Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ತುಮಕೂರು: ಕೇಂದ್ರ ಸರ್ಕಾರದ ADIP ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕೊಠಡಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನವೆಂಬರ್ ಮಾಹೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಅವರಿಗೆ ಸೂಚಿಸಿದರು. ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮೌಲ್ಯಮಾಪನ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ. ಕೇಂದ್ರ ಸರ್ಕಾರದ alimco ಸಂಸ್ಥೆಯ ವತಿಯಿಂದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ಸಾಧನ ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ 2,460 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ…
ದೀಪಾವಳಿ, ಬೆಳಕಿನ ಹಬ್ಬವೆಂದೇ ಹೆಸರಾಗಿರುವುದು, ಭಾರತೀಯ ಪರಂಪರೆಯಲ್ಲಿ ವೈಶಿಷ್ಟ್ಯತೆಯಿಂದ ಸಂಜ್ಞಾಪಿಸಿದ ಹಬ್ಬವಾಗಿದೆ. ಹೊಸ ಆಶಾವಾದ, ಸಮೃದ್ಧಿ, ಮತ್ತು ಬಾಂಧವ್ಯವನ್ನು ಸ್ಮರಿಸುತ್ತ, ದೀಪಾವಳಿ ಹಬ್ಬವು ಕೇವಲ ಧಾರ್ಮಿಕ ಆಚರಣೆಯಲ್ಲದೆ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪರಿಗಣಿಸಲಾಗಿದೆ. ಆದರೆ, ದೀಪಾವಳಿಯ ಆಚರಣೆಯ ವಿಧಾನಗಳು ಮತ್ತು ಅದರ ಪರಿಣಾಮಗಳನ್ನು ನಾವೆಲ್ಲರೂ ಪ್ರಸ್ತುತ ಕಾಲಘಟ್ಟದಲ್ಲಿ ಪುನಃ ಪರಿಗಣಿಸುವ ಅಗತ್ಯವಿದೆ. ಹಬ್ಬದ ಪೌರಾಣಿಕ ಹಿನ್ನಲೆ ಮತ್ತು ತತ್ವ ದೀಪಾವಳಿ ಹಬ್ಬದ ಪೌರಾಣಿಕ ಹಿನ್ನೆಲೆಯು ಶ್ರೀರಾಮನವರ 14 ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ಸಂದರ್ಭವನ್ನು ಸ್ಮರಿಸುತ್ತದೆ. ಅದೆಷ್ಟೇ ಪೌರಾಣಿಕ ಹಿನ್ನೆಲೆಯನ್ನು ಹೊಂದಿದರೂ, ದೀಪಾವಳಿ ಹಬ್ಬವು ಜ್ಞಾನ ಮತ್ತು ನಿರಂತರ ಬೆಳಕು ತರುವ ಸಂಕೇತವಾಗಿದೆ. ನಮ್ಮ ಮನಸ್ಸಿನಲ್ಲಿರುವ ಅಜ್ಞಾನ ಮತ್ತು ಕತ್ತಲನ್ನು ದೂರಮಾಡಿ ಜ್ಞಾನದ ಬೆಳಕನ್ನು ಹಂಚಲು ಇದು ಒಂದು ಅದ್ಭುತ ಅವಕಾಶ. ದೀಪಾವಳಿ, ಕೇವಲ ಬೆಳಕು ಹಚ್ಚುವುದರಲ್ಲಿ ಸೀಮಿತವಾಗಿಲ್ಲದೆ, ಹೊಸ ನಿರೀಕ್ಷೆ ಮತ್ತು ಹೊಸದಾದ ಆರಂಭವನ್ನು ತರುವ ಹಬ್ಬವಾಗಿದೆ. ಪರಿಸರ ಸ್ನೇಹಿ ದೀಪಾವಳಿ: ಸಮಕಾಲೀನ ಅಗತ್ಯತೆ ಪ್ರಸ್ತುತ,…
ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ, ತಾಲ್ಲೂಕಿನಲ್ಲಿ ಅನುಷ್ಠಾನಗೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಮೇಲ್ವಿಚಾರಣೆ ನಡೆಸಿದರು. ಕೇಂದ್ರ ತಂಡವು ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 17.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎನ್‌ಆರ್‌ಎಲ್‌ಎಂ ಸಂಜೀವಿನಿ ಘಟಕಕ್ಕೆ ಭೇಟಿ ನೀಡಿ, ಘಟಕವನ್ನು ವೀಕ್ಷಿಸಿದರು. ನಂತರ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 48 ಮಹಿಳಾ ಸ್ವಸಹಾಯ ಸಂಘಗಳ ಸುಮಾರು 450ಕ್ಕೂ ಅಧಿಕ ಸದಸ್ಯರು ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಈವರೆಗೆ 45 ಲಕ್ಷ ರೂ.ಗಳ ಸಾಲ ಸೌಲಭ್ಯ ಪಡೆದು, 1.27 ಕೋಟಿ ರೂ.ಗಳ ವಹಿವಾಟು ನಡೆಸಿರುವ ಬಗ್ಗೆ ಶ್ರೀ ಕಾವೇರಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರೊಂದಿಗೆ ಸಂವಾದ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮೀ…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ನಗರದ ಅರ್ಹ ಮತದಾರರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಓ)ಯ ಮೂಲಕ ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು ಅಥವಾ ಮತದಾರರು ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ ಸ್ಟೋರ್‌ನಲ್ಲಿ VHA– Voter Helpline App ಅನ್ನು ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ–6, ಕೈಬಿಡತಕ್ಕ ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ–8ನ್ನು ಭರ್ತಿ ಮಾಡಿ ಸಂಬಂಧಿಸಿದ ಬಿಎಲ್ ಓಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ…
ತುಮಕೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲು/ಸಿಡಿಸಲು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಹಸಿರು ಪಟಾಕಿಯ ಚಿಹ್ನೆ. ಕ್ಯೂಆರ್ ಕೋಡ್ ಇರುವಂತಹ ಪಟಾಕಿಗಳನ್ನು ಮಾತ್ರ ಬಳಸಬೇಕು. ನಗರದ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸೇರಿದಂತೆ ಯಾವುದೇ ನಿಷೇಧಿತ ಪ್ರದೇಶಗಲ್ಲಿ ಪಟಾಕಿಗಳನ್ನು ಸಿಡಿಸಬಾರದು ಎಂದು ತಿಳಿಸಿದ್ದಾರೆ. ಪಟಾಕಿ ಬಳಸುವ ಸಂದರ್ಭದಲ್ಲಿ ಇಯರ್ ಪ್ಲಗ್/ಗಾಗಲ್ಸ್(Ear plug/Goggles)ನಂತಹ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಸಿಡಿಸಿದ ನಂತರ ಉಂಟಾದ ತ್ಯಾಜ್ಯವನ್ನು ಪಾಲಿಕೆ ವಾಹನಗಳಿಗೆ ಕಸ ವಿಂಗಡಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ದಿಬ್ಬೂರು, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿಗೇಟ್, ಕಾಲ್ ಟೆಕ್ಸ್ ಸರ್ಕಲ್, ಕುಂಟಮ್ಮನತೋಟ, ಗುಬ್ಬಿಗೇಟ್ ರಿಂಗ್ ರಸ್ತೆ, ಪಿಜಿ ಲೇಔಟ್, ವಿನೋಬನಗರ, ಹೆಗ್ಗಡೆ ಕಾಲೋನಿ, ಜಯಪುರ, ಹೌಸಿಂಗ್ ಬೋರ್ಡ್, ಕುರಿಪಾಳ್ಯ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296Power outage in these areas on November 3
ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲ್ಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಹಿತದೃಷ್ಠಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು. ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಫೆಡ್ ಮತ್ತು ರಾಜ್ಯ ಸರ್ಕಾರದ ಕೆ.ಓ.ಎಫ್.ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಎಫ್.ಎ.ಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್ನAತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜವನ್ನು ಖರೀದಿಸಬೇಕು. ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು. ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ…
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 4ರಂದು ಜಿಲ್ಲೆಯ 6 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 4ರಂದು ಜಿಲ್ಲೆಯ ತಿಪಟೂರು ತಾಲೂಕಿನ ಗುರುಗದಹಳ್ಳಿ; ತುಮಕೂರು ತಾಲೂಕಿನ ಗಂಗೋನಹಳ್ಳಿ ಹಾಗೂ ಸಿರಿವರ; ಕುಣಿಗಲ್ ತಾಲೂಕಿನ ಉಜ್ಜಿನಿ; ಕೊರಟಗೆರೆ ತಾಲೂಕಿನ ಕುರಂಕೋಟೆ; ಗುಬ್ಬಿ ತಾಲೂಕಿನ ಚಂಗಾವಿ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಬೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಕೃಷಿ ಪಂಪ್ ಸೆಟ್ ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಂಡಿರುವ ರೈತರು ಸಕ್ರಮಕ್ಕಾಗಿ ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಅಗತ್ಯ ದಾಖಲೆಗಳನ್ನು ನವೆಂಬರ್ 10ರೊಳಗಾಗಿ ಸಂಬಂಧಿಸಿದ ಶಾಖಾ ಕಚೇರಿ ಅಥವಾ ಉಪವಿಭಾಗ ಕಚೇರಿಗಳಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರೈತರಲ್ಲಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ನವೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ನವೆಂಬರ್ 15ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರದರ್ಶಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು(ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ತಯಾರಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ…