Author: admin

ತುಮಕೂರು : ತುಮಕೂರು ದಸರಾ 2024ರ ದಸರಾ ದೀಪಾಲಂಕಾರಕ್ಕಿಂದು ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ತುಮಕೂರಿನ ರಾಜ ಬೀದಿಗಳು ವಿದ್ಯುತ್ ದೀಪಗಳಿಂದ ಅಲಂಕೃತಗೊಂಡು ನಾಗರಿಕರನ್ನು ಪುಳಕಗೊಳಿಸಿದೆ. ನಗರದ ಬಟವಾಡಿ ವೃತ್ತದಿಂದ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ, ಭದ್ರಮ್ಮ ಚೌಟ್ರಿ ವೃತ್ತ, ಟೌನ್ ಹಾಲ್ ವೃತ್ತ, ಕಾಲ್ ಟ್ಯಾಕ್ಸ್ ವೃತ್ತ ಹಾಗೂ ಗುಬ್ಬಿ ವೃತ್ತದ ವರೆಗೂ ಮತ್ತು ಶಿರಾ ಗೇಟ್ ನಿಂದ ಮರಳೂರು ದಿಣ್ಣೆ ವೃತ್ತವರೆಗೂ ಅಲ್ಲದೆ ನಗರದ ಪ್ರಮುಖ ಬೀದಿಗಳು ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಸಿದ್ದವಾಗಿವೆ. ನಗರದ ವೃತ್ತಗಳಲ್ಲಿ ವಿದ್ಯುತ್ ದೀಪಗಳಿಂದ ಮೂಡಿದ ಚಾಮುಂಡಿ, ಕೃಷ್ಣ, ಲಕ್ಷ್ಮೀ ಸೇರಿದಂತೆ ವಿವಿಧ ದೇವರುಗಳ ಕಲಾಕೃತಿಗಳು ದೀಪಾಲಂಕಾರದ ಮೆರಗನ್ನು ಹೆಚ್ಚಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು : ಜಿಲ್ಲೆಯಲ್ಲಿ ಸಂಭ್ರಮದ ದಸರಾ ಉತ್ಸವದ ಭಾಗವಾಗಿ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಾಸ್ಯ ಚಕ್ರವರ್ತಿ ಟಿ.ಆರ್. ನರಸಿಂಹರಾಜು ವೇದಿಕೆಯಲ್ಲಿ ಅಕ್ಟೋಬರ್ 10ರವರೆಗೂ ನಡೆಯಲಿರುವ ಯುವ ದಸರಾ ಕಾರ್ಯಕ್ರಮದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಭಾನುವಾರ ಚಾಲನೆ ನೀಡಲಾಗಿದ್ದು, ಅಕ್ಟೋಬರ್ 10ರವರೆಗೂ ಪ್ರತಿ ದಿನ ಸಂಜೆ 5 ಗಂಟೆಯಿಂದ ಜರುಗಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನರು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಗಳ ಸವಿಯನ್ನು ಸವಿಯಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮನವಿ ಮಾಡಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಬೆಳಿಗ್ಗೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ದಸರಾ ಪ್ರಯುಕ್ತ ಮಹಿಳಾ ದಸರಾ ಕಾರ್ಯಕ್ರಮದಡಿ ನಗರದ ಎನ್‌ಸಿಸಿ ಕಚೇರಿಯಿಂದ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೂ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಬಿಡಿಸಿದ ಬಣ್ಣದ ಚಿತ್ತಾರಗಳು ನೋಡುಗರ ಕಣ್ಮನ ಸೆಳೆದವು. ದಸರಾ ಸಂದರ್ಭದಲ್ಲಿ ಇಂದಿನಿಂದ ನಗರದ ಅಮಾನಿಕೆರೆಯಲ್ಲಿ ದೋಣಿ ವಿಹಾರ ಆರಂಭಗೊಳ್ಳಲಿದ್ದು, ನಿರಂತರವಾಗಿ ನಡೆಯಲಿದೆ. ಸಾರ್ವಜನಿಕರು ದೋಣಿ ವಿಹಾರದ ಪ್ರಯೋಜನ ಪಡೆಯಬಹುದಾಗಿದೆ…

Read More

ತುಮಕೂರು: ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶರನ್ನವರಾತ್ರಿ ಅಂಗವಾಗಿ ಸೋಮವಾರ ನಡೆದ ಧರ್ಮ ಧ್ವಜ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಜಾತಿ ಜನ ಗಣತಿ ವರದಿ ಮರು ಪರಿಶೀಲಿಸಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿರುವ ಒಕ್ಕಲಿಗ ಮತ್ತು ಲಿಂಗಾಯಿತ ಸೇರಿದಂತೆ ಹಲವಾರು ಸಮುದಾಯಗಳ ಜಾತಿ ಜನಗಣತಿ ಸರಿಯಾದ ಕ್ರಮದಲ್ಲಿ ನಡೆದಿಲ್ಲ, ಇದು ಹಲವಾರು ಸಮುದಾಯಗಳ ಶೈಕ್ಷಣಿಕ, ಸಾಮಾಜಿಕ, ಉದ್ಯೋಗ ಗಳ ಮೇಲೆ ಪರಿಣಾಮ ಬೀರಲಿದೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಆತುರ ಪಡದೆ ಜಾತಿ ಜನಗಣತಿ ಅನುಷ್ಠಾನಕ್ಕಿಂತ ಮುಂಚೆ ಮರು ಪರಿಶೀಲಿಸುವ ಅಗತ್ಯವಿದೆ. ಮತ್ತೊಮ್ಮೆ ಜಾತಿ ಗಣತಿ ರಾಜ್ಯದಲ್ಲಿ ನಡೆದರೆ ಎಲ್ಲಾ ಸಮಾಜಗಳಿಗೂ ಸಾಮಾಜಿಕ ನ್ಯಾಯ ಸಿಗಲಿದೆ ಈ ಬಗ್ಗೆ ಆತುರದ ನಿರ್ಧಾರ ಬೇಡ ಎಂದು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮಿಜಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು   ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490. ಗ್ರಹಗಳ ರಾಶಿಚಕ್ರ-ನಕ್ಷತ್ರಗಳ ಬದಲಾವಣೆಗಳು ಮತ್ತು ಒಂಬತ್ತು ಗ್ರಹಗಳ ಚಲನೆಯ ವಿಷಯದಲ್ಲಿ ಅಕ್ಟೋಬರ್ ತಿಂಗಳು ಬಹಳ ವಿಶೇಷವಾಗಿದೆ. ತಿಂಗಳ ಆರಂಭದಲ್ಲಿ ಅನೇಕ ದೊಡ್ಡ ಗ್ರಹಗಳು ಸಂಕ್ರಮಿಸುತ್ತಿವೆ, ಇದರಿಂದಾಗಿ ಶುಭ ಮತ್ತು ಅಶುಭ ಯೋಗದ ಉತ್ತಮ ಸಂಯೋಜನೆಯು…

Read More

ಹೆಚ್.ಡಿ.ಕೋಟೆ:  ಪಟ್ಟಣದ ಅಂಬೇಡ್ಕರ್ ಭವನದಲ್ಲಿ  ರಾಜ್ಯಾಧ್ಯಕ್ಷರಾದ ಶರಣಪ್ಪ ದೊಡ್ಡಮನಿ ಹಾಗೂ ಶಾಸಕ ಅನಿಲ್ ಚಿಕ್ಕಮಾದು ಸಮ್ಮುಖದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ನೂತನ ತಾಲ್ಲೂಕು ಘಟಕ ಉದ್ಘಾಟನೆ ಮಾಡಿ, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು . ಇದೇ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ರೈತ ಈ ದೇಶದ ಬೆನ್ನೆಲುಬು ರೈತರು ಈದಿನ ಹೋರಾಟವನ್ನು ಮಾಡುತ್ತಿದ್ದಾರೆ ಎಂದರೆ, ಅದಕ್ಕೆ ಬೆನ್ನೆಲುಬು  ರೈತ ಸಂಘ ಸಂಸ್ಥಾಪಕ ಪ್ರೂ ನಂಜುಂಡಸ್ವಾಮಿ ಕಾರಣ   ರೈತರು ತಮ್ಮ ಸಾಮುದಾಯಿಕ ಕೆಲಸ ಕಾರ್ಯಗಳಾಗಬೇಕಾದರೆ ಸರ್ಕಾಕಾರದ ಗಮನಕ್ಕೆ ಬರುವವರೆಗೆ ಹಾಗೂ ಸಮಸ್ಯೆ ಪರಿಹಾರ ಆಗುವ ತನಕ ಹೋರಾಟ ನಿಲ್ಲಿಸಬಾರದು ಎಂದು ಕಿವಿ ಮಾತು ಹೇಳಿದರು. ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ತಾಲ್ಲೂಕು ಘಟಕದ ಪದಾಧಿಕಾರಿಗಳಿಗೆ ಹಸಿರು ಶಾಲು ಹೊದಿಸುವ ಮೂಲಕ ಅಭಿನಂದಿಸಲಾಯಿತು. ರಾಜ್ಯ ಅಧ್ಯಕ್ಷ ಶರಣಪ್ಪ ದೊಡ್ಡಮನಿ, ದಂಡಾಧಿಕಾರಿ ಶ್ರೀನಿವಾಸ್, ಗೌರವ ಅಧ್ಯಕ್ಷ ಸುಬ್ರಮಣ್ಯಗೌಡ ತಾಲ್ಲೂಕು ಘಟಕ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ಬೂದನೂರು ಮಹದೇವ್, ಕಾರ್ಯದರ್ಶಿ ತಸ್ಲೀಮ್, ಸಹಕಾರ್ಯದರ್ಶಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ, ಸರ್ಕಾರ ಯಾವುದೇ ಸಂದರ್ಭದಲ್ಲೂ ಬೀಳಬಹುದು. ಸಿದ್ದರಾಮಯ್ಯನವರು ಈಗಲಾದರೂ ಬಂಡತನ ಬಿಟ್ಟು ತಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಅದೇನೋ ಕಟ್ಟಡದ ನಕ್ಷೆಯನ್ನು ಹಿಡಿದುಕೊಂಡು ಅವರಿಗೆ ವಿವರಣೆ ನೀಡುತ್ತಿದ್ದರು. ಮತ್ತೊಂದು ಕಡೆ ಅನೇಕರು ರಹಸ್ಯ ಸಭೆಗಳನ್ನು ನಡೆಸುತ್ತಿದ್ದಾರೆ. ಇವೆಲ್ಲವನ್ನೂ ಗಮನಿಸಿದರೆ ಸರ್ಕಾರ ಹೇಗೆ ಉಳಿಯುತ್ತದೆ ಎಂದು ಪ್ರಶ್ನಿಸಿದರು. ಇದೇ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿರುವುದಕ್ಕೆ ಸ್ಪಷ್ಟನೆ ನೀಡಿದ ಅವರು, ನಮ ಮತಕ್ಷೇತ್ರವಾದ ಶಿಕಾರಿಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುತ್ತದೆ. ಇಲ್ಲಿ ಟೋಲ್ ಇರುವುದರಿಂದ ರೈತರಿಗೆ ಬಡವರು, ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸಬೇಕೆಂದು ಮನವಿ ಮಾಡಲಾಗಿದೆ. ನಮ ಮನವಿಗೆ ಸ್ಪಂದಿಸಿರುವ ಸಚಿವರು ಶೀಘ್ರದಲ್ಲೇ ಸಭೆ…

Read More

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದು, ಹೊಸ ಚರ್ಚೆಗೆ ಕಾರಣವಾಗಿದೆ. ಭಾನುವಾರವಷ್ಟೇ ತುಮಕೂರಿನಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿ.ವೈ.ವಿಜಯೇಂದ್ರ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ನಡೆದಿದೆ. ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಸ್ಥಳೀಯ ಸಮಸ್ಯೆಗಳ ಕುರಿತು ವಿಜಯೇಂದ್ರ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ . ಆದರೆ ಪ್ರಭಾವಿ ನಾಯಕರ ಗುಪ್ತ ಭೇಟಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದರು. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ತನ್ನ ಶೇಕಡಾ 15ರಷ್ಟು ಮತಗಳನ್ನು (ಮುಸ್ಲಿಂ ಬೆಂಬಲವನ್ನು ಉಲ್ಲೇಖಿಸಿ) ಮೀಸಲಿಟ್ಟಿದೆ ಎಂದು ಹೇಳುತ್ತದೆ. ಇದು ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ. ಕಾಂಗ್ರೆಸ್ ಮುಸ್ಲಿಮರನ್ನು ತನ್ನ ಮತಬ್ಯಾಂಕ್ ಎಂದು ಪರಿಗಣಿಸುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ಅವರು ಹೇಳಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ ಸಂದರ್ಶನದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅವರು, ಮುಸ್ಲಿಮರಿಗೆ ನನ್ನ ಎಚ್ಚರಿಕೆ: ಕಾಂಗ್ರೆಸ್ ನ ಮತ ಬ್ಯಾಂಕ್ ಆಗಬೇಡಿ! ಹಿಂದೂಗಳು ಮತ್ತು ಇತರರಿಗೆ ನನ್ನ ಎಚ್ಚರಿಕೆ: ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಗಳಿಗೆ ಬಲಿಯಾಗಬೇಡಿ ಎಂದು ಬರೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಬೆಂಗಳೂರು: ಜಾತಿ ಜನಗಣತಿಯ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಮೂಲಕ ರಾಜಕೀಯ ಎದುರಾಳಿಗಳಿಗೆ ಠಕ್ಕರ್ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಸಚಿವರು, ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, 2015 ರಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ ಕುರಿತು ಅಭಿಪ್ರಾಯ ಸಂಗ್ರಹಿಸಿದರು. ಸಚಿವ ಎನ್.ಎಸ್.ಬೋಸರಾಜ್, ಭೈರತಿ ಸುರೇಶ್, ಬಿಜೆಪಿಯ ವಿಧಾನಪರಿಷತ್ ಸದಸ್ಯ ರವಿಕುಮಾರ್, ಕಾಂಗ್ರೆಸ್ನ ಶಾಸಕರಾದ ಬಿ.ಕೆ.ಹರಿಪ್ರಸಾದ್, ಅಜಯ್‌ಸಿಂಗ್, ಎಂ.ಆರ್.ಸೀತಾರಾಮ್, ಬಿ.ಜಿ.ಗೋವಿಂದಪ್ಪ, ಶ್ರೀನಿವಾಸ್, ಬೇಳೂರು ಗೋಪಾಲ್‌ಕೃಷ್ಣ, ಗವಿಯಪ್ಪ, ನಾಗರಾಜ್ ಯಾದವ್, ರಾಘವೇಂದ್ರ ಹಿಟ್ನಾಳ್ ಸೇರಿದಂತೆ ಹಲವಾರು ಶಾಸಕರು, ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ನಂತರ ಮುಖ್ಯಮಂತ್ರಿಯವರು ಹಿಂದುಳಿದ ವರ್ಗಗಳ ಮುಖಂಡರ ಜೊತೆಗೂ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದ ಕಾಂತರಾಜು ನೇತೃತ್ವದ ಆಯೋಗ ಹಾಗೂ ಇತ್ತೀಚೆಗೆ ವರದಿಯನ್ನು ಕ್ರೂಢೀಕರಿಸಿ ಸರ್ಕಾರಕ್ಕೆ ಅಧಿಕೃತವಾಗಿ ವರದಿ ಸಲ್ಲಿಸಿದ್ದ ಜಯಪ್ರಕಾಶ್ ಹೆಗ್ಡೆ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸಿ.ಎಸ್.ದ್ವಾರಕಾನಾಥ್, ಮುಖ್ಯಮಂತ್ರಿಯವರ…

Read More

ದಕ್ಷಿಣ ಕನ್ನಡ: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಿನ್ನೆ ಮಂಗಳೂರಿನ ಕೂಳೂರು ಸೇತುವೆ ಬಳಿ ತನ್ನ ಬಿಎಂಡಬ್ಲು ಕಾರಿನಿಂದ ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ ಪತ್ತೆಯಾಗಿದೆ. ಫಲ್ಗುಣಿ ನದಿಯ ಕೂಳೂರು ಸೇತುವೆಯಿಂದ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 52 ವರ್ಷದ ಮುಮ್ತಾಜ್ ಅಲಿ ಉದ್ಯಮಿಯಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಬ್ಲಾಕ್ ಮೇಲ್ ಹಾಗೂ ಹನಿಟ್ರಾಪ್ ನಿಂದ ಅಲಿ ಅವರು ಆತಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More