Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ 46 ಎಕರೆ ವಿಸ್ತೀರ್ಣದ ಮಾರನಕಟ್ಟೆ ಕೆರೆಯ 21 ಎಕರೆ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳನ್ನು ಸೇರಿದಂತೆ, ಖಾಸಗಿ ಸಂಘ–ಸಂಸ್ಥೆಗಳು ಕಟ್ಟಡಗಳನ್ನು ನಿರ್ಮಿಸಿ ಭಾಗಶಃ ಕೆರೆಯನ್ನು ನಾಶಪಡಿಸಿರುವ ಕುರಿತು ಇಂದು ಲೋಕಾಯುಕ್ತರಲ್ಲಿ ದೂರು ದಾಖಲಾಗಿದೆ. ಈ ದೂರುವನ್ನು ನೈಜ ಹೋರಾಟಗಾರರ ವೇದಿಕೆಯ ಹಿರಿಯ ಸಮಾಜಸೇವಕ ಹೆಚ್.ಎಂ.ವೆಂಕಟೇಶ್, ಕಾಳಜಿ ಫೌಂಡೇಶನ್‌ನ ಜಿ.ಎಲ್. ನಟರಾಜ್, ಮಾಹಿತಿ ಹಕ್ಕು ರಾಜ್ಯ ವೇದಿಕೆಯ ಹೆಚ್.ಎಸ್. ಸ್ವಾಮಿ ಮತ್ತು ಮಾಹಿತಿ ಅಧ್ಯಯನ ಕೇಂದ್ರದ ಎಲ್.ಎಸ್. ಮಲ್ಲಿಕಾರ್ಜುನ್ ಅವರು ಸಲ್ಲಿಸಿದ್ದಾರೆ. ಕಾನೂನು ಉಲ್ಲಂಘಿಸಿ ಕೆರೆಯೊಳಗೆ ನಿರ್ಮಿಸಿದ ನ್ಯಾಯಾಧೀಶರ ವಸತಿಗೃಹ, ಶಿಕ್ಷಣ ಇಲಾಖೆಯ ಕಟ್ಟಡಗಳು ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳನ್ನು ತೆರವುಗೊಳಿಸಿ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಅವರು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಉಪಲೋಕಾಯುಕ್ತರು ಕೆರೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ಭೇಟಿ ನೀಡಿದ್ದು, ಅಲ್ಲಿನ ಹಂದಿ ಜೋಗಿ ಜನಾಂಗದ 42 ಕುಟುಂಬಗಳನ್ನು ಸ್ಥಳಾಂತರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ…
ಕೊರಟಗೆರೆ: ಕಲ್ಲುಬಂಡೆ ಕ್ರಷರ್ ಲಾರಿಗಳ ಹಾವಳಿಯಿಂದ ಕೊರಟಗೆರೆಯ ಪಿಡ್ಲ್ಯೂಡಿ ಮುಖ್ಯ ರಸ್ತೆಯೇ ಮಾಯವಾಗಿದೆ. ಹಗಲಿನಲ್ಲಿ ಅಪಘಾತ ಆದ್ರೆ ಸಣ್ಣ–ಪುಟ್ಟ ಗಾಯ ಆಗುತ್ತೇ..!! ರಾತ್ರಿವೇಳೆ ಸಂಚರಿಸಿದ್ರೇ ಸಾವು ಖಚಿತವಾಗುತ್ತೆ ಎನ್ನುವಂತಿದೆ ಈ ರಸ್ತೆ. ಜೆಟ್ಟಿಅಗ್ರಹಾರದಿಂದ ಜಂಪೇನಹಳ್ಳಿ ಮಾರ್ಗವಾಗಿ ತೋವಿನಕೆರೆ ಮುಖ್ಯರಸ್ತೆಯಲ್ಲಿ ಪ್ರತಿನಿತ್ಯ 250 ಲಾರಿಗಳು ಸಂಚಾರ ನಡೆಸುತ್ತಿದೆ. ಜಂಪೇನಹಳ್ಳಿ ಕ್ರಾಸಿನಿಂದ ಗಟ್ಲಗೊಲ್ಲಹಳ್ಳಿಯ ವರೆಗಿನ 4 ಕಿ.ಮೀ. ರಸ್ತೆಯಲ್ಲಿ 40ಕ್ಕೂ ಅಧಿಕ ಗುಂಡಿಗಳು ಕಾಣುತ್ತದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ–ಜಂಪೇನಹಳ್ಳಿ ಮುಖ್ಯರಸ್ತೆಯಲ್ಲಿ ಇಂತಹದ್ದೊಂದು ಅವ್ಯವಸ್ಥೆ ಕಂಡು ಬಂದರೂ ಸಾರಿಗೆ, ಪಿಡ್ಲ್ಯೂಡಿ ಹಾಗೂ ಗಣಿ, ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ಕಚೇರಿಯಲ್ಲೇ ಕಣ್ಮುಚ್ಚಿ ಕುಳಿತಿದ್ದಾರೆ. ಕೊರಟಗೆರೆಯಲ್ಲಿ ಎಗ್ಗೀಲ್ಲದೇ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣವೇ ಇಲ್ಲವೇ.! ಮಳೆ ಬಂದರೆ ರಸ್ತೆಯಲ್ಲಿ ಗುಂಡಿಗಳ ದರ್ಬಾರ್, ಬಿಸಿಲು ಬಂದರೇ ಸಾರ್ವಜನಿಕರಿಗೆ ಧೂಳಿನ ಶಾಪ. ಸಾರ್ವಜನಿಕರು ಪ್ರಶ್ನೆ ಮಾಡಿದರೇ ಗಣಿಗಾರಿಕೆ ಮಾಲೀಕರ ಸಹಚರರಿಂದ ಬೆದರಿಕೆ ಹಾಕಲಾಗುತ್ತಿದೆ ಎನ್ನುವ ಆರೋಪ ಕೂಡ ಇದೆ. ಪಿಡ್ಲ್ಯೂಡಿ ಇಲಾಖೆಗೆ ಸ್ಥಳೀಯರು ದೂರು…
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ಪ್ರಮುಖ ಶೂಟರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿ ಸುಜಿತ್ ಸುಶೀಲ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಗ್ಯಾಂಗ್ ನ ಏಳು ‘ಶೂಟರ್’ಗಳನ್ನು ಕಳೆದ 48 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಾದ್ಯಂತ ಬಂಧಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಆರು ಅರೆ–ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಬಿಷ್ಣೋಯ್ ಗ್ಯಾಂಗ್ ನ ಇತರ ಕಾರ್ಯಾಚರಣೆಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಕೊರಟಗೆರೆ: ಕೋಟ್ಯಾಂತರ ರೂ ನರೇಗಾ ಯೋಜನೆಯ ಅನುದಾನ ಬಳಕೆಯಾದ್ರು ನಾಗರಕೆರೆ ಅಭಿವೃದ್ದಿ ಕಂಡಿಲ್ಲ. ಕೆರೆಯಲ್ಲಿ ಮಣ್ಣಿನ ಗುಂಡಿ ತೆಗೆದು ನರೇಗಾ ಅನುದಾನವನ್ನು ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಪೋಲು ಮಾಡಿದೆ. ನಾಗರಕೆರೆಯಲ್ಲಿ ಮೀನು ಸಾಕಾಣಿಕೆಗೆ ಹರಾಜು ಮಾಡಿರುವ 2 ಲಕ್ಷ 40ಸಾವಿರ ಹಣವು ಸಹ ಮಾಯವಾಗಿದೆ. ನಾಗರಕೆರೆಯ ಸಮಗ್ರ ಅಭಿವೃದ್ದಿಗೆ ಹರಾಜು ಹಣ ಬಳಸದೇ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯಿಂದ ದುರುಪಯೋಗಪಡಿಸಿದೆ ಎನ್ನುವ ಆರೋಪ ಕೇಳಿ ಬಂದಿದೆ. ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗ ಸಾರ್ವಜನಿಕ ಸಭೆ ಮತ್ತು ಪೋಟೊಗಳಿಗೆ ಸಿಮೀತವಾಗಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ನಾಗರಕೆರೆಗೆ ಅಭಿವೃದ್ದಿಯೇ ಮರೀಚಿಕೆಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಮೆಜಾಲಿ ಮತ್ತು ಬೇಲಿಗಿಡಗಳ ಹಾವಳಿಯಿಂದ ನಾಗರಕೆರೆಯ ಏರ ಕಣ್ಮರೆಯಾಗಿದೆ. ನಾಗರಕೆರೆಯ ಕೋಡಿ ಮತ್ತು ತೋಬು ಶಿಥಿಲವಾಗಿ ನೀರು ವ್ಯರ್ಥವಾಗಿ ಹರಿಯುತ್ತಿದೆ. ನಾಗರಕೆರೆ ತುಂಬಿ ಕೋಡಿಬಿದ್ದ 30 ದಿನಗಳ ಕಾಲವು ಕೆರೆಯಲ್ಲಿ ನೀರು ನಿಲ್ಲದೇ ವ್ಯರ್ಥವಾಗಿ ಪೋಲಾಗುತ್ತಿದೆ. ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಸಮಗ್ರ…
ಕೋಲ್ಕತ್ತಾ: ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಇತ್ತೀಚೆಗೆ ಪಿಂಕ್ ಮೊಬೈಲ್ ವ್ಯಾನ್ ಗಳನ್ನು ಸ್ಥಾಪಿಸಿತ್ತು. ಈ ವ್ಯಾನ್ ಗಳಲ್ಲಿ ಗಸ್ತು ತಿರುಗಿ ಮಹಿಳೆಯರ ಸುರಕ್ಷತೆಗೆ ಕ್ರಮಕೈಗೊಳ್ಳಲಾಗುತ್ತಿದೆ. ಆದರೆ, ಕರ್ತವ್ಯ ನಿರತ ಮಹಿಳಾ ಸಹಾಯಕ ಸಬ್ ಇನ್ಸ್‌ಪೆಕ್ಟರ್ ತನಿಯಾ ರಾಯ್ ಎಂಬವರು ಕುಡಿದ ಮತ್ತಿನಲ್ಲಿ ತಾನೇ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಸಿಲಿಗುರಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ತಾನಿಯಾ ಕುಡಿದ ಮತ್ತಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ತಾನಿಯಾಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿದ್ದ ಮಹಿಳೆಗೆ ತಾನಿಯಾ ಲಿಪ್ ಕಿಸ್ ಕೊಡಲು ಯತ್ನಿಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ತಾನಿಯಾ ಅವರ ಈ ವರ್ತನೆಯಿಂದ ಆಕ್ರೋಶಗೊಂಡ ಜನರು ಆಕೆಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಉಳಿದ ಪೊಲೀಸರು ಅವರು ತಡೆಯಲು ಯತ್ನಿಸಿದರು. ಈ ಘಟನೆಯ ವಿರುದ್ಧ ನೆಟ್ಟಿಗರು ಮತ್ತು ಬಿಜೆಪಿ ಪಕ್ಷದ ನಾಯಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024–25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ–ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…
ಶ್ರೀ ವೀರೇಂದ್ರ ಹೆಗಡೆಯವರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ,ಸಾಂಸ್ಕೃತಿಕ ರಂಗಗಳಲ್ಲಿ ಸೇವೆಯನ್ನು ಗುರುತಿಸಿ ಧರ್ಮಸ್ಥಳದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ್ದು, ಅವರ ಸೇವೆಗಳು ನಡವಳಿಕೆಗಳು ಸಾಮಾಜಿಕ ಪ್ರಜ್ಞೆಗಳು ಇದಕ್ಕೆ ಪೂರಕವಾಗಿವೆ ಎಂದು ಶ್ರೀ ಕ್ಷೇತ್ರ ಮೂಡುಬಿದರೆ ಜೈನಮಠದ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟರಕ ಪಂಡಿತಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಧರ್ಮಸ್ಥಳ ಸಭಾಭವನದಲ್ಲಿ ನಡೆದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಡೆಯವರ 57ನೇ ವರ್ಧಂನ್ಯೋತ್ಸವ ಸಮಾರಂಭದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಹುಮುಖಿ ಸಮಾಜ ಸೇವಾ ಕಾರ್ಯದಿಂದ ವಿಶ್ವಮಾನವರಾಗಿರುವ ಇವರು ಚತುರ್ವಿದ ದಾನ ಪರಂಪರೆ ಹೊಂದಿದ್ದಾರೆ ಎಂದರು. ಡಾ.ವೀರೇಂದ್ರ ಹೆಗ್ಗಡೆಯವರ ಪ್ರತಿಮೆ ಅನಾವರಣ ಮಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್ .ಮಂಜುನಾಥ್ ಮಾತನಾಡಿ, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕ ಆರೋಗ್ಯ ಅಗತ್ಯ. ನಮ್ಮ ಧರ್ಮಸ್ಥಳ ಮಾನಸಿಕ , ಶಾಂತಿ ,ನೆಮ್ಮದಿ ನೀಡುವ ತಾಣವಾಗಿದ್ದು ಶ್ರೀ ಹೆಗ್ಗಡೆಯವರ ಹತ್ತಾರು ಧರ್ಮಕಾರ್ಯಗಳು ಸಮಾಜಕ್ಕೆ ನಂದಾದೀಪವಾಗಿದ್ದು ಇವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದರು. ವಿಧಾನಪರಿಷತ್ ಸದಸ್ಯಕ್ಕೆ ಪ್ರತಾಪ್ ಸಿಂಗ್…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಬುಧ ಮತ್ತು ಗುರು ಪರಸ್ಪರ ಆರನೇ ಮತ್ತು ಎಂಟನೇ ಮನೆಯಲ್ಲಿ ಸ್ಥಿತರಿದ್ದು ಷಡಾಷ್ಟಕ ಯೋಗವನ್ನು ರೂಪಿಸುತ್ತಿದೆ. ಈ ಯೋಗವನ್ನು ಜ್ಯೋತಿಷ್ಯದಲ್ಲಿ ಅತ್ಯಂತ ಅಶುಭವೆಂದು ಪರಿಗಣಿಸಲಾಗಿದೆ. ಜಾತಕದ ಆರನೇ ಮತ್ತು ಎಂಟನೇ ಮನೆಯಲ್ಲಿ ಯಾವುದೇ ಶುಭ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಸತತವಾಗಿ ಧಾರಾಕಾರ ಮಳೆಯಾಗಿರುವ ಕಾರಣ ಇಲ್ಲಿನ ಹೆಳವಯ್ಯ ಎಂಬವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಗೋಡೆ ಛಾವಣಿ ಕುಸಿತಗೊಂಡು ಮನೆ ಒಳಗಡೆ ಇದ್ದ ಕೆಲವು ಹಸುಗಳ ಪೈಕಿ ಒಂದು ಹಸು ಸಾವನ್ನಪ್ಪಿದೆ. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು/ಚಿಕ್ಕನಾಯಕನಹಳ್ಳಿ : ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಎಸ್.ನಾಗರಾಜುಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿದ ಏಳನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶಿಸಿದೆ. ಏಳನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಟಿ.ಪಿ.ರಾಮಲಿಂಗೇಗೌಡರವರು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣಾ ಮೊ.ನಂ : ೧೩/೨೦೨೧ ಕಲಂ–೭(ಎ) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ–೧೯೮೮ (ತಿದ್ದುಪಡಿ — ೨೦೧೮) ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ : ೩೨೯/೨೦೨೩ ರಲ್ಲಿ ವಿಚಾರಣೆ ನಡೆಸಿ, ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ನಾಗರಾಜು ಎಸ್ ರವರನನ್ನು ದೋಷಿ ಎಂದು ಘನ ನ್ಯಾಯಾಲಯದಲ್ಲಿ ಘೋಷಿಸಿ. ದಿನಾಂಕ : ೨೪/೧೦/೩೦೨೪ ರಂದು ೭(ಎ) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ–೧೯೮೮ (ತಿದ್ದುಪಡಿ — ೨೦೧೮) ರ ಅಡಿಯಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಕಾರಾಗೃಹಕ ಶಿಕ್ಷೆ ಮತ್ತು…