Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯ ರೇಷ್ಮೆ, ಹತ್ತಿ ಮತ್ತು ಉಣ್ಣೆ ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆ ವೃತ್ತಿಯಲ್ಲಿ ನೈಪುಣ್ಯತೆ, ಶ್ರೇಷ್ಠತೆ, ತಾಂತ್ರಿಕತೆ, ಉತ್ಕೃಷ್ಟತೆಯ ಉತ್ಪನ್ನ ತಯಾರಿಸಿದ ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೈಮಗ್ಗ ಉತ್ಪನ್ನಗಳ ಅಭಿವೃದ್ಧಿಗಾಗಿ ಕೈಮಗ್ಗ ನೇಯ್ಗೆಯ ಅಸಾಧಾರಣ ಕೌಶಲ್ಯದಲ್ಲಿ 10 ವರ್ಷಗಳ ಅನುಭವ ಹೊಂದಿರುವ ಕನಿಷ್ಠ 30 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಸೀರೆ ಉತ್ಪನ್ನದ ಮಾದರಿ, ಬಣ್ಣದ ಛಾಯಾಚಿತ್ರ, ವಿವಿಧ ಹಂತದ ವಿಡಿಯೋದೊಂದಿಗೆ ಅರ್ಜಿಯನ್ನು ಮೇ 30ರೊಳಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ — 0816-2275370, ಮೊ.ಸಂ. 7022193202ನ್ನು ಸಂಪರ್ಕಿಸಬೇಕೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮಧುಗಿರಿ: ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2026ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ 90 ಕ್ಕಿಂತ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ರಂಗಪ್ಪ ಹಾಗೂ ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನಾಂಕವಾಗಿದ್ದು, http://powermedia.info ಲಿಂಕ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮಿಡಿಗೇಶಿ: ಪ್ರಕೃತಿಯ ಸೊಬಗು ಮತ್ತು ಭಕ್ತಿಯ ಸಂಗಮವೋ ಎಂಬಂತೆ, ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಅಪ್ಪೇನಹಳ್ಳಿ ಗ್ರಾಮದಲ್ಲಿ ಅಪರೂಪದ ವಿದ್ಯಮಾನವೊಂದು ಜರುಗುತ್ತಿದೆ. ಗ್ರಾಮದ ಮಧ್ಯಭಾಗದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ಕಿಟಕಿಯ ಬಳಿ ಕಳೆದ ಕೆಲವು ತಿಂಗಳುಗಳಿಂದ ನವಿಲೊಂದು ಬೀಡುಬಿಟ್ಟಿದೆ. ಸಾಮಾನ್ಯವಾಗಿ ಮನುಷ್ಯರನ್ನು ಕಂಡರೆ ದೂರ ಓಡುವ ನವಿಲುಗಳು, ಇಲ್ಲಿ ಮಾತ್ರ ಸಾರ್ವಜನಿಕರೊಂದಿಗೆ ಯಾವುದೇ ಭಯವಿಲ್ಲದೆ ಬೆರೆಯುತ್ತಿರುವುದು ವಿಶೇಷ. ದೇವಸ್ಥಾನಕ್ಕೆ ಬರುವ ಭಕ್ತರನ್ನು ಕಂಡಾಗ ಗಾಬರಿಗೊಳ್ಳದ ಈ ನವಿಲು, ಕಿಟಕಿಯಿಂದ ಕೆಳಗಿಳಿದು ಬಂದು ಅವರ ಎದುರೇ ತನ್ನ ಸುಂದರವಾದ ರೆಕ್ಕೆಗಳನ್ನು ಬಿಚ್ಚಿ ನರ್ತನ (ಗೆಜ್ಜೆ ನಾದವಿಲ್ಲದ ನೃತ್ಯ) ಮಾಡುತ್ತಿದೆ. ನವಿಲಿನ ಈ ಮನಮೋಹಕ ನರ್ತನವನ್ನು ಕಂಡು ಗ್ರಾಮಸ್ಥರು ಆಶ್ಚರ್ಯಚಕಿತರಾಗಿದ್ದಾರೆ. “ಈ ನವಿಲು ದೇವಸ್ಥಾನದ ಕಿಟಕಿಯ ಬಳಿಯೇ ವಾಸವಾಗಿರುವುದು ಮತ್ತು ಜನರನ್ನು ಕಂಡು ಓಡಿಹೋಗದೆ ನರ್ತನ ಮಾಡುವುದು ನಿಜಕ್ಕೂ ಒಂದು ಸೋಜಿಗದ ಸಂಗತಿ,” ಎಂದು ಸ್ಥಳೀಯರು ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಈ ಅಪರೂಪದ ದೃಶ್ಯದ ಸುದ್ದಿ ಹರಡುತ್ತಿದ್ದಂತೆ,…
ಕುಣಿಗಲ್: ಸುಮಾರು ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಕುಣಿಗಲ್ ತಾಲೂಕಿನ ಗಡಿ ಭಾಗ ಗ್ರಾಮಗಳ ಸಮಗ್ರ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಂಡು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ತಿಳಿಸಿದರು. ಅವರು ಅಮೃತೂರು ಹೋಬಳಿ ಬೆಟ್ಟಹಳ್ಳಿ ಗ್ರಾಮದಲ್ಲಿ ಎರಡು ಕೋಟಿ ರೂ. ವೆಚ್ಚದ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ತಾಲೂಕಿನ ಗಡಿಭಾಗಗಳ ರಸ್ತೆಗಳು ಕಳೆದ ನಲವತ್ತು ವರ್ಷಗಳಿಂದ ಸುಧಾರಣೆ ಆಗದ ಕಾರಣ ಗ್ರಾಮಗಳ ಜನರ ಸಂಚಾರಕ್ಕೆ ತೊಂದರೆ ಉಂಟಾಗಿದೆ, ರಸ್ತೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಗ್ರಾಮಸ್ಥರು ಮನವಿ ಮಾಡಿದರು, ಈ ಹಿನ್ನೆಲೆಯಲ್ಲಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಬಂಧಪಟ್ಟ ಸಚಿವರು ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ ಕಾರಣ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು. ಇದೇ…
ಸಿರಾ: ತಾಲ್ಲೂಕಿನ ನವ್ಯದಿಶ ಸಂಸ್ಥೆಯ ಯುವಚಾವಡಿ ಕಾರ್ಯಕ್ರಮದಡಿ ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು ಮತ್ತು ಯುವಜನರಿಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮದಡಿ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಎ.ಎಸ್.ಐ ಶ್ರೀನಿವಾಸ್ ಮಾತನಾಡಿ, ದೂರು ದಾಖಲಿಸುವ ಬಗ್ಗೆ, ಎಫ್.ಐ.ಆರ್., ಪೋಕ್ಸೋ ಪ್ರಕರಣಗಳ ಬಗ್ಗೆ ಹಾಗೂ ಪೊಲೀಸ್ ಠಾಣೆಯ ಮಹತ್ವ ಅದರ ಕಾರ್ಯವೈಖರಿ ಹಾಗೂ ಸಾಮಾಜಿಕ ಜಾಲತಾಣಗಳಿಂದ ಸೈಬರ್ ಅಪರಾಧಗಳು ಹೆಚ್ಚಾಗುತ್ತಿರುವ ಬಗ್ಗೆ, ಹಾಗಾಗಿ ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಜಾಗರೂಕರಾಗಿರುವ ಬಗ್ಗೆ ಎಂದು ತಿಳಿಸಿದರು. ಯುವಜನರು ಪೊಲೀಸ್ ಇಲಾಖೆಗೆ ಸಂಬಂಧಪಟ್ಟಂತೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತಿರುವ ಯುವಜನರು ಅವರ ಕೆಲಸಗಳು, ಪರೀಕ್ಷೆಗಳ ಮಾಹಿತಿ ಕುರಿತು ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ನವ್ಯದಿಶ ಸಂಸ್ಥೆಯ ತ್ರಿವೇಣಿ, ಯೂತ್ ರಿಸೋರ್ಸ್ ಹಬ್‌ನ ಹದಿಹರೆಯದವರು, ಯುವಜನರು ಇದ್ದರು. ಇಂದು ಹದಿಹರೆಯದವರ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ…
ತುಮಕೂರು: ಸಮರ್ಪಕವಾಗಿ ಸಾಲ ವಸೂಲಿಯಾಗದಿದ್ದರೆ ಯಾವುದೇ ಹಣಕಾಸು ಸಂಸ್ಥೆ ಆರೋಗ್ಯಕರವಾಗಿರುವುದಿಲ್ಲ. ಆರ್ಥಿಕ ಶಿಸ್ತು, ಶ್ರದ್ಧೆಯಿಂದ ಶ್ರಮಿಸಿದರೆ ಸಂಸ್ಥೆ ಬೆಳವಣಿಗೆಯಾಗುತ್ತದೆ. ಹರ್ತಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಸಂಘದ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ಈ ಸಂಘ ಬ್ಯಾಂಕ್ ಆಗಿ ಪರಿವರ್ತನೆಯಾಗಲಿ ಎಂದು ಹರ್ತಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರೂ ಆದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಭಾನುವಾರ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಿಂಭಾಗ ಹರ್ತಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ನಂತರ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಚಿವರು, ಇಂದು ಸಹಕಾರ ಕ್ಷೇತ್ರ ದೊಡ್ಡ ಮಟ್ಟದಲ್ಲಿ ಬೆಳವಣಿಗೆಯಾಗಿದೆ. ನಮ್ಮ ಸಂಘವನ್ನು ದೊಡ್ಡದಾಗಿ ಬೆಳೆಸಿ ಹೆಚ್ಚು ಜನರಿಗೆ ಅದರ ಪ್ರಯೋಜನ ದೊರೆಯಲು ಎಲ್ಲರೂ ಕಾಳಜಿಯಿಂದ ಶ್ರಮಿಸಬೇಕು ಎಂದು ಹೇಳಿದರು. ಸಮುದಾಯದ ಮಕ್ಕಳ ವ್ಯಾಸಂಗ ಹಾಗೂ ಸಮುದಾಯದ ಸಂಘಟನೆಯ ಉದ್ದೇಶದಿಂದ ತಮ್ಮ ತಂದೆ ಹೆಚ್.ಎಂ. ಗಂಗಾಧರಯ್ಯನವರು ಹರ್ತಿ ಪತ್ತಿನ ಸಹಕಾರ ಸಂಘ…
ತುಮಕೂರು: ಭಾನುವಾರ ಮುಂಜಾನೆ ನಿಧನರಾದ ಸಚಿವ ಡಿ.ಸುಧಾಕರ್ ಅವರ ಪಾರ್ಥಿವ ಶರೀರವನ್ನು ಸುಕ್ಷೇತ್ರ ಹಿರಿಯೂರಿಗೆ ಕೊಂಡೊಯ್ಯುವ ಮುನ್ನ ಮಾರ್ಗಮಧ್ಯೆ ತುಮಕೂರಿನ ಬಟವಾಡಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅರ್ಧತಾಸು ನಿಲ್ಲಿಸಿ ತುಮಕೂರಿನ ಅವರ ಬಂಧುಗಳು, ಜೈನ ಸಮಾಜದ ಮುಖಂಡರು, ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಭಾನುವಾರ ಮಧ್ಯಾಹ್ನ 1.20ರ ಸಮಯಕ್ಕೆ ಬಟವಾಡಿಗೆ ಪಾರ್ಥಿವ ಶರೀರ ಆಗಮಿಸುತ್ತಿದ್ದಂತೆ ಮಾಜಿ ಸಚಿವ ಕೆ.ಎನ್. ರಾಜಣ್ಣ, ಜೈನ ಸಮಾಜದ ಜಿಲ್ಲಾ ಮುಖಂಡರಾದ ನಾಗರಾಜ ಜೈನ್, ಆರ್.ಎ.ಸುರೇಶ್ ಕುಮಾರ್, ಚಂದ್ರಕೀರ್ತಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ, ಉಪಾಧ್ಯಕ್ಷ ಕೆ.ಎಸ್.ರಾಮಮೂರ್ತಿ, ಚಿಂತನಾ ಬಳಗದ ಕೆ.ಪಿ.ಲಕ್ಷ್ಮಿ ಕಾಂತರಾಜ ಅರಸು, ತೇಜೇಶ್, ರಾಜೇಶ್ ಪೆನ್ನ ಮುಂತಾದ ಹಲವರು ಹೂಗುಚ್ಛ ಅರ್ಪಿಸಿ ಅಗಲಿದ ನಾಯಕನಿಗೆ ಅಂತಿಮ ವಿದಾಯ ಹೇಳಿದರು. ಆ್ಯಂಬುಲೆನ್ಸ್ ನಲ್ಲಿ ಸುಧಾಕರ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿಟ್ಟು ಅಂತಿಮ ನಮನ ಸಲ್ಲಿಸಿದ ರಾಜಣ್ಣ ಅವರು ಆಪ್ತ ಸ್ನೇಹಿತನನ್ನು ನೆನೆದು ಭಾವುಕರಾದರು. ಸುಧಾಕರ್ ಅವರ ಹಿರಿಯ ಸಹೋದರ ತುಮಕೂರಿನ ಡೆನಿನ್ ಲೈಫ್…
ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರ ಸ್ವಂತ ಜಿಲ್ಲೆಯಾದ ಚಿತ್ರದುರ್ಗದಾದ್ಯಂತ ಮೇ 11ರ ಸೋಮವಾರದಂದು ಸಾರ್ವಜನಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ. ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಇಡೀ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಮತ್ತು ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುತ್ತದೆ. ಮೃತರ ಅಂತ್ಯಕ್ರಿಯೆಯು ಮೇ 11 ರ ಸಂಜೆ 4 ಗಂಟೆಗೆ ಅವರ ಹುಟ್ಟೂರಾದ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.…
ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅಮಾನುಷವಾಗಿ ಕೊಲೆ ಮಾಡಿದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೊಲೆಯಾದ ವ್ಯಕ್ತಿಯನ್ನು ಇಮ್ತಿಯಾಜ್ ಅಹಮದ್ ಎಂದು ಗುರುತಿಸಲಾಗಿದೆ. ಇವರು ಸರ್ಕಾರಿ ಶಾಲಾ ಶಿಕ್ಷಕರಾಗಿದ್ದರು. ಇವರ ಪತ್ನಿ ಲಕ್ಷ್ಮೀ ಕೂಡ ಶಿಕ್ಷಕಿಯಾಗಿದ್ದರು. ಲಕ್ಷ್ಮೀಗೆ ಕೃಷ್ಣಮೂರ್ತಿ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು. ಈ ವಿಚಾರ ಇಮ್ತಿಯಾಜ್‌ಗೆ ತಿಳಿದು, ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ತನ್ನ ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದಾನೆ ಎಂಬ ಕಾರಣಕ್ಕೆ ಲಕ್ಷ್ಮೀ, ಪ್ರಿಯಕರ ಕೃಷ್ಣಮೂರ್ತಿ ಜೊತೆ ಸೇರಿ ಪತಿಯನ್ನು ಮುಗಿಸಲು ಸಂಚು ರೂಪಿಸಿದ್ದಳು. 2016ರ ಜುಲೈ 7ರಂದು ರಾತ್ರಿ ಲಕ್ಷ್ಮೀ ಮತ್ತು ಇಮ್ತಿಯಾಜ್ ನಡುವೆ ಜಗಳ ನಡೆದಿದೆ. ಈ ವೇಳೆ ಲಕ್ಷ್ಮೀ ತನ್ನ ಸ್ನೇಹಿತ ಕೃಷ್ಣಮೂರ್ತಿಯನ್ನು ಮನೆಗೆ ಕರೆಸಿಕೊಂಡಿದ್ದಾಳೆ. ಇಬ್ಬರೂ ಸೇರಿ ಕಬ್ಬಿಣದ ರಾಡ್‌ನಿಂದ ಇಮ್ತಿಯಾಜ್ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ನಂತರ ಸಾಕ್ಷ್ಯ ನಾಶಪಡಿಸುವ…
ಚಿತ್ರದುರ್ಗ: ರಾಜ್ಯ ರಾಜಕಾರಣದ ಹಿರಿಯ ನಾಯಕ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ (65) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 1961ರಲ್ಲಿ ಚಳ್ಳಕೆರೆಯಲ್ಲಿ ಜನಿಸಿದ ಡಿ.ಸುಧಾಕರ್ ಅವರು ಎನ್.ದಶರಥಯ್ಯ ಅವರ ಪುತ್ರ. ಇವರ ಚಿಕ್ಕಪ್ಪ ಎನ್. ಜಯಣ್ಣ ಅವರು ಕೂಡ ಚಳ್ಳಕೆರೆ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಚಿಕ್ಕಪ್ಪನ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುವ ಮೂಲಕ ರಾಜಕೀಯ ಪ್ರವೇಶಿಸಿದ ಸುಧಾಕರ್, ನಂತರ ತಮ್ಮದೇ ಆದ ಭದ್ರ ಬುನಾದಿ ನಿರ್ಮಿಸಿಕೊಂಡಿದ್ದರು. 2004: ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧಿಸಿ ಜಯಗಳಿಸುವ ಮೂಲಕ ಶಾಸಕರಾಗಿ ಆಯ್ಕೆಯಾದರು. 2008: ಕ್ಷೇತ್ರ ಮರುವಿಂಗಡಣೆಯಲ್ಲಿ ಚಳ್ಳಕೆರೆ ಮೀಸಲು ಕ್ಷೇತ್ರವಾದ ಹಿನ್ನೆಲೆಯಲ್ಲಿ, ಹಿರಿಯೂರು ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದರು. ಅಂದು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಮೊದಲ ಬಾರಿಗೆ ಮಂತ್ರಿ ಪಟ್ಟ…