Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಇಸ್ರೇಲ್ ಸೇನೆಯ ವೈಮಾನಿಕ ದಾಳಿಯಿಂದ ಗಾಜಾ ಪಟ್ಟಿಯಲ್ಲಿ 30 ಜನರು ಮೃತಪಟ್ಟಿದ್ದು, ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ ಎಂದು ಪ್ಯಾಲೆಸ್ಟೀನ್ ನ ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ನಸುಕಿನಲ್ಲಿ ಈ ದಾಳಿ ನಡೆದಿದೆ. ದಾಳಿಯಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿ 10 ಜನರು ಮೃತಪಟ್ಟಿದ್ದಾರೆ. ಉತ್ತರ ಗಾಜಾ ಪಟ್ಟಣದ ಬೇತ್ ಲಾಹಿಯಾದಲ್ಲಿ ಸೋಮವಾರ ತಡರಾತ್ರಿ ನಡೆದ ವೈಮಾನಿಕ ಬಾಂಬ್ ದಾಳಿಯಲ್ಲಿ ಎಂಟು ಮಹಿಳೆಯರು ಮತ್ತು ಆರು ಮಕ್ಕಳು ಸೇರಿ 20 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳು ದಾಖಲಾಗಿರುವ ಹತ್ತಿರದ ಆಸ್ಪತ್ರೆಯ ನಿರ್ದೇಶಕ ಹೊಸಮ್ ಅಬು ಸಫಿಯಾ, ಬೆತ್ ಲಾಹಿಯಾ ಪಟ್ಟಣದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿದ್ದ ಮನೆ ಮೇಲೆ ಸೋಮವಾರ ತಡರಾತ್ರಿ ವೈಮಾನಿಕ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಈ ದಾಳಿ ಬಗ್ಗೆ ಇಸ್ರೇಲ್ ಸೇನೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಶಿಗ್ಗಾಂವಿ: ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಹಿರೇಬೆಂಡಿಗೇರಿ ಗ್ರಾಮದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದು ನುಡಿದಂತೆ ನಡೆದ ಕಾಂಗ್ರೆಸ್ ಮತ್ತು ಮಾತಿಗೆ ತಪ್ಪಿದ ಬಿಜೆಪಿ ನಡುವಿನ ಚುನಾವಣೆ. ಈ ಚುನಾವಣೆಯಲ್ಲಿ ಜನರ ಮತಕ್ಕೆ ಗೌರವ ಕೊಟ್ಟ ನಾವು ಗೆಲ್ಲಬೇಕು, ನಿಮ್ಮ ನಂಬಿಕೆಗೆ ದ್ರೋಹ ಬಗೆದ ಬಿಜೆಪಿ ಸೋಲಬೇಕು ಎಂದರು. ರಾಜ್ಯದಲ್ಲಿ ಇವತ್ತಿನವರೆಗೂ ಬಿಜೆಪಿ ಬಹುಮತ ಪಡೆದು ಅಧಿಕಾರ ನಡೆಸಿಲ್ಲ. ಒಂದು ಬಾರಿಯೂ ಬಿಜೆಪಿಗೆ ಬಹುಮತ ಸಿಕ್ಕಿಲ್ಲದ್ದರಿಂದ ಮೂರು ಬಾರಿಯೂ ಕಾಂಗ್ರೆಸ್ ಶಾಸಕರನ್ನು ಖರೀದಿಸಿ ಹಿಂಬಾಗಿಲಿನಿಂದ ಅಧಿಕಾರ ನಡೆಸಿದರು. ಆಪರೇಷನ್ ಕಮಲಕ್ಕೆ ಹಾಕಿದ ಹಣ ರಿಕವರಿ ಮಾಡಲು ಭ್ರಷ್ಟಾಚಾರ ಮಾಡಿದರು ಎಂದು ಆರೋಪಿಸಿದರು. ಬಿಜೆಪಿ ಚುನಾವಣೆ ವೇಳೆ ಕೊಟ್ಟ ಭರವಸೆಗಳಲ್ಲಿ ಶೇ.10 ರಷ್ಟೂ ಈಡೇರಿದಿಲ್ಲ. ನಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಈ ಬಗ್ಗೆ ನಾವು…
ಪಾವಗಡ : ತಾಲ್ಲೂಕಿನ ನಾಲಗಮಾಡಿಕೆ ಹೋಬಳಿಯ ಪಳವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ವಿಕ್ರಂ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕರ 400 ಮೀಟರ್ ಓಟದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಈ ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರಾದ ಕೆಂಚಪ್ಪ ಹೆಚ್., ಸಹಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಗ್ರಾಮಸ್ಥರಿಂದ ಅಭಿನಂದನೆ ಸಲ್ಲಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವರದಿ : ಮಂಜುಸ್ವಾಮಿ ಎಂ.ಎನ್. ತುಮಕೂರು : ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಜ್ಜನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ವಾರ್ಡನ್ ಹಾಗೂ ಶಿಕ್ಷಕರ ನಿರ್ಲಕ್ಷ್ಯದಿಂದ ಅಭಿಷೇಕ್ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕಿನ ಹೋಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಕುನಿತಿಮ್ಮನಹಳ್ಳಿ ಗ್ರಾಮದ ರಮೇಶ್ ಮತ್ತು ಮಂಜುಳಾ ದಂಪತಿಯ ಪುತ್ರ ಅಭಿಷೇಕ್ (13) ದೀಪಾವಳಿ ಹಬ್ಬಕ್ಕೆಂದು ಮನೆಗೆ ಹೋಗಿದ್ದ ಸೋಮವಾರ ಬೆಳಿಗ್ಗೆ ಪುನಃ ವಸತಿ ಶಾಲೆಗೆ ಮೃತ ವಿದ್ಯಾರ್ಥಿ ಬಂದಿದ್ದಾನೆ. ಮಧ್ಯಾಹ್ನದವರೆಗೂ ತರಗತಿಯಲ್ಲಿ ಕುಳಿತು ಪಾಠ ಕೇಳಿದ್ದಾನೆ. ಮಧ್ಯಾಹ್ನದ ಊಟದ ನಂತರ ಸುಸ್ತು ಆಗುತ್ತಿದೆ ಎಂದು ಹೇಳಿ ವಸತಿ ಶಾಲೆಯ ಕೊಠಡಿಗೆ ತೆರಳಿ ಮಲಗಿದ್ದಾನೆ. ಸಹಪಾಠಿಗಳು ವಿಚಾರಿಸಿದಾಗ ಅಭಿಷೇಕ್ ನನಗೆ ತುಂಬಾ ಸುಸ್ತು ಮತ್ತು ಆಯಾಸವಾಗುತ್ತಿದೆ ನಾನು ಮಲಗುತ್ತೇನೆ ಎಂದು ಹೇಳಿದ್ದಾನೆ. ವಸತಿ ಶಾಲೆಯ ಶಿಕ್ಷಕರ ಮತ್ತು…
ಪಾವಗಡ: ಕ್ಷೇತ್ರದ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಈ ದಿನ ₹10 ಕೋಟಿ ರೂಪಾಯಿಗಳ ಅನುದಾನದಲ್ಲಿ ಪಾವಗಡ–ಚಳ್ಳಕೆರೆ ರಸ್ತೆ ಅಭಿವೃದ್ಧಿಗೆ ಶೈಲಾಪುರ ಗ್ರಾಮದ ಬಳಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಕೆ.ಎಸ್.ಪಾಪಣ್ಣ, ಗುತ್ತಿಗೆದಾರರಾದ ಶಂಕರ್ ರೆಡ್ಡಿ, ಪುರಸಭಾ ಸದಸ್ಯರಾದ ಎನ್. ರವಿ, ಮಂಜುನಾಥ್, ಕರಿಯಣ್ಣ, ನಾಗೇಶ್, ಉಗ್ರಪ್ಪ, ಲೋಕೋಪಯೋಗಿ ಇಲಾಖೆಯ AEE ಅನಿಲ್ ಕುಮಾರ್ ರವರು ಸೇರಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಶತಮಾನೋತ್ಸವ ಸಮಿತಿಯ ಅಧ್ಯಕ್ಷರೂ ಆಗಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ(ನ.5) ಜರುಗಿದ ಶತಮಾನೋತ್ಸವ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶತಮಾನೋತ್ಸವ ಆಚರಣೆ ಬರೀ ಬೆಳಗಾವಿ ಕೇಂದ್ರೀಕೃತವಾಗಿರುವುದಿಲ್ಲ; ಪ್ರತಿಯೊಂದು ಕಾರ್ಯಕ್ರಮವು ಇಡೀ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುವುದು. ಅಧಿವೇಶನ ಹಾಗೂ ಗಾಂಧೀಜಿಯವರ ಜೀವನ ಸಾಧನೆ ಕುರಿತು ದೊಡ್ಡ ಪ್ರಮಾಣದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಎಲ್ಲ ವಿವಿ ಗಳಲ್ಲಿ ಗಾಂಧಿ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದು ಪ್ರತಿಪಾದಿಸಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ಪೂರ್ಣಗೊಳಿಸಬೇಕಿದೆ ಎಂದರು. ರಚನಾತ್ಮಕ ಕಾರ್ಯಕ್ರಮ ಆಯೋಜನೆ: ಅರ್ಥಪೂರ್ಣ, ರಚನಾತ್ಮಕ ಕಾರ್ಯಕ್ರಮ ಆಯೋಜಿಸಲು ಗಾಂಧೀವಾದಿಗಳು, ಹಿರಿಯರ ಜತೆ ಚರ್ಚಿಸಿ ಅಧಿವೇಶನದ ಇತಿಹಾಸ ಮರುಸೃಷ್ಟಿ…
ಪಾವಗಡ: ಲಂಬಾಣಿ ಸಮುದಾಯದಲ್ಲಿ ಪ್ರಧಾನ ಹಬ್ಬವಾಗಿ ಹಾಸುಹೊಕ್ಕಾಗಿರುವ ದೀಪಾವಳಿ ಹಬ್ಬವನ್ನು ಪಾವಗಡ ತಾಲ್ಲೂಕಿನ ವಿವಿಧ ತಾಂಡಗಳಲ್ಲಿ ಅಮಾವಾಸ್ಯೆಯ ಶುಕ್ರವಾರ ಮತ್ತು ಪಾಡ್ಯ ಶನಿವಾರಗಳಂದು ವಿಶಿಷ್ಟವಾಗಿ ಆಚರಿಸಲಾಗಿದೆ. ತಾಲ್ಲೂಕಿನ ಮೇಗಳಪಾಳ್ಯ, ಕೆ.ಸೇವಾಲಾಲ್ ಪುರ, ಹೊಸಹಳ್ಳಿ, ನಾಗೇನಹಳ್ಳಿ, ಭೂಪೂರು, ಜಾಜೂರಾಯನಹಳ್ಳಿ, ಉಪ್ಪಾರಹಳ್ಳಿ, ಪಳವಳ್ಳಿ, ಬಾಲಮ್ಮನಹಳ್ಳಿ ತಾಂಡಾಗಳಲ್ಲಿ ಲಂಬಾಣಿ ಸೊಗಡಿನ ದೀಪಾವಳಿ ಕಳೆಕಟ್ಟಿತ್ತು. ಪ್ರತಿವರ್ಷದಂತೆ ದೀಪಾವಳಿಯ ಅಮಾವಾಸ್ಯೆ ಮತ್ತು ಪಾಡ್ಯದ ದಿನಗಳಲ್ಲಿ ನೆರವೇರಿದ ಸಡಗರ ಸಂಭ್ರಮದ ಸಾಂಪ್ರದಾಯಿಕ ಲಂಬಾಣಿ ಹಬ್ಬದಲ್ಲಿ ಹಿರಿಯ ಕಿರಿಯಾದಿಯಾಗಿ ಎಲ್ಲರೂ ಭಾಗವಹಿಸಿ ಜ್ಞಾನದ ದೀಪಗಳನ್ನು ಹಚ್ಚುವ ಮೂಲಕ ತಮ್ಮ ಪರಂಪರೆಗೆ ಬೆಳಗನ್ನು ತಂದರು. ಈ ಹಬ್ಬವು ಸಮುದಾಯಕ್ಕೆ ದೊಡ್ಡ ಹಬ್ಬವಾಗಿದ್ದು, ಜೀವನೋಪಾಯ ನಿಮಿತ್ತ ವಿವಿಧ ಪ್ರದೇಶಗಳಿಗೆ ವಲಸೆ ಹೋಗಿರುವವರು, ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವವರು ತಪ್ಪದೆ ಸ್ವಗ್ರಾಮ ತಾಂಡಗಳಿಗೆ ಆಗಮಿಸಿ ಒಂದುಗೂಡಿ ಸಾಮೂಹಿಕ ಹಬ್ಬ ಆಚರಣೆ ಮಾಡುತ್ತಿದ್ದುದ್ದು ಕಂಡುಬಂದಿತು. ಹಬ್ಬ ಆಚರಣೆಯ ದಿರುಸು: ಆಧುನಿಕತೆಯ ವ್ಯಾಮೋಹದ ನಡುವೆಯೂ ಲಂಬಾಣಿ ದಿರುಸುಗಳು ಯುವತಿಯರನ್ನು ಆಕರ್ಷಿಸುತ್ತವೆ. ತಾಂಡಾದಲ್ಲಿನ ಹಿರಿಯ ಮಹಿಳೆಯರು ಹಬ್ಬಕ್ಕೆ ಹಲವಾರು ಹಲವಾರು ತಿಂಗಳು…
ತುಮಕೂರು: ”ವಿಶ್ವ ವಿಕಲಚೇತನರ ದಿನಾಚರಣೆ” ಅಂಗವಾಗಿ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳ ಶಿಕ್ಷಕರಿಗೆ “ರಾಜ್ಯ ಪ್ರಶಸ್ತಿ” ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ನಮೂನೆಯನ್ನು ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ನವೆಂಬರ್ 11ರೊಳಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಹುಬ್ಬಳ್ಳಿ: ಇಲ್ಲಿನ ಜೈನ್ ಬೋರ್ಡಿಂಗ್ ನಲ್ಲಿ ಚಾತುರ್ಮಾಸ ಆಚರಿಸುತ್ತಿರುವ ಮುನಿಶ್ರೀ ಪುಣ್ಯಸಾಗರ್ ಜಿ. ಮಹಾರಾಜ ರವರ ನೇತೃತ್ವದಲ್ಲಿ ಇಲ್ಲಿ ಜರುಗಿದ ರತ್ನತ್ರೆಯ ವಿಧಾನ ಹಾಗೂ ಮೃತ್ಯುಂಜಯ ಆರಾಧನಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ ಸಚಿವ ಡಿ.ಸುಧಾಕರ್ ಮುನಿ ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಜೈನ ಬೋರ್ಡಿಂಗ್ ಅಧ್ಯಕ್ಷ ವಿದ್ಯಾಧರ ಪಾಟೀಲ್ ಕಮಿಟಿ ಸದಸ್ಯ ಸದಸ್ಯರು ಸಚಿವ ಡಿ.ಸುಧಾಕರ್ ಅವರನ್ನು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ದಿಗಂಬರ ಜೈನಮಹಿಳಾ ಸಮಾಜದ ಅಧ್ಯಕ್ಷರಾದ ತ್ರಿಶಾಲ ಮಾಲಾಗುತ್ತಿ, ಆರ್.ಟಿ.ತವನಪ್ಪ ಜಿ.ಜಿ ಲೋಬಾಗೋಳ, ಸುಭದ್ರಮ್ಮ ಮುತ್ತಿನ, ದೇವೇಂದ್ರಪ್ಪ ಕಾಗೆನವರ್, ವಿಮಲಚಂದ್ರ ಸಂಘಮಿ, ಪ್ರಶಾಂತ್ ಬಿ .ಶೆಟ್ಟಿ ,ಸ್ಮಿತಾ ವಾಕಳೆ ,ಮಹಾವೀರ ಮಣಕಟ್ಟಿ, ಉದಯ್ ದಡತಿ, ಪಂಕಜ ಸೂಜಿ, ಸೇರಿದಂತೆ ಜೈನ ಸಮಾಜದ ವಿವಿಧ ಘಟಕಗಳ ಪದಾಧಿಕಾರಿಗಳು, ಜೈನ ಮಹಿಳಾ ಸಂಘಟನೆಗಳು, ಸೇರಿದಂತೆ ಶ್ರಾವಕ -ಶ್ರಾವಕಿಯರು ಭಾಗವಹಿಸಿದ್ದರು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಕೊರಟಗೆರೆ: ಏಕಲವ್ಯ ವಸತಿಶಾಲೆಯ ಕೊಠಡಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ.ನ ಬಜ್ಜನಹಳ್ಳಿಯಲ್ಲಿ ನಡೆದಿದೆ. ಅಭಿಷೇಕ್(14) ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಜಿಲ್ಲಾಧಿಕಾರಿ ಶುಭಕಲ್ಯಾಣ್ ಏಕಲವ್ಯ ವಸತಿ ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಾಂಶುಪಾಲ ವಿನೋದ್ ಮತ್ತು ವಾರ್ಡನ್ ಮಂಜುನಾಥ ಅಮಾನತಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ, ಪೊಲೀಸ್ ಮತ್ತು ವಿಧಿವಿಜ್ಞಾನ ತನಿಖಾತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ವಿರುದ್ಧ ಪೋಷಕರ ಆಕ್ರೋಶ: ವಸತಿ ಶಾಲೆಯ ಕೊಠಡಿಯಲ್ಲಿ ರಕ್ತಕಾರಿಕೊಂಡು ವಿದ್ಯಾರ್ಥಿ ಸಾವನ್ನಪ್ಪಿದ್ದು, ವಿದ್ಯಾರ್ಥಿಗೆ ಸರಿಯಾದ ಸಮಯದಲ್ಲಿ ಪ್ರಥಮ ಚಿಕಿತ್ಸೆ ನೀಡಿಲ್ಲ, ಏಕಲವ್ಯ ವಸತಿಶಾಲೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಾಂಶುಪಾಲ ಮತ್ತು ವಾರ್ಡನ್ 3 ದಿನದ ರಜೆಯಲ್ಲಿರುವುದೇ ಈ ನಿರ್ಲಕ್ಷ್ಯಕ್ಕೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರಾಂಶುಪಾಲ ಮತ್ತು ವಾರ್ಡನ್ ವಿರುದ್ದ ಕೊರಟಗೆರೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ಕೊರಟಗೆರೆ ಸಾರ್ವಜನಿಕ…