Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ತುಮಕೂರು: ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 7 ರಿಂದ 10ರವರೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಕ್ರೀಡಾಕೂಟದಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಿಂದ 19 ವರ್ಷದೊಳಗಿನ 3000 ವಿದ್ಯಾರ್ಥಿಗಳು ರಾಜ್ಯದ ವಿವಿಧ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಲಿದ್ದಾರೆ. ಕ್ರೀಡಾಕೂಟದ ನಿರ್ಣಾಯಕರಾಗಿ 100 ಅಥ್ಲೆಟಿಕ್ಸ್ ಪರಿಣಿತ ತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 7ರಂದು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಉದ್ಘಾಟನೆ ನಂತರ 1,500 ಮೀಟರ್ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ನವೆಂಬರ್ 9ರ ಬೆಳಿಗ್ಗೆ 6 ಗಂಟೆಗೆ ನಗರದ ಹೊರವಲಯದ ಊರ್ಡಿಗೆರೆ ರಸ್ತೆ ಸಿದ್ದಗಂಗಾ ಕ್ರಾಸ್ ನಿಂದ ಬಾಲಕಿಯರಿಗೆ…
ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ(ಯು.ಜಿ)/ಸ್ನಾತಕೋತ್ತರ(ಪಿ.ಜಿ) ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿಗೆ 2024ರ ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಈ ಹಿನ್ನೆಲೆಯಲ್ಲಿ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ನವೆಂಬರ್…
ತುಮಕೂರು: ತುಮಕೂರು ತಾಲ್ಲೂಕು ವ್ಯಾಪ್ತಿಯ ಖಾಸಗಿ ಶಾಲಾ ಆಡಳಿತ ಮಂಡಳಿಗಳು 2024–25ನೇ ಸಾಲಿನ ಆರ್ ಟಿಇ ಶುಲ್ಕ ಮರುಪಾವತಿಗೆ ಆನ್ ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಖಾಸಗಿ ಅನುದಾನರಹಿತ ಶಾಲೆಗಳು 2025ರ ಜನವರಿ 31ರೊಳಗಾಗಿ ಬೇಡಿಕೆ ಪ್ರಸ್ತಾವನೆ ಸಲ್ಲಿಸಬಹುದಾಗಿದೆ ಎಂದು ತುಮಕೂರು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು : ತಾಲೂಕಿನ ಹೊನ್ನೇನಹಳ್ಳಿಯಲ್ಲಿ ರೈಲ್ವೆಗೆ ಜಮೀನು ಸ್ವಾಧೀನಪಡಿಸಿಕೊಂಡಿರುವ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದ್ದಕ್ಕೆ ಸಿಪಿಐ ದಿನೇಶ್ ಕುಮಾರ್, ವಕೀಲ ರವಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರು ವಕೀಲರು ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಕೀಲ ರವಿಕುಮಾರ್ ಮೇಲೆ ಹಲ್ಲೆ ನಡೆಸಿರುವ ಸಿಪಿಐ ದಿನೇಶ್ ಕುಮಾರ್ ಅವರನ್ನು ಅಮಾನತ್ತುಪಡಿಸಬೇಕು ಎಂದು ಆಗ್ರಹಿಸಿದರು. ವಕೀಲ ರವಿಕುಮಾರ್ ಮಾಧ್ಯಮಗಳ ಮುಂದೆ ಮಾತನಾಡಿ, ನಮ್ಮ ಭೂಮಿಯನ್ನು ಯಾವುದೇ ನೋಟೀಸ್ ನೀಡದೆ ವಶಪಡಿಸಿಕೊಂಡಿದೆ. ಇದನ್ನು ಅಧಿಕಾರಿಗಳಿಗೆ ಪ್ರಶ್ನಿಸಿದ್ದಕ್ಕೆ ಏಕಾಏಕಿ ಬಂದ ಸಿಪಿಐ ದಿನೇಶ್ ಕುಮಾರ್ ನನಗೆ ಹೊಡೆದರು ಬೂಟು ಗಾಲಿನಿಂದ ಒದ್ದರು. ಶರ್ಟ್ ಅನ್ನು ಹಿಡಿದು ಕೈದಿಗಳನ್ನು ಎಳೆದುಕೊಂಡು ಬಂದಂತೆ ಎಳೆದರು. ನಾನು ಏನೂ ಮಾಡಲಿಲ್ಲ. ಆದರೂ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದರು. ವಕೀಲರು ಅಂತ ಗೊತ್ತಿದ್ದರೂ ನನ್ನ ಮೇಲೆ ಹೊಡೆದಿದ್ದಾರೆ, ಬಡಿದಿದ್ದಾರೆ. ನನ್ನ ಮೇಲೆ ಹಲ್ಲೆ…
ತುಮಕೂರು: ತಾಲ್ಲೂಕು ವ್ಯಾಪ್ತಿಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಮಂಜೂರಾಗಿ ವಿವಿಧ ಕಾರಣಗಳಿಂದ ರದ್ದಾಗಿರುವ ಮಾಸಾಶನವನ್ನು ಮರು ಚಾಲನೆಗೊಳಿಸಲಾಗುವುದು ಎಂದು ತಹಶೀಲ್ದಾರ್ ರಾಜೇಶ್ವರಿ ತಿಳಿಸಿದ್ದಾರೆ. ತುಮಕೂರು ನಗರದಲ್ಲಿ 3,900 ಹಾಗೂ ಗ್ರಾಮಾಂತರದಲ್ಲಿ 1,748 ಫಲಾನುಭವಿಗಳ ಮಾಸಾಶನವು ವಿವಿಧ ಕಾರಣಗಳಿಂದ ರದ್ದಾಗಿದ್ದು, ರದ್ದಾಗಿರುವ ಫಲಾನುಭವಿಗಳ ಮಾಸಾಶನವನ್ನು ಕೂಡಲೇ ಮರು ಚಾಲನೆಗೊಳಿಸಲಾಗುವುದು. ಮರು ಚಾಲನೆಗಾಗಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ಮಾಸಾಶನ ಆದೇಶದ ಪ್ರತಿ ಹಾಗೂ ಎನ್.ಪಿ.ಸಿ.ಐ. ಲಿಂಕ್ ಪ್ರತಿಯನ್ನು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳು ಅಥವಾ ತಾಲ್ಲೂಕು ಕಚೇರಿಯ ಸಾಮಾಜಿಕ ಭದ್ರತಾ ಯೋಜನಾ ಶಾಖೆಗೆ ನೀಡಿ ರದ್ದಾಗಿರುವ ಮಾಸಾಶನವನ್ನು ಮರು ಚಾಲನೆ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಮತದಾರರ ಅನುಕೂಲಕ್ಕಾಗಿ ನವೆಂಬರ್ 9, 10, 23 ಹಾಗೂ 24ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ವಿಶೇಷ ಆಂದೋಲನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಒ)ಗಳು ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಹಾಜರಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ತೆಗೆದುಹಾಕುವಿಕೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ತಮ್ಮ ನಿವಾಸ ವ್ಯಾಪ್ತಿಯ ಮತಗಟ್ಟೆಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹಾಗೂ ತಮ್ಮ ಮನೆಯ ಸದಸ್ಯರ ಹೆಸರುಗಳು ನಮೂದಾಗಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದಾಗಿದೆ. ಮತದಾರರ ಸೇರ್ಪಡೆಗೆ ನಮೂನೆ 6, ಅನಿವಾಸಿ ಭಾರತೀಯರ ಹೆಸರುಗಳ ಸೇರ್ಪಡೆಗೆ ನಮೂನೆ 6ಎ, ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ/ಹೆಸರು ತೆಗೆದು ಹಾಕಲು ನಮೂನೆ 7 ಮತ್ತು ಮತದಾರರ ನಿವಾಸ ಬದಲಾವಣೆ/ ಪ್ರಸ್ತುತ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ/ ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಎಪಿಕ್ ನೀಡುವಿಕೆ/ ಅಂಗವಿಕಲ ವ್ಯಕ್ತಿ…
ತುಮಕೂರು: ಜಿಲ್ಲೆಯ 9 ತಾಲ್ಲೂಕಿನ 27 ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 30 ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರು ನವೆಂಬರ್ 6ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳು ನವೆಂಬರ್ 12ರೊಳಗಾಗಿ ನಾಮಪತ್ರ ಸಲ್ಲಿಸತಕ್ಕದ್ದು. ನಾಮಪತ್ರಗಳ ಪರಿಶೀಲನೆಯನ್ನು ನವೆಂಬರ್ 13ರಂದು ನಡೆಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 15ರವರೆಗೂ ಅವಕಾಶವಿದ್ದು, ನವೆಂಬರ್ 23ರಂದು(ಮತದಾನದ ಅವಶ್ಯವಿದ್ದರೆ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ ನವೆಂಬರ್ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ನಂತರ ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಯಿAದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲೆಯ ಚಿಕ್ಕನಾಯಕಹಳ್ಳಿ ತಾಲ್ಲೂಕು ದೊಡ್ಡ ಎಣ್ಣೇಗೆರೆ ಹಾಗೂ ಚೌಳಕಟ್ಟೆ; ತಿಪಟೂರು ತಾಲ್ಲೂಕು…
ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ವಕೀಲರು ಸೇರಿದಂತೆ ಜಿಲ್ಲೆಯ ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವವರು ಕುಣಿಗಲ್, ಶಿರಾ, ಮಧುಗಿರಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗಳಿಗೆ 7 ವರ್ಷ ಹಾಗೂ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿರಬೇಕು. ಅರ್ಹ ವಕೀಲರು ತಮ್ಮ ಲಿಖಿತ ಅರ್ಜಿಯೊಂದಿಗೆ ವಕೀಲ ವೃತ್ತಿ ಪೂರೈಸಿರುವ ಬಗ್ಗೆ ದೃಢೀಕರಣ ಪತ್ರ, ವಕೀಲ ವೃತ್ತಿ ನೋಂದಣಿ ದೃಢೀಕರಣ ಪತ್ರ, ವಿದ್ಯಾರ್ಹತೆಗೆ ಸಂಬAಧಿಸಿದ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ನವೆಂಬರ್ 19ರೊಳಗಾಗಿ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರಿಗೆ ಸಲ್ಲಿಸಬೇಕು. ಅವಧಿ ಮೀರಿದ ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸಿಲ್ಲದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು…
ಚಿಕ್ಕನಾಯಕನಹಳ್ಳಿ: ಭಾರತೀಯ ಸಂಸ್ಕೃತಿಯಲ್ಲಿ ಧರ್ಮಕ್ಕೆ ಬಹಳಷ್ಟು ಮಹತ್ವ ಇದೆ. ಧರ್ಮದ ಆದರ್ಶ ಮೌಲ್ಯಗಳು ಜೀವನದ ಶ್ರೇಯಸ್ಸಿಗೆ ಮೂಲ ಶ್ರೀ ಗುರುವಿನ ಕಾರುಣ್ಯದಿಂದ ಬದುಕು ಉಜ್ವಲಗೊಳ್ಳುವುದೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಮಂಗಳವಾರ ತಾಲೂಕಿನ ಕುಪ್ಪೂರು ಗದ್ದಿಗೆ ಮಠದ ಶ್ರೀ ಗುರು ಪಟ್ಟಾಧಿಕಾರ ಮಹೋತ್ಸವದ ಪೂರ್ವಭಾವಿ ಧರ್ಮ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು. ಹಗಲು ಹೊತ್ತಿನಲ್ಲಿ ಸೂರ್ಯ ನಮಗೆ ಬೆಳಕನ್ನು ಕೊಡುತ್ತಾನೆ, ರಾತ್ರಿ ಹೊತ್ತಿನಲ್ಲಿ ಚಂದ್ರ ನಮಗೆ ಬೆಳದಿಂಗಳನ್ನು ಕೊಡುತ್ತಾನೆ. ಆದರೆ ಸರ್ವಕಾಲದಲ್ಲಿ ಸರ್ವರಿಗೂ ಧರ್ಮ ಬಾಳಿಗೆ ಬೆಳಕನ್ನು ತೋರುತ್ತದೆ ವೀರಶೈವ ಧರ್ಮ. ಅತ್ಯಂತ ಪ್ರಾಚೀನವಾದ ಧರ್ಮ ಇದರ ಇತಿಹಾಸ ಪರಂಪರೆ ಅಪೂರ್ವ ವಾದದ್ದು ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರು ಕೊಟ್ಟ ತತ್ವ ಸಿದ್ಧಾಂತಗಳು ಜೀವನ ವಿಕಾಸಕ್ಕೆ ಅಡಿಪಾಯವಾಗಿವೆ ಕುಪ್ಪೂರು ಗದ್ದಿಗೆ ಮಠ ಬಾಳೆಹೊನ್ನೂರು ರಂಭಾಪುರಿ ಪೀಠದ ಶಾಖ ಮಠ ವಾಗಿದ್ದು, ಈ ಭಾಗದಲ್ಲಿ ಗುರುಪೀಠ ಪರಂಪರೆಯನ್ನು ಎತ್ತಿ ಹಿಡಿದ ಶ್ರೀ ಮರುಳಸಿದ್ದೇಶ್ವರರ ಜಾಗೃತಸ್ಥಳ ಹಿಂದಿನ ಲಿಂಗೈಕ್ಯ…
ತುಮಕೂರು: ಜಿಲ್ಲೆ ತಿಪಟೂರು ತಾಲ್ಲೂಕಿನ ಬಳುವನೇರಲು ಗ್ರಾಮಪಂಚಾಯ್ತಿಯಲ್ಲಿ ಅಕ್ರಮವಾಗಿ ಸ್ವಚ್ಚತಾ ಕಾಮಗಾರಿ ಬಿಲ್ ಮಾಡಲಾಗಿದೆ ಎಂದು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ಮಾಡುತ್ತಿರುವ ಆರೋಪ ನಿರಾಧಾರವಾಗಿದ್ದು, ರಾಜಕೀಯ ಪ್ರೇರಿತವಾಗಿ ಸಿದ್ದಯ್ಯ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಳುವನೇರಲು ಗ್ರಾಮಪಂಚಾಯ್ತಿ ಅಧ್ಯಕ್ಷೆ ಲಲಿತಾ ಆಕ್ಷೇಪ ವ್ಯಕ್ತಪಡಿಸಿದ್ದು, ಸದಸ್ಯರ ವರ್ತನೆ ತೀವ್ರ ಖಂಡನೀಯ ಎಂದು ತಿಳಿಸಿದರು. ನಗರದ ಕಲ್ಪತರು ಗ್ರ್ಯಾಂಡ್ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ, ಬಳುವನೇರಲು ಗ್ರಾಮಪಂಚಾಯ್ತಿ ಸದಸ್ಯ ಸಿದ್ದಯ್ಯ ನನ್ನ ಮೇಲೆ ಸುಳ್ಳು ಅರೋಪ ಮಾಡುತ್ತಿದ್ದಾರೆ. ನಮ್ಮ ಗ್ರಾಮಪಂಚಾಯ್ತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ, ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯ್ತಿ ನಿಯಮಗಳಂತೆ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಆಡಳಿತ ನಡೆಸಲಾಗುತ್ತಿದ್ದು, ಸಿದ್ದಯ್ಯ ಎನ್ನುವ ಸದಸ್ಯರು ನಾನು ದಲಿತ ಮಹಿಳೆ ಎನ್ನುವ ಕಾರಣಕ್ಕೆ ಸುಳ್ಳು ಆರೋಪಮಾಡಿ ತೇಜೋವಧೆ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿಯಲ್ಲಿ ಯಾವುದೇ ಕೆಲಸಗಳನ್ನ ಮಾಡದೇ ಬಿಲ್ ಮಾಡಿಕೊಡಿ ಎಂದು ಒತ್ತಾಯಿಸುತ್ತಿದ್ದು, ನನಗೆ ಬಿಲ್ ಮಾಡಿಕೊಡದಿದ್ದರೆ, ಅಧ್ಯಕ್ಷರು ಹಾಗೂ ಪಿಡಿಒ ಮೇಲೆ ಸುಳ್ಳು ದೂರು ನೀಡಿ…