Subscribe to Updates
Get the latest creative news from FooBar about art, design and business.
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
Author: admin
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ನವರಾತ್ರಿಯ ಕೊನೆಯ ದಿನವಾದ ಇಂದು ಸಿ.ಎಂ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು. ಅಂಬಾರಿ ಬಸ್ ಮೂಲಕ ಇಂಧನ ಸಚಿವರಾದ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಉನ್ನತ ಶಿಕ್ಷಣದ ಕ್ಯಾಬಿನೆಟ್ ಸಚಿವರಾದ ಡಾ. ಎಂ. ಸಿ ಸುಧಾಕರ್, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ. ಬಿ.ರಮೇಶ್ ಬಂಡಿಸಿದ್ದೇಗೌಡ, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಣೇಶ್ ಪ್ರಸಾದ್ , ಮೂಡ ಅಧ್ಯಕ್ಷರಾದ ಮರಿಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳೊಂದಿಗೆ ಮೈಸೂರಿನ ಸುಂದರ ದೀಪಾಲಂಕಾರದ ದೃಶ್ಯವನ್ನು ಕಣ್ತುಂಬಿಕೊಂಡರು. ಅಂಬಾರಿ ಬಸ್ ಸಂಚರಿಸುವ ಮಾರ್ಗದುದ್ದಕ್ಕೂ ಮುಖ್ಯಮಂತ್ರಿಗಳನ್ನು ನೋಡಲು ಜನರು ಕಿಕ್ಕಿರಿದು ನಿಂತಿದ್ದಂತಹ ಜನರಿಗೆ ಸಿದ್ದರಾಮಯ್ಯ ಅವರು ನಾಡಹಬ್ಬ ದಸರಾ…
ತುಮಕೂರು: ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಹಾಗೂ ಎಂಕಾಂ ವಿಭಾಗವು ಸೇರಿದಂತೆ ಕೈಗಾರಿಕೋದ್ಯಮಿಯಾದ ಮತ್ತು ಲೋಕೋಪಕಾರಿ ಹಾಗೂ ಭಾರತೀಯ ವಾಣಿಜ್ಯ ಉದ್ಯಮಿಯಾದವರು, ಸಮಾಜಕ್ಕೆ ರತನ್ ಟಾಟಾರವರು ನೀಡಿದ ಅಮೂಲ್ಯವಾದ ಕೊಡುಗೆಗಳನ್ನು ಗುರುತಿಸಿ ರತನ್ ಟಾಟಾರವರಿಗೆ ಹೃತ್ಪೂರ್ವಕ ಭಾವಪೂರ್ಣ ಶ್ರದ್ಧಾಂಜಲಿ ಗೌರವವನ್ನು ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕವನ ರವರು ರತನ್ ಟಾಟಾ ರವರು ಸಾಧನೆಯನ್ನು ನೆನಪಿಸಿಕೊಂಡು ಭಾವುಕರಾದರು. ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವಿನಯ್ ಕುಮಾರ್ ಎಂ., ಎಂ.ಕಾಂ. ವಿಭಾಗದ ಮುಖ್ಯಸ್ಥರಾದ ಸೈಯದ್ ಬಾಬು ಹೆಚ್.ಬಿ. ಹಾಗೂ ವಾಣಿಜ್ಯ ವಿಭಾಗ ಮತ್ತು ಎಂ.ಕಾಂ. ವಿಭಾಗದ ಉಪನ್ಯಾಸಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ, ಮುಡಾ ಹಗರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡಿರುವುದು ಅಕ್ಷಮ್ಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಆರೋಪಿ ಸಿದ್ದರಾಮಯ್ಯ ಅವರೇ, ಈ ರೀತಿ ಜಾಹೀರಾತು ನೀಡುವುದರಿಂದ ನೀವು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದೆ. ರಾಮ ಸತ್ಯನೇ, ಆದರೆ ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳು. ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದ. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಸಿಎಂ ಪದವಿಗೆ ರಾಜೀನಾಮೆ ಸಲ್ಲಿಸಿ ಸತ್ಯಶೋಧನೆಗೆ ಅವಕಾಶ ನೀಡಿ ಎಂದು ಬಿಜೆಪಿ ಆಗ್ರಹಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬಾಂಗ್ಲಾದೇಶದ ಸತ್ಖಿರಾದ ಶ್ಯಾಮನಗರದಲ್ಲಿರುವ ಜೆಶೋರೇಶ್ವರಿ ದೇವಸ್ಥಾನದ ಕಾಳಿ ದೇವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಡುಗೊರೆಯಾಗಿ ಕಿರೀಟವನ್ನು ನೀಡಿದ್ದರು. ಆದ್ರೆ ಈ ಕಿರೀಟ ಇದೀಗ ಕಳವಾಗಿದೆಯಂತೆ. ಢಾಕಾದಲ್ಲಿರುವ ದೇವಾಲಯಕ್ಕೆ 2021 ಮಾರ್ಚ್ ನಲ್ಲಿ ಮೋದಿ ಭೇಟಿ ನೀಡಿದ್ದರು. ಈ ವೇಳೆ ದೇವಿಗೆ ಕಿರೀಟ ಉಡುಗೊರೆಯಾಗಿ ನೀಡಿದ್ದರು. ಅರ್ಚಕ ದಿಲೀಪ್ ಮುಖರ್ಜಿ ಪೂಜೆ ಮಾಡಿ ಹೋದ ನಂತರ ಕಳುವು ನಡೆದಿದೆ. ಕಳ್ಳರನ್ನು ಪತ್ತೆ ಹಚ್ಚಲು ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗ್ತಿದೆ ಪರಿಶೀಲಿಸುತ್ತಿದ್ದೇವೆ ಎಂದು ಶ್ಯಾಮನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತೈಜುಲ್ ಇಸ್ಲಾಂ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ,ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಲಿದ್ದು, ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮ.1:30 ಹಾಗೂ ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ/ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ.ಲಕ್ಷ್ಮೀನಾರಾಯಣ ಅವರು ತಿಳಿಸಿದರು. ನಗರದ ಪರಿವೀಕ್ಷಣಾ ಮಂದಿರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತಕ್ಕೆ 182ಕ್ಕೂ ಹೆಚ್ಚು ದೂರು ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲೆಯ ಯಾವುದೇ ಸರ್ಕಾರಿ ಅಧಿಕಾರಿ/ಸಿಬ್ಬಂದಿ ಕಾನೂನು ಬದ್ಧವಾಗಿ ತಮ್ಮ ಕರ್ತವ್ಯ ನಿರ್ವಹಿಸದೆ ವಿನಾಕಾರಣ ವಿಳಂಬ ಮಾಡುತ್ತಿರುವ, ಕೆಲಸ ಮಾಡದೆ ತೊಂದರೆ ಉಂಟುಮಾಡುತ್ತಿರುವ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ನೇರವಾಗಿ ಈ ಸಭೆಗೆ ಆಗಮಿಸಿ ಲಿಖಿತ ರೂಪದಲ್ಲಿ ನೀಡಬಹುದಾಗಿದೆ. ಸಭೆಯಲ್ಲಿ ಎಲ್ಲಾ…
ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯು ಅಕ್ಟೋಬರ್ 11ರ ಶುಕ್ರವಾರ ಆಯುಧ ಪೂಜೆ ದಿನದಂದು ಸಿದ್ಧಿದಾತ್ರಿ ಅಲಂಕಾರದಲ್ಲಿ ಭಕ್ತರಿಗೆ ದರ್ಶನ ನೀಡಿ ಅನುಗ್ರಹಿಸಲಿದ್ದಾಳೆ ಎಂದು ದಸರಾ ಉತ್ಸವದ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಶರದ್ ಋತು ಅಶ್ವಿಜ ಮಾಸ ಶುಕ್ಲ ಪಕ್ಷದ ಶುಕ್ರವಾರ ಬೆಳಿಗ್ಗೆ 5:30 ಗಂಟೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಸಿದ್ಧಿದಾತ್ರಿ ದೇವಿಗೆ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶರಾಧನೆ, ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, “ಶ್ರೀ ಗಾಯಿತ್ರಿ ಹೋಮ”, ಲಘು ಪೂರ್ಣಾಹುತಿ, ಅಷ್ಟಾವದಾನ ಸೇವೆ, ಮಂತ್ರಪುಷ್ಪ ರಾಷ್ಟ್ರಾಶಿರ್ವಾದ, ಬೆಳಿಗ್ಗೆ 9:30 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ 4:30 ಗಂಟೆಗೆ ವೇದಪಾರಾಯಣ, ದುರ್ಗಾಸಪ್ತಶಶಿ ಪಾರಾಯಣ, ಅಷ್ಟಾವದಾನ, ಕುಂಕುಮಾರ್ಚನೆ, ರಾ.7:30 ಗಂಟೆಗೆ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು : ದಸರಾ ಪ್ರಯುಕ್ತ ನಗರದ ಸರ್ಕಾರಿ…
ತುಮಕೂರು: ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದರು. ಇದಕ್ಕೂ ಮುನ್ನ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಮಹಾಗೌರಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ತಮ್ಮ ಧರ್ಮಪತ್ನಿ ಶೈಲಜ ಸೋಮಣ್ಣ ಅವರೊಂದಿಗೆ ಪೂಜೆ ಸಲ್ಲಿಸಿದರು. ವಿ.ಸೋಮಣ್ಣ ದಂಪತಿಗಳು ಅಷ್ಟಮಿ ಪ್ರಯುಕ್ತ ಜರುಗಿದ ಶ್ರೀ ದುರ್ಗಾ ಹೋಮದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಸಂಸ್ಕೃತಿ ಮತ್ತು ಸಂಪ್ರದಾಯಗಳು ನಮ್ಮ ಪೂರ್ವಿಕರು ನಮಗೆ ನೀಡಿದ ಉತ್ತಮ ಸಂದೇಶಗಳಾಗಿದ್ದು ಅವುಗಳನ್ನು ಮುಂದುವರೆಸಿಕೊಂಡು ಹೋಗುವ ನಿಟ್ಟಿನಲ್ಲಿ ಯಾವುದೇ ಬೇಧ ಭಾವಗಳಿಲ್ಲದೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ತುಮಕೂರಿನಲ್ಲಿ ದಸರಾ ಉತ್ಸವ ಆಚರಣೆ ಮಾಡುತ್ತಿರುವುದು ಹರ್ಷ ತಂದಿದೆ ಎಂದರು. ಎಲ್ಲಾ ರೀತಿಯ ಸಾಂಪ್ರದಾಯಿಕ ವಿಧಿ ವಿಧಾನಗಳ ಮೂಲಕ ದಸರಾ ಆಚರಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಜಿಲ್ಲೆಯ…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗ ವ್ಯಾಪ್ತಿಯಲ್ಲಿ ತುಮಕೂರು–ರಾಯದುರ್ಗ ರೈಲ್ವೇ ಸೇತುವೆ ಕಾಮಗಾರಿ ಕೈಗೊಂಡಿರುವುದರಿಂದ ಅಕ್ಟೋಬರ್ 14ರಂದು ಬೆಳಿಗ್ಗೆ 7 ರಿಂದ ಬೆಳಿಗ್ಗೆ 11 ಗಂಟೆಯವರೆಗೆ ಹಾಗೂ ಅಕ್ಟೋಬರ್ 15ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳ್ಳಾವಿ, ಮಲ್ಲಸಂದ್ರ, ಹೆಗ್ಗೆರೆ, ಮೆಳೆಕೋಟೆ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಗೃಹ ಸಚಿವರಿಂದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ : ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಡಾ.ಶಿವಕುಮಾರ ಸ್ವಾಮೀಜಿ ಧಾರ್ಮಿಕ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಮಹಾಗೌರಿ(ಮಹಾಕಾಳಿ) ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ತುಮಕೂರು ದಸರಾ ಪ್ರಯುಕ್ತ ಅಕ್ಟೋಬರ್ 11ರ ಆಯುಧ ಪೂಜೆ ದಿನದಂದು ಏರ್ಪಡಿಸಿರುವ ಮ್ಯಾರಾಥಾನ್, ನಾಡಕುಸ್ತಿ, ಆಹಾರ ಮೇಳ, ವಸ್ತುಪ್ರದರ್ಶನ, ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಕ್ರೀಡಾ ದಸರಾ ಉತ್ಸವದಲ್ಲಿ ಅಕ್ಟೋಬರ್ 11ರ ಬೆಳಿಗ್ಗೆ…
ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾಯಿಸಿ ಕೆಲವು ಸ್ಥಳಗಳಲ್ಲಿ ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಜಂಬೂಸವಾರಿ, 25 ಕಲಾತಂಡ, ತುಮಕೂರು ನಗರದ ದೇವರು, ವಿಂಟೇಜ್ ಕಾರು, ಅಶ್ವ, ಸಾಂಪ್ರಾಯದಾಯಿಕ ಉಡುಗೆ ತಂಡ ಪಾಲ್ಗೊಳ್ಳಲಿವೆ. ಸುಮಾರು 1.5 ಕಿ.ಮೀ.ಗಳಷ್ಟು ದೂರ ಸಾಗುವ ಮೆರವಣಿಗೆಯಲ್ಲಿ ವಿವಿಧ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಸುಮಾರು 30,000–35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ. ಮೆರವಣಿಗೆಯು ಅಶೋಕರಸ್ತೆ, ಸ್ವತಂತ್ರ ಚೌಕ, ಕೋಡಿ ಸರ್ಕಲ್, ಅಮಾನಿಕೆರೆರಸ್ತೆ, ಕೋತಿತೋಪು ರಸ್ತೆ, ಎಸ್.ಎಸ್. ಸರ್ಕಲ್…