Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ತುಮಕೂರು: ಗೃಹ ಸಚಿವರನ್ನು ಮೆಚ್ಚಿಸಲು ಸಾರ್ವಜನಿಕ ಜೀವನದ ಜೊತೆಗೆ ಎತ್ತಿನಹೊಳೆ ಅಧಿಕಾರಿಗಳು ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಜಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎತ್ತಿನಹೊಳೆ C E ವರದಯ್ಯ ಎಸಿ ರೂಮ್ನ ಲ್ಲಿ, ಜಮೀನು ಕಳಕೊಂಡ ರೈತರು ಬೀದಿಲ್ಲಿ, ನಮ್ಮನ್ನಾಳುವ ಜನಪ್ರತಿನಿಧಿಗಳಿಗೆ ಪರ್ಸೆಂಟೇಜ್ ದುಡ್ಡು ಸೂಟ್ಕೇಸ್ ನಲ್ಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ ಪ್ರಮುಖವಾಗಿ ಇರಕಸಂದ್ರ ಕಾಲೋನಿ ಮತ್ತು ಲಕ್ಕೇನಹಳ್ಳಿ ಭಾಗದ ಕಾಮಗಾರಿಗಳಲ್ಲಿ ಯಾವುದೇ Third party Quality Control Team ಇಲ್ಲದೆ ಅಧಿಕಾರಿಗಳು ನೂರಾರು ಕೋಟಿ ಬಿಲ್ಲುಗಳು ಪಾವತಿ ಮಾಡಿದ್ದಾರೆ ಅಂತ ನಾಗರಾಜು ಆರೋಪಿಸಿದ್ದಾರೆ. ನಿಯಮಗಳನ್ನ ಪಾಲಿಸದೆ ಎಗ್ಗಿಲ್ಲದೆ ಹಗಲು ರಾತ್ರಿ ಬ್ಲಾಸ್ಟಿಂಗ್ ಮಾಡಿ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡಲಾಗುತ್ತಿದೆ. ಈ ಬಗ್ಗೆ ಗಮನ ಹರಿಸದೇ ಅಧಿಕಾರಿಗಳು ಕಣ್ಮುಚ್ಚಿ ಬೆಚ್ಚನೆ ಕುಳಿತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿದರೆ ಎತ್ತಿನಹೊಳೆ ಯೋಜನೆಯ ಬಂಡವಾಳ ಹೊರಬೀಳಲಿದೆ. ಲಕ್ಕೇನಹಳ್ಳಿ ಭಾಗದ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುವುದು. ಈ ವರ್ಷ ಮೂವತ್ತು ವರ್ಷಗಳ ನಂತರ ಶನಿದೇವ ದೀಪಾವಳಿಯಂದು ಶುಭ ಸಂಯೋಗ ರೂಪಿಸುತ್ತಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಬುಧಾದಿತ್ಯ ಯೋಗದೊಂದಿಗೆ ಶಶ ರಾಜಯೋಗವೂ…
ತುಮಕೂರು: ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ…
ಕೊರಟಗೆರೆ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸದಲ್ಲಿದ್ದ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಕಾರಣ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರ ಹಿರಿಯ ವಕೀಲ ಸಿ.ವಿನಾಗೇಶ್ ಮಧ್ಯಾಂತರ ಜಾಮೀನಿಗೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಬುಧವಾರ ಬೆ.10:30ಕ್ಕೆ ಉಚ್ಚ ನ್ಯಾಯಾಲಯ 6ವಾರಗಳ ಮಧ್ಯಾಂತರ ಜಾಮೀನು ನೀಡಿದ ಬೆನ್ನಲ್ಲೆ ಇಲ್ಲಿನ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ನ್ಯಾಯಾಲಯಕ್ಕೆ ಕೃತಜ್ಞತೆ ತಿಳಿಸಿದ್ದಾರೆ. ಅಡವಿ ಸಿನಿಮಾದ ನಿರ್ಮಾಪಕ ಟೈಗರ್ ನಾಗರಾಜ್ ಮಾತನಾಡಿ, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕನ್ನಡ ಚಿತ್ರರಂಗದಲ್ಲಿ ಸಿನಿಮಾದ ಮುಖಾಂತರ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದರೆ ಇತ್ತೀಚಿಗೆ ಕಳೆದ ಕೆಲವು ತಿಂಗಳ ಹಿಂದೆ ಕೊಲೆ ಪ್ರಕರಣದಲ್ಲಿ ಸೆರೆಮನೆ ವಾಸದಲ್ಲಿದ್ದ ವೇಳೆ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡ ಕಾರಣ ಹೈಕೋರ್ಟ್ ನ್ಯಾಯಧೀಶರು ವೈದ್ಯಕೀಯ ವರದಿಯನ್ನು ಗಮನಿಸಿ ದರ್ಶನ್ ಅವರಿಗೆ 6 ವಾರಗಳವೆರೆಗೆ ಮಧ್ಯಾಂತರ ಜಾಮೀನು ನೀಡಿ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ದರ್ಶನ್…
ಮಧುಗಿರಿ: ಮಾದಿಗ ಸಮಾಜ ಒಳಮೀಸಲಾತಿಗಾಗಿ 3 ದಶಕದಿಂದ ನಿರಂತರ ಹೋರಾಟ ಮಾಡುತ್ತಿದೆ . ಮೀಸಲಾತಿ ವಂಚಿತರ ಕಣ್ಣೀರು ಒರೆಸುವ ಬದಲು ಕರ್ನಾಟಕ ಸರ್ಕಾರ ಕಣ್ಣಿಗೆ ಮಣ್ಣೆರುಚುವ ಹೊಸ ಆಯೋಗ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಮಧುಗಿರಿ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಆರ್. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 1 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಕರ್ನಾಟಕದಲ್ಲಿ ನಿರಂತರ ಹೋರಾಟ ನಡೆದಿದೆ. ಹೊಸದೊಂದು ಆಯೋಗ ರಚಿಸಿ ಅನ್ನುವ ಬೇಡಿಕೆ ಮಾದಿಗ ಸಮಾಜದಿಂದ ಬಂದಿರಲೇ ಇಲ್ಲ . ಹೊಸ ಆಯೋಗ ರಚಿಸಿ ಎಂದು ಮಾದಿಗ ಸಮಾಜದ ಯಾವ ಹೋರಾಟಗಾರರೂ ಬೇಡಿಕೆ ಸಲ್ಲಿಸಿರಲಿಲ್ಲ . ಹೊಸ ಆಯೋಗ ರಚಿಸುವ ಹಿಂದೆ ದೊಡ್ಡ ಹುನ್ನಾರವಿದೆ . ಕಾಲಹರಣ ಮಾಡಿ ಸಂತ್ರಸ್ತ ದಲಿತರನ್ನು ವಂಚಿಸುವ ಉದ್ದೇಶದಿಂದಲೇ ಆಯೋಗ ರಚಿಸುವ ನಾಟಕ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಸುಪ್ರೀಂಕೋರ್ಟಿನ ತೀರ್ಪು ಬಂದು 3 ತಿಂಗಳಾದರು ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯ ಬೇಡಿಕೆಯನ್ನು ನಿರ್ಲಕ್ಷಿಸುತ್ತಾ…
ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಲಪ್ಪುರಂ: ಕಂಪನದ ಸಹಿತ ಸ್ಫೋಟದಂತಹ ಶಬ್ದ ಕೇಳಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಆನಕಲ್ ಪ್ರದೇಶದಲ್ಲಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಮಾರು 300 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಮಂಗಳವಾರ ರಾತ್ರಿ 9:15ಕ್ಕೆ ಮೊದಲ ಬಾರಿ ಸದ್ದು ಕೇಳಿಸಿತು. ನಂತರ ರಾತ್ರಿ 10:15 ಹಾಗೂ 10.45ಕ್ಕೆ ಮತ್ತೆರಡು ಸಲ ಲಘು ಕಂಪನದ ಅನುಭವ ಉಂಟಾಯಿತು. ಈ ಶಬ್ದಗಳು ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಉಂಟಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನುಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿ 85 ಕುಟುಂಬಗಳಿಗೆ ಸೇರಿದ 287 ಜನರನ್ನು ಶಾಲೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾನೈಟ್ ಕ್ವಾರಿಗಳಿಂದ ಕೇಳಿಬರುವುದಕ್ಕೆ ಸಮಾನವಾದ ಶಬ್ದ ಕೇಳಿಸಿತು. ನಿರಂತರವಾಗಿ ಕಂಪನ ಉಂಟಾಯಿತು. ಕೆಲವು ಮನೆಗಳಲ್ಲಿ ಬಿರುಕು ಕಂಡುಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮ, ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜನರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲು ಆರಂಭಿಸಿದ್ದಾರೆ ಎಂದು…
ಬೆಂಗಳೂರು : ಸಿಎಂ ಆಗಿದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡದ ಕುಮಾರಣ್ಣ ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದರು. ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ ಕೇಳಲು ಈ ಹಿಂದೆ ಶಾಸಕರಾಗಿದ್ದ ಕುಮಾರಣ್ಣ ಬಂದಿಲ್ಲ ಎಂದು ಜನ ಸಮಸ್ಯೆ ಹೇಳಿಕೊಂಡರು.…
ಮೈಸೂರು: ಮಾಜಿ ಶಾಸಕರೊಬ್ಬರ ಜಮೀನಿನ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 7 ವರ್ಷದ ಬೃಹತ್ ಗಂಡು ಚಿರತೆ ಬಿದ್ದಿದ್ದು, ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ಪಟ್ಟಣದ ಸಮೀಪ ಇರುವ ಮಾಜಿ ಶಾಸಕ ಎನ್.ನಾಗರಾಜು ಅವರಿಗೆ ಸೇರಿದ ಜಮೀನಿನ ಬಳಿ ಚಿರತೆಗೆ ಬೋನು ಇರಿಸಲಾಗಿತ್ತು. ಇದೀಗ ಕೊನೆಗೂ ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಹೆಚ್‌ಡಿ ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್‌ಗೆ ಹೊಂದಿಕೊಂಡಂತೆ ಇರುವ ಜಮೀನಿನ ರೈತರಾದ ದಶರಥ, ಎನ್.ನಾಗರಾಜು, ವಿವೇಕ, ಗುರುಮಲ್ಲು, ಸಣ್ಣಪ್ಪ, ಸೋಮಣ್ಣ, ಸಣ್ಣಯ್ಯರ ಜಮೀನುಗಳಲ್ಲಿ ಕಳೆದ ಒಂದು ತಿಂಗಳ ಒಳಗೆ ನೂರು ಅಡಿಗಳ ಅಂತರದಲ್ಲಿ 4 ಚಿರತೆ ಸೆರೆಯಾಗಿತ್ತು. ಇದೀಗ ಮತ್ತೊಂದು 7 ವರ್ಷದ ಚಿರತೆ ಸೆರೆ ಸಿಕ್ಕಿರುವುದು ಆತಂಕ ಹೆಚ್ಚಿಸಿದೆ. ಈ ಚಿರತೆಗಳು ಈ ಭಾಗದಲ್ಲಿ ರೈತರ ಹಸು, ಕರು ಮೇಕೆ ಹಾಗೂ ಸಾಕು ನಾಯಿಗಳನ್ನು ತಿಂದು ಹಾಕುತ್ತಿದ್ದವು. ಪ್ರತಿ ಭಾರಿ ಚಿರತೆ ಸಿಕ್ಕಿದ ನಂತರ ಮತ್ತೆ ಜಮೀನುಗಳಲ್ಲಿ…
ಕೊರಟಗೆರೆ: ಹೊಳವನಹಳ್ಳಿ ಕೃಷಿ ಉತ್ಪನ್ನ ಉಪ ಮಾರುಕಟ್ಟೆಗೆ ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗ ಬೀಗ ಜಡಿದು ಮೌನಕ್ಕೆ ಶರಣಾಗಿದ್ದು, ಈ ಮೂಲಕ ಗೃಹ ಸಚಿವರ ರೈತಪರ ಆಶಯವನ್ನೇ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಮಣ್ಣು ಪಾಲು ಮಾಡಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ 2018–19ರಲ್ಲಿ 2 ಕೋಟಿ ವೆಚ್ಚದಲ್ಲಿ 40 ಅಂಗಡಿ ಮಳಿಗೆ ನಿರ್ಮಾಣ ಮಾಡಲಾಗಿತ್ತು. ಆದರೆ ಈ 40 ಅಂಗಡಿ ಮಳಿಗೆಗಳ ಸುತ್ತಮುತ್ತ ಜಾಲಿ ಮತ್ತು ಬೇಲಿ ಗಿಡಗಳು ಬೆಳೆದು ಕೃತಕ ಕಾಡು ಸೃಷ್ಟಿಯಾಗಿದೆ. ಜನರಿಗೆ ಅನುಕೂಲವಾಗಲಿ ಎಂದು ಕೋಟಿಗಟ್ಟಲೆ ಹಣ ಸುರಿಸಿ ಕಟ್ಟಿದ ಕಟ್ಟಡ ನೀರಲ್ಲಿ ಮಾಡಿದ ಹೋಮದಂತಾಗಿದೆ. ಶುಕ್ರವಾರದ ಹೊಳವನಹಳ್ಳಿ ತರಕಾರಿ ಸಂತೆಗೆ ತಾ.ಪಂ. ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದಲೇ ತೊಂದರೆಯಾಗುತ್ತಿದೆ. ಕೊರೊನಾ ಸಮಯದಲ್ಲಿ ಸ್ಥಗಿತವಾದ ಶುಕ್ರವಾರ ತರಕಾರಿ ಸಂತೆ ಪ್ರಾರಂಭಕ್ಕೆ ಗ್ರಾಮ ಪಂಚಾಯಿತಿಯೇ ಮನಸ್ಸು ಮಾಡದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಅಧಿಕಾರ ದುರುಪಯೋಗದ ಕರ್ಮಕಾಂಡ…