Author: admin

ತುಮಕೂರು: ಮುಖ್ಯಮಂತ್ರಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕಟ್ಟಡದ ತಾರಸಿ ಮೇಲ್ಭಾಗದಲ್ಲಿ ಮರದ ಎಲೆಗಳು ಬಿದ್ದು ಸ್ವಚ್ಛಗೊಳಿಸದೆ ಮಳೆ ನೀರು ನಿಂತು ಕಟ್ಟಡಗಳ ಮೇಲ್ಚಾವಣಿ ಬೀಳುವ ದುಸ್ಥಿತಿಗೆ ತಲುಪುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಅಭಿಯಾನದಡಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಹಾಗೂ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲ್ಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು. ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು.…

Read More

ಮಂಡ್ಯ: ಕಾರ್ತಿಕ ಸೋಮವಾರವಾದ ಹಿನ್ನೆಲೆಯ ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಮಗು ತಲೆಯ ಮೇಲೆ ದೇವಸ್ಥಾನದ ಗೇಟ್ ಬಿದ್ದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆಯಲ್ಲಿ ನಡೆದಿದೆ. ಹೆಚ್​.ಎಸ್​. ಜಿಷ್ಣು(5) ಮೃತಪಟ್ಟ ಬಾಲಕನಾಗಿದ್ದಾನೆ. ಗ್ರಾಮದ ಚೆನ್ನಕೇಶವ ದೇಗುಲದ ಗೇಟ್ ಮಗುವಿನ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಪೋಷಕರು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಅರಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೇಟು ಮುರಿದು ಸಾಕಷ್ಟು ದಿನಗಳಾದರೂ ಕೂಡ ದುರಸ್ತಿ ಮಾಡದೇ ಇರುವುದೇ ಈ ಘಟನೆಗೆ ಕಾರಣವಾಗಿದೆ ಎನ್ನುವ ಆಕ್ರೋಶ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) 20 ವರ್ಷಗಳ ಶಿಕ್ಷೆ ಹಾಗೂ 1.50 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ಈ ಘಟನೆ ಅಮೃತೂರು ಪೊಲೀಸ್ ಠಾಣೆ ಸರಹದ್ದಿನಲ್ಲಿ ನಡೆದಿತ್ತು.  ಕರೆಚಿತ್ತಪ್ಪ ಅಲಿಯಾಸ್ ಚಿತ್ತಪ್ಪ ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಈತನಿಗೆ ವಿವಾಹವಾಗಿ ಇಬ್ಬರು ಗಂಡು ಮಕ್ಕಳಿದ್ದರೂ ಸಹ, 15 ವರ್ಷದ ಬಾಲಕಿಯನ್ನು ಪ್ರೀತಿ ಪ್ರೇಮ ಎಂದು  ಪುಸಲಾಯಿಸಿ  ಆಕೆಯ ಜೊತೆಗೆ ಬಾಲ್ಯವಿವಾಹ ಮಾಡಿಕೊಂಡಿದ್ದು, ನಂತರ ಬೆಂಗಳೂರಿನಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಕುಣಿಗಲ್ ನ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಗುರುಪ್ರಸಾದ್ ವಿ.ಎಂ. ಅವರು ಘನ ನ್ಯಾಯಾಲಯಕ್ಕೆ  ಪ್ರಕರಣ ಸಂಬಂಧ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಭಿಯೋಜನೆಯ ಪರ ವಿಚಾರ ಮಾಡಲಾದ ಸಾಕ್ಷಿಗಳಿಂದ  ಆರೋಪಿಯ ಮೇಲಿನ ಆರೋಪ ಸಾಬೀತಾದ ಕಾರಣ, ಅಪರಾಧಿ ಕರೆಚಿತ್ತಪ್ಪನಿಗೆ 20  ವರ್ಷ ಜೈಲು ಶಿಕ್ಷೆ ಮತ್ತು…

Read More

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ…

Read More

ತುಮಕೂರು: ಅನುಕರಣೆಯೇ ಯುಗಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲಿಕವಾದ ವ್ಯಕ್ತಿತ್ವ ನಿರ್ಮಾಣಕ್ಕೂಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಹರಿಪ್ರಸಾದ್ ಟಿ.ಎನ್. ಹೇಳಿದರು. ತುಮಕೂರು ವಿವಿಯಲ್ಲಿಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ‘ಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾನವೀಯತೆಯ ಬೀಜವನ್ನು ಬಿತ್ತುವ, ಬೆಳಗಿಸುವ ನೈತಿಕಗುಣಮಟ್ಟದ ಶಿಕ್ಷಣ ವ್ಯವಸ್ಥೆ ವರ್ತಮಾನದಲ್ಲಿ ಮಾಯವಾಗಿದೆ. ಈವರೆಗೂ ಬಂದಿರುವ ಶಿಕ್ಷಣ ನೀತಿಗಳಿಗೂ ಮೀರಿದ್ದಾಗಿತ್ತು. ನಮ್ಮ ಪ್ರಾಚೀನ ಶಿಕ್ಷಣ ಪದ್ಧತಿ. ಸುಗುಣರನ್ನಾಗಿಸುವ ಶಿಕ್ಷಣ ಕ್ರಮವನ್ನು ಶಿಕ್ಷಣ ನೀತಿಗಳು ಗೊಂದಲ ಸೃಷ್ಟಿಸಿ ಶಕ್ತಿಹೀನವಾಗಿಸಿವೆ ಎಂದು ಬೇಸರ ವ್ಯಕ್ತಪಡಿಸಿದರು. ಮೆಕಾಲೆ ಪರಿಚಯಿಸಿದ ಶಿಕ್ಷಣ ಪದ್ಧತಿಗಿಂತಲೂ ವ್ಯಕ್ತಿತ್ವಕ್ಕೆ ಬೆಳಕು ಚೆಲ್ಲುವ ಭಾರತದ ಶಿಕ್ಷಣಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗಾಂಧೀಜಿ, ಅಂಬೇಡ್ಕರ್ ಅವರಂತಹ ಉತ್ಕೃಷ್ಟ ವ್ಯಕ್ತಿತ್ವಗಳು, ರಾಜಕೀಯದಲ್ಲಿ ಶುದ್ಧವಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತುಎಪಿಜೆಅಬ್ದುಲ್ ಕಲಾಂ ಅವರುಗಳ ಮೌಲಿಕ ಬದುಕೇಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ…

Read More

ತುಮಕೂರು: ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆಯನ್ನು ಬೋಧಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ಎಸ್.ಚಿನ್ನಸ್ವಾಮಿ ಸೋಸಲೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಕರ್ನಾಟಕ ಜನಸಂಸ್ಕೃತಿಯಲ್ಲಿ ಸಮಾನ ಭಾವ ಮೂಡಿಸಿ ವಾಸ್ತವತೆಯನ್ನು ಸಾರಿದ ಶರಣ ಸಾಹಿತ್ಯದ ರೂವಾರಿ ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅಂತೆಯೇ ದೇಶದಾದ್ಯಂತ ತಳಸಮುದಾಯಗಳನ್ನು ಸಮತೆಯೆಡೆಗೆ ಸಾಗಲು ಬೆಳಕು ತೋರಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಶ್ಯಕತೆಯಿದೆ ಎಂದರು. ಇತಿಹಾಸದಲ್ಲಿ ತಳ ಸಮುದಾಯದ ಓಬವ್ವ ಒಬ್ಬ ಕಾವಲುಗಾರನ ಪತ್ನಿಯಾಗಿ ಸ್ವಾಮಿನಿಷ್ಠೆಗಾಗಿ ಹಾಗೂ ತಮ್ಮ ರಾಜ್ಯದ ಉಳಿವಿಗಾಗಿ ಒನಕೆಯಿಂದ ಶತ್ರುಗಳನ್ನು ಸದೆ ಬಡಿದು ವೀರವನಿತೆಯಾದಳು. ಈ ಮೂಲಕ ಛಲವಾದಿ…

Read More

ತುಮಕೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ ವಿಗ್ರಹ ಕೆತ್ತನೆ ಮಾಡಿರುವ ಶಿಲ್ಪಿ ಡಾ.ಅರುಣ್ ಯೋಗಿರಾಜ್ ಅವರನ್ನು ತುಮಕೂರಿನಲ್ಲಿ ಚಿನ್ನ ಬೆಳ್ಳಿ ಕೆಲಸಗಾರರ ಸಂಘದಿಂದ ಅದ್ದೂರಿ ಮೆರವಣಿಗೆ ಮೂಲಕ ಸನ್ಮಾನಿಸಲಾಯಿತು. ಚಿನ್ನ ಬೆಳ್ಳಿ ವರ್ತಕರ ಸಂಘದ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮ್ಮಿಲನ ಕಾರ್ಯಕ್ರಮಕ್ಕೆ ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಡಾ. ಅರುಣ್ ಯೋಗಿರಾಜ್ ಅವರನ್ನು ಕರೆದುಕೊಂಡು ಹೋಗಲಾಯಿತು. ನೂರಾರು ಮಂದಿ ಚಿನ್ನ ಬೆಳ್ಳಿ ವರ್ತಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಕೊರಟಗೆರೆಯ ಗ್ರಾಮೀಣ ಭಾಗದ ಬೆಟ್ಟ-ಗುಡ್ಡದ ಸಂಪತ್ತಿನ ಮೇಲೆ ಭೂ ಮಾಫಿಯಾ ಕಣ್ಣು ಬಿದ್ದಿದ್ದು, ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಗಂಟಿಗಾನಹಳ್ಳಿ ಮಣ್ಣು ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದೆ. ತುಮಕೂರಿನ ಜೆಸಿಬಿಗಳು ಮತ್ತು ಲಾರಿಗಳು ಕೊರಟಗೆರೆ ಪಟ್ಟಣದಲ್ಲಿ ಘರ್ಜನೆ ಮಾಡುತ್ತಿವೆ. ಅಧಿಕಾರಿಗಳು ಮನೆಗಳಿಗೆ ಸೇರಿದ ಮೇಲೆ ರಸ್ತೆಗಿಳಿದು ರಾತ್ರಿ ಇಡೀ ಕಾರ್ಯಚರಣೆಗಿಳಿದಿವೆ. ತಡರಾತ್ರಿ 9 ರಿಂದ ಮುಂಜಾನೆ 5ರ ವರೆಗೆ ಸಾವಿರಾರು ಲೋಡು ಮಣ್ಣು ಸರಬರಾಜು ಆಗುತ್ತಿದೆ. ಗಂಟಿಗಾನಹಳ್ಳಿಯ ಬೆಣಸೆ ಬೆಟ್ಟದ ಸಂಪತ್ತು ರಾತ್ರೋರಾತ್ರಿ ಕರಗಿ ಹೋಗ್ತಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಗಂಟಿಗಾನಹಳ್ಳಿ ಬೆಣಸೆ ಬೆಟ್ಟದಿಂದ ಕೊರಟಗೆರೆ ಬೈಪಾಸಿನ ಲೇಔಟ್ ಗೆ ಮಣ್ಣು ಸರಬರಾಜು ಮಾಡಲಾಗ್ತಿದೆ. 1 ಲಾರಿ ಮಣ್ಣು ಲೋಡಿಗೆ 3 ಸಾವಿರ ಬಾಡಿಗೆಯಂತೆ, ಸಾವಿರಾರು ಲೋಡು ಮಣ್ಣು ಸರಬರಾಜಾಗುತ್ತಿದೆ. 8 ಲಾರಿ ಮತ್ತು 2 ಜೆಸಿಬಿಯಿಂದ ರಾತ್ರಿಯಿಡಿ ಬೆಟ್ಟ ಕರಗಿಸುವ ಸಾಹಸಕ್ಕೆ ದಂಡೆಕೋರರು ಮುಂದಾಗಿದ್ದಾರೆ. ಭೂ–ಮಾಫಿಯಾ ದಂಧೆಕೋರರಿಗೆ ಸರಕಾರಿ ಅಧಿಕಾರಿಗಳ ಮೌನವೇ ಶ್ರೀರಕ್ಷೆಯಾಗಿದೆ. ಜೆಸಿಬಿ ಮತ್ತು ಲಾರಿ ಮಾಲೀಕರ…

Read More

ತುಮಕೂರು: ನಾಪತ್ತೆಯಾಗಿದ್ದ ತಾಯಿ–ಮಗ ಶವವಾಗಿ ಪತ್ತೆಯಾಗಿರೋ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಕೆರೆಯಲ್ಲಿ ನಡೆದಿದೆ. ಶಶಿಕಲಾ (30), ಹಾಗೂ 6 ವರ್ಷದ ಬಾಲಕ ಮೃತ ದುರ್ದೈವಿಗಳಾಗಿದ್ದಾರೆ. ಒರಗೆರೆಹಳ್ಳಿ ಗ್ರಾಮದವರಾದ ಶಶಿಕಲಾ ಕಳೆದ ಮೂರು ದಿನಗಳಿಂದ ಮಗನ ಜೊತೆ ನಾಪತ್ತೆಯಾಗಿದ್ದರು. ಈ ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಶಶಿಕಲಾ ಸಹೋದರ ಮಿಸ್ಸಿಂಗ್ ದೂರು ನೀಡಿದ್ದರು. ಇಂದು ಬೆಳಿಗ್ಗೆ ತುರುವೇಕೆರೆ ಕೆರೆಯಲ್ಲಿ ತಾಯಿ ಮಗನ ಶವ ಪತ್ತೆಯಾಗಿದೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ. ನನ್ನ ಸಾವಿಗೆ ಯಾರು ಕಾರಣರಲ್ಲ, ಸಾರಿ ನನ್ನ ಕ್ಷಮಿಸಿ, ಅಣ್ಣ ನನ್ನ ಗೋಕುಲ್ ನ ಅಪ್ಪ ಅಮ್ಮ ಇರುವ ಜಾಗಕ್ಕೆ ಮಣ್ಣು ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More