Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಕೊರಟಗೆರೆ: ವಾಟರ್ ಟ್ಯಾಂಕ್ ಸ್ವಚ್ಚತೆ ಇಲ್ಲದೇ ಅನೈರ್ಮಲ್ಯ ಹೆಚ್ಚಾಗಿ 15 ಜನರು ವಾಂತಿ ಬೇದಿಯಿಂದ ಬಳಲುತ್ತಿದ್ದು, 15 ವರ್ಷದ ಬಾಲಕಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ಮಾದವಾರ ಗ್ರಾಮದ ಹರೀಶ್ ಎಂಬವರ ಮಗಳಾದ ವಿದ್ಯಾರ್ಥಿ ಪೂರ್ಣಿಮಾ(15) ಮೃತಪಟ್ಟ ಬಾಲಕಿಯಾಗಿದ್ದಾಳೆ. ಘಟನೆಗೆ ತಾಲ್ಲೂಕು ಪಂಚಾಯಿತಿ ಇ ಓ ಮತ್ತು ಗ್ರಾಮ ಪಂಚಾಯಿತಿ ಪಿಡಿಓ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕೊರಟಗೆರೆ ತಾಲೂಕು ಕಸಬಾ ಹೋಬಳಿ ತೀತಾ ಗ್ರಾಮ ಪಂಚಾಯಿತಿಯ ಮಾದವಾರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಪೇಸ್ ಬುಕ್ ಮತ್ತು ಇನ್ಸ್ ಸ್ಟಾಗ್ರಾಮ್ ಗಳಂತಹ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಬುದ್ಧಿವಾದ ಹೇಳುತ್ತಾರೆ. ಆದ್ರೆ ತಮ್ಮ ಜವಾಬ್ದಾರಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಾಟರ್ ಟ್ಯಾಂಕು, ನೀರಿನ ತೊಟ್ಟಿ, ಚರಂಡಿ, ಕುಡಿಯವ ನೀರಿನ ಸ್ವಚ್ಚತೆಯೇ ಗ್ರಾಮದಲ್ಲಿ ಮರೀಚಿಕೆಯಾಗಿದೆ. ಸಾರ್ವಜನಿಕರಿಗೆ ಅಧಿಕಾರಿಗಳು ಜಾಗೃತಿ ಮೂಡಿಸುವ ಮೊದಲು ಅಧಿಕಾರಿಗಳಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯವಿದೆ ಎನ್ನುವ ಮಾತುಗಳು ಕೇಳಿ ಬಂದಿವೆ. ಆರೋಗ್ಯ ಇಲಾಖೆ…
ಬೆಂಗಳೂರು: ಭಗವಾನ್ ಶ್ರೀ ಮಹಾವೀರ ಸಂಘ ಕಳೆದ 14 ವರ್ಷಗಳಿಂದ ನಡೆಸುತ್ತಿರುವ ಸಮಾಜಮುಖಿ ಸೇವೆಗಳು ಪ್ರಶಂಸನಿಯ ಎಂದು ಮಾಜಿ ಸಚಿವ ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಸಂತಸ ವ್ಯಕ್ತಪಡಿಸಿದರು. ಅವರಿಂದ ಬೆಂಗಳೂರಿನ ಚಿದಾನಂದ ಮೂರ್ತಿ ಸಭಾಭವನದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಸಂಘದ 14ನೇ ವಾರ್ಷಿಕೋತ್ಸವ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಎಸ್ .ಎಸ್ .ಎಲ್ .ಸಿ. ಹಾಗೂ ಪಿ.ಯು.ಸಿ. ಉತ್ತೀರ್ಣರಾದ ಪ್ರತಿಭಾವಂತ ಅರ್ಹ ಬಡ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಸಿ ಉತ್ತೇಜನ ನೀಡುತ್ತಿರುವುದು, ಆಹಾರೋತ್ಸವ ಕುಟುಂಬಗಳ ಸಮ್ಮಿಲನ ನಿಜಕ್ಕೂ ಶ್ಲಾಘನೀಯ ಎಂದರು. ಇದೇ ಸಂದರ್ಭದಲ್ಲಿ ಎರಡು ಲಕ್ಷ ರೂ ಗಳ ಧನ ಸಹಾಯ ನೀಡಿದರು. ಸಂಗೀತ ನಿರ್ದೇಶಕ ಹಾಗೂ ಗಾಯಕ ಗುರುಕಿರಣ್ ಮಾತನಾಡಿ, ತುಳುನಾಡಿನಲ್ಲಿ ನೆಲೆಸಿರುವ ಹಲವಾರು ಜೈನ ಅರಸರು, ಹಲವು ಶತಮಾನಗಳ ಕಾಲ ಆಳ್ವಿಕೆ ನೀಡಿದ್ದು, ಹಲವಾರು ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ .ಅವರದೇ ಆದ ಆಹಾರ ಸಂಪ್ರದಾಯ ನಾಗರಿಕತೆ ಹೊಂದಿದ್ದಾರೆ. ವಿಶೇಷವಾಗಿ ಜೈನ ಖಾದ್ಯಕ್ಕೆ ಹೆಸರುವಾಸಿ ಆಗಿದ್ದಾರೆ. ಜೈನ…
ಪುನೀತ್ ರಾಜ್‍ಕುಮಾರ್ ಎಂಬ ಹೆಸರು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವೇ ದೊಡ್ಡ ಹೆಸರುಗಳಿಸಿದವನೆಂದು ಹೇಳಲು ಸಾಧ್ಯವಿಲ್ಲ; ಅಂದರೆ ಅದು ಅವರಿಗೆ ಅಪಾರ ಪ್ರೀತಿಯ ಮನಸ್ಸು, ಸರಳತೆಯೇ ಅವರ ದೊಡ್ಡ ಸಂಪತ್ತು, ಎಲ್ಲರಿಗೂ ತಮ್ಮವನಂತೆ ಬೆರೆತು, ಕನ್ನಡಿಗರ ಹೃದಯದಲ್ಲಿ ಮನೆಮಾಡಿದವರೆಂದು ಹೇಳಬೇಕು. “ಅಪ್ಪು” ಎಂದು ಪ್ರೀತಿಯಿಂದ ಕರೆಯಲಾಗುವ ಪುನೀತ್, ಸದಾ ನಗುಮುಖದಿಂದ ಸುತ್ತಲಿನವರಿಗೂ ಸಂತೋಷವನ್ನ ಹರಡುವ ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದರು. ನಟನಾ ಕೌಶಲ್ಯ ಮತ್ತು ಜನಮೆಚ್ಚಿನ ಪಾತ್ರಗಳು: ಪುನೀತ್, ಕನ್ನಡ ಚಿತ್ರರಂಗದಲ್ಲಿ ನಟನೆಯ ಉನ್ನತ ಮಟ್ಟದ ಕೌಶಲ್ಯವನ್ನು ತೋರಿದ ನಟ. ಅವರ “ಅಪ್ಪು,” “ಮಿಲನ,” “ಅಜಯ್,” “ಹುಡುಗರು,” ಮತ್ತು “ರಾಜಕುಮಾರ” ಮೊದಲಾದ ಚಿತ್ರಗಳಲ್ಲಿ ಅವರು ನೀಡಿದ ಅಭಿನಯಗಳು, ಪ್ರೇಕ್ಷಕರನ್ನು ಆಕರ್ಷಿಸಿದವು. ಅವರ ಪಾತ್ರಗಳು ಜನರ ಜೀವನದಲ್ಲಿ ಮುದ್ರಿತವಾಗಿ ಹಾಸುಹೋಯಾಗಿ ನೆನಪಿನಲ್ಲೇ ಉಳಿಯುತ್ತವೆ. ಕೇವಲ ನಟನೆಯ ಮೂಲಕವಲ್ಲ, ಅವರ ಹೃದಯಪೂರ್ವಕವಾದ ಚಲನಚಿತ್ರ ಪಾತ್ರಗಳ ಮೂಲಕ ಅವರು ಜನಸಾಮಾನ್ಯರ ಹೃದಯಗಳಿಗೆ ಹತ್ತಿರವಾಗಿ ಮೆಚ್ಚುಗೆಯನ್ನು ಗಳಿಸಿದರು. ಸರಳತೆಯ ಸಜ್ಜನಿಕೆ: ನಟನಾಗಿ ಭವ್ಯತೆಯಲ್ಲಿದ್ದರೂ ಪುನೀತ್ ರಾಜ್‍ಕುಮಾರ್, ಅತೀ ನಯವಾದ…
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಉತ್ತರ ಕನ್ನಡ ಮಧ್ಯಾಹ್ನ ನಂತರ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ ಇವತ್ತಿನಿಂದ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನವೆಂಬರ್ 1ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತಿನಿಂದ ಹಾಗೂ ಹಾಸನ, ಕೊಡಗು ಭಾಗಗಳಲ್ಲಿ ಒಕ್ಟೊಬರ್ 31ರಿಂದ ಮಳೆ ಆರಂಭವಾಗುವ ಲಕ್ಷಣಗಳಿವೆ. ಒಳನಾಡು : ಉತ್ತರ ಒಳನಾಡಿನ ಹಾವೇರಿ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಮಧ್ಯಾಹ್ನ…
ಮೈಸೂರು: ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. ಇಂದು ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ…
ತಿರುವನಂತಪುರಂ: ಕೇರಳ ಸಿಎಂ ವಿಜಯನ್ ಅವರು ಪ್ರಯಾಣಿಸುತ್ತಿದ್ದ ವಾಹನ ಸೇರಿದಂತೆ ಬೆಂಗಾವಲು ವಾಹನಗಳು ಸರಣಿ ಅಪಘಾತ ಸಂಭವಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ. ಕೊಟ್ಟಾಯಂಗೆ ಭೇಟಿ ನೀಡಿ ರಾಜ್ಯ ರಾಜಧಾನಿಗೆ ವಾಪಸ್ಸಾಗುವ ವೇಳೆ ತಿರುವನಂತಪುರಂ ಬಳಿ ಮಹಿಳೆಯೊಬ್ಬರು ದ್ವಿಚಕ್ರ ವಾಹನದಲ್ಲಿ ಏಕಾಏಕಿ ಅಡ್ಡ ಬಂದಿದ್ದಾರೆ. ಈ ವೇಳೆ ಬೆಂಗಾವಲು ಪಡೆ ವಾಹನ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದೆ ಇದ್ದ ಇತರ ಬೆಂಗಾವಲು ಪಡೆಗಳ ವಾಹನಗಳು ಒಂದರ ಹಿಂದೆ ಒಂದು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಬೇರೆ ವಾಹನದಲ್ಲಿ ಕೇರಳ ಸಿಎಂ ವಿಜಯನ್ ಅವರನ್ನು ಕಳುಹಿಸಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಪಾಪಿ ತಂದೆಯೋರ್ವ (ಮಂತ್ರವಾದಿ) ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ಈ ಘಟನೆ ನಡೆದಿದೆ. ಸದ್ದಾಂ ಎಂಬಾತ ನಿಧಿಗಾಗಿ ಮಾಟ ಮಂತ್ರ ಮಾಡುತ್ತಿದ್ದನು. ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ. ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಕರ್ನಾಟಕದಲ್ಲಿ ಅನ್ಯ ಭಾಷಾ ಸಿನಿಮಾಗಳು ಬಿಡುಗಡೆಯಾದಾಗ 1500 ರೂ ಗಳಿಂದ 2000 ರೂ ಗಳವರೆಗೂ ಟಿಕೆಟ್ ಬೆಲೆ ಹೆಚ್ಚಿಸಲಾಗುತ್ತಿದೆ. ಇದರ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಏಕ ರೂಪದ ಟಿಕೆಟ್ ದರ ವಿಧಿಸಲು ಇದೀಗ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮಾತನಾಡಿರುವ ನಿರ್ಮಾಪಕ ಸಾ.ರಾ.ಗೋವಿಂದು, ವಿತರಕರಿಗೆ ಈಗಲೇ ಹೇಳುತ್ತೇವೆ, ಬೇರೆ ಭಾಷೆ ಸಿನಿಮಾಗೆ ಹೆಚ್ಚು ದುಡ್ಡು ಕೊಟ್ಟು ತರಬೇಡಿ. ಮುಂದೆ ಟಿಕೆಟ್ ದರ 200 ರೂಪಾಯಿ ಆಗುತ್ತದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ 180, 150 ಟಿಕೆಟ್ ದರ ಇದ್ದರೆ ಇಲ್ಲಿ 1200 ರೂಪಾಯಿ ಇದೆ. ಪುಷ್ಪ 2 ಚಿತ್ರಕ್ಕೆ 200 ರೂಪಾಯಿಗಿಂತ ಜಾಸ್ತಿ ದರ ಇಟ್ಟರೆ ಅದರಿಂದ ದೊಡ್ಡ ತೊಂದರೆ ಆಗಲಿದೆ. ಥಿಯೇಟರ್‌ಗಳಿಗೆ ಮುತ್ತಿಗೆ ಹಾಕಲಾಗುತ್ತದೆ. ಮಲ್ಟಿಪ್ಲೆಕ್ಸ್‌ನಲ್ಲಿ ರಜನಿಕಾಂತ್ ಚಿತ್ರಕ್ಕೆ 6 ಸ್ಕ್ರೀನ್ ಕೊಟ್ಟರೆ ಕನ್ನಡ ಸಿನಿಮಾಗೆ 2 ಶೋ ಕೊಡಲಾಗಿತ್ತು. ಟಿಕೆಟ್ ಬೆಲೆ 1500 ರೂಪಾಯಿ ನಿಗದಿ ಮಾಡಿದ್ದರು’ ಎಂದಿದ್ದಾರೆ. ಸದ್ಯ ಪರಭಾಷೆಯ ಚಿತ್ರಗಳ ವಿಷಯಕ್ಕೆ ಬರುವುದಾದರೆ ಅಲ್ಲು…
ನ್ಯೂಡಲ್ಸ್ ಅಂದ್ರೆ ಚೈನಿಸ್ ಫುಡ್ ಎಂದೇ ಪ್ರಚಲಿತ. ಆದ್ರೆ ಇಲ್ಲೊಂದು ದೇವಸ್ಥಾನದಲ್ಲಿ ನ್ಯೂಡಲ್ಸ್ ಅನ್ನೇ ಭಕ್ತರಿಗೆ ಪ್ರಸಾದವಾಗಿ ನೀಡಲಾಗುತ್ತದೆಯಂತೆ! ಕೋಲ್ಕತ್ತಾದ ಕಾಳಿ ದೇಗುಲದಲ್ಲಿ ಇಂತಹದ್ದೊಂದು ವಿಶೇಷ ಪ್ರಸಾದವನ್ನು ಭಕ್ತರಿಗೆ ನೀಡಲಾಗುತ್ತಿದೆ. ಎಲ್ಲಾ ದೇವಸ್ಥಾನಗಳಲ್ಲಿ ಕೂಡ ಪ್ರಸಾದದ ರೂಪದಲ್ಲಿ ತಿಂಡಿ ತಿನಿಸುಗಳನ್ನು ನೀಡುವುದು ಸಾಮಾನ್ಯ ಆದ್ರೆ ಈ ದೇವಸ್ಥಾನದಲ್ಲಿ ನ್ಯೂಡಲ್ಸ್ ನ್ನೇ ಪ್ರಸಾದವಾಗಿ ಬಡಿಸಲಾಗುತ್ತದೆ. ಅಂದ ಹಾಗೇ ಇಲ್ಲಿ ನ್ಯೂಡಲ್ಸ್ ಪ್ರಸಾದವಾಗಿ ಬಳಕೆಯಾಗಲು ಕಾರಣವಿದೆ. ಈ ಪ್ರದೇಶವನ್ನು ಚೀನಾ ಟೌನ್ ಅಂತನೇ ಕರೆಯಲಾಗುತ್ತದೆಯಂತೆ. ಅಲ್ಲದೇ ಇಲ್ಲಿರುವ ಕಾಳಿ ದೇವಿಯ ದೇವಾಲಯ ಚೈನಿಸ್ ದೇವಾಲಯ ಎಂದೇ ಕರೆಯಲಾಗುತ್ತದೆಯಂತೆ! ಟಾಂಗ್ರಾ ಏರಿಯಾದಲ್ಲಿರುವ ಈ ಚೈನೀಸ್ ಕಾಳಿ ದೇಗುಲದಲ್ಲಿ ನ್ಯೂಡಲ್ಸ್, ಚಾಪ್ ಸ್ಯೂ, ಅನ್ನ ಹಾಗೂ ತರಕಾರಿಯ ಖಾದ್ಯಗಳನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಬಂಗಾಳಿಗಳು ಕೂಡ ಈ ದೇಗುಲಕ್ಕೆ ಆಗಮಿಸ್ತಾರೆ ಹಾಗೂ ಕೈಯಲ್ಲೇ ಮಾಡಿದ ಕಾಗದವನ್ನು ಸುಡುವ ಮೂಲಕ ದುಷ್ಟ ಶಕ್ತಿಯನ್ನು ದೂರ ಇಡಲಾಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಚೈನೀಸ್ ಇನ್ ಸೆನ್ಸ್ ಸ್ಟಿಕ್ ಗಳ ಮೂಲಕ ಮೇಣದಬತ್ತಿಯನ್ನು…
ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್‌ನ ಸುಂದರ್ ಬನಿ ಸೆಕ್ಟರ್‌ನಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಹೆಮ್ಮೆಯ ಶ್ವಾನ ‘ಫ್ಯಾಂಟಮ್’ ಸೋಮವಾರ ವೀರ ಮರಣವನ್ನಪ್ಪಿದೆ. ಸೋಮವಾರ ಬೆಳಿಗ್ಗೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನಾ ಪಡೆಯ ಶ್ವಾನ ‘ಫ್ಯಾಂಟಮ್’ ಗೆ ಗಂಭೀರ ಗಾಯವಾಗಿತ್ತು ಕೂಡಲೇ ಶ್ವಾನಕ್ಕೆ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಫ್ಯಾಂಟಮ್ ಬೆಲ್ಜಿಯನ್ ಮಾಲಿನೋಯಿಸ್ ತಳಿಗೆ ಸೇರಿದ ಶ್ವಾನವಾಗಿದ್ದು, 2020ರ ಮೇ ತಿಂಗಳಲ್ಲಿ ಜನಿಸಿತ್ತು. ಬಳಿಕ 2022ರಲ್ಲಿ ಸೇನೆಗೆ ಸೇರ್ಪಡೆಗೊಂಡಿತ್ತು ಅಲ್ಲದೆ ಶ್ವಾನ K9 ಘಟಕದ ಭಾಗವಾಗಿತ್ತು, ಭಯೋತ್ಪಾದನೆ–ವಿರೋಧಿ ಕಾರ್ಯಾಚರಣೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿತ್ತು. ಅಗಲಿದ ಶ್ವಾನಕ್ಕೆ ಸೇನೆಯ ವೈಟ್ ನೈಟ್ ಕಾರ್ಪ್ಸ್ ವಂದನೆ ಸಲ್ಲಿಸಿ ಗೌರವ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…