Subscribe to Updates
Get the latest creative news from FooBar about art, design and business.
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
- ಖಾಸಗಿ ಶಾಲೆಗಳ ಮಾದರಿಯಲ್ಲೇ, ಸರ್ಕಾರಿ ಶಾಲೆಗಳ ರೂಪಾಂತರ: ಡಿ.ಕೆ.ಶಿವಕುಮಾರ್
- ತುಮಕೂರು ವಿವಿ 19ನೇ ಘಟಿಕೋತ್ಸವ: 90 ವಿದ್ಯಾರ್ಥಿಗಳಿಗೆ 117 ಚಿನ್ನದ ಪದಕ
- ಶಾಲೆಗಳ ಪುನರಾರಂಭ: ದಾಖಲಾತಿ ಆಂದೋಲನಕ್ಕೆ ಡಿ.ಸಿ. ಚಾಲನೆ
- ಸಚಿವ ಸ್ಥಾನದ ಆಸೆ ನನಗೂ ಇದೆ ಕೊಟ್ಟರೆ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸುವೆ: ಹೆಚ್.ವಿ.ವೆಂಕಟೇಶ್
Author: admin
ತುಮಕೂರು: ತುಮಕೂರು ದಸರಾ ಉತ್ಸವಕ್ಕೆ ಆಗಮಿಸಲಿರುವ ವಿಶೇಷ 35 ವಿಂಟೇಜ್ ಕಾರುಗಳಿಗೆ ವಿಧಾನಸೌಧದ ಮುಂಭಾಗದಲ್ಲಿ ಅಕ್ಟೋಬರ್ 11 ಬೆಳಿಗ್ಗೆ 7:30 ಗಂಟೆಗೆ ನವದೆಹಲಿ ವಿಶೇಷ ಪ್ರತಿನಿಧಿ ಶಿರಾ ಶಾಸಕ ಟಿ.ಬಿ.ಜಯಚಂದ್ರ ಮತ್ತು ಕುಣಿಗಲ್ ಶಾಸಕ ಡಾ.ಹೆಚ್.ಡಿ.ರಂಗನಾಥ್ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ಜಂಟಿ ಸಾರಿಗೆ ಆಯುಕ್ತ ಎನ್.ಜಿ. ಗಾಯಿತ್ರಿದೇವಿ, ಕರ್ನಾಟಕ ವಿಂಟೇಜ್ ಆಂಡ್ ಕ್ಲಾಸಿಕ್ ಕಾರ್ ಕ್ಲಬ್ ಅಧ್ಯಕ್ಷ ಬಾಲ್ ಚಂದ್ ಎ. ಯಡ್ಲಾಂ, ಉಪಾಧ್ಯಕ್ಷ ಪಿ.ಎ. ಸುರೇಶ್ ಮತ್ತು ಕಾರ್ಯದರ್ಶಿ ಟಿ.ಆರ್. ರಘುನಂದನ್ ಉಪಸ್ಥಿತರಿರುತ್ತಾರೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 11ರಂದು ವಿಂಟೇಜ್ ಕಾರುಗಳ ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಕಾರು ಪ್ರಿಯರು ಈ ಪ್ರದರ್ಶನದ ಪ್ರಯೋಜನ ಪಡೆಯಬಹುದೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ 2024ರ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಐಕ್ಯೂಎಸಿ , ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಹಾಗೂ ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಜಿ.ಸಿ. ಗುರುವಾರ ಆಯೋಜಿಸಿದ್ದರು. ಕಾರ್ಯಕ್ರಮವನ್ನು ಬೆಂಗಳೂರಿನ ಭಾರತೀಯ ವಿದ್ಯಾಭವನ, ಮುಖ್ಯ ಮನಃಶಾಸ್ತ್ರಜ್ಞರಾದ ಕೀರ್ತಿ ಸಾಯಿ ರಾಜ್ ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ತುಮಕೂರು ಪ್ರುಡೆನ್ಸ್ ಇಂಟರ್ ನ್ಯಾಶನಲ್ ಸ್ಕೂಲ್, ಶಾಲಾ ಸಲಹೆಗಾರಾದ ವೈಭವಿ ಸಿ ಎಂ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು, ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ದೂರು ಪ್ರತಿದೂರಿನ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಹಾವೇರಿ ಮೂಲದ ಮಹಿಳೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ವಿನಯ್ ಕುಲಕರ್ಣಿ ತನ್ನ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿದ್ದರು. ಈ ಆರೋಪಕ್ಕೆ ಪ್ರತಿಯಾಗಿ ದೂರು ನೀಡಿರುವ ಶಾಸಕ ವಿನಯ್ ಕುಲಕರ್ಣಿ, ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ದೂರು ನೀಡಿದ್ದಾರೆ. ಇದೀಗ ಸಿಐಡಿ ಪೊಲೀಸರು ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ. ಹಾವೇರಿಯಲ್ಲಿ ರೈತಪರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ವೇಳೆ ವಿನಯ್ ಪರಿಚಯವಾಗಿದ್ದು, ನಂತರದ ದಿನಗಳಲ್ಲಿ ಪರಸ್ಪರ ಮೊಬೈಲ್ ಸಂಖ್ಯೆ ವಿನಿಮಯ ಮಾಡಿಕೊಂಡು ಸಭ್ಯತೆಯಿಂದ ಮಾತನಾಡುತ್ತಿದ್ದರು. ನಂತರದ ದಿನಗಳಲ್ಲಿ ಅಸಭ್ಯವಾಗಿ, ಅಶ್ಲೀಲವಾಗಿ ಸಂಭಾಷಣೆ ನಡೆಸುತ್ತಿದ್ದರು. 2022 ರಲ್ಲಿ ಕೆಲಸ ನಿಮಿತ್ತ ಬೆಂಗಳೂರಿಗೆ ಬಂದಿದ್ದಾಗ ಹೆಬ್ಬಾಳದ ತಮ ಮನೆಗೆ ಕರೆಸಿಕೊಂಡಿದ್ದಲ್ಲದೆ, ದೇವನಹಳ್ಳಿ ಸಮೀಪ ನಿರ್ಜನ ಪ್ರದೇಶಕ್ಕೆ ಕರೆದೊಯ್ದು…
ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯ ದಶಮಿ ಸಂಭ್ರಮ ಮನೆ ಮಾಡಿದ್ದು, ಜನರು ಅಗತ್ಯ ವಸ್ತುಗಳ ಖರೀದಿಗೆ ಮುಗಿ ಬಿದ್ದಿದ್ದಾರೆ. ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆ, ಯಶವಂತಪುರ, ಮಲ್ಲೇಶ್ವರಂ, ಜಯನಗರ, ವಿಜಯನಗರ, ಬಸವನಗುಡಿ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಹೂ, ಬಾಳೆಕಂದು, ಮಾವಿನ ಸೊಪ್ಪು, ಬೂದುಗುಂಬಳಕಾಯಿ ಖರೀದಿ ಜೋರಾಗಿದೆ. ಕಳೆದ ಕೆಲವು ದಿನಗಳಿಂದ ಕುಸಿದಿದ್ದ ಹೂವಿನ ಬೆಲೆ ಹಬ್ಬದ ಪ್ರಯುಕ್ತ ಮತ್ತೆ ಏರಿಕೆಯಾಗಿದೆ. ಸೇವಂತಿಗೆ, ಕನಕಾಂಬರ, ಗುಲಾಬಿ, ಮಲ್ಲಿಗೆ ಹೂಗಳ ಬೇಡಿಕೆ ಹೆಚ್ಚಳವಾಗಿದೆ. ಮಲ್ಲಿಗೆ ಕೆ.ಜಿ.ಗೆ 800, ಕನಕಾಂಬರ 2,000, ಗುಲಾಬಿ 350, ಸೇವಂತಿಗೆ 300, ಸುಗಂಧರಾಜ 350, ಚೆಂಡು ಹೂ 100 ರೂ.ಗೆ ಮಾರಾಟವಾಗುತ್ತಿದೆ. ಬಾಳೆಕಂದು ಜೋಡಿಗೆ 50, ಮಾವಿನ ಸೊಪ್ಪು 1 ಕಟ್ 20, ನಿಂಬೆಹಣ್ಣು ಒಂದಕ್ಕೆ 7 ರೂ. ದ್ರಾಕ್ಷಿ 250, ಸೇಬು 120, ದಾಳಿಂಬೆ 200, ಏಲಕ್ಕಿ ಬಾಳೆಹಣ್ಣು 100, ಸೀತಾಫಲ 100 ರೂ.ಗೆ ಮಾರಾಟವಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಬುದ್ಧಿವಾದ ಹೇಳಿದ ತಾಯಿಯನ್ನು ಮಗನೇ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಕುಣಿಗಲ್ ತಾಲ್ಲೂಕು ಹಂಗರಹಳ್ಳಿ ಗ್ರಾಮದ ನಿವಾಸಿ, ಅಪರಾಧಿ ವಿರೂಪಾಕ್ಷ ಜೀವಾವಧಿ ಶಿಕ್ಷೆಗೊಳಪಟ್ಟ ವ್ಯಕ್ತಿಯಾಗಿದ್ದಾನೆ. ಈತ ತನಗೆ ಬುದ್ದಿವಾದ ಹೇಳಿದ್ದ ತಾಯಿ ಜಯಮ್ಮನ್ನ ಆಕ್ರೋಶದಿಂದ ಕೊಲೆ ಮಾಡಿದ್ದ. 2021 ಜನವರಿ 15ರಂದು ರಾತ್ರಿ ವಿರೂಪಾಕ್ಷ ಈ ದುಷ್ಕೃತ್ಯ ಎಸಗಿದ್ದ. ಜಯಮ್ಮ ಹೂ ಹಾಗೂ ಹಾಲು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ವಿರೂಪಾಕ್ಷ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇರುತ್ತಿದ್ದ. ಪದೇ ಪದೇ ಹಣ ನೀಡುವಂತೆ ತನ್ನ ತಾಯಿಯನ್ನು ಪೀಡಿಸಿ ಗಲಾಟೆ ಮಾಡುತ್ತಿದ್ದ. ಮಗನ ವರ್ತನೆಯಿಂದ ಬೇಸತ್ತ ತಾಯಿ, ಈ ರೀತಿ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದಾರೆ. ಅಲ್ಲದೇ ಹಣ ನೀಡಲು ನಿರಾಕರಿಸಿದ್ದಾರೆ. ತಾಯಿಯ ಬುದ್ಧಿವಾದವನ್ನು ಕೇಳದ ವಿರೂಪಾಕ್ಷ, ಜಯಮ್ಮ ಮಲಗಿದ್ದ ವೇಳೆ ತಲೆ ಮೇಲೆ ಖಾರ ಅರೆಯುವ ಗುಂಡು ಕಲ್ಲು ಎತ್ತಿ ಹಾಕಿ ಕೊಲೆ…
ತುರುವೇಕೆರೆ: ತುಮಕೂರು ಜಿಲ್ಲೆಯಲ್ಲಿಯೇ ಇತಿಹಾಸದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾಡಳಿತ ವತಿಯಿಂದ ದಸರಾ ಉತ್ಸವವನ್ನು ಹಮ್ಮಿಕೊಂಡಿದ್ದು, ತುರುವೇಕೆರೆ ತಾಲೂಕಿನ ಸಮಸ್ತ ನಾಗರಿಕ ಬಂಧುಗಳು ತಮ್ಮ ಕುಟುಂಬ ಸಮೇತವಾಗಿ ತುಮಕೂರು ದಸಾರ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿ ದಸರಾ ಉತ್ಸವವನ್ನು ಕಣ್ತುಂಬಿಕೊಳ್ಳಬೇಕೆಂದು ತುರುವೇಕೆರೆ ತಾಲೂಕು ದಂಡಾಧಿಕಾರಿ ಕುಂ.ಇ. ಅಹಮದ್ ವಿಶೇಷವಾಗಿ ಮನವಿ ಮಾಡಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಅಕ್ಟೋಬರ್ 3ರಿಂದ ಅ. 12 ರವರೆಗೆ ಅದ್ದೂರಿ ದಸರಾವೂ ಪ್ರಾರಂಭವಾಗಿದ್ದು, ಈ ಹಿಂದೆ ನಾವೆಲ್ಲರೂ ದಸರಾದ ವೀಕ್ಷಣೆಗೆ ದೂರದ ಮೈಸೂರು, ಮಡಿಕೇರಿ, ಹಾಗೂ ಮುಂತಾದ ಜಿಲ್ಲೆಗಳಿಗೆ ತೆರಳಿ ದಸರಾ ಸಂಭ್ರಮವನ್ನು ವೀಕ್ಷಿಸಬೇಕಿತ್ತು, ಆದರೆ ಇದೀಗ ಸರ್ಕಾರವು ಮತ್ತು ತುಮಕೂರು ಜಿಲ್ಲಾಡಳಿತ ನಮ್ಮ ಜಿಲ್ಲೆಯ ಜನತೆಗೆ ದಸರಾ ಸಂಭ್ರಮ ವೀಕ್ಷಿಸಲು ನಮ್ಮ ಜಿಲ್ಲೆಯಲ್ಲಿಯೇ ಆಯೋಜಿಸಿರುವ ಹಿನ್ನೆಲೆ ಬಹಳ ವಿಶೇಷವಾದ ಕಾರ್ಯಕ್ರಮಗಳು ಜರುಗಲಿವೆ. ವಿಶೇಷವಾಗಿ ಅಕ್ಟೋಬರ್ 11ರಂದು ಶುಕ್ರವಾರ ಕ್ರೀಡಾ ದಸರಾ ಉತ್ಸವ. ಆಹಾರಮೇಳ. ವಿಜ್ಞಾನ ಮೇಳ. ನಾಡ ಕುಸ್ತಿ, ಸೇರಿದಂತೆ ಎಚ್.ಎ.ಎಲ್, ವತಿಯಿಂದ ಹೆಲಿಕ್ಯಾಪ್ಟರ್…
ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಗುರುವಾರ ರಾಜ್ಯದಲ್ಲಿ ಶೋಕಾಚರಣೆಯನ್ನು ಘೋಷಿಸಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಟಾಟಾ ಗ್ರೂಪ್ ಅನ್ನು ಜಾಗತಿಕವಾಗಿ ಹೆಸರಾಂತ ಸಂಘಟಿತ ಸಂಸ್ಥೆಯಾಗಿ ಪರಿವರ್ತಿಸಿದ ಕೀರ್ತಿಗೆ ಪಾತ್ರರಾದ ರತನ್ ಟಾಟಾ ಅವರು 86 ನೇ ವಯಸ್ಸಿನಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಅವರ ಪಾರ್ಥಿವ ಶರೀರವನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಇಂದು ಬೆಳಗಿನ ಜಾವ 2 ಗಂಟೆಯ ನಂತರ ಪೊಲೀಸ್ ವಾಹನಗಳ ಬೆಂಗಾವಲಿನಲ್ಲಿ ಆಂಬುಲೆನ್ಸ್ ನಲ್ಲಿ ಹೊರತರಲಾಯಿತು ಮತ್ತು ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅವರ ಉಪ ದೇವೇಂದ್ರ ಫಡ್ನವಿಸ್, ಮಹಾರಾಷ್ಟ್ರದ ಶಿಕ್ಷಣ ಸಚಿವ ದೀಪಕ್ ಕೇಸರ್ಕರ್ ಮತ್ತು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಟಾಟಾ ಅವರ ಸಾವಿನ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸಿದವರಲ್ಲಿ ಸೇರಿದ್ದರು. ಶೋಕಾಚರಣೆಯ ಸಂಕೇತವಾಗಿ ಇಂದು ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ರಾಷ್ಟ್ರೀಯ…
ತುಮಕೂರು: ಬಂಡೆ ಛಿದ್ರಗೊಳಿಸುವ ಸ್ಫೋಟಕ ಸಿಡಿದು ಬಾಲಕನಿಗೆ ಗಂಭೀರ ಗಾಯವಾಗಿರೋ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಇಡಗೂರಿನಲ್ಲಿ ನಡೆದಿದೆ. ಸ್ಫೋಟಗೊಂಡ ಪರಿಣಾಮ ಬಾಲಕನ ಮೂರು ಬೆರಳು ಛಿದ್ರವಾಗಿವೆ. ಮೋನಿಷ್ ಗಾಯಗೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯಾಗಿದ್ದು, ಈತನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಶಾಲೆಯ ಕಾಂಪೌಂಡ್ ನಿರ್ಮಾಣ ಮಾಡಲು ತಂದು ಸುರಿಯಲಾಗಿದ್ದ ಕಲ್ಲುಗಳ ನಡುವೆ ಇದ್ದ ಸ್ಪೋಟಕವನ್ನು ಕೈಗೆತ್ತಿಕೊಂಡು ಎಸೆದ ವೇಳೆ ಅದು ಸ್ಫೋಟಗೊಂಡಿದೆ . ಆಟದ ವಸ್ತು ಇರಬಹುದು ಎಂದು ಕೆಂಪು ಬಣ್ಣದ ಸ್ಫೋಟಕವನ್ನು ಮುಟ್ಟಿದ್ದನು. ಈ ಸಂಬಂಧ ಸಿಎಸ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವರದಿ : ಮಂಜುಸ್ವಾಮಿ ಎಂ ಎನ್. ತುಮಕೂರು: ಜಿಲ್ಲೆಯ ಗುಬ್ಬಿ ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಸುಮಾರು ವರ್ಷಗಳಿಂದ ಗುಡಿಸಲಲ್ಲಿ ವಾಸವಾಗಿರುವ ನಿರಾಶ್ರಿತರ ಬದುಕನ್ನ ಘನ ಸರ್ಕಾರದ ಸಕಲ ಸೇವಾ ಸೌಲಭ್ಯ ನೀಡಿ ಉತ್ತಮ ಬದುಕನ್ನ ರೂಪಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ ವಿಫಲವಾಗಿದೆ ಎಂದು ಹಿರಿಯ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಪಟ್ಟಣದ ಪೊಲೀಸ್ ಠಾಣೆಯ ಹಿಂಭಾಗ ವಾಸವಿರುವ ಸುಮಾರು 42ಕ್ಕೂ ಹೆಚ್ಚು ನಿರ್ಗತಿಕ ಕುಟುಂಬಗಳ ಗೋಳು ಕೇಳೋರು ಯಾರು ಎಂಬುದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ. ಇಲ್ಲಿನ ಬಡವರ ಬದುಕು ನಿಜಕ್ಕೂ ರೋಚಕದ ಸಂಗತಿಯಾಗಿದೆ ಕೆಲವು ದಿನಗಳ ಹಿಂದೆಯಷ್ಟೇ ಭೀಕರವಾಗಿ ಸುರಿದ ಮಳೆಯ ನೀರಲ್ಲಿ ವಯೋವೃದ್ದೆಯೊಬ್ಬರು ಮುಳುಗಿ ಪ್ರಾಣ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ ಹಾಗೂ ಹಾವಿನ ಕಡಿತದಿಂದ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ ಕಾಣಬಹುದಾಗಿದೆ. ಆದರೂ ಕೂಡ ತುಮಕೂರು ಜಿಲ್ಲಾ ಆಡಳಿತ ಮತ್ತು ಗುಬ್ಬಿ ತಾಲ್ಲೂಕು ಆಡಳಿತ ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿದ್ದಾರೆ ಎಂದು…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಶುಕ್ರ ಗ್ರಹವು ಬಹಳ ಮಹತ್ವಪೂರ್ಣವಾದ ಗ್ರಹವಾಗಿದೆ. ಈ ಗ್ರಹವು ಪ್ರೇಮ, ಆಕರ್ಷಣೆ, ಸೌಂದರ್ಯ, ಹಣ, ವೈಭವ, ಭೌತಿಕ ಸಂತೋಷ, ಭೋಗ ಮತ್ತು ವಿಲಾಸವನ್ನು ಕರುಣಿಸುವ ಗ್ರಹವಾಗಿದೆ. ಶುಕ್ರ ಗ್ರಹದ ಪ್ರಭಾವವು ವ್ಯಕ್ತಿಯ…