Subscribe to Updates
Get the latest creative news from FooBar about art, design and business.
- ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಥಾಣೆ: ಮೊಬೈಲ್ ನೋಡಿದ್ದಕ್ಕೆ ತಾಯಿ ನಿಂದಿಸಿದರು ಎಂದು ನೊಂದು 15 ವರ್ಷ ಬಾಲಕಿ ಸಾವಿಗೆ ಶರಣಾದ ಘಟನೆ ಅಂಬರ್ನಾಥ್ ಪ್ರದೇಶದಲ್ಲಿ ನಡೆದಿದೆ. ಅಂಬರ್ನಾಥ್ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕಿ ಮೃತಪಟ್ಟ ಬಾಲಕಿಯಾಗಿದ್ದಾಳೆ. ಬಾಲಕಿ ಇಲಿ ಪಾಷಾಣ ಸೇವಿಸಿರುವುದು ತಿಳಿದ ನಂತರ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ. ಅಮ್ಮ ಹೇಳಿದ ಬುದ್ಧಿ ಮಾತು ಬಾಲಕಿಗೆ ಬೇಸರವನ್ನುಂಟು ಮಾಡಿತ್ತು ಎನ್ನಲಾಗಿದೆ. ಇದರಿಂದ ನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿ ಮುಂದಿನ ತನಿಖೆಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬಾಲಿವುಡ್ನ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಸುಂದರವಾದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಶ್ರೀಲಂಕಾದಲ್ಲಿ ಪೂಜಾ ಹೆಗ್ಡೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ತಮ್ಮ ಬರ್ತ್ಡೇ ಭಾಗವಾಗಿ ದ್ವೀಪರಾಷ್ಟ್ರಕ್ಕೆ ಪ್ರವಾಸ ಹೋದಂತೆ ಕಾಣಿಸುತ್ತಿದೆ. ನಟಿ ಅಲ್ಲಿಯೇ ಬರ್ತ್ಡೇ ಆಚರಿಸಿಕೊಂಡಿದ್ದು ಚಂದದ ಫೋಟೋಗಳನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಟಿ ಬಿಳಿ ಹಾಗೂ ಕೆಂಪು ಬಣ್ಣದ ಕಾಂಬಿನೇಷನ್ ಇರುವಂತಹ ಫ್ರಾಕ್ಟ್ ಧರಿಸಿದ್ದು ಆಕರ್ಷಕವಾದ ಸ್ಥಳದಲ್ಲಿ ಪೂಲ್ ಸೈಡ್ ಕುಳಿತು ಪೋಸ್ ಕೊಟ್ಟಿದ್ದಾರೆ. ನಟಿ ಬೋಲ್ಡ್ & ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೂಜಾ ಹೆಗ್ಡೆ ಅವರಿಗೆ ಅಂಥಹ ದೊಡ್ಡ ಅವಕಾಶಗಳು ಬರುತ್ತಿರಲಿಲ್ಲ. ನಟಿ ತೆಲುಗಿನಲ್ಲಿ ಸಿನಿಮಾ ಅವಕಾಶ ಕಳೆದುಕೊಂಡಿದ್ದಾರೆ. ಪೂಜಾ ಹೆಗ್ಡೆ ಬಾಲಿವುಡ್ ನಲ್ಲಿ ನಟಿಸಿದ್ದರೂ ಕೂಡಾ ಅಲ್ಲಿಯೂ ಅದೃಷ್ಟ ಕೈಗೂಡಲಿಲ್ಲ. ಇನ್ನು ತೆಲುಗು ಚಿತ್ರರಂಗದಲ್ಲಿ ಒಂದೆರಡು ಸಿನಿಮಾ ಫ್ಲಾಪ್ ಆದರೆ ನಟಿಯರನ್ನು ಮತ್ತೆ ಕೇಳೋರೆ ಇಲ್ಲ ಎಂಬಂತಹ ಪರಿಸ್ಥಿತಿಯಿದೆ. ಸದ್ಯ ಪೂಜಾಗೆ ಟಾಲಿವುಡ್ ಬಾಗಿಲು ಮುಚ್ಚಿದೆ. ಆದರೆ ನಟಿಗೆ ಬಂಪರ್ ಅವಕಾಶ ಬಂದಿದ್ದು…
ಗದಗ: ನಟ ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿಯನ್ನೇ ಕಳೆದುಕೊಂಡೆ ಎಂದು ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಹೇಳಿಕೊಂಡಿದ್ದಾರೆ. ಗದಗನ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮಗಾದ ಭೀಕರ ಅನುಭವವನ್ನು ಹೇಳಿಕೊಂಡಿದ್ದಾರೆ. ಇಂದು ಪ್ರತಿನಿತ್ಯ ಮಾಧ್ಯಮಗಳಲ್ಲಿ ಪ್ರಚಲಿತದಲ್ಲಿರುವ ಪುಣ್ಯಾತ್ಮ ದರ್ಶನ್ ಜನ್ಮದಿನ ಸಂದರ್ಭ, ಈ ವೇಳೆ ಬೆಂಗಳೂರಿನ ನನ್ನ ನಿವಾಸದ ಪಕ್ಕ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದರು. ನಟ ದರ್ಶನ್ ಜನ್ಮದಿನ ಹಿನ್ನೆಲೆ ಭಾರೀ ಪ್ರಮಾಣದಲ್ಲಿ ಸಿಡಿಮದ್ದು ಹಾರಿಸಿದ್ದರು. ಆದರೆ ಭಾರೀ ಸಿಡಿಮದ್ದಿನಿಂದ ನಾನು ನನ್ನ ಶ್ರವಣ ಶಕ್ತಿ ಕಳೆದುಕೊಳ್ಳಬೇಕಾಯಿತು ಎಂದು ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಬೇಸರ ಹೊರ ಹಾಕಿದ್ದಾರೆ. 97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ನಾನು ಮಾತನಾಡಬಲ್ಲೆ, ನಡೆದಾಡಬಲ್ಲೆ ಆದರೆ ತಾವೆಲ್ಲರೂ ಮಾತನಾಡುವ ಪದಗಳನ್ನ ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷ ಅನುಭವಿಸುತ್ತಿದ್ದೇನೆ ಎಂದು ಗೊರೂರು ಚೆನ್ನಬಸಪ್ಪ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬಿಗ್ ಬಾಸ್ ತೊರೆಯುವುದಾಗಿ ನಟ ಕಿಚ್ಚ ಸುದೀಪ್ ನಿನ್ನೆ ಟ್ವೀಟ್ ಮಾಡಿದ್ದರು. ಇದು ನನ್ನ ಕೊನೆಯ ಬಿಗ್ ಬಾಸ್ ಶೋ ಎಂದೂ ಹೇಳಿದ್ದರು. ಈ ನಡುವೆ ಕನ್ನಡಪರ ಹೋರಾಟಗಾರರು ಸುದೀಪ್ ಗೆ ಅವಮಾನಿಸಲಾಗಿದೆ ಎಂದು ಬಿಗ್ ಬಾಸ್ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕಿಚ್ಚ ಸುದೀಪ್ ಅವರ ಅಸಮಾಧಾನವನ್ನು ಸರಿಪಡಿಸಲು ಆಯೋಜಕರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ಟ್ವೀಟ್ ಮಾಡಿದ್ದ ಕಿಚ್ಚ ಸುದೀಪ್, ಬಿಗ್ಬಾಸ್ ಸೀಸನ್ 11ರ ಮೇಲೆ ನೀವು ತೋರಿದ ಸ್ಪಂದನೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ನೀವು ತೋರಿದ ಪ್ರೀತಿ ಮತ್ತು ಗೌರವ ಎಂಥದ್ದು ಎಂಬುದನ್ನು ಟಿಆರ್ಪಿ ನಂಬರ್ ಹೇಳುತ್ತಿದೆ. ಸುಮಾರು 11 ವರ್ಷಗಳ ಕಾಲ ಒಟ್ಟಿಗೆ ನಡೆದಿದ್ದೇನೆ. ಇನ್ನು ಮುಂದೆ ನಾನು ಮಾಡಬೇಕಾಗಿರುವುದನ್ನು ಮಾಡುವ ಸಮಯ ಬಂದಿದೆ. ಬಿಗ್ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ಈ ನಿರ್ಧಾರವನ್ನು ಕಲರ್ಸ್ ಕನ್ನಡ ಮತ್ತು ಈ ಎಲ್ಲಾ ವರ್ಷಗಳಿಂದ ಬಿಗ್ಬಾಸ್ ಶೋ ಅನುಸರಿಸಿದ…
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಬಿಜೆಪಿಯ ಒಕ್ಕಲಿಗ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಲು ಹೊರಟ್ಟಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆ ಹಿನ್ನೆಲೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ಆರಂಭಗೊಂಡಿದ್ದು, ಹೆಚ್ ಡಿಕೆ ಪುತ್ರ ಪ್ರೇಮ ಇದೀಗ ಮೈತ್ರಿ ನಾಯಕರಿಗೆ ಸಂಕಟ ತಂದಿಟ್ಟಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿಗೆ ಜೆಡಿಎಸ್ ಅನಿವಾರ್ಯವಲ್ಲ. ಆದರೆ, ಜೆಡಿಎಸ್‌ಗೆ ಬಿಜೆಪಿ ಆನಿವಾರ್ಯ ಎನ್ನುವುದನ್ನು ಮನಗಾಣಬೇಕು ಎಂದೂ ತೀಕ್ಷ್ಯವಾಗಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಾನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕುಮಾರಸ್ವಾಮಿ ನನಗೆ ಮೋಸ ಮಾಡಿದ ಮೇಲೆ ನಾನು ಸ್ಪರ್ಧಿಸಲೇಬೇಕು. ಬುಧವಾರ ಚನ್ನಪಟ್ಟಣದಲ್ಲಿ ಪಕ್ಷದ ಪ್ರಮುಖರ ಸಭೆ ಕರೆದಿದ್ದೇನೆ. ಅಲ್ಲಿ ನನ್ನ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ…
ತುಮಕೂರು: ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚಿಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಬಲ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು. ಜಿಲ್ಲೆಯು ಆಧಾರ್ ಸೀಡಿಂಗ್‌ನಲ್ಲಿ ಶೇಕಡಾ 85.9 ಗುರಿ ಸಾಧಿಸಿದ್ದು, ಬಾಕಿ ಇರುವ ಆಧಾರ್ ಸೀಡಿಂಗ್ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಬಗರ್ ಹುಕುಂ ಸಂಬಂಧಿಸಿದಂತೆ 496, ಸಕಾಲಕ್ಕೆ ಸಂಬಂಧಿಸಿದಂತೆ 281, ಪಿಂಚಣಿ 1284, ಆರ್ ಟಿಸಿ ತಿದ್ದುಪಡಿ 2932 ಅರ್ಜಿಗಳು ಬಾಕಿ ಇದ್ದು ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ತಿಳಿಸಿದರು. ಸಾಗುವಳಿ ಮಾಡುತ್ತಿರುವ ದುರಸ್ತಿಯಾಗದ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಗರದ ಬಾಲ ಭವನದಲ್ಲಿ ಅಕ್ಟೋಬರ್ 17ರಂದು ಜಗದ ಕವಿ–ಯುಗದ ಕವಿ ಸರ್ವಧರ್ಮಕ್ಕೆ ಮಹಾನ್ ಗ್ರಂಥ ರಾಮಾಯಣ ರಚಿಸಿದ ವಿಶ್ವಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು ತಿಳಿಸಿದ್ದಾರೆ. ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಉದ್ಘಾಟಿಸಲಿದ್ದು, ನಗರ ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಆಗಮಿಸಲಿದ್ದು, ಸಮುದಾಯದ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಹರ್ಷಿ ವಾಲ್ಮೀಕಿ…
ತುಮಕೂರು: ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು 2024–25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕೌಶಲ್ಯ ಉನ್ನತೀಕರಣ ತರಬೇತಿ, ವಸತಿ ನೇರ ಸಾಲ, ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಚರ್ಮಶಿಲ್ಪಿ ಯೋಜನೆ ಮತ್ತು ಮಾರುಕಟ್ಟೆ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಚರ್ಮ ಕುಶಲ ಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಸೌಲಭ್ಯಕ್ಕಾಗಿ ಸುವಿಧಾ ಪೋರ್ಟಲ್ https://sevasindu.karnataka.gov.in ನಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಆನ್ ಲೈನ್ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ನಗರದ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ ಕರ್)ದ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2270592ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳ ವ್ಯಾಸಂಗ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿದ್ದು, ಮಕ್ಕಳೊಂದಿಗೆ ಕೆಲಸ ಮಾಡಿದ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.\ ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯ ನಿರ್ವಹಿಸಲು ಹಾಗೂ ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊದಲನೇ ಮಹಡಿ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…