Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ತುಮಕೂರು: ಬೆಸ್ಕಾಂ ತುಮಕೂರು ವಿಭಾಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಅಕ್ಟೋಬರ್ 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೆ.ಐ.ಎ.ಡಿ.ಬಿ. ವಸಂತನರಸಾಪುರ, ಟಿ.ಎಮ್.ಟಿ.ಪಿ., ತೋವಿನಕೆರೆ, ಅಂಕಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಕೈಗಾರಿಕಾ ಪ್ರದೇಶ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ತಿಪಟೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಗ್ರಾಣದಲ್ಲಿರುವ ಅನುಪಯುಕ್ತ ಸಾಮಗ್ರಿಗಳನ್ನು ನವೆಂಬರ್ 5 ರಂದು ಮಧ್ಯಾಹ್ನ 11:30 ಗಂಟೆಗೆ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತ ಬಿಡ್ಡುದಾರರು ನವೆಂಬರ್ 5ರೊಳಗೆ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ತಿಪಟೂರು ಇವರ ಹೆಸರಿನಲ್ಲಿ 5000 ರೂ. ಡಿಡಿ ಅಥವಾ ನಗದು ರೂಪದಲ್ಲಿ ಮುಚ್ಚಿದ ಲಕೋಟೆಯಲ್ಲಿ ಭದ್ರತಾ ಠೇವಣಿಯನ್ನು ಸಲ್ಲಿಸುವ ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಠಿಯಂತಹ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ ಮಾಹಿತಿ ಪಟ್ಟಿಯನ್ನು ಈಗಾಗಲೇ ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ ಕಚೇರಿ ಹಾಗೂ ರೈತರ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್/ಕೃಷಿ/ತೋಟಗಾರಿಕೆ ಇಲಾಖೆಗಳ ಕಚೇರಿಗೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ಕಸಬಾ ವಲಯದ ಸಿ ಬಡಾವಣೆ ಕಾರ್ಯಕ್ಷೇತ್ರದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ವಾಸವಾಗಿರುವ ಕವಿತ ರವರ ಮನೆ ರಿಪೇರಿ ಮಾಡಿ ಹಸ್ತಾಂತರ ಕಾರ್ಯಕ್ರಮವನ್ನು ಸ್ಥಳೀಯ ನಗರ ಸಭೆಯ ಸದಸ್ಯರಾದ ಮುನ್ನಾಫ್ H ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಯೋಜನೆಯ ಕಾರ್ಯಕ್ರಮದಿಂದ ಸಮಾಜದಲ್ಲಿ ಇರುವ ಬ್ಯಾಂಕ್ ಸೌಲಭ್ಯದಿಂದ ವಂಚಿತರಾದ ಕುಟುಂಬದವರಿಗೆ ಯಾವುದೇ ದಾಖಲಾತಿ ಇಲ್ಲದೆ ಬ್ಯಾಂಕ್ ಸೌಲಭ್ಯ ಒದಗಿಸುತ್ತಿರುವ ಸಂಸ್ಥೆ ಧರ್ಮಸ್ಥಳ ಆಗಿದೆ. ಈ ಸಂಸ್ಥೆಯಿಂದಾಗಿ ಜನರು ಸ್ವ– ಉದ್ಯೋಗ, ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಆರ್ಥಿಕವಾಗಿ ಸದೃಢರಾಗಲು ಸಹಕಾರಿಯಾಗಿದೆ. ಹಾಗೆ ತಿಂಗಳ ಮಾಶಾಸನ, ಮನೆರಚನೆ, ಮನೆ ರಿಪೇರಿ, ಶೌಚಾಲಯ, ಸುಜ್ಞಾನ ನಿಧಿ, ನೆಲ್ಲಿನೀರು ವಾತ್ಸಲ್ಯ ಕಿಟ್ ಇತ್ಯಾದಿ ಸೌಲಭ್ಯ ಒದಗಿಸಿ ನಿರ್ಗತಿಕರ ಕುಟುಂಬಗಳಿಗೆ ಆಶ್ರಯ ಆಗಿರುವುದು ನಿಜಕ್ಕೂ ಹೆಮ್ಮೆ ಆಗಿದೆ. ಇಂತಹ ಸಂಸ್ಥೆಯನ್ನು ಬೆಳಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ ಎಂದು ಶುಭ ನುಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಾಜಿ ನಗರ…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ / ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವವರು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಎಂ.ಎ., ಎಂ.ಸಿ.ಜೆ., ಎಂ.ಕಾA., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ನವೆಂಬರ್ 15ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: 0816-2955580, 9844506629, 9886112434, 7349474339ನ್ನು ಸಂಪರ್ಕಿಸಬೇಕೆAದು ಪ್ರಾದೇಶಿಕ ನಿರ್ದೇಶಕ ಡಾ.ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಪರವಾನಗಿ ಹೊಂದಿರುವುದು ಕಡ್ಡಾಯವೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚನೆ ನೀಡಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುವ ಉದ್ದಿಮೆದಾರರು ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಉದ್ದಿಮೆಗಳಿಗೆ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಅನಧಿಕೃತವಾಗಿ ನಡೆಸುತ್ತಿರುವ ಉದ್ದಿಮೆಗಳಿಗೆ ಕೂಡಲೇ ಪರವಾನಗಿ ಪಡೆಯತಕ್ಕದ್ದು. ಉದ್ದಿಮೆ ಪರವಾನಗಿ ಪಡೆಯಲು ಹಾಗೂ ಪರವಾನಗಿ ನವೀಕರಣ ಮಾಡಿಕೊಳ್ಳಲು ನವೆಂಬರ್ 10 ಕಡೆಯ ದಿನವಾಗಿದೆ. ಪರವಾನಗಿ ಪಡೆಯದ ಉದ್ದಿಮೆಗಳ ವಿರುದ್ಧ ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ 1976 ನಿಯಮದ ಪ್ರಕಾರ ಪರವಾನಗಿ ಮೊತ್ತಕ್ಕೆ ತಕ್ಕಂತೆ ದಂಡ ವಿಧಿಸಿ ನಿರ್ದಾಕ್ಷಿಣ್ಯವಾಗಿ ರದ್ದುಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳು ಮತ್ತು ಗ್ರಾಮೀಣ ಭಾಗದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನವಂಬರ್ 27ರಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮ್ಯಾನುಯಲ್ ಸ್ಕ್ಯಾವೆಂಜರ್ ಹಾಗೂ ಅನೈರ್ಮಲ್ಯ ಶೌಚಾಲಯಗಳ ಸಮೀಕ್ಷೆ ನಡೆಸುವ ಬಗ್ಗೆ ಅಕ್ಟೋಬರ್ 28 ರಿಂದ ನಗರ/ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳ ಸೂಚನಾ ಫಲಕಗಳಲ್ಲಿ ಸುತ್ತೋಲೆಯನ್ನು ಪ್ರಕಟಿಸಿ ಸಮೀಕ್ಷೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ. ಸಮೀಕ್ಷೆಯಲ್ಲಿ ಕಂಡು ಬಂದ ಅನೈರ್ಮಲ್ಯ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆ ಮಾಡುತ್ತಿರುವ ಮಾಲೀಕರಿಗೆ ಅನೈರ್ಮಲ್ಯ ಶೌಚಾಲಯಗಳನ್ನು ನಾಶಪಡಿಸಿ ನೈರ್ಮಲ್ಯ ಶೌಚಾಲಯಗಳನ್ನಾಗಿ ಮಾರ್ಪಡಿಸಲು ಡಿಸೆಂಬರ್ 5ರೊಳಗಾಗಿ ನೋಟೀಸ್ ನೀಡಬೇಕು. ಅನೈರ್ಮಲ್ಯ ಶೌಚಾಲಯಗಳು ಕಂಡು ಬರದ ಪ್ರದೇಶಗಳನ್ನು ಅನೈರ್ಮಲ್ಯ ಶೌಚಾಲಯಗಳ ರಹಿತ ಪ್ರದೇಶವೆಂದು ಘೋಷಿಸಲಾಗುವುದು. ಅನೈರ್ಮಲ್ಯ ಶೌಚಾಲಯಗಳು ಕಂಡು ಬಂದ ಪ್ರದೇಶಗಳಲ್ಲಿ ಮಲ ಸ್ವಚ್ಛ ಮಾಡುವ ವೃತ್ತಿಯಲ್ಲಿರುವ…
ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಆಗಸ್ಟ್ 28, 2014ರಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಗೊಂಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯ 101 ಅಪರಾಧಿಗಳ ಪೈಕಿ 98 ಮಂದಿಗೆ 9 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಚಂದ್ರಶೇಖರ್ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ. 117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು, ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ನ್ಯಾಯಧೀಶರಾದ ಚಂದ್ರಶೇಖರ್ ರಿಂದ ಮಹತ್ವದ ತೀರ್ಪು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರಿನ ಹೇಮಾವತಿ ನಾಲಾ ಉಪವಿಭಾಗ ವ್ಯಾಪ್ತಿಯಲ್ಲಿರುವ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳ ಜಲಾಶಯವು ಭರ್ತಿಯಾಗಿದೆ. ಜಿಲಾಶಯದ ಒಳ ಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುವ ಸಂಭವವಿದ್ದು, ಒಳ ಹರಿವಿಗೆ ತಕ್ಕಂತೆ ಜಲಾಶಯದಿಂದ ನೀರನ್ನು ಹೊರ ಬಿಡಲಾಗುವುದು. ಮಂಗಳ ಜಲಾಶಯದ ಕೆಳಭಾಗದ ಹಾಗೂ ನದಿ ಪಾತ್ರದ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಹೇಮಾವತಿ ನಾಲಾ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕುರಿ/ಮೇಕೆ ಸಾಕಾಣಿಕೆ ಕುರಿತು ಅಕ್ಟೋಬರ್ 28 ಮತ್ತು 29ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್‌ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296