Subscribe to Updates
Get the latest creative news from FooBar about art, design and business.
- ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
- ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
- ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
- ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
Author: admin
ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಠಿಯಂತಹ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ನವೆಂಬರ್ 13ರಂದು ಬೆಳೆ ಹಾನಿಯಾದ ರೈತರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ ಕಚೇರಿ/ ರೈತರ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಚನ್ನಪಟ್ಟಣ ವಿಧಾನಸಭೆಯ ಉಪಚುನಾಚಣೆಯ 276 ಮತಗಟ್ಟೆಗಳಲ್ಲಿಯು ಶಾಂತಿಯುತ ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆ ಹೊತ್ತಿಗೆ ಶೇ 27.02ರಷ್ಟು ಮತದಾನವಾಗಿದೆ. ಒಟ್ಟು 2.32 ಲಕ್ಷ ಮತಗಳ ಪೈಕಿ ಇದುವರೆಗೆ 62,941 ಮತಗಳು ಚಲಾವಣೆಯಾಗಿವೆ. ಆ ಪೈಕಿ 31,160 ಪುರುಷರು ಮತ್ತು 31,781 ಮಹಿಳೆಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ವಿಜಯ್ ದಳಪತಿ 69 ಸಿನಿಮಾದಲ್ಲಿ ನನಗೊಂದು ಬಹುದೊಡ್ಡ ಪಾತ್ರ ನೀಡಿದ್ದಾರೆ ಎಂದು ನಟ ಶಿವರಾಜಕುಮಾರ್ ಬಹಿರಂಗಪಡಿಸಿದ್ದಾರೆ. ತಮಿಳು ನಟ ವಿಜಯ್ ಅವರ ಜತೆ ಸಿನಿಮಾ ಇದೆ. ವಿಜಯ್ ಅದ್ಭುತ ನಟ ಮತ್ತು ಒಳ್ಳೆಯ ವ್ಯಕ್ತಿತ್ವ ಹೊಂದಿದ ಮನುಷ್ಯ. ರಾಜಕೀಯದಲ್ಲಿ ಕಾಲಿಟ್ಟಿದ್ದು, ಅವರ ಮಹತ್ವಾಕಾಂಕ್ಷೆ ಈಡೇರಲಿ ಎಂದು ವಿಜಯ್ ಬಗ್ಗೆ ಶಿವಣ್ಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಜತೆ ‘ಜೈಲರ್’ ಮತ್ತು ಧನುಷ್ ಅಭಿನಯದ ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲಿ ಶಿವಣ್ಣ ಈ ಹಿಂದೆ ನಟಿಸಿದ್ದರು. ಈಗ ಮತ್ತೊಮ್ಮೆ ವಿಜಯ್ ದಳಪತಿ ಜತೆ ಸ್ಕ್ರಿನ್ ಶೇರ್ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಗೆ ತುಮಕೂರು ನಗರ/ಗ್ರಾಮಾಂತರ ವ್ಯಾಪ್ತಿಗೆ ಒಳಪಡುವ ಸುಮಾರು 50 ಮಕ್ಕಳ ವಾಸಕ್ಕೆ ಯೋಗ್ಯವಾದ ಮತ್ತು ಇಲಾಖೆ/ಸರ್ಕಾರದ ಷರತ್ತು, ಮಾನದಂಡಗಳಿಗೆ ಅನುಗುಣವಾಗಿ ಸರ್ಕಾರಿ/ ಖಾಸಗಿ ಕಟ್ಟಡ ಬಾಡಿಗೆಗೆ ಬೇಕಾಗಿದ್ದು, ಆಸಕ್ತ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 9880798416/ 9740093634ನ್ನು ಸಂಪರ್ಕಿಸಬೇಕೆಂದು ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ಭಾರತೀಯ ಜನತಾ ಪಕ್ಷದ ವತಿಯಿಂದ ಸದಸ್ಯತ್ವ ಅಭಿಯಾನವನ್ನು ಜಾಲೋಡು, ಸಿದ್ದಾಪುರ, ಹಾಗೂ ವೈ.ಎನ್.ಹೊಸಕೋಟೆ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಧುಗಿರಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬ್ಯಾಡನೂರು ಶಿವು ಮಾತನಾಡಿ, ಪಕ್ಷದ ಸಂಘಟನೆಗೆ ಸದಸ್ಯತ್ವ ಹೆಚ್ಚಿನ ಶಕ್ತಿ ನೀಡುತ್ತದೆ. ಈ ಬಾರಿ ಪಕ್ಷವು 10 ಕೋಟಿ ಹೊಸ ಸದಸ್ಯರ ಗುರಿ ಹೊಂದಿದೆ. ಈ ಭಾಗದಲ್ಲಿ ಸದಸ್ಯತ್ವ ಮಾಡುವ ಮೂಲಕ ಪಕ್ಷದ ಕಾರ್ಯಕ್ರಮಗಳು ಮತ್ತುಸಂಘಟನೆಗೆ ಹೆಚ್ಚು ಸಹಕಾರಿ ಆಗಲಿದೆ ಎಂದರು. ಈ ಸಂದರ್ಭದಲ್ಲಿ ಬಿ.ಹೊಸಹಳ್ಳಿ ನಾಗರಾಜು,ಜಾಲೋಡು ತಿಪ್ಪೇಸ್ವಾಮಿ, ಸಿದ್ದಾಪುರ ಹನುಮಂತರಾಯ, ಸಾಯಿ, ಉಮಾಮಹೇಶ್, ರವಿ,ವರುಣ್,ರಾಜು,ಮದಕರಿ ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಹೂಯಿಲ್ ದೊರೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ರಾಜಮ್ಮ ಚಂದ್ರ ನಾಯಕ ಕೆ.ಜಿ. ರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ತಿಮ್ಮಯ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮತ್ತು ಅಧ್ಯಕ್ಷರಾಗಿ ಯಾರೊಬ್ಬರೂ ಸಹ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇವರಿಬ್ಬರನ್ನು ಚುನಾವಣಾ ಅಧಿಕಾರಿಯಾಗಿ ಆಗಮಿಸಿದ ಶಿರಾ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ ರವರು ವಿಜಯಿಗಳೆಂದು ಘೋಷಣೆ ಮಾಡಿದರು/ ಈ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಮಹಿಳಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರೇ ಆಯ್ಕೆಯಾಗಿ ಮಹಿಳೆಯರ ಪಾರುಪತ್ಯ ಮುಂದುವರೆಯಿತು. ಕಂದಾಯ ಅಧಿಕಾರಿ ಉಮೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಶಂಕರ್ ಗ್ರಾಮಲೆಕ್ಕಿಗ ಪವನ್ ಸೇರಿದಂತೆ ಹೂಯಿಲ್ ದೊರೆ ಗ್ರಾಮ ಪಂಚಾಯತಿ ಸದಸ್ಯರು ಮುಖಂಡರುಗಳು ಗ್ರಾಮಸ್ಥರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೆಯೇ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ತಿಪಟೂರು: ನಗರ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನವಂಬರ್ 14ರಂದು ಇನ್ನರ್ ವೀಲ್ ಕ್ಲಬ್ ವತಿಯಿಂದ ತಾಲೂಕು ಪ್ರೌಢಶಾಲೆ ಮಟ್ಟದ ಜನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷೆ ಸುಮಿತ್ರ ಹೇಳಿದರು. ಈ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ಬೆಳಗ್ಗೆ 10:30 ಕ್ಕೆ ಶಾಸಕ ಕೆ.ಷಡಕ್ಷರಿ ಅವರು ಉದ್ಘಾಟಿಸುವರು ಡಾ. ಶ್ರೀಧರ್ ಬಿಜೆಪಿ ಮುಖಂಡರಾದ ಲೋಕೇಶ್ವರ್ ನಗರಸಭಾಧ್ಯಕ್ಷ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮಕ್ಕಳಲ್ಲಿ ಜನಪದ ಕಲೆ ಮತ್ತು ನೃತ್ಯದಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಜನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ತಾಲೂಕಿನ ಸುಮಾರು 20 ಶಾಲೆಗಳು 130ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. ಆದರೆ ಸಿನಿಮಾ ಹಾಡು ಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ 5,000 ದ್ವಿತೀಯ ಬಹುಮಾನ 3,000 ಮೂರನೇ ಬಹುಮಾನ 25 ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಈ ಸಂಸ್ಥೆಯ ಎಡಿಟರ್ ರೇಖಾ ಸುಜಾತ, ಮಾಜಿ ಅಧ್ಯಕ್ಷ ಭಾಗೃಮೂರ್ತಿ ಇನ್ನಿತರರು ಉಪಸ್ಥಿತರಿದ್ದರು ವರದಿ:…
ತುಮಕೂರು: ಬೆವಿಕಂ ಗ್ರಾಮೀಣ ಉಪ ವಿಭಾಗ–1ರ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿನಗಿರಿಪಾಳ್ಯ, ಬೆಳಧರ, ಅಗ್ರಹಾರ, ಚಿನಿವಾರನಹಳ್ಳಿ, ಎ.ಡಿ.ಎಸ್.ಪಾಳ್ಯ, ಮಲ್ಲೇನಪಾಳ್ಯ, ಗೌಡನಕಟ್ಟೆ, ಜಕ್ಕೇನಹಳ್ಳಿ, ಚೆನ್ನಮುದ್ದೇನಹಳ್ಳಿ, ಗೊಲ್ಲರಹಟ್ಟಿ, ಅಮಲಾಪುರ ಗ್ರಾಮ ಹಾಗೂ ಓಬಳಾಪುರ ಮತ್ತು ಬೆಳಧರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಸುಮಾರು 30,000 ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.40ಕ್ಕೂ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಿಂದ 3 ಮಂದಿ ಮರಣ ಹೊಂದಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಮರಣ ಹೊಂದಿರುವವರ ಕುಟುಂಬಕ್ಕೆ ಈಗಾಗಲೇ ತಲಾ 5ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಪ್ರಾಣ ಹಾನಿಯಾದ ಜಾನುವಾರು ಮಾಲೀಕರಿಗೂ ಪರಿಹಾರ ಹಣ ವಿತರಿಸಲಾಗಿದ್ದು, ಯಾವುದೇ ಪರಿಹಾರ ಹಣ ಬಾಕಿ ಇರುವುದಿಲ್ಲವೆಂದು ತಿಳಿಸಿದರು. ಜಿಲ್ಲೆಯಲ್ಲಿ ಹಿಂಗಾರು ಮಳೆಯಿಂದ 200 ಹೆಕ್ಟೇರ್ ಪ್ರದೇಶದ 327 ರೈತರ ಬೆಳೆ ಹಾನಿಯಾಗಿದೆ. ಈಗಾಗಲೇ ಬೆಳೆ ಹಾನಿಗೊಳಗಾದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 1.30ಲಕ್ಷ…