Author: admin

ಕೋಲಾರ: ಅತ್ತಿಗೆ ಮೇಲೆ ಕಣ್ಣು ಹಾಕಬೇಡ ಎಂದು ವಾರ್ನಿಂಗ್ ನೀಡಿದ ಯುವಕನನ್ನು ಸ್ನೇಹಿತನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ನಡೆದಿದೆ. ರೋಹಿದ್​ ಅಲಿಯಾಸ್ ಅರ್ಬಾಜ್(26) ಹತ್ಯೆಗೀಡಾದ ಯುವಕ ಎಂದು ತಿಳಿದು ಬಂದಿದೆ.  ಅಮ್ಜದ್ ಎಂಬಾತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ರೋಹಿದ್​ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಅಮ್ಜಾದ್ ಆಗಾಗ ರೋಹಿದ್​ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್​ ಅಣ್ಣನ ಹೆಂಡತಿ ಮೇಲೆ ಕಣ್ಣು ಹಾಕಿದ್ದು, ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಕರೆ ಮಾಡಿ ಪೀಡಿಸುತ್ತಿದ್ದ. ಈ ವಿಷಯ ಮನೆಯವರಿಗೆ ತಿಳಿದಿದ್ದು, ಈ ವೇಳೆ ಅಮ್ಜಾದ್‌ ಮನೆ ಬಳಿ ಹೋಗಿ‌ ರೋಹಿದ್​ & ಸಂಬಂಧಿಕರು ಗಲಾಟೆ ನಡೆಸಿ ವಾರ್ನಿಂಗ್ ಕೊಟ್ಟಿದ್ದರು. ಇಷ್ಟಾದ್ರೂ ರೋಹಿದ್ ಗೆ ಬುದ್ಧಿ ಬರಲಿಲ್ಲ,  ಬಳಿಕ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದ ಎನ್ನಲಾಗಿದೆ.  ನಿನ್ನೆ ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್​ ರಾತ್ರಿ ವಾಪಾಸ್  ಬಂದಿದ್ದ. ಈ…

Read More

ಬೆಳಗಾವಿ: ಸಚಿವ ಬೈರತಿ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಚಿವೆ ಶೋಭಾ ಕರಂದ್ಲಾಜೆ, ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ ಅಂತ ಸವಾಲು ಹಾಕಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈರತಿ ಸುರೇಶ ‌ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಾವಿರಾರು ಕಡತಗಳನ್ನು ತಂದು, ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ‌ ಎಂದು ದೂರಿದರು. ಈ ಹಿಂದೆ ಹಲವಾರು ಸರ್ಕಾರದವರು ನನ್ನ ಬಗ್ಗೆ ಆರೋಪ ಮಾಡಿ, ತನಿಖೆ ಮಾಡಿದರು. ಆದರೆ, ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ತಿರುಗೇಟು ಕೊಟ್ಟರು. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಸಿ.ಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಆದರೆ, ಪೊನ್ನಣ್ಣ ಅವರಿಗೂ ವಿದ್ಯುತ್ ಇಲಾಖೆಗೂ ಏನು ಸಂಬಂಧ? ನಕಲಿ ಕಡತ ಸೃಷ್ಟಿಸಲು ಪೊನ್ನಣ್ಣ ಅವರಿಗೆ ಜವಾಬ್ದಾರಿ ಕೊಟ್ಟಿದ್ದೀರಿ. ಇದರಲ್ಲೂ ಒಂದು ಭ್ರಷ್ಟಾಚಾರ ಮಾಡಲು ಹೊರಟಿದ್ದೀರಿ. ನಿಮ್ಮ ಬಳಿ ಇರುವ…

Read More

ಗುಜರಾತ್ :  ಮಧ್ಯರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ರಸ್ತೆಯಲ್ಲಿ ಸಿಂಹವೊಂದು ಎದುರಾದ ಘಟನೆ ಗುಜರಾತ್ ನಲ್ಲಿ ನಡೆದಿದ್ದು,  ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರು ಮಧ್ಯರಾತ್ರಿ  ಬೈಕ್ ನಲ್ಲಿ ರಸ್ತೆಯಲ್ಲಿ ಬರುತ್ತಿದ್ದರು.  ಬೈಕ್ ತಿರುವುವೊಂದನ್ನು ದಾಟಿ ಮುಂದೆ ಹೋಗುತ್ತಿದ್ದಂತೆಯೇ ಏಕಾಏಕಿ ನಿಂತು ಬಿಡುತ್ತದೆ. ಈ ವೇಳೆ ಹಿಂಬದಿ ಸವಾರ ಬೈಕ್ ನಿಂದ ಇಳಿದು ಎದ್ದೂ ಬಿದ್ದು ಓಡುತ್ತಾನೆ, ನಂತರ ಬೈಕ್ ಸವಾರ ಕೂಡ ಬೈಕ್ ನ್ನು ಸ್ಥಳದಲ್ಲೇ ಸ್ಟಾಂಡ್ ಹಾಕಿ ನಿಲ್ಲಿಸಿ, ಓಡುತ್ತಾನೆ. ಸ್ವಲ್ಪ ಹೊತ್ತಲ್ಲೇ ಸಿಂಹ ಇವರಿಬ್ಬರನ್ನು ಅಟ್ಟಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ನ ಹೆಡ್ ಲೈಟ್ ನಿಂದಾಗಿ ಸಿಂಹಕ್ಕೆ ಇದು ಮನುಷ್ಯರು ಎನ್ನುವುದು ಏಕಾಏಕಿ ತಿಳಿಯಲಿಲ್ಲ ಅನ್ಸುತ್ತೆ ಇಲ್ಲವಾದ್ರೆ ಬೈಕ್ ಸವಾರರ ಕಥೆ ಮುಗಿಯುತ್ತಿತ್ತು ಅಂತ ನೆಟ್ಟಿಗರು ಈ ವಿಡಿಯೋಕ್ಕೆ ಕಾಮೆಂಟ್ ಹಾಕಿದ್ದಾರೆ. Damn💀 pic.twitter.com/p6Q0yW9Nv3 — Ghar Ke Kalesh (@gharkekalesh) October 10, 2024 ನಮ್ಮತುಮಕೂರಿನ ಕ್ಷಣ…

Read More

ಮಳೆಯ ಪ್ರಮಾಣ  ತಗ್ಗಿದೆ, ಚಳಿಗಾಲ ಬರ್ತಿದೆ. ಈ ಚಳಿಗಾಲದಲ್ಲಿ ವಾತಾವರಣದ ಬದಲಾವಣೆಯಿಂದ ಸಾಕಷ್ಟು  ಆರೋಗ್ಯದ ಸಮಸ್ಯೆಗಳು ಕೂಡ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಚಳಿಗಾಲದಲ್ಲಿ ನಮ್ಮ ರಕ್ಷಣೆಗೆ ಬಿಸಿ ನೀರು ಹೇಗೆ ಸಹಕಾರಿಯಾಗಲಿದೆ ಎನ್ನುವುದನ್ನು ತಿಳಿದುಕೊಳ್ಳೋಣ… ಚಳಿಗಾಲದಲ್ಲಿ ಬಿಸಿನೀರು ಮ್ಯಾಜಿಕ್‌ ಮಾಡುತ್ತದೆ. ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಶೀತ ಮತ್ತು ಕೆಮ್ಮು ಬರುವ ಅಪಾಯ ಕಡಿಮೆಯಾಗುತ್ತದೆ. ಇದು ಬ್ಯಾಕ್ಟೀರಿಯಾ ದಾಳಿಯಿಂದ ಗಂಟಲನ್ನು ರಕ್ಷಿಸುತ್ತದೆ. ಚಳಿಗಾಲದಲ್ಲಿ ಬಿಸಿ ನೀರಿನಿಂದ ಸ್ನಾನ ಮಾಡುವುದರಿಂದ ಆರೋಗ್ಯಕ್ಕೂ ಒಳ್ಳೆಯದು. ಈ ಕಾರಣದಿಂದಾಗಿ ರಕ್ತ ಪರಿಚಲನೆಯು ಉತ್ತಮವಾಗಿರುತ್ತದೆ. ಉಗುರುಬೆಚ್ಚನೆಯ ನೀರನ್ನು ಕುಡಿಯುವುದರಿಂದ, ದೇಹದ ಚಯಾಪಚಯ ಸರಿಯಾಗಿರುತ್ತದೆ. ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬು ಕೂಡ ವೇಗವಾಗಿ ಕರಗಲು ಪ್ರಾರಂಭಿಸುತ್ತದೆ. ಬಿಸಿನೀರು ಕುಡಿಯುವ ಮೂಲಕ ಬೇಗನೆ ತೂಕ ಕಡಿಮೆ ಮಾಡಿಕೊಳ್ಳಬಹುದು. ಬಿಸಿನೀರು ಮೂತ್ರಪಿಂಡದ ಕಾರ್ಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನೂ ನಿವಾರಿಸುತ್ತದೆ. ದಿನನಿತ್ಯ ಬಿಸಿನೀರು ಕುಡಿದರೆ ತ್ವಚೆಯ ಶುಷ್ಕತೆಯನ್ನು ಹೋಗಲಾಡಿಸಿಕೊಳ್ಳಬಹುದು. ಇದು ತ್ವಚೆಯನ್ನು ಕಾಂತಿಯುತವಾಗಿಸುತ್ತದೆ. ಚರ್ಮವನ್ನು ಯಂಗ್‌ ಆಗಿಸಲು ಬಿಸಿನೀರು ಸಹಕಾರಿ. ಹಾಗಾಗಿ ಸದಾ…

Read More

ನವದೆಹಲಿ: ದೃಶ್ಯಂ ಸಿನಿಮಾದ ದೃಶ್ಯದಿಂದ ಪ್ರೇರೇಪಣೆಗೊಂಡು  ದಂಪತಿ, ಯುವತಿಯೊಬ್ಬಳನ್ನು ಹತ್ಯೆ ಮಾಡಿ, ಆಕೆಯ ಚಿನ್ನದ ಸರವನ್ನು ಕದ್ದಿರುವ ಘಟನೆ ಗುಜರಾತ್ ನಾಡಿಯಾಡ್ ನಲ್ಲಿ ನಡೆದಿದೆ. ಮಲಯಾಳಂ ಮೂಲದ ದೃಶ್ಯಂ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗಿತ್ತು. ಈ ಸಿನಿಮಾದಿಂದ ಪ್ರೇರೇಪಣೆಗೊಂಡು ಜಯದೀಪ್ ಸೋನಿ ಮತ್ತು ಅವರ ಪತ್ನಿ ಲತಾ ದಂಪತಿಗಳು ತಮ್ಮ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಕೊಲೆ  ಮಾಡಿದ್ದಾರೆ. ಪಾಕವಿಧಾನದ ಬಗ್ಗೆ ಚರ್ಚಿಸುವ ನೆಪದಲ್ಲಿ ಅವರು ಸೆಪ್ಟೆಂಬರ್ 28 ರಂದು ಸೌಮ್ಯಾ ಅವರನ್ನು ತಮ್ಮ ಮನೆಗೆ ಕರೆದೊಯ್ದರು.  ಒಳಗೆ ಪ್ರವೇಶಿಸಿದ ನಂತರ, ಅವರು ಅವಳನ್ನು ಉಸಿರುಗಟ್ಟಿಸಿ ಮೊಂಡು ವಸ್ತುವಿನಿಂದ ಹೊಡೆದು ಕೊಂದರು ಎಂದು ನಾಡಿಯಾಡ್ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ಜೆ.ಎಚ್.ವಘೇಲಾ ತಿಳಿಸಿದ್ದಾರೆ. ಕೊಲೆಯ ನಂತರ ದಂಪತಿ ಗೋಣಿ ಚೀಲದಲ್ಲಿ ಮೃತದೇಹವನ್ನು ತುಂಬಿಸಿ ದ್ವಿಚಕ್ರ ವಾಹನದಲ್ಲಿ ಮಾಹಿ ಕಾಲುವೆಗೆ ಸಾಗಿಸಿ ವಿಲೇವಾರಿ ಮಾಡಿದ್ದರು.  ಮರುದಿನ, ಜಯದೀಪ್ ಮತ್ತು ಲತಾ ಸೌಮ್ಯ ಅವರ 70 ಗ್ರಾಂ ಚಿನ್ನದ ಸರವನ್ನು ಸುಮಾರು 3 ಲಕ್ಷ ರೂ.ಗೆ…

Read More

ತುಮಕೂರು: ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ  ನಡೆಯುತ್ತಿರೋ   ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಅವಕಾಶವಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆ ತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್‌ ಗಳ ನೇತೃತ್ವದಲ್ಲಿ ತ್ರಿ–ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು. ವಸ್ತ್ರಸಂಹಿತೆ ಪಾಲನೆಗೆ ಸೂಚನೆ: ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೂಚನೆಗಳನ್ನು…

Read More

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಪುರ(ಜಂಪೇನಹಳ್ಳಿ ಕ್ರಾಸ್) ಗ್ರಾಮದಲ್ಲಿ ಯಾವುದೇ ಸಕ್ರಿಯ ಡೆಂಗ್ಯೂ ಪ್ರಕರಣಗಳು ದಾಖಲಾಗಿರುವುದಿಲ್ಲ ಎಂದು ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ.ಅನಂತರಾಮು ಸ್ಪಷ್ಟನೆ ನೀಡಿದ್ದಾರೆ. ಸ್ವಚ್ಚತೆಯಿಲ್ಲದೆ ಅನೈರ್ಮಲ್ಯ ಹೆಚ್ಚಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಅಗ್ರಹಾರ ಗ್ರಾಮ ಪಂಚಾಯಿತಿಗಿಂದು ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಶಿವಪುರ ಗ್ರಾಮದಲ್ಲಿ ಡೆಂಗ್ಯೂ ಶಂಕಿತ ಪ್ರಕರಣದಲ್ಲಿ ದಾಖಲಾಗಿದ್ದ 3 ಮಂದಿ ಗುಣಮುಖರಾಗಿದ್ದಾರೆ. ಕೊರಟಗೆರೆ ತಾಲ್ಲೂಕಿನಲ್ಲಿ ಇದುವರೆಗೆ 45 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 3 ಪ್ರಕರಣಗಳು ಮಾತ್ರ ಸಕ್ರಿಯವಾಗಿದ್ದು, ಇವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಶಿವಪುರ ಗ್ರಾಮದ ಕೆಲವು ಭಾಗಗಳಲ್ಲಿ ಮಳೆಯಿಂದಾಗಿ ಗಿಡಗಂಟಿಗಳು ಬೆಳೆದಿರುವುದು ಕಂಡು ಬಂದಿದ್ದು, ಕೂಡಲೇ ಗ್ರಾಮದ ರಸ್ತೆಗಳು ಹಾಗೂ ಚರಂಡಿ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು. ಗ್ರಾಮದಲ್ಲಿ ಧೂಮೀಕರಣ ಮಾಡಿಸುವಂತೆ ಅಗ್ರಹಾರ…

Read More

ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 29ರಂದು ಜಿಲ್ಲೆಯ 9 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು– ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 29ರಂದು ಜಿಲ್ಲೆಯ ಶಿರಾ ತಾಲೂಕಿನ ಗೋಪಾಲದೇವರಹಳ್ಳಿ; ತುರುವೇಕೆರೆ ತಾಲೂಕಿನ ಆನೆಕೆರೆ; ತಿಪಟೂರು ತಾಲೂಕಿನ ಕುಪ್ಪಾಳು; ಮಧುಗಿರಿ ತಾಲೂಕಿನ ಬ್ರಹ್ಮಸಮುದ್ರ; ತುಮಕೂರು ತಾಲೂಕಿನ ಬಳ್ಳಗೆರೆ; ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ; ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ; ಪಾವಗಡ ತಾಲೂಕಿನ ನಾಗಲಮಡಿಕೆ; ಗುಬ್ಬಿ ತಾಲೂಕಿನ ಅಡಗೂರು ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜಲಶುದ್ಧಿ ಅಭಿಯಾನದಡಿ ಕೊಳಚೆ ನೀರಿನ ಸಂಸ್ಕರಣಾ ವ್ಯವಸ್ಥೆ(FSTP), ಸ್ವಚ್ಛ ಭಾರತ್ ಮಿಷನ್(SBM) ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(NGT)ಕ್ಕಾಗಿ ಒಟ್ಟು 135.23 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ರಾಜ್ಯ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ(ಕೆಯುಐಡಿಎಫ್ ಸಿ)ದ ವ್ಯವಸ್ಥಾಪಕ ನಿರ್ದೇಶಕ ಶರತ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಹುಳಿಯಾರು ಹಾಗೂ ಕೊರಟಗೆರೆ ಪಟ್ಟಣ ಪಂಚಾಯತಿಯಲ್ಲಿ ಕೊಳಚೆ ನೀರಿನ ಸಂಸ್ಕರಣೆ ವ್ಯವಸ್ಥೆಗಾಗಿ ತಲಾ 3.50 ಕೋಟಿ ರೂ.ಗಳ ಅನುದಾನ ಮಂಜೂರಾಗಿದೆ. ಅದೇ ರೀತಿ ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ತುಮಕೂರು ಮಹಾನಗರಪಾಲಿಕೆ ಹಾಗೂ ಶಿರಾ ನಗರಸಭೆ ಹೊರತುಪಡಿಸಿ ಜಿಲ್ಲೆಯ ಉಳಿದ ನಗರ ಸ್ಥಳೀಯ ಸಂಸ್ಥೆಗಳಿಗೆ 33.23 ಕೋಟಿ ರೂ. ಹಾಗೂ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಕಾರ್ಯಕ್ರಮದ ಅನುಷ್ಟಾನಕ್ಕಾಗಿ ಕುಣಿಗಲ್ ಪುರಸಭೆಗೆ 35 ಕೋಟಿ ರೂ., ತಿಪಟೂರು…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ರಾಜಾಮನೆ ಇನ್ನೋವೇಷನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಹಾಜರಾಗಬಹುದಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ ಹಾಗೂ ಡಿಪ್ಲೊಮಾ(ಯಾವುದೇ ಟ್ರೇಡ್)ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More