Author: admin

ತುಮಕೂರು:  ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲೆಯ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಶೀಘ್ರವಾಗಿ ಆದ್ಯತಾ ಪಡಿತರ ಚೀಟಿ(PHH))ಯನ್ನು ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 1201 ಇ–ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ ಮಾಡಲಾಗಿದೆ. ಬಾಕಿ ಉಳಿದ 4,025 ಕಾರ್ಮಿಕರಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಣೆ ಮಾಡಬೇಕು ಎಂದು ತಿಳಿಸಿದರು. ಇ–ಶ್ರಮ್ ನೋಂದಾಯಿತ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ವಿವಿಧ ತಾಲ್ಲೂಕುಗಳ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ಹಿರೇಹಳ್ಳಿ ಎಸ್.ಬಿ.ಐ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯು ಜಿಲ್ಲೆಯ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಗೆ 30 ದಿನಗಳ ಎಲೆಕ್ಟ್ರಿಕ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್ ಸೆಟ್ ದುರಸ್ತಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ ಎಂದು ತರಬೇತಿ ಸಂಸ್ಥೆಯ ನಿರ್ದೇಶಕ ವಾದಿರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ಬರುವ 18 ರಿಂದ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ತರಬೇತಿಗಾಗಿ ನವೆಂಬರ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯನ್ನು ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನೀಡಲಾಗುವುದು. ತರಬೇತಿ ಸಂದರ್ಭದಲ್ಲಿ ಉಚಿತ ಊಟ ಮತ್ತು ವಸತಿ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0816–2243386, 9738351048, 9663680001ನ್ನು ಅರ್ಜಿ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 7ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 7ರಂದು ಜಿಲ್ಲೆಯ ಶಿರಾ ತಾಲೂಕಿನ ನಾದೂರು; ತಿಪಟೂರು ತಾಲೂಕಿನ ಹಾಲ್ಕುರಿಕೆ; ಮಧುಗಿರಿ ತಾಲೂಕಿನ ಚಿನಕವಜ್ರ; ತುಮಕೂರು ತಾಲೂಕಿನ ಅರೇಗುಜ್ಜನಹಳ್ಳಿ ಹಾಗೂ ಮೈದಾಳ; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೋರಗೆರೆ ಹಾಗೂ ಗೋಡೆಕೆರೆ; ಕುಣಿಗಲ್ ತಾಲೂಕಿನ ಬಾಗೇನಹಳ್ಳಿ; ಕೊರಟಗೆರೆ ತಾಲೂಕಿನ ಎಲೆರಾಂಪುರ; ಗುಬ್ಬಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಬ್ಯಾಟರಿ ಚಾಲಿತ ವೀಲ್‌ ಛೇರ್, ಶುಲ್ಕ ಮರುಪಾವತಿ, ಪ್ರೋತ್ಸಾಹಧನ ಸೇರಿ ವಿವಿಧ ಸೌಲಭ್ಯ ನೀಡಲು ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 30ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಬ್ಯಾಟರಿ ಚಾಲಿತ ವೀಲ್‌ ಛೇರ್ ಸೌಲಭ್ಯಕ್ಕಾಗಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿಗೆ ವಿಕಲತೆ (ಈಗಾಗಲೇ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳಿಂದ ಯಂತ್ರಚಾಲಿತ ವಾಹನ ಅಥವಾ ಬ್ಯಾಟರಿ ಚಾಲಿತ ವೀಲ್‌ ಛೇರ್ ಪಡೆಯದಿರುವವರು ಅರ್ಹತೆ ಹೊಂದಿರುತ್ತಾರೆ) ಹೊಂದಿರಬೇಕು. ಅಲ್ಲದೆ, ಎಸ್.ಎಸ್.ಎಲ್.ಸಿ. ಮತ್ತು ನಂತರದ ವ್ಯಾಸಂಗ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ; Cerebral Palsy, Muscular Dystrophy, Parkinsons & Multiple Sclerosis ಅಂಗವಿಕಲತೆ ಹೊಂದಿರುವ ವಿಕಲಚೇತನ ವ್ಯಕ್ತಿಗಳ ಪೋಷಕರು / ಆರೈಕೆದಾರರಿಗೆ ಪ್ರತಿ…

Read More

ತುಮಕೂರು:  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವ, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ…

Read More

ತುಮಕೂರು:  ತುಮಕೂರು ತಾಲ್ಲೂಕು ಕಸಬಾ ಪೂರ್ವ ಹೋಬಳಿ ಬೆಳಗುಂಬ ಗ್ರಾಮದ ಶ್ರೀ ಗುರುಸಿದ್ದರಾಮೇಶ್ವರ ಮಹಾಸ್ವಾಮಿಯವರ ನೂತನ ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಕಾರ್ಯಕ್ರಮವು ನವೆಂಬರ್ 8ರಂದು ಜರುಗಲಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವಾಲಯ ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ 8ರ ಶುಕ್ರವಾರ ಸಂಜೆ 4.30 ಗಂಟೆಗೆ ಶುಭ ಗೋಧೂಳಿ ಸಮಯದಲ್ಲಿ ಗಂಗಾಪೂಜೆ, ಮಹಾಗಣಪತಿಪೂಜೆ ಮೂಲಕ ಪ್ರಾರಂಭಿಸಲಾಗುವುದು. ನಂತರ ಸಂಜೆ 6 ಗಂಟೆಗೆ ಬೆಳ್ಳಾವಿ ಕಾರದೇಶ್ವರಮಠ ಶ್ರೀಶ್ರೀಶ್ರೀ ಕಾರದ ವೀರಬಸವ ಮಹಾಸ್ವಾಮಿ ದಿವ್ಯಸಾನಿಧ್ಯದಲ್ಲಿ ಧ್ವಜಾರೋಹಣ ಹಾಗೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಅಂಗವಾಗಿ ನವೆಂಬರ್ 11ರವರೆಗೂ ಅಭಿಷೇಕ, ಹೋಮ, ಪೂರ್ಣಫಲ ಸಮರ್ಪಣೆ ಸೇರಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕಡೆಯ ದಿನ ನವೆಂಬರ್ 11ರ ಬೆಳಿಗ್ಗೆ 11 ಗಂಟೆಗೆ ಪೂಜಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಜರುಗಲಿದೆ. ದೇವಾಲಯ ಉದ್ಘಾಟನೆ…

Read More

ತುಮಕೂರು : ಜಿಲ್ಲೆಯ ಮಧುಗಿರಿಯ ವಲಯ ಅಬಕಾರಿ ಇಲಾಖೆಯ ಕಚೇರಿಯಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ದಿನದಂದು ನಾಡ ಧ್ವಜವನ್ನು ಹಾರಿಸದೆ, ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ಇರುವುದನ್ನು ಖಂಡಿಸಿ ಸ್ಥಳೀಯ ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಮಧುಗಿರಿ ವಲಯದ ಡಿವೈಎಸ್ಪಿ ಚಂದ್ರಪ್ಪಗೆ ಗೇರಾವ್ ಹಾಕಿದ್ದ ಘಟನೆ ನಡೆದಿತ್ತು. ಕನ್ನಡ ರಾಜ್ಯೋತ್ಸವವು ಕರ್ನಾಟಕದ ನೆಲ ಜಲ ಭಾಷೆ ಸಂಸ್ಕೃತಿ ಪರಂಪರೆಯ ಪ್ರತೀಕ ನಾಡಿನ ಗೌರವ ಸ್ವಾಭಿಮಾನದ ಸಂಕೇತ. ನಮ್ಮ ನಾಡು ನುಡಿಯನ್ನ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯುವ ಪೀಳಿಗೆಗೆ ನಮ್ಮ ನಾಡಿನ ಇತಿಹಾಸ ಸಂಸ್ಕೃತಿ ಮತ್ತು ಕಲೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳಲ್ಲಿ, ಐಟಿ ಬಿಟಿ ಕಂಪನಿಗಳಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿಯೂ ಸಹ ತಪ್ಪದೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ನಮ್ಮ ಹೆಮ್ಮೆಯ…

Read More

ತುಮಕೂರು: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ 1000 ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅಧಿಕಾರಿಗಳಿಗೆ ಸೂಚಿಸಿದರು. ಪಂಚಾಯತ್ ರಾಜ್ ಇಲಾಖೆಗಳ ನಿರ್ವಹಣೆ ಮತ್ತು ದುರಸ್ತಿ, ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ, ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆ ಕಾಮಗಾರಿಗಳ ಪರಿಶೀಲನೆ, ಮುಖ್ಯಮಂತ್ರಿಗಳ ವಿಶೇಷ ಅನುದಾನ, ಆರೋಗ್ಯ, ಆಯುಷ್, ಹಿಂದುಳಿದ ವರ್ಗಗಳ ಕಲ್ಯಾಣ, ಕೃಷಿ, ರೇಷ್ಮೆ, ತೋಟಗಾರಿಕಾ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನವಾಗುತ್ತಿವೆ. ಈ ಎಲ್ಲಾ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು. ಕಾಮಗಾರಿಗಳ ಗುಣಮಟ್ಟದ ದೃಢೀಕರಣವನ್ನು ಸಂಬಂಧಪಟ್ಟ ಇಲಾಖೆಯವರು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ತಿಳಿಸಿದರು. ಮೂಲಭೂತ ಸೌಕರ್ಯಗಳಾದ ಶಾಲೆ, ಅಂಗನವಾಡಿ, ಆರೋಗ್ಯ…

Read More

ಕೊರಟಗೆರೆ: ಕಿಟಕಿ ಬಾಗಿಲು ಇಲ್ಲದ ಕೊಠಡಿಯೊಳಗೆ 250ಜನ ವಿದ್ಯಾರ್ಥಿಗಳ ವಾಸ, ಚಳಿಮಳೆ ಗಾಳಿಯ ಭದ್ರತೆಗೆ ವಿದ್ಯಾರ್ಥಿಗಳು ಮಲಗುವ ಚಾಪೆಯೇ ಆಸರೆ, ಸ್ನಾನ ಮಾಡಲು ನೀರು ಬರೋದಿಲ್ಲ ಇನ್ನೂ ಶೌಚಗಳಿಗೆ ದೇವರೇ ಗತಿ, ಇದು ಕೊರಟಗೆರೆ ತಾಲೂಕು ಹಂಚಿಹಳ್ಳಿ ಗ್ರಾಪಂ ಬಜ್ಜನಹಳ್ಳಿ ಏಕಲವ್ಯ ವಸತಿಶಾಲೆಯ ದುಸ್ಥಿತಿ. ಸ್ವೀಚ್ ಬೋರ್ಡು ಪೀಸ್ ಪೀಸ್ ಆಗಿ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೇ ಕಡಿತವಾಗಿದೆ. ಸಿಸಿಟಿವಿ ಇಲ್ಲದ ಏಕಲವ್ಯ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಭದ್ರತೆಯೇ ಮರೀಚಿಕೆಯಾಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಕೊಠಡಿಯಲ್ಲಿ ಮೃತಪಟ್ಟಿದ್ದ ಏಕಲವ್ಯ ವಸತಿಶಾಲೆಯ ದುಸ್ಥಿತಿ ಇದಾಗಿದೆ. ಏಕಲವ್ಯ ವಸತಿಶಾಲೆಗೆ ಕಾಂಪೌಂಡ್ ಇಲ್ಲದೇ ಒಳಗಡೆ ಯಾರು ಬೇಕಾದ್ರು ಬರಬಹುದು. ವಿದ್ಯಾರ್ಥಿಗಳು ಯಾವಾಗ ಬೇಕಾದ್ರು ಹೊರಗಡೆ ಹೋಗುವ ಅವಕಾಶವಿದೆ. ತುಮಕೂರು ಜಿಲ್ಲಾಧಿಕಾರಿ ಭೇಟಿ ನೀಡಿದ ವೇಳೆ ನಿಲಯದ ಪ್ರಾಂಶುಪಾಲ ಮತ್ತು ವಾರ್ಡನ್ ಅವರನ್ನು ತರಾಟೆಗೆತ್ತಿಕೊಂಡರು. 15ದಿನಗಳ ಒಳಗೆ ಮೂಲಭೂತ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದರು. ಪ್ರಾಂಶುಪಾಲ ಮತ್ತು ವಾರ್ಡನ್ ಅಮಾನತಿಗೆ ತುಮಕೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ವರದಿ:…

Read More

ಬೀದರ್: ಕಮಲನಗರ ಪೊಲೀಸರಿಂದ ಬೀಟ್ ಮಟ್ಟದ ರಸ್ತೆ ಸುರಕ್ಷತಾ ಸಪ್ತಾಹ–2024 ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಮಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಿಎಸ್ ಐ ಚಂದ್ರಶೇಖರ ತಮ್ಮ ಸಿಬ್ಬಂದಿರವರೊಂದಿಗೆ ಕಮಲ ನಗರದಲ್ಲಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸರು ಸದಾ ಪ್ರಯತ್ನಿಸುತ್ತಿದ್ದು, ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಕೋರಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More