Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ತುಮಕೂರು: ನಟ ದರ್ಶನ್ ಅವರು ಗುರು ರಾಘವೇಂದ್ರ ಸನ್ನಿದಾನದಲ್ಲಿ ಗೋಮಾತೆ ಪೂಜೆ ನೆರವೇರಿಸಿದರೆ ದೋಷ ನಿವಾರಣೆ ಆಗಲಿದೆ ಎಂದು ತುಮಕೂರಿನ ಮೂಕಾಂಬಿಕೆ ದೇವಿಯ ಉಪಾಸಕರಾಗಿರುವ ಡಾ.ಲಕ್ಷ್ಮೀಕಾಂತ ಆಚಾರ್ಯ ಭವಿಷ್ಯ ನುಡಿದಿದ್ದಾರೆ. ದರ್ಶನ್ ಜಾಮೀನು ಬಗ್ಗೆ ಭವಿಷ್ಯ ಹೇಳಿದ್ದ ಮೂಕಾಂಬಿಕೆ, ಮೂಕಾಂಬಿಕೆ ಭವಿಷ್ಯ ನುಡಿದ ದಿನವೇ ದರ್ಶನ್ ಗೆ ಜಾಮೀನು ಸಿಕ್ಕಿತ್ತು. ರಾಯರ ದರ್ಶನ ಮಾಡಿದ್ರೆ ಒಳಿತು.ದರ್ಶನ್ ಗೆ ರಾಯರ ಅನುಗ್ರಹವಾಗಬೇಕಿದೆ ಎಂದಿದ್ದಾರೆ. ಈ ವಿಚಾರದಲ್ಲಿ ದರ್ಶನ್ ನಿರ್ಲಕ್ಷ್ಯ ಮಾಡಬಾರದು. ರಾಯರ ಸನ್ನಿದಿಯಲ್ಲಿ ಗೋಪೂಜೆ ಮಾಡಿದ್ರೆ ಆರೋಗ್ಯ ಸರಿ ಹೋಗುತ್ತೆ. 2027ರವರೆಗೂ ದರ್ಶನ್ ಗೆ ತೊಂದರೆ ತಪ್ಪಿದಲ್ಲ. 2027ರ ನಂತರ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಿನಿಮಾ ಕೆರಿಯರ್ ಬಗ್ಗೆ ಸ್ವಲ್ಪದಿನ ಕಾಯಬೇಕಿದೆ ಎಂದಿದ್ದಾರೆ. ನಟ ದರ್ಶನ್ ಗೆ ಗುರುದೋಷ ಇದೆ. ದೋಷ ನಿವಾರಣೆ ಮಾಡಿಕೊಂಡ್ರೆ ಮಾತ್ರ ಆರೋಗ್ಯ ಸುಧಾರಣೆ ಆಗಲಿದೆ. ದರ್ಶನ್ ಗೆ ಗುರು ರಾಯರ ಆಶೀರ್ವಾದ ಬೇಕಿದೆ. ದರ್ಶನ್ ಆರೋಗ್ಯದ ಬಗ್ಗೆ ಮೂಕಾಂಬಿಕೆ ದೇವಿ ಸೂಚನೆ ನೀಡಿತ್ತು. ಈಗ ದರ್ಶನ ಆರೋಗ್ಯ…
ಬೀದರ್: 30 ಗ್ರಾಂ.ನ ಚಿನ್ನದ ಸರ ಕಳೆದುಕೊಂಡ ಮಹಿಳೆಗೆ ಪೊಲೀಸರು ತಕ್ಷಣವೇ ಸ್ಪಂದಿಸಿ, ಚಿನ್ನದ ಸರವನ್ನು ಪತ್ತೆ ಮಾಡಿ ಹಸ್ತಾಂತರಿಸಿರುವ ಘಟನೆ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವಕಲ್ಯಾಣದ ಮಹಿಳಾ ಗ್ರಾಹಕರೊಬ್ಬರು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಅಂಗಡಿಗಳಿಗೆ ಬಂದಿದ್ದು, ಬೇರೆ, ಬೇರೆ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದರು, ಬಳಿಕ ಮನೆಗೆ ಹೋಗುವ ಸಮಯದಲ್ಲಿ 30 ಗ್ರಾಂ. ಬಂಗಾರದ ಆಭರಣವನ್ನು ಕಳೆದುಕೊಂಡಿರುತ್ತಾರೆ. ಎಷ್ಟು ಹುಡುಕಾಡಿದರೂ ಸಿಗದ ಕಾರಣ ಅವರು ಬಸವಕಲ್ಯಾಣದ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವರ್ತರಾದ ಪಿ.ಎಸ್.ಐ ಅಂಬರೀಶ ರವರು ತಮ್ಮ ಠಾಣೆಯ ನಿಪೂಣ ಅಪರಾಧ ವಿಭಾಗದ ಸೀಮನ್, ಅಶೋಕ, ಗೌಸುದ್ದಿನ್, ಫ್ರಾನ್ಸಿಸ್, ವಿನೋದ ರವರ ಒಂದು ತಂಡವನ್ನು ರಚಿಸಿದ್ದು, ತಂಡವು ಕಾರ್ಯ ಪ್ರವರ್ತಗೊಂಡಿದ್ದು, ಸಿಬ್ಬಂದಿಯವರು ಮಹಿಳೆಯು ಯಾವ ಯಾವ ಅಂಗಡಿಗಳಲ್ಲಿ ಖರೀದಿಸಿದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿಯಲ್ಲಿರುವ ಸಿ.ಸಿ ಟಿ.ವಿಯನ್ನು ಪರಿಶೀಲಿಸಿ ಬಂಗಾರವು ಬಿದ್ದಿದ್ದನ್ನು ಗಮನಿಸಿ ಚಿನ್ನದ ಸರವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.…
ಪಾವಗಡ: ದೇವಲಕೆರೆ ಗ್ರಾಮದಲ್ಲಿವಿಶ್ವಕ್ಕೆ ಮಹಾನ್ ಗ್ರಂಥ ರಾಮಾಯಣವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಗ್ರಾಮದಲ್ಲಿ ನಡೆಯಿತು. ವಿಶ್ವಕವಿ ಸಮಾನತೆಯ ಹರಿಕಾರ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿ ನಿಡಗಲ್ಲು ವಾಲ್ಮೀಕಿ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ, ಸೂರ್ಯ ಚಂದ್ರ ಭೂಮಿ ಇರುವರೆಗೂ ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಅಜರಾಮರವಾಗಿರುತ್ತದೆ. ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣದಿಂದ ಶ್ರೀ ರಾಮನ ತತ್ವ ಆದರ್ಶಗಳು ಜಗತ್ತಿನಲ್ಲಿ ತಿಳಿಯುತ್ತವೆ. ಇಂತಹ ಮೇರು ಕೃತಿಯನ್ನು ಬರೆದ ವಾಲ್ಮೀಕಿ ರಾಮಾಯಣ ಪುಸ್ತಕವನ್ನು ಎಲ್ಲರೂ ಓದಿ ತಿಳಿದುಕೊಳ್ಳಬೇಕು. ಸರ್ವ ಜನಾಂಗಗಳು ಮಹರ್ಷಿ ವಾಲ್ಮೀಕಿಯನ್ನು ಪೂಜಿಸುವಂತಹ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕ ಜಿಲ್ಲಾ ಅಧ್ಯಕ್ಷ ಪಾಳೆಗಾರ್ ಲೋಕೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಆದಿಲಕ್ಷ್ಮಿ ನರಸಿಂಹ ನಾಯಕ್, ಗ್ರಾಮ ಪಂಚಾಯಿತಿ ಸದಸ್ಯ ಸಂಜೀವ ರೆಡ್ಡಿ, ಮಾಜಿ ಗ್ರಾಮ…
ತುಮಕೂರು: ರಾಷ್ರೀಯ ಹಾಗೂ ರಾಜ್ಯಹಬ್ಬಗಳ ಆಚರಣೆಯ ದಿನಗಳನ್ನುರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯವು ಆಯೋಜಿಸಿದ್ದ 69ನೆಯ ಕನ್ನಡರಾಜ್ಯೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆ ಆಡಳಿತ ಭಾಷೆಯಾಗಬೇಕು.‘ಕನ್ನಡ ಮಾತನಾಡಿ, ಕನ್ನಡದಲ್ಲೇ ವ್ಯವಹರಿಸಿ’ಎಂದುಕಡ್ಡಾಯ ಮಾಡುವ ಕಾಲದಲ್ಲಿ ನಾವಿರುವುದು ಬೇಸರದ ಸಂಗತಿ,ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದರು. ಒತ್ತಾಯಪೂರ್ವಕವಾಗಿಯಾವುದೇ ಭಾಷೆಯನ್ನುಯಾರ ಮೇಲೂ ಹೇರುವ ಬದಲು,ಕನ್ನಡದ ನೆಲ, ಜಲ, ಗಾಳಿಯ ಮಹತ್ವ ತಿಳಿದು, ಭಾಷೆಯನ್ನು ಬಳಸಿ, ಉಳಿಸಿದರೆ ಅವರೂ ಕನ್ನಡತಾಯಿಯ ಮಕ್ಕಳು.ಕರ್ನಾಟಕದಗಡಿ ಭಾಗಗಳಲ್ಲಿ ಕನ್ನಡ ಭಾಷೆ ಮಾಯವಾಗುತ್ತಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ವಿವಿ ಕುಲಸಚಿವೆ ನಾಹಿದಾ ಜಮ್ ಜಮ್, ರಾಷ್ರೀಯ ಹಬ್ಬಗಳ ಆಚರಣೆ ಸಂಯೋಜಕ ಡಾ.ಎ.ಎಂ.ಮಂಜುನಾಥ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಯ ಬೋಧಕ–ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು :ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ರಾಜಧಾನಿ ನವದೆಹಲಿಯಲ್ಲಿ ತಾಯಿ ಕನ್ನಡಾಂಬೆಯ ಪೂಜೆ ಮತ್ತು ಧ್ವಜಾರೋಹಣ ನೆರವೇರಿಸುವ ಸದಾವಕಾಶ ನನಗೆ ಲಭ್ಯವಾಗಿದೆಯೆಂದು ಅವರು ಹರ್ಷ ವ್ಯಕ್ತ ಪಡಿಸಿದರು. ದೆಹಲಿ ಕರ್ನಾಟಕ ಸಂಘದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಇನ್ನು ಮುಂದೆಯೂ ಕನ್ನಡ ಪರ ಹತ್ತಾರು ಕಾರ್ಯಕ್ರಮಗಳನ್ನು ವಿಶೇಷ ರೀತಿಯಿಂದ ಆಯೋಜಿಸುವಂತೆ ಸಲಹೆ ನೀಡಿದರು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರ ವ್ಯಕ್ತಿತ್ವವನ್ನು ರಾಷ್ಟ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಅವರ ಬಗ್ಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರತರುವಂತೆ ಸಲಹೆ ನೀಡಿದರು. ರಾಷ್ಟç ರಾಜಧಾನಿ ದೆಹಲಿಯಲ್ಲಿ ಕನ್ನಡ ಮತ್ತು ಕನ್ನಡ ಸಂಘಟನೆಗಳ ಅಸ್ತಿತ್ವವನ್ನು ಕಾಯ್ದುಕೊಳ್ಳಲು ದೆಹಲಿ ಕನ್ನಡಿಗರೆಲ್ಲರೂ ಸಮಾನ…
ಇಂಫಾಲ: ಸಬ್ ಇನ್‌ಸ್ಪೆಕ್ಟರ್ ಒಬ್ಬರನ್ನು ಪೊಲೀಸ್ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಮಣಿಪುರ ಪೊಲೀಸ್ ಪೇದೆಯೊಬ್ಬರು ಮಾತಿನ ಚಕಮಕಿಯ ನಂತರ ತನ್ನ ಹಿರಿಯ ಸಹೋದ್ಯೋಗಿ, ಸಬ್ ಇನ್‌ಸ್ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯ ಮೇಲೆ ಮಾರಣಾಂತಿಕವಾಗಿ ಗುಂಡು ಹಾರಿಸಿದ್ದಾರೆ. ಕಾನ್ಸ್ ಟೇಬಲ್ ಬಿಕ್ರಿಮ್‌ಜಿತ್ ಸಿಂಗ್ ಅವರಿಂದ ಕೊಲೆಯಾದ ಎಸ್ ಐ ಅನ್ನು ಪಹಜಹಾನ್ ಎಂದು ಗುರುತಿಸಲಾಗಿದೆ. ಮಣಿಪುರದ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಯಲ್ಲಿ ಇಬ್ಬರ ನಡುವೆ ಸಂಭವಿಸಿದ ಜಗಳದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಕ್ಷಣ ಆರೋಪಿ ಕಾನ್ ಸ್ಟೆಬಲ್‌ನನ್ನು ಇತರ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಂಡೀಗಢ: ಪಂಜಾಬ್ ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಹೌರಾ ಮೇಲ್ನ ಜನರಲ್ ಕೋಚ್‌ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ. ಶನಿವಾರ ರಾತ್ರಿ 10:30ರ ಸುಮಾರಿಗೆ ರೈಲು ಅಮೃತಸರದಿಂದ ಹೌರಾಕ್ಕೆ ತೆರಳುತ್ತಿದ್ದಾಗ ಪಟಾಕಿಗಳನ್ನು ತುಂಬಿದ್ದ ಪ್ಲಾಸ್ಟಿಕ್ ಬಕೆಟ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಸಿಂಗ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚನ್ನಪಟ್ಟಣ: ನಮ್ಮದು ಅಭಿವೃದ್ಧಿ ರಾಜಕಾರಣ ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ. ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಚನ್ನಪಟ್ಟಣ ಕ್ಷೇತ್ರದ ಅಕ್ಕೂರು ಹೊಸಹಳ್ಳಿಯಿಂದ ಪ್ರಚಾರ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅಕ್ಕೂರು, ಸಾದರಹಳ್ಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆದರು. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ನನ್ನ ಜತೆ ಹೆಜ್ಜೆ ಹಾಕುತಿದ್ದಾರೆ. ಯಡಿಯೂರಪ್ಪ ಅವರೇ ನನ್ನ ಹೆಸರು ಘೋಷಣೆ ಮಾಡಿದ್ದಾರೆ. ದೇವೆಗೌಡರು ನಾಳೆಯಿಂದ ಗ್ರಾಮಪಂಚಾಯತಿ ಮಟ್ಟದಿಂದ ಪ್ರಚಾರ ಮಾಡಬೇಕಿತ್ತು. ಆದರೆ ಆರೋಗ್ಯ ಸ್ವಲ್ಪ ಸರಿ ಇಲ್ಲ ಎಂದು ತಿಳಿಸಿದರು. ಇವತ್ತು 25 ಹಳ್ಳಿಗೆ ಹೋಗ್ತಾ ಇದ್ದೇನೆ 107 ಹಳ್ಳಿಗೆ ಇನ್ನೂ ಹೋಗುವುದು ಬಾಕಿ ಇದೆ ನಿಮ್ಮೆಲರ ಆಶೀರ್ವಾದ ಯುವಕ ನಿಖಿಲ್ ಮೇಲೆ ಇರಲಿ ಎಂದು ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಹಿನ್ನೆಲೆ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಅಪಾರ್ಟ್ಮೆಂಟ್ ಗೆ ಹೋಗೋದು, ಬರುವುದನ್ನು ಮಾಡುತ್ತಿದ್ದರು. ಕಳೆದ ಐದಾರು ದಿನಗಳಿಂದ ಗುರುಪ್ರಸಾದ್ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿರಲಿಲ್ಲ. ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ ಅವರು ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕೆಲವು ವಿಚಾರಗಳ ಬಗ್ಗೆ, ಹಣಕಾಸು ವಿಚಾರವಾಗಿಯೂ ಗುರುಪ್ರಸಾದ್ ಬೇಸರದಲ್ಲಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ. ಫ್ಲ್ಯಾಟ್ ಬಾಗಿಲು ತೆಗೆದು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಘಟನೆಯ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಸಿದ್ದದರಾಮಯ್ಯ ಹೇಳಿದ್ದಾರೆ. ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದರು. ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ…