರೆ ನೀಡಿದರು. ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಾಲ ಭವನ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನ ಮಂತ್ರಿ ದಿವಂಗತ ಜವಾಹರ್ ಲಾಲ್ ನೆಹರೂ ಅವರ ಸವಿ ನೆನಪಿಗಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. “ಮನೆಯೇ ಮೊದಲ ಪಾಠಶಾಲೆ–ತಾಯಿಯೇ ಮೊದಲ ಗುರು” ಎಂಬ ಗಾದೆ ಮಾತಿನಂತೆ ಮಕ್ಕಳಿಗೆ ಮನೆಯಿಂದಲೇ ಸಂಸ್ಕಾರವನ್ನು ಕಲಿಸಬೇಕು. ಮಕ್ಕಳಿಗೆ ಪಠ್ಯಪುಸ್ತಕದ ಹೊರತಾಗಿ ದೈವ ಭಕ್ತಿ, ಸಹಕಾರ ಮನೋಭಾವ, ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ–ಬಲಿದಾನ ಬಗ್ಗೆ ತಿಳಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದರು. ಮಕ್ಕಳ ಮನಸ್ಸು ಬಿಳಿ ಹಾಳೆಯಿದ್ದಂತೆ. ಪೋಷಕರು ಮಕ್ಕಳಿಗೆ ಎಳೆಯ…