Author: admin

ಬಾಗಲಕೋಟೆ : ಎಂಟಿಆರ್ ಮಸಾಲ ಪ್ಯಾಕೆಟ್ ನಲ್ಲಿ ಹುಳು ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ. ಪ್ರತಿಷ್ಠಿತ ಬ್ರಾಂಡ್ ಆಗಿರುವ ಎಂಟಿಆರ್ ಮಸಾಲೆಯನ್ನು ಗ್ರಾಹಕರು ಖರೀದಿಸಿದ್ದಾರೆ, ಪ್ಯಾಕೆಟ್ ತೆರೆದಾಗ ಅದರಲ್ಲಿ ಹುಳುಗಳು ಪತ್ತೆಯಾಗಿವೆ. ಅಂದ ಹಾಗೆ ಪ್ಯಾಕೆಟ್ ನಲ್ಲಿ ಎಕ್ಸ್’ಪರಿ ಡೇಟ್ ಮುಕ್ತಾಯವಾಗಿಲ್ಲ. ಅದಕ್ಕೂ ಮೊದಲೇ ಪ್ಯಾಕೆಟ್ ನಲ್ಲಿ ಹುಳುಪತ್ತೆಯಾಗಿರುವುದು. ಆಹಾರ ಭದ್ರತೆಯ ಬಗ್ಗೆ ಆತಂಕ ಸೃಷ್ಟಿಸಿದೆ. MTR ಮಸಾಲ ಪ್ಯಾಕೆಟ್​ನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಃಕರು ಕಂಪನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹಾಸನ: ಕೇಂದ್ರ ರಾಜ್ಯ ರೈಲ್ವೆ ಹಾಗೂ ಜಲ ಶಕ್ತಿ ಸಚಿವರಾದ ವಿ.ಸೋಮಣ್ಣ ಅವರು ಇಂದು ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿದ ಸಚಿವರು, ಜಿಲ್ಲಾಡಳಿತದಿಂದ ಬಹಳ ಅಚ್ಚುಕಟ್ಟಾಗಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉತ್ತಮ ವ್ಯವಸ್ಥೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಅಭಿನಂದನೆಗಳನ್ನು ತಿಳಿಸಿದರು. ಚಿಕ್ಕಮಗಳೂರು-ಬೇಲೂರು-ಆಲೂರು ರೈಲ್ವೆ ಯೋಜನೆ ಮೂರು ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ಮಂಗಳೂರಿಗೆ ಹೆಚ್ಚುವರಿ ರೈಲು ಜೊತೆಗೆ ಚಿಕ್ಕಮಗಳೂರು- ಬೇಲೂರು-ಆಲೂರಿಗೆ 585 ಎಕರೆ ಜಾಗವನ್ನು  ಭೂಸ್ವಾಧಿನಕ್ಕೆ ಜಿಲ್ಲಾಧಿಕಾರಿ  11 ನೋಟಿಫಿಕೇಷನ್ೈ ಮಾಡಿದ್ದಾರೆ. ಶೀಘ್ರದಲ್ಲೇ ನಮಗೆ ಹಸ್ತಾಂತರ ಮಾಡಲಿದ್ದು,  ಮೂರು ವರ್ಷದಲ್ಲಿ ಈ ಯೋಜನೆ ಮುಗಿಯಲಿದೆ ಎಂದು ತಿಳಿಸಿದರು. ನಾನು ಸಚಿವನಾದ ಮೇಲೆ ಕರ್ನಾಟಕ ರಾಜ್ಯದಲ್ಲಿ 11  ಯೋಜನೆಗಳು, 1800 ಹೊಸ ಲೈನ್‌ಗಳನ್ನು ಹಾಕಲು ಚಾಲನೆ ಕೊಟ್ಟಿದ್ದೇವೆ. ಈಗಾಗಲೇ ತುಮಕೂರು, ರಾಯದುರ್ಗ, ದಾವಣಗೆರೆ, ಗದಗ ಹತ್ತು ಹಲವಾರು ಕಡೆ ಕೆಲಸ ನಡೆಯುತ್ತಿದೆ. ಅಲ್ಲದೆ…

Read More

ಈ ಬಾರಿಯ ದೀಪಾವಳಿ ವಿಶೇಷವಾಗಿರಲಿದೆ. ಇದಕ್ಕೆ ಕಾರಣ ಶನಿ-ಗುರು ಗ್ರಹಗಳು.ಇವರಿಬ್ಬರ ಚಲನೆಯಲ್ಲಿನ ಬದಲಾವಣೆಯಿಂದ ಧನಯೋಗ ರೂಪುಗೊಳ್ಳುತ್ತಿದೆ. ಇದು ಕೆಲವು ರಾಶಿಯವರಿಗೆ ವಿಶೇಷ ರಾಜಯೋಗವನ್ನು ಕರುಣಿಸುತ್ತದೆ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ  9535156490  ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಶನಿಯು ತನ್ನ ಮೂಲ ರಾಶಿಯಾದ ಕುಂಭದಲ್ಲಿ ಹಿಮ್ಮುಖವಾಗಿ ಚಲಿಸಿದರೆ…

Read More

ತುಮಕೂರು: ಒಳಮೀಸಲಾತಿ ಜಾರಿಗೆ ತರಬೇಕು ಹಾಗೆಯೇ ಒಳಮೀಸಲಾತಿ ಜಾರಿ ಹಾಗುವವರೆಗೂ ಈಗ ಘೋಷಣೆಯಾಗಿರುವ ನೇಮಕಾತಿ ಆದೇಶ ತಡೆಹಿಡಿಯಬೇಕು ಎಂದು ಮಾದಿಗ ದಂಡೋರ ರಾಜ್ಯಾಧ್ಯಕ್ಷ ಪಾವಗಡ ಶ್ರೀರಾಮ್ ಒತ್ತಾಯಿಸಿದರು. ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಹಮ್ಮಿಕೊಳ್ಳಲಾಗಿದ್ದ ತಮಟೆ ಚಳುವಳಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನಂತೆ ಹರಿಯಾಣದಲ್ಲಿ ಒಳಮೀಸಲಾತಿ ಜಾರಿಗೆ ತಂದಿದ್ದಾರೆ. ಕೆಲವು ರಾಜ್ಯಗಳಲ್ಲಿ ದತ್ತಾಂಶ ಕೊರತೆ ಇರಬಹುದು. ಆದರೆ ಕರ್ನಾಟಕದಲ್ಲಿ LG ಹಾವನೂರ ವರದಿ, ಸದಾಶಿವವರದಿ, ಕಾಂತರಾಜ್ ವರದಿ, ಮಾಧುಸ್ವಾಮಿ ವರದಿ, ನಗಮೋಹನ್ ದಾಸ್ ವರದಿ ಇವೆಲ್ಲದರ ಜೊತೆಗೆ 2011 ಜಾತಿಜನಗತಿ ಇದ್ದರೂ ಇನ್ನೂ ದತ್ತಾಂಶ ಕೇಳುವುದು ಅಂದರೆ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎನ್ನುವ ಲೆಕ್ಕಾಚಾರ ನಮಗೆ ಅರ್ಥವಾಗುತ್ತದೆ ಎಂದರು. ಒಳಮೀಸಲಾತಿ ತೀರ್ಮಾನ ಆಗಿಲ್ಲ ಅಂದರೆ ಈಗ ನಡೆಯುವ ಚುನಾವಣೆಯಲ್ಲಿ ನಮ್ಮ ಸಮಾಜ ಬುದ್ಧಿ ಕಲಿಸುತ್ತದೆ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. Y.H.ಹುಚ್ಚಯ್ಯ, ಕೆಂಚಮಾರಯ್ಯ, ವಾಲೆಚಂದ್ರಣ್ಣ ನರಸೀಯಪ್ಪ, ಗುಬ್ಬಿ ಜಗನಾಥ, ಮಧುಗಿರಿ ಗೋಪಾಲಯ್ಯ, B.G.ಸಾಗರ್, ರಾಮಣ್ಣ, ಯೋಗೀಶ್ ನಿಟ್ಟೂರು ರಂಗಶಮಯ್ಯ,…

Read More

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಭಾಗಗಳಲ್ಲಿ ಅರಬ್ಬಿ ಸಮುದ್ರ ಕಡೆಯಿಂದ ಗಾಳಿ ಬೀಸುತ್ತಿದ್ದು, ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಈ ವಾತಾವರಣವು ಹೀಗೆ ಮುಂದುವರಿಯುವ ಲಕ್ಷಣಗಳಿದ್ದು, ಒಕ್ಟೊಬರ್ 31ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಾಗೂ ನವೆಂಬರ್ 2ರಿಂದ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮಳೆ ಆರಂಭವಾಗುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಮೋಡದ ವಾತಾವರಣದ ಸಾಧ್ಯತೆ ಇದ್ದು, ಒಂದೆರಡು ಕಡೆ…

Read More

ಸುಪ್ರೀಂ ಕೋರ್ಟ್ ತೀರ್ಪಿನಂತೆ, ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಣಯ ಮಾಡಬೇಕೆಂದು ತುಮಕೂರು ಜಿಲ್ಲೆಯ ಛಲವಾದಿ ಮಹಾಸಭಾ (ರಿ) ರಾಜ್ಯ ಸರ್ಕಾರದ ಗಮನ ಸೆಳೆಯಲು ಮುಂದಾಗಿದೆ. ತುಮಕೂರು ಛಲವಾದಿ ಮಹಾಸಭಾ, ಪರಿಶಿಷ್ಟ ಜಾತಿಗಳೊಳಗಿನ ಎಕೆ, ಎಡಿಕೆ, ಎಎ ಎಂಬ ವರ್ಗಗಳಲ್ಲಿ ಜಾತಿಗಳ ಗೊಂದಲಗಳನ್ನು ಸರಿಪಡಿಸಿ, ನಿಖರವಾದ ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿಯನ್ನು ನಿಶ್ಚಿತಗೊಳಿಸಬೇಕೆಂದು ತೀವ್ರ ಒತ್ತಾಯಿಸಿದೆ. ಈ ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದ್ದು, ಈ ವೇಳೆ ಪ್ರಮುಖ ಛಲವಾದಿ ಮುಖಂಡರು ಪಾಲ್ಗೊಂಡಿದ್ದರು. ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಸಿ. ಭಾನು ಪ್ರಕಾಶ್ ಅವರು ಮಾತನಾಡಿ, “ಪ್ರತಿಯೊಂದು ಸಮುದಾಯದ ಜನಸಂಖ್ಯೆಯನ್ನು ಆಧರಿಸಿ ಮೀಸಲಾತಿ ನೀಡಬೇಕು. ಈ ಮೂಲಕ ಪರಿಶಿಷ್ಟ ಜಾತಿಗಳೊಳಗಿನ ಎಲ್ಲ ವರ್ಗಗಳಿಗೂ ಸಮಾನ ಅವಕಾಶಗಳು ಸಿಗುತ್ತವೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇತರ ಮುಖಂಡರಾದ ಛಲವಾದಿ ಶೇಖರ್, ರಾಜಣ್ಣ, ಪಿಪಿ ಹೆಚ್.ಎಸ್. ಪರಮೇಶ್ವರ್, ದೊಡ್ಡಸಿದ್ದಯ್ಯ, ಸಿದ್ದಲಿಂಗಯ್ಯ ಜಿ.ಸಿ., ನಾಗೇಶ್, ಹೆಗ್ಗೇರಿ ಕೃಷ್ಣಪ್ಪ ಮೊದಲಾದವರು ಭಾಗಿಯಾಗಿದ್ದರು. ನಮ್ಮತುಮಕೂರಿನ…

Read More

ಹೈದರಾಬಾದ್: ಮೊಮೊಸ್ ಸೇವಿಸಿ ಹಲವರು ಅಸ್ವಸ್ಥಗೊಂಡು ಓರ್ವ ಮಹಿಳೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಹೈದರಾಬಾದ್ ನ ಬಂಜಾರ ಹಿಲ್ಸ್ ಪಿಎಸ್ ನಲ್ಲಿ ನಡೆದಿದೆ. ರೇಷ್ಮಾ (29) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ಈಕೆ ಸಿಂಗದಕುಂಟಾ ಬಸ್ತಿಯ ನಿವಾಸಿಯಾಗಿದ್ದಾಳೆ. ಮೊಮೊಸ್ ತಿಂದ ಬಳಿಕ ರೇಷ್ಮಾ ಅಸ್ವಸ್ಥಗೊಂಡಿದ್ದರು. ಹೀಗಾಗಿ ಮನೆಯವರು ನಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಇಲ್ಲಿನ ನಂದಿನಗರದಲ್ಲಿ ವಾರದ ಸಂತೆಯಲ್ಲಿ ಬೀದಿಬದಿ ವ್ಯಾಪಾರಿಯ ಬಳಿ ರೇಷ್ಮಾ ಮೊಮೊಸ್ ಖರೀದಿಸಿ ಸೇವನೆ ಮಾಡಿದ್ದರು. ಬಳಿಕ ಅವರು ಅಸ್ವಸ್ಥಗೊಂಡಿದ್ದರು. ರೇಷ್ಮಾ ಮಾತ್ರವಲ್ಲದೇ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಈ ಪೈಕಿ 10 ಅಪ್ರಾಪ್ತ ವಯಸ್ಸಿನ ಮಕ್ಕಳು ಎಂದು ಹೇಳಲಾಗಿದೆ. ಸಂತ್ರಸ್ತರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೊಮೊಸ್ ಮಾರಾಟ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಮೋಮಸ್ ಹೇಗೆ ತಯಾರಿಸಲಾಗಿದೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಒಳಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆ ಮಾಡಲಾಗುತ್ತದೆ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗುತ್ತದೆ. ದತ್ತಾಂಶ ಸ್ವೀಕರಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಸಚಿವ ಹೆಚ್.ಕೆ ಪಾಟೀಲ್ ಹೇಳಿದರು. ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿದ್ದರು. ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇನೆ. ಒಳಮೀಸಲಾತಿಯನ್ನು ದಲಿತ ಸಮುದಾಯ ಒಮ್ಮತದಿಂದ ಒಪ್ಪಿಕೊಂಡು ಅನುಷ್ಠಾನಕ್ಕೆ ಬೆಂಬಲ ನೀಡಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಸೌಲಭ್ಯದ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ ಎಂದಿದ್ದರು. ನಮ್ಮತುಮಕೂರಿನ…

Read More

ಬೆಂಗಳೂರು: ದೀಪಾವಳಿಯಂದು ಪಟಾಕಿ ಸಿಡಿಸುವವರು ರಾತ್ರಿ 8ರಿಂದ 10 ಗಂಟೆಯೊಳಗೆ ಪಟಾಕಿ ಸಿಡಿಸಬೇಕಿದೆ. ರಾತ್ರಿ 10 ಗಂಟೆಯ ನಂತರ ಪಟಾಕಿ ಸಿಡಿಸುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಈ ಬಗ್ಗೆ ಎಚ್ಚರಿಕೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪರಿಸರ ಮಾಲಿನ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಟಾಕಿ ಸಿಡಿಸಿದರೆ ಅಗತ್ಯ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಲಾಗಿದೆ. ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ. ಒಂದು ವೇಳೆ ರಾತ್ರಿ 10 ಗಂಟೆ ನಂತರವೂ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಮನಸ್ಸೋ ಇಚ್ಚೆ ಪಟಾಕಿ ಸಿಡಿಸುವುದಕ್ಕೆ ಕಡಿವಾಣ ಹಾಕಲು ವಲಯ ಮಟ್ಟದಲ್ಲೂ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ.…

Read More

ITI Limited Job Recruitment 2024– ಐಟಿಐ ಲಿಮಿಟೆಡ್ ಕಂಪನಿಯು ಬೆಂಗಳೂರು ಸೇರಿದಂತೆ ವಿವಿಧೆಡೆ ಖಾಲಿ ಇರುವ ಉದ್ಯೋಗಗಳ ಭರ್ತಿಗೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರುವವರಿಗೆ ಐಟಿಯ ಲಿಮಿಟೆಡ್ ಕಂಪನಿಯಲ್ಲಿ ವಿವಿಧ 50 ಯಂಗ್ ಪ್ರೊಫೇಷನಲ್ ಹುದ್ದೆಗಳು ಖಾಲಿ ಇವೆ. ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 28ರೊಳಗೆ ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ನೇಮಕಾತಿ ಬಗ್ಗೆ ಇಲ್ಲಿದೆ ಮಾಹಿತಿ: ನೇಮಕಾತಿ ಸಂಸ್ಥೆ: ಐಟಿಯ ಲಿಮಿಟೆಡ್ ಕಂಪನಿ ಹುದ್ದೆಗಳು ಹೆಸರು: ಯಂಗ್ ಪ್ರೊಫೇಷನಲ್ ಹುದ್ದೆಗಳು ಒಟ್ಟು ಹುದ್ದೆಗಳು: 50 ವಯೋಮಿತಿ: ಗರಿಷ್ಠ 32 ವರ್ಷಗಳು ಮಾಸಿಕ ವೇತನ: ನಿಯಮಾನುಸಾರ ಅರ್ಜಿ ಸಲ್ಲಿಕೆ ಕೊನೆ ದಿನ: ನವೆಂಬರ್ 28 ಪೋಸ್ಟಿಂಗ್: ಬೆಂಗಳೂರು ಸೇರಿ ವಿವಿಧೆಡೆ ಒಟ್ಟು 50 ಹುದ್ದೆಗಳ ಪೈಕಿ ಆರ್ ಅಂಡ್ ಡಿ ಹುದ್ದೆ 04, ಡಾಟಾ ಸೆಂಟರ್ 04, ಲೀಗಲ್ ಸೆಲ್ 04, ಸಿವಿಲ್ 03, ಎಚ್‌ಆರ್ 02,…

Read More