Author: admin

ತುಮಕೂರು: ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ನೀಡಲು ರಾಜ್ಯ ಸರ್ಕಾರದ ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟ್ಲ್ https://ssp.postmatric.karnataka.gov.in/ ಮೂಲಕ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ದೂರವಾಣಿ ಸಂಖ್ಯೆ: 0816-2270029ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಸದ್ಯ ವೃಷಭ ರಾಶಿಯಲ್ಲಿ ಸಂಚಾರ ಮಾಡುತ್ತಿರುವ ಗುರು ಮುಂದಿನ ವರ್ಷ ಮೇ ಅಂತ್ಯದವರೆಗೆ ಇದೇ ರಾಶಿಯಲ್ಲಿ ಇರುತ್ತಾನೆ. ಅದೃಷ್ಟ, ದೈವಾನುಗ್ರಹ, ಧನ, ಸಂತಾನ, ಮನೆ, ಶುಭಕಾರ್ಯಗಳಿಗೆ ಕಾರಣನಾದ ಗುರು ವೃಷಭ ರಾಶಿಯಲ್ಲಿ ಸಂಚರಿಸುವವರೆಗೆ ವೃಷಭ…

Read More

ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ಇಂದು ಚಂದ್ರಘಂಟಾ(ಮೀನಾಕ್ಷಿ) ಅಲಂಕಾರ ಮಾಡಲಾಗುವುದು ಎಂದು ದಸರಾ ಉತ್ಸವ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ 5:30 ಗಂಟೆಯಿಂದ ಬ್ರಾಹ್ಮೀ ಮುಹೂರ್ತದಲ್ಲಿ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶರಾಧನೆ, ದೇವಿಗೆ ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, ಶ್ರೀ ವನದುರ್ಗಾ ಹೋಮ, ಲಘು ಪೂರ್ಣಾಹುತಿ, ಅಷ್ಟಾವದಾನ ಸೇವೆ, ಮಂತ್ರಪುಷ್ಪ ರಾಷ್ಟ್ರಾಶೀರ್ವಾದ, ಬೆಳಿಗ್ಗೆ 9:30 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 4:30 ಗಂಟೆಗೆ ವೇದಪಾರಾಯಣ, ದುರ್ಗಾಸಪ್ತಶಶಿ ಪಾರಾಯಣ, ಅಷ್ಟಾವದಾನ, ಕುಂಕುಮಾರ್ಚನೆ ರಾ.7:30 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಸೂಚನೆ ಮೇರೆಗೆ ನೈಋತ್ಯ ರೈಲ್ವೆ ಇಲಾಖೆಯು LDCE ಹಾಗೂ GDCE (Limited Departmental Competitive Exam & General Departmental Competitive Exam) / ಮುಂಬಡ್ತಿಗೆ ಸಂಬಂಧಿಸಿದ ಇಲಾಖಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸಲು ಅಧಿಸೂಚನೆ ಹೊರಡಿಸಿದೆ. ಈ ಮೊದಲು ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿತ್ತು. ಇದೀಗ ಇವುಗಳ ಜೊತೆಗೆ, ಕನ್ನಡದಲ್ಲಿಯೂ ಸಹ ಪರೀಕ್ಷೆ ನಡೆಸಲಾಗುವುದು. ಇದರಿಂದ ಕನ್ನಡಿಗ ಪರೀಕ್ಷಾರ್ಥಿಗಳಿಗೆ ಸ್ವಭಾಷೆಯಲ್ಲಿ ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವುದು. ಈಗಾಗಲೇ ರೈಲ್ವೆ ಇಲಾಖೆಗೆ ಸೇರಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಸಚಿವರ ಈ ಸೂಚನೆಯಿಂದ ನೌಕರರು ಇಲಾಖೆಗೆ ಸೇರಿದ ನಂತರವೂ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಅನೇಕ ಕನ್ನಡಿಗ ನೌಕರರಿಗೆ ಈ ಅವಕಾಶ ವರಪ್ರದವಾಗಿದೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ವಿವಿಯಲ್ಲಿ ಸ್ನಾತಕೋತ್ತರ ಜೈನ ಡಿಪ್ಲೋಮ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಎರಡು ಸೆಮಿಸ್ಟರ್ ಗಳ ಈ ಕೋರ್ಸ್ ನ ಪ್ರತಿ ಸೆಮಿಸ್ಟರ್ ನಲ್ಲಿಎರಡು ಪತ್ರಿಕೆ ಇರುತ್ತವೆ. ವಾರಕ್ಕೆಎರಡು ದಿನ ತಲಾ ಎರಡು ಗಂಟೆಗಳ ತರಗತಿ ನಡೆಯಲಿದೆ. ವಯಸ್ಸಿನ ನಿರ್ಬಂಧವಿಲ್ಲ. ಯಾವುದೇ ಪದವೀಧರರಾದರೂ ಸೇರಬಹುದು.ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ವಿವಿಯ ವೆಬ್ ಸೈಟ್: http://tumkuruniversity.ac.in/ ಅರ್ಜಿ ಸಲ್ಲಿಸಬಹುದು. ಆಸಕ್ತರು ಡಾ.ವೆಂಕಟರೆಡ್ಡಿರಾಮರೆಡ್ಡಿ: 8904464268, ಡಾ.ಎಸ್.ಪಿ.ಪದ್ಮಪ್ರಸಾದ್: 9448768567 ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಮನುಷ್ಯ ಮತ್ತು ಸಕಲ ಜೀವಸಂಕುಲಗಳು ಬದುಕುಳಿಯಬೇಕಾದರೆ ಪರಿಸರವನ್ನು ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ತಿಳಿಸಿದರು. ನಗರದ ಎಂಪ್ರೆಸ್ ಶಾಲೆ ಸಭಾಂಗಣದಲ್ಲಿಂದು ನಡೆದ 70ನೇ ವನ್ಯಜೀವಿ ಸಪ್ತಾಹ ಕಾರ್ಯ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಅಭಿವೃದ್ಧಿ ಹೆಸರಿನಲ್ಲಿ ಪರಿಸರವನ್ನು ನಾಶಮಾಡಿರುವ ಪರಿಣಾಮ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗಿದ್ದು, ಪ್ರಪಂಚದ ಹಸಿರು ಪದರ ಶೇಕಡಾ 30ರಷ್ಟಿದ್ದು, ದೇಶದಲ್ಲಿ ಶೇ.21.6, ರಾಜ್ಯದಲ್ಲಿ ಶೇ.21.2 ಹಾಗೂ ಜಿಲ್ಲೆಯಲ್ಲಿ ಶೇ.15ರಷ್ಟು ಮಾತ್ರ ಇದೆ. ಹಸಿರು ಪದರದ ಶೇಕಡ ಪ್ರಮಾಣ ಕಡಿಮೆಯಾಗಿ ಅನೇಕ ಜೀವ ಪ್ರಭೇದಗಳು ನಾಶದ ಅಂಚಿಗೆ ಬಂದು ನಿಂತಿವೆ. ಅರಣ್ಯ ನಾಶವಾದರೆ ವನ್ಯ ಜೀವಿಗಳೂ ಸಹ ನಾಶವಾಗುತ್ತವೆ. ವನ್ಯಜೀವಿಗಳನ್ನು ಸಂರಕ್ಷಿಸದಿದ್ದರೆ ಮುಂದಿನ ಪೀಳಿಗೆಯು ಪುಸ್ತಕ ಹಾಗೂ ಚಿತ್ರಗಳಲ್ಲಿ ಮಾತ್ರ ವನ್ಯ ಜೀವಿಗಳನ್ನು ನೋಡುವಂತಾಗುತ್ತದೆ ಎಂದರು. ಜಿಲ್ಲೆಯಲ್ಲಿ ಶೇಕಡಾ 15ರಷ್ಟು ಮಾತ್ರ ಹಸಿರು ಪದರವಿದ್ದು, ಹೆಚ್ಚಿನ ಗಿಡ-ಮರಗಳನ್ನು ಬೆಳೆಸಿ ಸಂರಕ್ಷಿಸಿ ಹಸಿರು ಪದರದ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಅರಣ್ಯ ಪ್ರದೇಶ…

Read More

ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ/ಯುವತಿಯರಿಗೆ ಉಚಿತವಾಗಿ ಫಾಸ್ಟ್ ಫುಡ್ ತಯಾರಿಕೆ ಕುರಿತು 10 ದಿನಗಳ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ಅಕ್ಟೋಬರ್ 21 ರಿಂದ ಆರಂಭವಾಗಲಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿರಬೇಕು ಹಾಗೂ ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿ ಸಮ್ಮುಖದಲ್ಲಿ ನಡೆದ ಶ್ರೀ ವಾಗ್ದೇವಿ ಹೋಮದಲ್ಲಿ ಇಂದು ಬೆಳಿಗ್ಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಭಾಗಿಯಾಗಿ ಪೂಜೆ ಸಲ್ಲಿಸಿದರು. ಮಾತೆ ದುರ್ಗೆಯ ಎರಡನೇ ಸ್ವರೂಪವಾದ ಬ್ರಹ್ಮಚಾರಿಣಿ ಅಲಂಕಾರದಲ್ಲಿದ್ದ ಚಾಮುಂಡೇಶ್ವರಿ ದೇವಿಯ ದರ್ಶನವನ್ನು ಸಚಿವರು ಪಡೆದು ಲಘು ಪೂರ್ಣಾಹುತಿ, ಅಷ್ಟವದಾನ ಸೇವೆ, ವಿಶೇಷ ಪೂಜೆ ನೆರವೇರಿಸಿದರು. ನವರಾತ್ರಿಯ ಎರಡನೇ ದಿನ ದೇವಿ ದುರ್ಗೆಯನ್ನು ಬ್ರಹ್ಮಚಾರಿಣಿ ರೂಪದಲ್ಲಿ ಪೂಜಿಸಲಾಗುತ್ತದೆ. ಬಹಳ ಕಠಿಣವಾದ ತಪಸ್ಸು ಮಾಡಿದ ಕಾರಣದಿಂದಾಗಿ ದೇವಿಗೆ ತಪಶ್ಚಾರಿಣೀ ಅರ್ಥಾತ್ ಬ್ರಹ್ಮಚಾರಿಣೀ ಎನ್ನುವ ಹೆಸರು ಬಂದಿದೆ. ಕೈಯಲ್ಲಿ ಗುಲಾಬಿ ಧರಿಸಿರುವ ದೇವಿಯು ಒಂದು ಕೈಯಲ್ಲಿ ಜಪಮಾಲೆ ಹಾಗೂ ಇನ್ನೊಂದು ಕೈಯಲ್ಲಿ ಕಮಂಡಲವನ್ನು ಹಿಡಿದುಕೊಂಡಿರುತ್ತಾಳೆ. ಇಂದು ಪ್ರಗತಿಯ ಸಂಕೇತವಾಗಿರುವ ಹಸಿರು ವಸ್ತçವನ್ನು ಧರಿಸಿ ದೇವಿಯನ್ನು ಪೂಜಿಸಿದಲ್ಲಿ ಸುಖ, ಶಾಂತಿ, ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ. ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುವ ಅಮರ ಶಿಲ್ಪಿ ಜಕಣಾಚಾರಿ…

Read More

ಬೆಂಗಳೂರು: ಪ್ಲೈವುಡ್ ಅಂಗಡಿ ಅಂಗಡಿಯವರ ಜೊತೆಗೆ ಕುಡಿದು ಬಂದು ಜಗಳ ವಾಡಿದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಸುಜಿತ್ (22) ಹತ್ಯೆಯಾದ ಯುವಕನಾಗಿದ್ದಾನೆ. ಈತ ಬಿಹಾರ ಮೂಲದ ಯುವಕ ಎಂದು ತಿಳಿದು ಬಂದಿದೆ. ಮೈಕೋಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಳೇಕಲ್ಲಹಳ್ಳಿಯಲ್ಲಿರುವ ಪ್ಲೈವುಡ್ ಅಂಗಡಿಯಲ್ಲಿ ಸುಜಿತ್ ಈ ಹಿಂದೆ ಕೆಲಸ ಮಾಡುತ್ತಿದ್ದನು. ಕೆಲಸದ ವೇಳೆ ಮದ್ಯಪಾನ ಮಾಡಿ ಬರುತ್ತಿದ್ದರಿಂದ ಮಾಲೀಕರು ಆತನನ್ನು ಕೆಲಸದಿಂದ ತೆಗೆದಿದ್ದರು. ಹಾಗಾಗಿ ಸುಜಿತ್ ಬೇರೆಕಡೆ ಕೆಲಸಮಾಡುತ್ತಿದ್ದ. ಈ ಪ್ಲೈವುಡ್ ಅಂಗಡಿಯಲ್ಲಿ ನಿನ್ನೆ ನಾಲ್ವರು ಕೆಲಸಗಾರರು ಮರಗೆಲಸ ಮಾಡುತ್ತಿದ್ದರು ರಾತ್ರಿ 8 ಗಂಟೆ ಸುಮಾರಿನಲ್ಲಿ ಇಬ್ಬರು ಕೆಲಸಗಾರರು ಹೊರಗೆ ಹೋಗಿದ್ದರು. ಆ ಸಂದರ್ಭದಲ್ಲಿ ಸುಜಿತ್ ಪ್ಲೈವುಡ್ ಅಂಗಡಿ ಬಳಿ ಕುಡಿದು ಬಂದು ಇಬ್ಬರು ಕೆಲಸಗಾರರ ಜೊತೆ ಜಗಳವಾಡಿದ್ದಾನೆ. ಮಾತಿಗೆಮಾತು ಬೆಳೆದು ವಿಕೋಪಕ್ಕೆ ಹೋದಾಗ ರಿಪೀಸ್ ಪಟ್ಟಿಯಿಂದ ಕೆಲಸಗಾರರು ಸುಜಿತ್ ತಲೆಗೆ ಹೊಡೆದು, ಕುತ್ತಿಗೆ ಹಿಸುಕಿದಾಗ ಉಸಿರುಗಟ್ಟಿ ಸುಜಿತ್ ಮೃತಪಟ್ಟಿದ್ದಾನೆ. ಇದರಿಂದ ಗಾಬರಿಯಾದ ಇಬ್ಬರು…

Read More

ಬೆಂಗಳೂರು: ಮುಡಾ ಪ್ರಕರಣದ ಮೊದಲ ಆರೋಪಿ ಸಿಎಂ ಸಿದ್ದರಾಮಯ್ಯ ಮೈಸೂರು ದಸರಾ ಉದ್ಘಾಟಿಸಿದ್ದು, ನಾಡಿಗೆ ಕಪ್ಪುಚುಕ್ಕೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಳಂಕಿತ ಮುಖ್ಯಮಂತ್ರಿ ಹಣೆಪಟ್ಟಿ ಹೊತ್ತಿರುವ ನೀವು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿದರೆ ನಾಡಿಗೆ ಅಪಕೀರ್ತಿ ಎಂದು ಹೇಳಿದೆ. ಹಲವು ಹಗರಣಗಳಲ್ಲಿ ಮುಳುಗಿ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಿದ್ದರಾಮಯ್ಯನವರು ಕರುನಾಡ ಜನರ ಆತ್ಮಸಾಕ್ಷಿಗೆ ದ್ರೋಹ ಬಗೆಯಬಾರದು. ಅಶುದ್ಧ ಕೈಗಳಿಂದ ನಾಡಹಬ್ಬ ದಸರಾ ಉದ್ಘಾಟನೆ ಮಾಡಿದ್ದು ಸರಿಯೇ ಎಂದು ಜೆಡಿಎಸ್ ಪ್ರಶ್ನಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More