Author: admin

ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ–ಗಣಿತ ಒಲಂಪಿಯಾಡ್, ಮಕ್ಕಳ ಕ್ರಿಯಾತ್ಮಕ–ಸ್ಪರ್ಧಾತ್ಮಕ ಕಲಿಕಾ ಸಾಮರ್ಥ್ಯ ಮತ್ತು ಅವಶ್ಯಕತೆಗೆ ಅನುಗುಣವಾಗಿ ಮ್ಯಾಥ್ ಲ್ಯಾಬ್ ಸಹಯೋಗದಲ್ಲಿ ಅಕಾಡೆಮಿಕ್ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ನವೋದಯ–ಸೈನಿಕ-ಖಾಸಗಿ ಇಂಟರ್ ನ್ಯಾಷನಲ್ ವಸತಿ ಶಾಲಾ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿದೆ. ನೀಟ್, ಜೆಇಇ, ಸಿಕೆಟಿ, ಉನ್ನತ ಶಿಕ್ಷಣದಲ್ಲಿ ಸಿಎಸ್‍ ಆರ್ ಸ್ಕಾಲರ್ ಶಿಪ್‌ನಿಂದ ಉಚಿತ ಶಿಕ್ಷಣ, ಕೇಂದ್ರ–ರಾಜ್ಯ ಸರ್ಕಾರಗಳ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಶಾಲಾ ಹಂತದಿಂದಲೇ ಮಕ್ಕಳಲ್ಲಿ/ಪೋಷಕರಲ್ಲಿ ಜಾಗೃತಿ ಮೂಡಿಸಿ ಪೂರಕ ಮಾಹಿತಿ, ಶೈಕ್ಷಣಿಕ ಮಾರ್ಗದರ್ಶನ ನೀಡುತ್ತಿದೆ. ಬೇಸಿಗೆ ಕಲಿಕಾ ಶಿಬಿರದ ಮೊದಲ ಬ್ಯಾಚ್ ಏ.1 ರಿಂದ ಪ್ರತಿದಿನ ಸಂಜೆ 4ರಿಂದ 8ಗಂಟೆ ಅವಧಿಯಲ್ಲಿ ನಡೆಯಲಿದೆ. ಕನ್ನಡ/ಆಂಗ್ಲ ಮಾಧ್ಯಮದ ರಾಜ್ಯ/ಸಿಬಿಎಸ್‌ಇ/ಐಸಿಎಸ್‌ಇ ಪಠ್ಯಕ್ರಮ ಓದುತ್ತಿರುವ 2 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ವಿಷಯಗಳಲ್ಲಿ ತರಬೇತಿ ಪಡೆಯಬಹುದು. ಆಸಕ್ತರು ವಿಜ್ಞಾನ ಬಿಂದು ಕಚೇರಿ, ಡಿಡಿಪಿಐ ಫ್ಲೈಓವರ್…

Read More

ಬೀದರ್: ರಾಜ್ಯಾದ್ಯಂತ ಎಲ್‌ ಪಿಜಿ ಸಿಲಿಂಡರ್‌ ಗಳ ಅಭಾವ ತಲೆದೂರಿರುವ ಬೆನ್ನಲ್ಲೇ, ಖದೀಮರು ಈಗ ಸಿಲಿಂಡರ್‌ ಗಳ ಮೇಲೆ ಕಣ್ಣಿಟ್ಟಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಗೋರ್ಟಾ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ಇಟ್ಟಿದ್ದ ಆರು ಸಿಲಿಂಡರ್‌ಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಶಾಲೆಯ ಅಡುಗೆ ಕೋಣೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ಅಲ್ಲಿ ಸಂಗ್ರಹಿಸಿಡಲಾಗಿದ್ದ 6 ಗ್ಯಾಸ್ ಸಿಲಿಂಡರ್‌ ಗಳನ್ನು ಕಳ್ಳತನ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ಈ ಸಿಲಿಂಡರ್‌ ಗಳನ್ನು ಬಳಸಲಾಗುತ್ತಿತ್ತು. ಸಿಲಿಂಡರ್‌ ಗಳ ಕೊರತೆಯಿಂದ ಈಗಾಗಲೇ ಹೋಟೆಲ್ ಉದ್ಯಮ ಮತ್ತು ಸಾರ್ವಜನಿಕರು ಕಷ್ಟಪಡುತ್ತಿರುವಾಗ, ಇತ್ತ ಶಾಲೆಗೆ ಪೂರೈಕೆಯಾದ ಸಿಲಿಂಡರ್‌ಗಳನ್ನೇ ಕಳ್ಳತನ ಮಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಯು ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೇವಲ ಶಾಲೆ ಮಾತ್ರವಲ್ಲದೆ, ಜಿಲ್ಲೆಯ ಇತರೆ ಭಾಗಗಳಲ್ಲೂ ಸಿಲಿಂಡರ್ ಕಳ್ಳತನ ವರದಿಯಾಗುತ್ತಿದೆ. ಇತ್ತೀಚೆಗೆ ಭಾಲ್ಕಿ ನಿವಾಸಿಯೊಬ್ಬರು ಗೋದಾಮಿಗೆ…

Read More

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದರ ನಡುವೆಯೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮೊದಲ ಹಂತದ 15 ನಗರಗಳ ‘ಫ್ಯಾನ್ ಪಾರ್ಕ್’ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಕರ್ನಾಟಕದ ತುಮಕೂರು ಮತ್ತು ಮೈಸೂರು ನಗರಗಳು ಸ್ಥಾನ ಪಡೆದಿವೆ. ಫ್ಯಾನ್ ಪಾರ್ಕ್ ಅಂದ್ರೇನು? ಕ್ರೀಡಾಂಗಣಕ್ಕೆ ಹೋಗಿ ಪಂದ್ಯ ನೋಡಲು ಸಾಧ್ಯವಾಗದ ಅಭಿಮಾನಿಗಳಿಗೆ ಸ್ಟೇಡಿಯಂನಂತಹ ಅನುಭವ ನೀಡಲು ಬಿಸಿಸಿಐ ಈ ಫ್ಯಾನ್ ಪಾರ್ಕ್‌ಗಳನ್ನು ಆಯೋಜಿಸುತ್ತದೆ. ಇಲ್ಲಿ ಬೃಹತ್ ಪರದೆಗಳ ಮೇಲೆ ಪಂದ್ಯದ ನೇರ ಪ್ರಸಾರ ಇರುತ್ತದೆ. ಜೊತೆಗೆ ಸಂಗೀತ, ಮನರಂಜನೆ, ಆಹಾರ ಮಳಿಗೆಗಳು ಮತ್ತು ಮಕ್ಕಳಿಗಾಗಿ ಆಟದ ವಲಯಗಳನ್ನು ನಿರ್ಮಿಸಲಾಗಿರುತ್ತದೆ. ಪ್ರವೇಶ ಸಂಪೂರ್ಣ ಉಚಿತವಾಗಿರುತ್ತದೆ. ಕರ್ನಾಟಕದ ನಗರಗಳಲ್ಲಿ ಯಾವಾಗ? ತುಮಕೂರು: ಮೊದಲ ಹಂತದ ಭಾಗವಾಗಿ ತುಮಕೂರು ನಗರದಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ಆಯೋಜನೆಯಾಗಲಿದೆ. ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾರ್ಚ್ 28…

Read More

ಕೊರಟಗೆರೆ : ತಾಲ್ಲೂಕಿನ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಜೂನ್ 21 ರಂದು ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಬಯಸುವ ನೂತನ ವಧು–ವರರು ಶ್ರೀಮಠಕ್ಕೆ ಬಂದು ಸೂಕ್ತ ದಾಖಲಾತಿಗಳನ್ನು ನೀಡಿ ನೋಂದಾಯಿಸಿಕೊಳ್ಳುವಂತೆ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶೀವಾಚಾರ್ಯ ಸ್ವಾಮೀಜಿ ತಿಳಿಸಿದರು. ಸಿದ್ದರಬೆಟ್ಟದ ಶ್ರೀಮಠದಲ್ಲಿ ನಡೆದ ಪೂರ್ವಭಾವಿಯಲ್ಲಿ ಮಾತನಾಡಿ ಮುಂಬರುವ ಜೂನ್ 21ರ ಭಾನುವಾರದಂದು ಸಿದ್ದರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದಲ್ಲಿ20ನೇ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಮತ್ತು ಧರ್ಮ ಜಾಗೃತಿ ಸಮಾವೇಶ ಆಚರಿಸಲಾಗುವುದು. ಅಂದು ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರ ನೀಡಿವುದರೋಂದಿಗೆ ಉಚಿತ ಆದರ್ಶ ಸಾಮೂಹಿಕ ವಿವಾಹವನ್ನು ನಡೆಸಲಾಗುವುದು. ಆ ಸಾಮೂಹಿಕ ವಿವಾಹಗಳನ್ನು ಜೂನ್ 21 ರ ಮದ್ಯಾಹ್ನ 12:20 ಕ್ಕೆ ಅಭಿಜಿನ್ ಲಗ್ನದಲ್ಲಿ ನಡೆಸಲಾಗುವುದು. ಮದುವೆಯನ್ನು ಶಾಸ್ತ್ರೋತ್ರವಾಗಿ ಮಾಡಿ ಕೊಡಲಾಗುವುದು ನೂತನ ವಧು–ವರರಿಗೆ ಮಾಂಗಲ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ನೀಡುವರು. ಈ ಸಾಮೂಹಿಕ ವಿವಾಹಕ್ಕೆ…

Read More

ಸರಗೂರು:  ಜೆಡಿಎಸ್ ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಲು ಎಲ್ಲಾರೂ ಮುಂಬರುವ ಜಿಲ್ಲಾ ಮತ್ತು ತಾಪಂ ಹಾಗೂ ಪುರಸಭೆ ಪಟ್ಟಣ ಪಂಚಾಯಿತಿ ಚುನಾವಣೆಗಳನ್ನು ಗಂಭೀರವಾಗಿ ಎದುರಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು  ಒಗ್ಗಟ್ಟಿನಿಂದ ಕೆಲಸ ಮಾಡವಂತೆ ಜೆಡಿಎಸ್ ಪಕ್ಷದ ಮುಖಂಡ ಹಾಗೂ ಎನ್ ಡಿ ಎ ಅಭ್ಯರ್ಥಿ ಕೆ.ಎಂ.ಕೃಷ್ಣನಾಯಕ ತಿಳಿಸಿದರು. ತಾಲ್ಲೂಕಿನ ಸಮೀಪದ ಮಾದಪುರ ಗ್ರಾಮ ಬಳಿ ಇರುವ ಕೃಷ್ಣನಾಯಕರವರ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮಾರ್ಚ್ 27ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಲಿರುವ ಹಿನ್ನೆಲೆ ಪೂರ್ವ ಭಾವಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೆ.ಎಂ.ಕೃಷ್ಣನಾಯಕ ಮಾತನಾಡುತ್ತಿದ್ದರು. ಎಚ್.ಡಿ.ಕೋಟೆ ಪಟ್ಟಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ತಾಲೂಕಿನಿಂದ 20ರಿಂದ 25 ಸಾವಿರ ಜನರು ಆಗಮಿಸ ಬೇಕು ಎಂದು ಕಾರ್ಯಕರ್ತರಿಗೆ ಅವರು ಸೂಚನೆ ನೀಡಿದರಲ್ಲದೇ,  ಪಕ್ಷದ ತತ್ವದ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು, ತಳಮಟ್ಟದಲ್ಲಿ ಸಂಟನೆ ಬಲಪಡಿಸಿದರೆ ಎಲ್ಲಾ ಚುನಾವಣೆಯಲ್ಲಿ ಯಶಸ್ಸು ಸಾಧಿಸುವುದು…

Read More

ಪಾವಗಡ:  ಈ ಹಿಂದೆ ಜಾರಿಯಲ್ಲಿದ್ದ ಮೀಸಲಾತಿಯನ್ನೇ ಮುಂದುವರಿಸಿ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿ ಮಾರ್ಚ್ 24ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ವತಿಯಿಂದ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಬಂಜಾರ ಜಾಗೃತಿ ದಳ ಸಂಸ್ಥಾಪಕ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಉದ್ಯೋಗ ನೇಮಕಾತಿ ಕುರಿತು ರೋಸ್ಟರ್ ಹಂಚಿಕೆ ಮಾಡಿ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶ ಸುತ್ತೋಲೆಗಳನ್ನು ಹಿಂಪಡೆಯಬೇಕು, ಈಗಾಗಲೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ರದ್ದುಗೊಳಿಸಬೇಕು ಹಳೆಯ ಜಾತಿ ಪ್ರಮಾಣ ಪತ್ರವನ್ನೇ ಮುಂದುವರಿಸಬೇಕು ಅಂತಾ ಅವರು ಒತ್ತಾಯಿಸಿದರು. ಇತ್ತೀಚೆಗೆ ರಾಜ್ಯ ಸರ್ಕಾರದ ವಿವಿಧ ಯುನಿವರ್ಸಿಟಿ.ಪ್ರಾಧಿಕಾರ ಮತ್ತು ಕೆಲ ಇಲಾಖೆಗಳ ನೇಮಕಾತಿಯ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗಳ ಪ್ರವರ್ಗ ಬಿ.ಪ್ರವರ್ಗ ಸಿ. ಗುಂಪಿಗೆ ಶೂನ್ಯ ಹುದ್ದೆಗಳನ್ನು ಹಂಚಿಕೆ ಮಾಡಲಾಗಿತ್ತು. ಇದರಿಂದಾಗಿ ಮೀಸಲಾತಿ ಅವೈಜ್ಞಾನಿಕವಾದದ್ದು ಎಂದು ತಿಳಿದಿರುವ ವಿಚಾರ.ನ್ಯಾ.ನಾಗಮೋಹನ್ ದಾಸ್ ಆಯೋಗದ ಸಮೀಕ್ಷಾ ಸಮಗ್ರ ದತ್ತಾಂಶ ಮಾಹಿತಿಯನ್ನು ತಾಲ್ಲೂಕುವಾರು ಬಿಡುಗಡೆಗೊಳಿಸಬೇಕು. ನ್ಯಾ. ನಾಗಮೋಹನ್ ದಾಸ್ ಆಯೋಗ ಸಂಗ್ರಹಿಸಿರುವ ದತ್ತಾಂಶ ಒಂದು…

Read More

ಸರಗೂರು:  ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ರಂಜಾನ್ ಹಬ್ಬದ ಸಂದರ್ಭದಲ್ಲಿ ಕಸಾಪ ವತಿಯಿಂದ, ಕಸಾಪ ಭವನಕ್ಕೆ ಜಾಗವನ್ನು ನೀಡಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ಮನವಿ ಮಾಡಲಾಯಿತು. ಈ ವೇಳೆ ಕಸಾಪ ಅಧ್ಯಕ್ಷ ಎಂ.ಕೆಂಡಗಣ್ಣಸ್ವಾಮಿ ಮಾತನಾಡಿ, ಸಮಾರಂಭ ಕಾರ್ಯಕ್ರಮವನ್ನು ಮಾಡಲು ಸ್ಥಳ ಇಲ್ಲದೆ ಶಾಲೆ ಮತ್ತು ಸರ್ಕಾರಿ ಕಚೇರಿಗಳನ್ನು ಮನವಿ ಮಾಡಿಕೊಂಡು ಸಭೆಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಕಸಾಪ ಸಂಘಕ್ಕೆ ಪ್ರತ್ಯೇಕವಾಗಿ ಭವನ ಜಾಗ ಬೇಕು. ಅದಕ್ಕೆ ನಿಮ್ಮ ಅನುದಾನವನ್ನು ನೀಡಿ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು. ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಪಟ್ಟಣದಲ್ಲಿ ಕಸಾಪ ಭವನ ನಿರ್ಮಾಣ ಮಾಡಲು ನಮಗೂ ಆಸೆ ಇದೆ. ಆದರೆ ಪಟ್ಟಣದಲ್ಲಿ ಸರ್ಕಾರಿ ಜಾಗ ಕೊರತೆ ಇರುವುದರಿಂದ ಕಂದಾಯ ಮತ್ತು ಪಪಂ ಅಧಿಕಾರಿಗಳಿಗೆ ಸರ್ಕಾರಿ ಜಾಗವನ್ನು ಗುರುತಿಸಲು ಸೂಚನೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಪಪಂ ಸದಸ್ಯ ಶ್ರೀನಿವಾಸ,ಕಸಾಪ ಪ್ರದಾನ ಕಾರ್ಯದರ್ಶಿ ಎಚ್.ಎನ್.ನಿಂಗರಾಜು, ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್.ನಾಗರಾಜು, ಮಾಜಿ ಜಿ.ಪಂ.…

Read More

ತುಮಕೂರು: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಯಾಣದ ಮಧ್ಯೆ ದಿಢೀರ್ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಅವರು ಕೊಪ್ಪಳದಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಶಿರಾ ದಾಟಿ ತುಮಕೂರು ಸಮೀಪದ ಕೋರ ಎಂಬಲ್ಲಿಗೆ ಬರುತ್ತಿದ್ದಂತೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಸಚಿವರಿಗೆ ಇಕೋ ಟೆಸ್ಟ್ (ECG) ಸೇರಿದಂತೆ ಹೃದಯಕ್ಕೆ ಸಂಬಂಧಿಸಿದ ವಿವಿಧ ವೈದ್ಯಕೀಯ ತಪಾಸಣೆಗಳನ್ನು ನಡೆಸಲಾಗಿದೆ. ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ವಿಶ್ರಾಂತಿಗೆ ಸೂಚಿಸಲಾಗಿದೆ. ಸಚಿವರು ಆಸ್ಪತ್ರೆಗೆ ದಾಖಲಾದ ವಿಷಯ ತಿಳಿಯುತ್ತಿದ್ದಂತೆಯೇ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅಶೋಕ್ ಹಾಗೂ ಡಿವೈಎಸ್‌ಪಿ ಚಂದ್ರಶೇಖರ್ ಅವರು ಆಸ್ಪತ್ರೆಗೆ ಧಾವಿಸಿ ಆರೋಗ್ಯ ವಿಚಾರಿಸಿದ್ದಾರೆ. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಮೂಲಗಳು ಖಚಿತಪಡಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ಒಟ್ಟು 8,931 ದಿನಗಳನ್ನು ಪೂರೈಸುವ ಮೂಲಕ ದೇಶದ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಸಿಕ್ಕಿಂ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರು 8,930 ದಿನಗಳ ಕಾಲ ಅಧಿಕಾರ ನಡೆಸುವ ಮೂಲಕ ಈ ದಾಖಲೆ ಹೊಂದಿದ್ದರು. ಇದೀಗ ಪ್ರಧಾನಿ ಮೋದಿ ಅವರು ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಮೋದಿ ಅವರ ರಾಜಕೀಯ ಪಯಣದ ಮೈಲುಗಲ್ಲುಗಳು: 7 ಅಕ್ಟೋಬರ್ 2001: ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ. ಮೂರು ಬಾರಿ: ಗುಜರಾತ್ ಮುಖ್ಯಮಂತ್ರಿಯಾಗಿ ಸತತ ಸೇವೆ. 26 ಮೇ 2014: ಮೊದಲ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ. ಪ್ರಸ್ತುತ: ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಕಾರ್ಯನಿರ್ವಹಣೆ. ಈ ಐತಿಹಾಸಿಕ ಸಾಧನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಹಲವು…

Read More

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಖಾಸಾ ಶಾಖ ಮಠದ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಪೂರ್ವಭಾವಿ ಸಭೆಯು ಯಶಸ್ವಿಯಾಗಿ ಜರುಗಿತು. ಶ್ರೀ ಮಠದ ಈ ಐತಿಹಾಸಿಕ 20ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ: 21/06/2026ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಸಮಾರಂಭವು ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವದ್ಪಾದರ ದಿವ್ಯ ಸಾನಿಧ್ಯದಲ್ಲಿ ಹಾಗೂ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಲಿದೆ. ಸಿದ್ಧ ಶ್ರೀ ಪ್ರಶಸ್ತಿ: ಈ ಬಾರಿಯ ಪ್ರತಿಷ್ಠಿತ ‘ಸಿದ್ಧ ಶ್ರೀ’ ಪ್ರಶಸ್ತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆ ಅವರಿಗೆ ನೀಡಿ ಗೌರವಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಾರ್ಷಿಕೋತ್ಸವದ ಅಂಗವಾಗಿ ಮಧ್ಯಾಹ್ನ 12 ಗಂಟೆಯ ಶುಭ ‘ಅಭಿಜಿತ್ ಲಗ್ನ’ದಲ್ಲಿ ಉಚಿತ ಸಾಮೂಹಿಕ ಆದರ್ಶ ವಿವಾಹಗಳು…

Read More