Author: admin

ತುಮಕೂರು: ನಿರಂತರ ಮಳೆಯಿಂದಾಗಿ ನಗರದ ಅಮಾನಿಕೆರೆ ಕೋಡಿ ನೀರು ನುಗ್ಗಿ ದಿಬ್ಬೂರು ಬಡಾವಣೆಯ ಮನೆ, ಅಂಗಡಿ, ತೋಟಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೋಡಿ ನೀರಿನಿಂದ 2 ಮನೆಗಳು ಬಿದ್ದಿದ್ದು, ಹಲವಾರು ಮನೆಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತ–ವ್ಯಸ್ತವಾಗಿರುವುದನ್ನು ಕಂಡ ಜಿಲ್ಲಾಧಿಕಾರಿಗಳು ಕೂಡಲೇ ಜಲಾವೃತವಾಗಿರುವ ಮನೆಗಳ ಕುಟುಂಬದ ಸದಸ್ಯರನ್ನು ಜಿಲ್ಲಾಡಳಿತದ ವತಿಯಿಂದ ದಿಬ್ಬೂರು ಸಮುದಾಯ ಭವನದಲ್ಲಿ ತಾತ್ಕಾಲಿಕವಾಗಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಅವರಿಗೆ ನಿರ್ದೇಶನ ನೀಡಿದರು. ಸ್ಥಳದಲ್ಲಿದ್ದ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರು ಕಳೆದ 2019 ಹಾಗೂ 2022ರಲ್ಲಿ ಅಮಾನಿಕೆರೆ ಕೋಡಿ ನೀರು ನುಗ್ಗಿ ಇಲ್ಲಿನ ನಿವಾಸಿಗಳ ಜೀವನ ಅಸ್ತ–ವ್ಯಸ್ತವಾಗಿತ್ತು. ಇದೇ ಬಡಾವಣೆಯ ಸರ್ವೇ ನಂಬರ್ 207 ಹಾಗೂ 208ರಲ್ಲಿರುವ ರಾಜಗಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲದ ಕಾರಣ ದಿಬ್ಬೂರು ಬಡಾವಣೆ ಜಲಾವೃತಗೊಂಡಿದೆ. ಅಲ್ಲದೆ ನಗರದಲ್ಲಿರುವ ಮುಖ್ಯ ರಾಜಗಾಲುವೆಗಳು ಒತ್ತುವರಿಯಾಗಿರುವುದರಿಂದಲೂ…

Read More

ತುಮಕೂರು:  ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 28ರಂದು ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 28ರಂದು ಜಿಲ್ಲೆಯ ತಿಪಟೂರು ತಾಲೂಕಿನ ಕರಡಿ; ತುಮಕೂರು ತಾಲೂಕಿನ ಹೆಬ್ಬೂರು; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಾಣದಾಳು, ರಾಮನಹಳ್ಳಿ, ಕುಪ್ಪೂರು ಹಾಗೂ ಹೊನ್ನೇಭಾಗಿ; ಕುಣಿಗಲ್ ತಾಲೂಕಿನ ಮಡಿಕೆಹಳ್ಳಿ; ಕೊರಟಗೆರೆ ತಾಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲಾಡಳಿತದ ವತಿಯಿಂದ ನವೆಂಬರ್ 1ರಂದು ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡದ ಜ್ಞಾನಪೀಠ ಪುರಸ್ಕೃತರು, ಕನ್ನಡ ನಾಡು–ನುಡಿಗಾಗಿ ಹೋರಾಡಿದ ಜಿಲ್ಲೆಯ ಹೆಸರಾಂತ ಕವಿ/ಸಾಹಿತಿಗಳ ಕುರಿತು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಆಯ್ದ ಶಾಲೆಗಳಲ್ಲಿ ಸಾಹಿತ್ಯವಾರ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಾಹಿತ್ಯವಾರ ಆಚರಣೆ ಮಾಡುವುದರಿಂದ ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡುವುದಲ್ಲದೆ, ಕನ್ನಡ ಸಾಹಿತ್ಯ ಮತ್ತು ಕನ್ನಡ ಕವಿಗಳ ಇತಿಹಾಸದ ಪರಿಚಯವಾಗುತ್ತದೆ. ಭಾರತದ ಇತರೆ ಭಾಷೆಗಳಿಗಿಂತ ಕನ್ನಡ ಭಾಷೆ ಶ್ರೀಮಂತ ಭಾಷೆಯಾಗಿದ್ದು, ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವನ್ನು ಹಬ್ಬದ ರೀತಿಯಲ್ಲಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ…

Read More

ತುಮಕೂರು:  ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಅಕ್ಟೋಬರ್ 26ರಂದು ನಡೆಯುವ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ 2,672 ಹಾಗೂ ಅ.27ರಂದು ಜಿಲ್ಲಾದ್ಯಂತ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆ ತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್‌ಗಳ ನೇತೃತ್ವದಲ್ಲಿ ತ್ರಿ–ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು. ವಸ್ತ್ರ ಸಂಹಿತೆ ಪಾಲನೆಗೆ ಸೂಚನೆ:…

Read More

ತುಮಕೂರು: ನಮ್ಮ ಅನುಭವಗಳೇ ನಮಗೆ ಗುರುವಾಗಿದ್ದು, ಸ್ವಂತ ತಿಳುವಳಿಕೆಯನ್ನು ಅದರಿಂದ ಪಡೆಯಬೇಕೆಂದುರಮಣ ಮಹರ್ಷಿಗಳು ಸಾರಿದರುಎಂದು ಸಾಹಿತಿ ಡಾ.ಜಿ.ಬಿ.ಹರೀಶ್ ಹೇಳಿದರು. ತುಮಕೂರು ವಿವಿಯ ರಮಣ ಮಹರ್ಷಿಅಧ್ಯಯನ ಪೀಠವು ಗುರುವಾರ ಆಯೋಜಿಸಿದ್ದ ‘ಆಧುನಿಕತೆಯ ಹಿನ್ನಲೆಯಲ್ಲಿರಮಣ ಮಹರ್ಷಿಗಳ ಚಿಂತನೆಗಳ ಪ್ರಸ್ತುತತೆ’ ವಿಷಯದ ಕುರಿತ ವಿಚಾರ ಸಂಕಿರಣವನ್ನುಉದ್ಘಾಟಿಸಿ ಮಾತನಾಡಿದರು. ರಮಣರು ಹೇಳಿದ ಹಾಗೆ ‘ದೇಹಕ್ಕೆ ಮಾತ್ರ ಸಾವು, ಆತ್ಮಕ್ಕೆ ಸಾವಿಲ್ಲ. ನಿಮ್ಮ ಬಿಂಬವನ್ನು ನೀವು ಅರಿಯಬೇಕು. ನಿಮ್ಮಎಚ್ಚರ ಎಂದಿಗೂ ಸತ್ಯವಲ್ಲ. ಜಾಗೃತ, ಸ್ವಪ್ನ, ಸ್ವಪ್ನವಲ್ಲದ ವಿಷಯಗಳನ್ನು ಪೂರ್ಣವಾಗಿಅರಿಯಬೇಕಿದೆ. ಪ್ರಜ್ಞೆಯನ್ನು ದಾಟಿದ ಉನ್ನತ ಪ್ರಜ್ಞೆಯನ್ನು ಕಂಡುಕೊಳ್ಳಬೇಕು. ನಿಮ್ಮನ್ನು ನೀವು ಪ್ರಶ್ನೆ ಮಾಡಿಕೊಳ್ಳುವ ಮೂಲಕ ಸಾರ್ಥಕತೆಯನ್ನು ಪಡೆಯಬಹುದಾಗಿದೆ’ ಎಂದು ತಿಳಿಸಿದರು. ರಮಣರಿಗೆ ಗುರುಗಳಿರಲಿಲ್ಲ. ಯಾವುದೇ ಮಂತ್ರ, ಉಪದೇಶ, ಪದ್ಯಗಳನ್ನು ಪಠಿಸಲಿಲ್ಲ. ನಿಶ್ಯಬ್ಧ ಹಾಗೂ ಬದ್ಧವಾಗಿ ಒಂದೆಡೆ ಕುಳಿತುಕೊಂಡರು. ಎಂದಿಗೂ ತಮ್ಮನ್ನು ಮಹರ್ಷಿಗಳು ಎಂದು ಕರೆದುಕೊಳ್ಳಲಿಲ್ಲ. ಜಗತ್ತಿನ ಅನೇಕ ಮಹಾನ್ ವ್ಯಕ್ತಿಗಳು ಹಾಗೂ ಮಹರ್ಷಿಗಳನ್ನು ಭೇಟಿ ಮಾಡುತ್ತಿದ್ದರು. ಅವರದ್ದುಎನ್ನುವುದು ಯಾವುದು ಇರಲಿಲ್ಲ. ತನ್ನ ಪಾಡಿಗೆ ತಾನು ಇದ್ದರು. ಹುಡುಕುವುದು ಏನೂ ಇಲ್ಲ…

Read More

ಸರಗೂರು:  ಸಾರ್ವಜನಿಕರು ಮತ್ತು ಭಕ್ತಾದಿಗಳಿಗೆ ಕಾಡು ಪ್ರಾಣಿಗಳಿಂದ ತೊಂದರೆಯಾಗದಂತೆ ನೋಡಿಕೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್.ಬಿ.ವಿಜಯಕುಮಾರ್ ಸೂಚನೆ ನೀಡಿದರು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇರುವ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ವರ ಪ್ರಮುಖ ದೇವಸ್ಥಾನದ ಜಾತ್ರೆಗೆ ಒಂದು ತಿಂಗಳ ಮುಂಚಿತವಾಗಿ ಜಿಲ್ಲಾಧಿಕಾರಿಗಳು ನೀಡಿದ  ಆದೇಶದ ಮೇರೆಗೆ ಹುಣಸೂರು ಉಪವಿಭಾಗಾಧಿಕಾರಿ ಎಚ್. ಬಿ. ವಿಜಯಕುಮಾರ್ ಅಧ್ಯಕ್ಷತೆಯಲ್ಲಿ  ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಮ್ಮುಖದಲ್ಲಿ ದೇವಸ್ಥಾನ ಪರಿಶೀಲನೆ ನಡೆಸಿ ನಂತರ ಹೆಡಿಯಾಲ ಉಪವಲಯ ಕಚೇರಿಯ ಸಭಾಂಗಣದಲ್ಲಿ ಗುರುವಾರ  ಅಧಿಕಾರಿ ಸಭೆ ನಡೆಸಲಾಯಿತು . ನಂತರ ಮಾತನಾಡಿದ ಅವರು,  ಕಂದಾಯ ಮತ್ತು ಆರೋಗ್ಯ ಮತ್ತು ನೀರು ನೈರ್ಮಲ್ಯ,  ಅರಣ್ಯ, ಪೋಲೀಸ್ ಇಲಾಖೆ ಅಧಿಕಾರಿಗಳಿಗೆ  ದೇವಸ್ಥಾನಕ್ಕೆ ಬರುವ ಭಕ್ತರಿಗಳಿಗೆ ಹಾಗೂ ಸಾರ್ವಜನಿಕರು ತೊಂದರೆ ಆಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು . ಕಳೆದ ವರ್ಷ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಅದೇ ತರಹದ ಧಾರ್ಮಿಕ ಪೂಜೆ ಗಳಿಗೆ ತೊಂದರೆ ನೀಡಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ…

Read More

ಸರಗೂರು:  ಹಿಂದುಳಿದ ವರ್ಗಗಳ ಜಾತಿ ಜನಸಂಖ್ಯೆ ಆಧಾರದ ಮೇಲೆ ಜಾತಿಗಣತಿ ಮಾಡಿ ಒಳ ಮೀಸಲಾತಿಯನ್ನು ಸರ್ಕಾರ ಘೋಷಿಸಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಟೋಕನ್ ನಾಗರಾಜು ಹೇಳಿದರು. ಪಟ್ಟಣದ ಆರ್ಯ ಈಡಿಗ ಸಮುದಾಯದ ಭವನದಲ್ಲಿ ಗುರುವಾರದಂದು ಸಭೆಯನ್ನು ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರದಿಂದ ಹಿಂದುಳಿದ ವರ್ಗಗಳ ಒಳ ಮೀಸಲಾತಿ ಜಾರಿ ಮಾಡಿದ್ದರೆ,  ಹಿಂದುಳಿದ ಬಡಜನರಿಗೆ ಅನುಕೂಲವಾಗುತ್ತ ಎಂದರು. ಒಳಮೀಸಲಾತಿಯಿಂದ ಹಿಂದುಳಿದ ವರ್ಗಗಳು ಸೌಲಭ್ಯಗಳನ್ನು ಪಡೆಯಲು  ಕಷ್ಟ ಪಡುವಂತಾಗಿದೆ. ಮೀಸಲಾತಿಯಿಂದ ವಂಚಿತವಾಗಿರುವ ಜಾತಿಗಳು ಈಡಿಗ ಸಮಾಜ, ಕುರುಬಗೌಡ , ನಾಮಧಾರಿಗೌಡ, ಸವಿತ ಸಮಾಜ, ವಿಶ್ವಕರ್ಮ ಇನ್ನೂ ಹಲವಾರು ಜಾತಿಗಳು ಹಿಂದುಳಿದ ಜಾತಿಗಳು ಒಳಮೀಸಲಾತಿ ಇಲ್ಲದೆ , ಇತರೆ ಸರ್ಕಾರದ  ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು   ಜನಗಣತಿ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು.  ಹಿಂದುಳಿದ ವರ್ಗಗಳು ಒಳಮೀಸಲಾತಿ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು. ರಾಜ್ಯ ಸರ್ಕಾರಗಳು ತಾಯ್ತನ ಮತ್ತು ವಿವೇಕಯುತ ಮನಸ್ಸಿನಿಂದ ಕಾರ್ಯಪ್ರವೃತ್ತಾರಾಗಿ ಹಿಂದುಳಿದ…

Read More

ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದ್ದು. ಪ್ರಥಮ ವರ್ಷದ ಈ ಮೇಲ್ಕಂಡ ಕೋರ್ಸ್ ಗಳ ಪ್ರವೇಶಾತಿಗೆ 2024ರ ನವೆಂಬರ್ 15 ಕಡೆಯ ದಿನಾಂಕವಾಗಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ನವೆಂಬರ್ 15ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ…

Read More

ಹಾಸನ: ಶ್ರೀ ಹಾಸನಾಂಬ ದೇವಿ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಮೊದಲನೇ ದಿನವಾದ ಇಂದು ದೇವಸ್ಥಾನದ ಬಾಗಿಲು ತೆರೆಯುವ ಕಾರ್ಯಕ್ರಮದಲ್ಲಿ ಸಚಿವ ಕೆ.ಎನ್.ರಾಜಣ್ಣ ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು. ಆದಿಚುಂಚನಗಿರಿ ಮಠದ ಪರಮಪೂಜ್ಯ ಗುರುಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು ಹಾಗೂ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಪರಮಪೂಜ್ಯ ಗುರುಗಳಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ.ಪಟೇಲ್, ಶಾಸಕರುಗಳಾದ ಸ್ವರೂಪ್ ಪ್ರಕಾಶ್, ಶಿವಲಿಂಗೇಗೌಡ, ಸಿಮೆಂಟ್ ಮಂಜು, ಜಿಲ್ಲಾಧಿಕಾರಿಯಾದ ಸತ್ಯಭಾಮ, ಸಿ.ಇ.ಓ ಪೂರ್ಣಿಮ, ಪೊಲೀಸ್ ಅಧೀಕ್ಷಕರಾದ ಮಹಮ್ಮದ್ ಸುಜೀತಾ ಸೇರಿದಂತೆ ವಿವಿಧ ಮಠಾಧೀಶರು, ಮುಖಂಡರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕರಾವಳಿ: ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪಾತ್ರ ಮಹತ್ವದ್ದು. ಉಡುಪಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಂದು ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದ್ದು, 26ರಿಂದ ಮಳೆಯ ಸಾಧ್ಯತೆ ಕಾಣುತ್ತಿಲ್ಲ. ಮಲೆನಾಡು : ಕೊಡಗು ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಮಧ್ಯಾಹ್ನ ನಂತರ, ಸಂಜೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮತ್ತು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅಕ್ಟೊಬರ್ 25ರಂದು ಮೋಡ ಹಾಗೂ ಒಂದೆರಡು…

Read More