Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಬಳ್ಳಾರಿ: ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ದರ್ಶನ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದರ ಬೆನ್ನಲ್ಲೇ ಡಿ ಕಂಪೆನಿ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದೆ. ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ಡಿ ಬಾಸ್ ರವರು ಬಿಡುಗಡೆಯಾಗಿರುವುದು ಚಿಕಿತ್ಸೆಯ ಸಲುವಾಗಿ ಆದ್ದರಿಂದ, ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಹೋಗಿ ಪಟಾಕಿ ಹೊಡೆಯುವುದು, ಕೂಗಾಡುವುದು ಮಾಡುವಂತಿಲ್ಲ, ಹಾಗೂ ಮಾಧ್ಯಮಗಳಿಗೆ, ಬೇರೆ ನಟರಿಗೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡುವಂತಿಲ್ಲ ಎಂದು ತಿಳಿಸುತ್ತೇವೆ ಎಂದು ಮನವಿ ಮಾಡಿಕೊಂಡಿದ್ದಾರೆ. ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ವೊಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ 2627 ಮತಗಟ್ಟೆಗಳಲ್ಲಿ ಮಂಗಳವಾರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 11,40,216 ಪುರುಷರು, 11,61,932 ಮಹಿಳೆಯರು ಹಾಗೂ 89 ಇತರೆ ಸೇರಿ ಒಟ್ಟು 23,02,237 ಮತದಾರರಿದ್ದಾರೆ. ಕರಡು ಸೇವಾ ಮತದಾರರ ಪಟ್ಟಿಗಳಲ್ಲಿ 685 ಪುರುಷರು, 40 ಮಹಿಳೆಯರು ಸೇರಿ ಒಟ್ಟು 725 ಮತದಾರರಿದ್ದಾರೆ. ವಿಶೇಷ ಚೇತನ ಮತದಾರರಿಗೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 32,010 ಮತದಾರರನ್ನು ನೋಂದಣಿ ಮಾಡಲಾಗಿದೆ. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಪ್ರತಿ ವರ್ಷ 1ನೇ ಜನವರಿ ಯನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 18ರಂದು ಆಚರಿಸಲಾಗುವ “ಸಂತ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವ” ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕುರುಬ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವ ಬರಹದ ಅರ್ಜಿಯನ್ನು ನವೆಂಬರ್ 8ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುವುದು. ಈ ವರ್ಷ ಮೂವತ್ತು ವರ್ಷಗಳ ನಂತರ ಶನಿದೇವ ದೀಪಾವಳಿಯಂದು ಶುಭ ಸಂಯೋಗ ರೂಪಿಸುತ್ತಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಬುಧಾದಿತ್ಯ ಯೋಗದೊಂದಿಗೆ ಶಶ ರಾಜಯೋಗವೂ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದ ನಟ ದರ್ಶನ್ ಗೆ ಚಿಕಿತ್ಸೆ ಪಡೆಯಲು ಹೈಕೋರ್ಟ್ ಆರು ವಾರಗಳ ಕಾಲ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕಳೆದ ಜೂ.11ರಂದು ಮೈಸೂರಿನಲ್ಲಿ ಬಂಧನಕ್ಕೊಳಪಟ್ಟಿದ್ದ ದರ್ಶನ್ ಅಲ್ಲಿಂದ ಈವರೆಗೆ ಅಂದರೆ 131 ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಜೈಲಿನಲ್ಲಿದ್ದರು. ಇದೀಗ ಹೈಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದು, ಬಹುತೇಕ ಸಂಜೆಯೊಳಗೆ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಾದ–ವಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರ ಪೀಠ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು. ದರ್ಶನ್ ಅವರ ಪಾಸ್‌ಪೋರ್ಟ್‌ನ್ನು ನ್ಯಾಯಾಲಯಕ್ಕೆ ತಕ್ಷಣವೇ ಒಪ್ಪಿಸುವುದು, ಅವರು ಇಚ್ಛಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು, ಒಂದು ವಾರದ ಚಿಕಿತ್ಸಾ ವಿವರವನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿತು. ನ್ಯಾಯಾಲಯದ ಆದೇಶದ ಪ್ರತಿಗಳನ್ನು ಬಳ್ಳಾರಿ ಜೈಲಿನ ಅಧೀಕ್ಷಕರಿಗೆ ಸಲ್ಲಿಸಿದ ಬಳಿಕ ಬಿಡುಗಡೆಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ.ಅನಿಲ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಹೊರವಲಯದ ಹಿರೇಹಳ್ಳಿ ಸ್ಟೇಟ್ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಸಭಾಂಗಣದಲ್ಲಿಂದು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿಯಲ್ಲಿ ನರೇಗಾ ಯೋಜನೆ ಮುಖ್ಯ ಪಾತ್ರವಹಿಸುತ್ತಿದ್ದು, ನರೇಗಾ ಕಾಮಗಾರಿಯಲ್ಲಿ ತೊಡಗಿದ ಕೂಲಿಕಾರ್ಮಿಕರಿಗೆ ಸಕಾಲಕ್ಕೆ ಕೂಲಿ ಪಾವತಿಸಿ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ದೃಷ್ಟಿಕೋನದಿಂದ ಗ್ರಾಮ ಪಂಚಾಯಿತಿ ಸಮಗ್ರ ದರ್ಶನ ಎಂಬ ವಿಶೇಷ ಅಭಿಯಾನದ ಮೂಲಕ ಈಗಾಗಲೇ 196.52 ಕೋಟಿ ರೂ.ವೆಚ್ಚದಲ್ಲಿ ಚರಂಡಿ, ರಸ್ತೆ, ಗ್ರಾಮ ಪಂಚಾಯಿತಿ ಕಟ್ಟಡ, ಸಂಜೀವಿನಿ ಭವನ, ಗ್ರಾಮೀಣ ಗೋದಾಮು, ಶಾಲಾ ಆವರಣ ಗೋಡೆ, ಶೌಚಾಲಯ, ಆಟದ ಮೈದಾನ ಅಂಗನವಾಡಿ ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ…
ತುಮಕೂರು: ಸಮಾಜದ ಒಳಿತಿಗಾಗಿ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಮೂಲಕ ಭ್ರಷ್ಟಾಚಾರ ನಿರ್ಮೂಲನೆ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಕರೆ ನೀಡಿದರು. ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ದೇಶ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಮೂಲ್ಯ ಅವಕಾಶ ಸರ್ಕಾರಿ ನೌಕರರಿಗೆ ದೊರಕಿರುವುದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರನೂ ಸಹ ಪ್ರಾಮಾಣಿಕವಾಗಿ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಯಾವುದೇ ಆಸೆ ಆಕಾಂಕ್ಷೆಗಳಿಗೂ ಬಲಿಯಾಗದೆ, ನೈತಿಕತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಿದಾಗ ಮಾತ್ರ ನಮ್ಮ ವ್ಯಕ್ತಿತ್ವ ಮತ್ತು ನಮ್ಮ ಹೆಸರು ಜನ ಮಾನಸದಲ್ಲಿ ಉಳಿದುಕೊಳ್ಳುತ್ತದೆ. ಅಧಿಕಾರಿ ಮತ್ತು ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮನುಷ್ಯನನ್ನು ಹೊರತುಪಡಿಸಿ…
ತಿಪಟೂರು: ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಹತ್ತಿರ, ದೊಡ್ಮನೆ ಅಭಿಮಾನಿ ಬಳಗದ ವತಿಯಿಂದ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಮೂರನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಪುಷ್ಪ ನಮನ, ಅನ್ನ ಸಂತರ್ಪಣೆ ಹಾಗೂ ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಸಮವಸ್ತ್ರ ವಿತರಿಸಲಾಯಿತು. ಈ ಸಂದರ್ಭದಲ್ಲಿ ದೊಡ್ಮನೆ ಅಭಿಮಾನಿ ಬಳಗದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾಡಳಿತ ವತಿಯಿಂದ ನವೆಂಬರ್ 18ರಂದು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವಂತೆ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. 10 ಮಂದಿ ಸಮುದಾಯದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಮತ್ತು ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸುವಂತೆ ಸೂಚನೆ ನೀಡಿದರು. ನಗರದ ಶಿರಾಗೇಟ್ ಬಳಿಯಲ್ಲಿರುವ ಕನಕ ಪುತ್ಥಳಿ ಹಾಳಾಗಿದ್ದು, ದುರಸ್ಥಿಗೊಳಿಸುವಂತೆ ಸಮುದಾಯದ ಮುಖಂಡರು ಬೇಡಿಕೆ ಇಟ್ಟರು. ಪುತ್ಥಳಿಯನ್ನು ದುರಸ್ಥಿಗೊಳಿಸಿ ಜಯಂತಿ ದಿನದಂದು ಶೃಂಗಾರಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್…
ತುಮಕೂರು: ಭಗವಾನ್ ಶ್ರೀ ಮಹಾವೀರರ ಕೇವಲ ಜ್ಞಾನದ ಪ್ರಯುಕ್ತ 2024 ರ ಗುರುವಾರ 31 ರಂದು ಸಂಜೆ 4 ಗಂಟೆಗೆ ನಗರದ ಚಿಕ್ಕಪೇಟೆಯ ಜೈನ ಬಸದಿಯಲ್ಲಿ 108 ದೀಪಗಳನ್ನು ಅಚ್ಚಲಾಗುವುದು. ಶ್ರಾವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ. ವರದಿ: ಜೆ.ರಂಗನಾಥ, ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q