Author: admin

ತುಮಕೂರು: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತಪಟ್ಟಿದ್ದು. ಅವರ ಖಾತೆಗೂ ಹಣ ಸಂದಾಯವಾಗುತ್ತಿದೆಯೇ? ಎಂಬುದನ್ನು ಪರಿಶೀಲಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದರು. ನಗರದ ಜಿ.ಪಂ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 72,549.07 ಕೋಟಿ ಹಣ ಜಮಾ ಆಗಿದೆ. ನೋಂದಣಿಯಾದವರ ಪೈಕಿ ಐಟಿ, ಜಿಎಸ್‌ ಟಿ ಇತರೆ ಸಮಸ್ಯೆಯಿಂದ 10,276 ಮಂದಿ ಯೋಜನೆಯಿಂದ ಹೊರಗುಳಿದಿದ್ದಾರೆ. ಇದನ್ನು ಸರಿಪಡಿಸಬೇಕು ಎಂದು ನಿರ್ದೇಶಿಸಿದರು. ಸರ್ಕಾರ ಕಳೆದ 21 ತಿಂಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ 798 ಸಾವಿರ ಕೋಟಿ ವ್ಯಯ ಮಾಡಿದೆ. ಜಿಲ್ಲೆಗೆ ಇದುವರೆಗೂ 4,701 ಕೋಟಿ ಬಿಡುಗಡೆ ಮಾಡಿದೆ. ಯೋಜನೆಯ ಹಣ ದುರುಪಯೋಗ ಆಗದಂತೆ, ಎಲ್ಲೂ ಅಪಸ್ವರ ಬಾರದಂತೆ ನೋಡಿಕೊಳ್ಳಬೇಕು. ಗ್ಯಾರಂಟಿ ಕುರಿತು ಪ್ಲೆಕ್ಸ್, ಬ್ಯಾನರ್ ಅಳವಡಿಸಬೇಕು ಎಂದರು. ಕಾಳಸಂತೆಯಲ್ಲಿ…

Read More

ತುಮಕೂರು: ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡವನ್ನು 131 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಶೀಘ್ರವೇ ಶಂಕುಸ್ಥಾಪನೆ ನೆರವೇರಿಸಲು ಸಿದ್ಧತೆಗಳು ನಡೆದಿವೆ. ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಆಸ್ಪತ್ರೆ ನೂತನ ಕಟ್ಟಡ ನಿರ್ಮಾಣ ಕುರಿತು ಸಭೆ ನಡೆಸಿದರು. ನಗರದಲ್ಲಿರುವ 78 ವರ್ಷಗಳಷ್ಟು ಹಳೆಯದಾದ ಕಟ್ಟಡ ತೆರವುಗೊಳಿಸಿ, ಹೊಸದಾಗಿ 300 ಹಾಸಿಗೆ ಸಾಮರ್ಥ್ಯದ ಕಟ್ಟಡ ಕಟ್ಟಲಾಗುವುದು. ಶೀಘ್ರದಲ್ಲೇ ಶಂಕುಸ್ಥಾಪನೆ ನೆರವೇರಿಸಬೇಕಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕಟ್ಟಡದ ವಿಸ್ಕೃತ ಯೋಜನಾ ವರದಿ (ಡಿಪಿಆರ್), ವಾಸ್ತುಶಿಲ್ಪ, ರಚನಾತ್ಮಕ ವಿನ್ಯಾಸ ಹಾಗೂ ಇತರ ತಾಂತ್ರಿಕ ರೇಖಾಚಿತ್ರಗಳ ಸಿದ್ಧತೆ ಪ್ರಗತಿಯಲ್ಲಿದೆ. ಶೀಘ್ರವೇ ಈ ಪ್ರಕ್ರಿಯೆ ಪೂರ್ಣಗೊಂಡು ಶಂಕುಸ್ಥಾಪನೆ ಮಾಡಲಾಗುವುದು ಎಂದರು. ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ 100 ಹಾಸಿಗೆ ಸಾಮರ್ಥ್ಯದ ತುರ್ತು ನಿಗಾ ಘಟಕದ ಕಾಮಗಾರಿ ಪೂರ್ಣಗೊಂಡಿದ್ದು, ಅದನ್ನೂ ಉದ್ಘಾಟಿಸಲಾಗುವುದು. ನರ್ಸಿಂಗ್‌ ಕಾಲೇಜು ಕಟ್ಟಡ ನಿರ್ಮಾಣ, ದಿಟ್ಟೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಇತರೆ ಆರೋಗ್ಯ ಕೇಂದ್ರಗಳ ಕಟ್ಟಡ ಕಾಮಗಾರಿಗಳಿಗೂ ಇದೇ ಸಂದರ್ಭದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು.…

Read More

ತುಮಕೂರು: ಎಸ್.ಎಲ್.ಭೈರಪ್ಪ ಸೃಜನಶೀಲ ಅನ್ವೇಷಕ. ಕ್ಷೇತ್ರ ಕಾರ್ಯದ ಮೂಲಕ ಮಾಹಿತಿ ಸಂಗ್ರಹಿಸಿ ಅದಕ್ಕೆ ಸೃಜನಶೀಲತೆ, ಕಥನದ ಸ್ಪರ್ಶ ನೀಡಿ ಕಾದಂಬರಿ ರಚಿಸುತ್ತಿದ್ದರು ಎಂದು ಗ್ರಂಥಾಲಯ ಇಲಾಖೆ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷ ಕರೀಗೌಡ ಬೀಚನಹಳ್ಳಿ ಹೇಳಿದರು. ನಗರದಲ್ಲಿ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಏರ್ಪಡಿಸಿದ್ದ ಸಾಹಿತಿ ಎಸ್‌.ಎಲ್.ಭೈರಪ್ಪ, ಕಥೆಗಾರ ಮೊಗಳ್ಳಿ ಗಣೇಶ್ ನುಡಿ ನಮನ, ಸಾಹಿತ್ಯಾವಲೋಕನ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೊಗಳ್ಳಿ ಗಣೇಶ್ ಸಣ್ಣಕಥೆಗಳನ್ನು ಬರೆದು ಪ್ರಸಿದ್ಧರಾಗಿದ್ದರು. ಇಬ್ಬರು ಸಾಹಿತ್ಯ ದಿಗ್ಗಜರ ಅಗಲಿಕೆಯಿಂದ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು. ಲೇಖಕ ಎಸ್.ಪಿ.ಪದ್ಮಪ್ರಸಾದ್, ಭೈರಪ್ಪನವರ ಸಾಹಿತ್ಯ ನವೋದಯ, ಬಂಡಾಯ ಅಥವಾ ಇತರೇ ಸಮಕಾಲೀನ ಸಾಹಿತ್ಯದ ಯಾವುದೇ ನಿರ್ದಿಷ್ಟ ಪ್ರಕಾರಕ್ಕೆ ಸೇರುವುದಿಲ್ಲ. ಅನೇಕ ಕೃತಿ, ಪುಸ್ತಕ ಲೋಕಾರ್ಪಣೆಗೆ ಮುನ್ನವೇ ಹಲವು ಮುದ್ರಣ ಕಾಣುತ್ತಿದ್ದವು. ಅವು ಸಾಹಿತ್ಯ ವಲಯದಲ್ಲಿ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗುತ್ತಿದ್ದವು. ಅವರಿಗೆ ಜ್ಞಾನಪೀಠ ಪ್ರಶಸ್ತಿ ದೊರೆಯದಿರುವುದು ವಿಷಾದಕರ ಸಂಗತಿ ಎಂದು ತಿಳಿಸಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಭೈರಪ್ಪನವರು…

Read More

ತುಮಕೂರು: ಟ್ರ್ಯಾಕ್ಟರ್‌ ಟ್ರೈಲರ್ ಖರೀದಿಸಿದವರ ಹೆಸರಿಗೆ ನೋಂದಣಿ ಮಾಡಿಸಿ, ಮಾಲೀಕತ್ವ ವರ್ಗಾವಣೆ ಮಾಡಿಕೊಡುವಲ್ಲಿ ವಿಫಲವಾಗಿರುವ ಶ್ರೀರಾಮ್ ಟ್ರಾನ್ಸ್‌ಪೋರ್ಟ್ ಕಂಪನಿಗೆ ದಂಡ ವಿಧಿಸಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ. ಹರಾಜಿನಲ್ಲಿ ವಾಹನ ಖರೀದಿಸಿದವರಿಗೆ ವಾಹನ ಮಾಲೀಕತ್ವ ಬದಲಾಯಿಸಿ ಕೊಡುವಲ್ಲಿ ಲೋಪವೆಸಗಿರುವುದು ಹಾಗೂ ಸೇವಾ ನ್ಯೂನತೆಗಾಗಿ 40 ಸಾವಿರ ದಂಡ ವಿಧಿಸಿದೆ. ಜತೆಗೆ 10 ಸಾವಿರ ನ್ಯಾಯಾಲಯ ವೆಚ್ಚ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಏನಿದು ಘಟನೆ?: ನಗರದ ವಿದ್ಯಾನಗರದ ಮಂಜುಳ ಎಂಬುವರು ಶ್ರೀರಾಮ್ ಟ್ರಾನ್ಸ್‌ ಪೋರ್ಟ್ ಕಂಪನಿಯಿಂದ ಸಾಲ ಪಡೆದು ಟ್ರ್ಯಾಕ್ಟರ್ ಟ್ರೈಲರ್ ಖರೀದಿಸಿದ್ದರು. ಕೋವಿಡ್ ಸಮಯದಲ್ಲಿ ಸಾಲದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಶ್ರೀರಾಮ್‌ ಟ್ರಾನ್ಸ್‌ಪೋರ್ಟ್‌ನವರು ಟ್ರ್ಯಾಕ್ಟರ್‌ ಟ್ರೈಲರ್ ವಶಕ್ಕೆ ಪಡೆದಿದ್ದರು. 2020ರಲ್ಲಿ ಹರಾಜಿನಲ್ಲಿ ಮಾರಾಟ ಮಾಡಿದ್ದರು. ಇದರಿಂದ ಬಂದ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಂಡಿದ್ದರು. ಇದಾದ ನಂತರವೂ ಬಾಕಿ 60 ಸಾವಿರ ಕಟ್ಟುವಂತೆ ಮಂಜುಳ ಅವರಿಗೆ ನೋಟಿಸ್‌ ನೀಡಿದ್ದು, ಅಷ್ಟು ಹಣವನ್ನು ಅವರು ಪಾವತಿಸಿದ್ದರು. ಪೂರ್ಣ ಪ್ರಮಾಣದಲ್ಲಿ…

Read More

ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ ಬಡಾವಣೆಯ ಮಧ್ಯದಲ್ಲಿ ಅನಧಿಕೃತವಾಗಿ ಮಸೀದಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಕ್ಷೇಪಣೆಗೆ ಸಂಬಂಧಿಸಿದಂತೆ ಸೂಕ್ತ ಪರಿಶೀಲನೆ ನಡೆಸಿ ನಿಯಮ ಉಲ್ಲಂಘನೆಯಾಗಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಮಸೀದಿಯನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿ ಗುಬ್ಬಿ ಪಟ್ಟಣದ ನಿವಾಸಿಗಳಾದ ಬಿ.ಲೋಕೇಶ್ ಸೇರಿದಂತೆ ಒಟ್ಟು 12 ಜನ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಕೆಲ ಕಾಲ ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ನಿಯಮ ಉಲ್ಲಂಘಿಸಿದ್ದರೆ ಕ್ರಮ ಕೈಗೊಳ್ಳಿ ಎಂದು  ಪ್ರತಿವಾದಿಯಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸ್ಥಳೀಯ ಆಡಳಿತಕ್ಕೆ ಸೂಚಿಸಿ ಅರ್ಜಿ ವಿಲೇವಾರಿ ಮಾಡಿದೆ. ಅರ್ಜಿಯಲ್ಲಿ ,  ನಾವು ಆದಿ ದ್ರಾವಿಡ ಸಮುದಾಯಕ್ಕೆ ಸೇರಿದವರಾಗಿದ್ದು ಗುಬ್ಬಿ ಪಟ್ಟಣದ ಬಂಗೋಲ್‌ ಪಾಳ್ಯದಲ್ಲಿ ಸರ್ಕಾರ ನಮಗೆ 2 ಎಕರೆ ಕೊಡಮಾಡಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಆದಿ ದ್ರಾವಿಡ ಸಮುದಾಯದ ಜನರು…

Read More

ಪಾವಗಡ: ತಾಲೂಕಿನ Y.N.ಹೊಸಕೋಟೆ ವಲಯದ  ಶ್ರೀ ಚೌಡೇಶ್ವರಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜಾ ಸಮಿತಿ ವತಿಯಿಂದ  ಶ್ರೀ ಸತ್ಯನಾರಾಯಣ ಸ್ವಾಮಿ ಸಾಮೂಹಿಕ ಪೂಜೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,  ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ  ಸಂಜಯ್ ಕುಮಾರನಂದ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಭಕ್ತಾದಿಗಳಿಗೆ ಆಶೀರ್ವಾದ ವಚನವನ್ನು ನೀಡಲಾಯಿತು. ತಾಲೂಕಿನ ಯೋಜನಾಧಿಕಾರಿ ಮಹೇಶ್ ಹೆಚ್. ಸಭೆಯಲ್ಲಿ ಯೋಜನೆಯ ಕಾರ್ಯಕ್ರಮಗಳಾದ   ಸ್ವಸಹಾಯ ಸಂಘಗಳ ರಚನೆ, ವಾರದ ಸಭೆ, ಗುಂಪು ಭದ್ರತೆ, ದಾಖಲಾತಿ ನಿರ್ವಹಣೆ ಹಾಗೂ ತಂಡಗಳಿಗೆ ಲಾಭಾಂಶ ವಿತರಣೆ, ಆರ್ಥಿಕ  ಶಿಸ್ತು, ಜ್ಞಾನ ವಿಕಾಸ ಕೇಂದ್ರ, ನಮ್ಮೂರು ನಮ್ಮ ಕೆರೆ, ಸುಜ್ಞಾನ ಶಿಷ್ಯ ವೇತನ, ಜ್ಞಾನ ದೀಪ ಶಿಕ್ಷಕರು, ದೇವಸ್ಥಾನ ಹಾಲು ಉತ್ಪಾದಕ ಕಟ್ಟಡ ನಿರ್ಮಾಣಕ್ಕೆ ಅನುದಾನ, ಶಾಲೆಗಳಿಗೆ   ಡೆಸ್ಕ್ ಬೆಂಚ್ ವಿತರಣೆ, ಕಾಂಪೌಂಡ್ ರಚನೆ,  ಶೌಚಾಲಯ ಕಟ್ಟಡ,  ವಾಟರ್ ಫಿಲ್ಲ್ಡ್ ವಿತರಣೆ, ಅಸಹಾಯಕ ವೃದ್ಧರಿಗೆ…

Read More

ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,   ನಾಗರಿಕತೆ ಬೆಳೆದದ್ದು — ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ ಎಂದರು. ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ಹೇಳಿದರು. 144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ…

Read More

ಬೆಂಗಳೂರು: ಬಿಹಾರ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆದ್ದರೆ, ಪ್ರತಿ ಮನೆಗೆ ಸರ್ಕಾರಿ ಉದ್ಯೋಗದ ಗ್ಯಾರೆಂಟಿ ನೀಡುವ ಘೋಷಣೆಯನ್ನು ಗೃಹ  ಸಚಿವ ಜಿ.ಪರಮೇಶ್ವರ್ ಸಮರ್ಥಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ ತಿಳಿದುಕೊಂಡು ಚುನಾವಣೆ ಸಮಯದಲ್ಲಿ ಘೋಷಣೆ ಮಾಡುತ್ತೇವೆ. ಎಲ್ಲರೂ ಮಾಡೋದು ಅದೇ ಕೆಲಸ. ನಮ್ಮ ಮೈತ್ರಿ ಪಕ್ಷದವರು ಪ್ರತಿ ಮನೆಗೆ ಉದ್ಯೋಗ ಕೊಡ್ತೀನಿ ಅಂತ ಘೋಷಣೆ ಮಾಡಿದ್ದಾರೆ. ಉದ್ಯೋಗ ಅನ್ನೋದು ಬಹಳ ಮುಖ್ಯ. ಎಲ್ಲಾ ಕಡೆ ನಿರುದ್ಯೋಗದ ಸಮಸ್ಯೆ ಬಹಳ ಕಾಡ್ತಿದೆ. ಯುವಕರಿಗೆ ಉದ್ಯೋಗ ಸಿಕ್ತಿಲ್ಲ ಅನ್ನೋದು ದೊಡ್ಡ ಪ್ರಶ್ನೆ. ಹಾಗಾಗಿ ಚುನಾವಣೆ ಪ್ರಣಾಳಿಕೆ ಮಾಡಬೇಕು ಅಂತ ಹೇಳಿದ್ದಾರೆ ಎಂದರು. 3 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಂತ ಹಂತವಾಗಿ ಮಾಡ್ತಾರೆ. ಒಂದೇ ದಿನ ಘೋಷಣೆ ಮಾಡಿ, ಒಂದೇ ದಿನ ಕೆಲಸ ಕೊಡೋಕೆ ಆಗುತ್ತಾ? ನಾವು ಕರ್ನಾಟಕದಲ್ಲಿ 2.5 ಲಕ್ಷ ಖಾಲಿ ಇರೋ ಹುದ್ದೆ ಭರ್ತಿ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ವಿ. ನಾವು…

Read More

ಬೆಂಗಳೂರು: ರಾಜ್ಯ ಸರ್ಕಾರ ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ ವಿಷಯದಲ್ಲಿ ತೀರ್ಮಾನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಗಣತಿದಾರ ಶಿಕ್ಷಕವೃಂದಕ್ಕೂ ಸಮಸ್ಯೆ ಆಗುತ್ತಿದೆ. ರಜೆ ದಿನಗಳನ್ನೂ ವಿಸ್ತರಿಸಿದ್ದರಿಂದ ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಸಮಸ್ಯೆ ಆಗಲಿದೆ ಎಂದರು. ಸರಕಾರಿ ಶಾಲೆಯಲ್ಲಿ ಓದುವ ಗ್ರಾಮೀಣ ಭಾಗದ ಮಕ್ಕಳಿಗೆ ಒಂದೊಂದು ದಿನವೂ ಅಷ್ಟೇ ಮಹತ್ವದ್ದು. ಶಾಲೆಗೆ ರಜೆ ಘೋಷಿಸಿ ಶಾಲಾ ಮಕ್ಕಳಿಗೂ ತೊಂದರೆ ನೀಡುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮೈಸೂರು: ದಸರಾ ನಂತರ ಮೈಸೂರಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಅನಿಸುತ್ತದೆ ಎಂದು ಸಂಸದ ಯದುವೀರ್ ಒಡೆಯರ್​ ಹೇಳಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ದಸರಾ ನಂತರ ಮೈಸೂರಿನಲ್ಲಿ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅನಿಸುತ್ತದೆ. ಈ ಬಾರಿ ದಸರಾ ಸಂಪೂರ್ಣ ಗೊಂದಲವಾಯಿತು. ಪಾಸ್​ ಇದ್ದವರ ದಸರಾ ಆಯಿತು, ಉಳ್ಳವರು ದಸರಾ ದರ್ಬಾರ್​​ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇತಿಹಾಸದಲ್ಲಿ ಮೈಸೂರು ಸ್ವಚ್ಛತೆ, ಒಳ್ಳೆಯ ಆಡಳಿತಕ್ಕೆ ಹೆಸರುವಾಸಿಯಾಗಿದೆ. ಆದರೆ, ಇತ್ತೀಚೆಗೆ ಕಾನೂನು ಆಡಳಿತ ಕುಸಿಯುತ್ತಿದೆ. ಈ ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಆಯ್ತು. 340 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಯಿತು. ಮಹಾರಾಷ್ಟ್ರ ಪೊಲೀಸರು ಇದನ್ನು ಕಂಡು ಹಿಡಿದರು. ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಯ್ತು. ನಿನ್ನೆ ಚಿಕ್ಕ ಮಗು ಮೇಲೆ ರೇಪ್ ಅಂಡ್ ಮರ್ಡರ್ ಆಯ್ತು. ಬಲೂನ್ ಮಾರಾಟ ಮಾಡುವ…

Read More