Subscribe to Updates
Get the latest creative news from FooBar about art, design and business.
- ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
- ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
- ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
- ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
- ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
- ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
Author: admin
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಕೊಳಚೆ ನೀರಿನಲ್ಲೇ ನಡೆದುಕೊಂಡು ಹೋಗುತ್ತಿರುವ ಘಟನೆಯ ಬಗ್ಗೆ ನಮ್ಮತುಮಕೂರು ವಾಹಿನಿ ವರದಿ ಮಾಡಿತ್ತು. ವರದಿಯ ಬೆನ್ನಲ್ಲೇ ಇದೀಗ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಿದ್ದಾರೆ. ದೊಡ್ಡಹಳ್ಳಿ ರಸ್ತೆಯಲ್ಲಿರುವ ವೈ.ಎನ್.ಹೊಸಕೋಟೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಸರಿಯಾದ ರಸ್ತೆ ವ್ಯವಸ್ಥೆ ಇಲ್ಲದೇ ಕೊಳಚೆ ನೀರಿನಲ್ಲಿ ನಡೆದುಕೊಂಡು ಹೋಗಬೇಕಾದ ಸ್ಥಿತಿಯಿತ್ತು. ಈ ಬಗ್ಗೆ ನಮ್ಮತುಮಕೂರು ಸವಿವರವಾದ ವರದಿಯನ್ನು ಪ್ರಕಟಿಸಿತ್ತು. ನಮ್ಮತುಮಕೂರು ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಅನುಕೂಲವಾಗುವಂತೆ ತಾತ್ಕಾಲಿಕವಾಗಿ ಚರಂಡಿ ನಿರ್ಮಾಣ ಹಾಗೂ ಸಿಮೆಂಟ್ ಪೈಪ್ ಅಳವಡಿಸಿ, ನೀರು ಮತ್ತು ರಸ್ತೆಯನ್ನು ಪ್ರತ್ಯೇಕಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಾರೆ. ನಮ್ಮತುಮಕೂರು ಮಾಧ್ಯಮದ ವರದಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಾವಗಡ ತಾಲೂಕು ಹಾಗೂ ತುಮಕೂರು ಜಿಲ್ಲೆಯಲ್ಲಿ ನಮ್ಮತುಮಕೂರು ವಾಹಿನಿ ಜನಸ್ನೇಹಿ ವರದಿಗಳನ್ನು ಮಾಡಿ ಸಮಾಜಮುಖಿಯಾಗಿದೆ ಎಂದು ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ
ತುಮಕೂರು: ಮಳೆಯಿಂದ ಮರ ಬಿದ್ದು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ ಒಂದು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ 2024ರ ಜನವರಿ 1 ರಿಂದ ಈವರೆಗೂ ವಾಸ್ತವವಾಗಿ 926 ಮಿ.ಮೀ. ಮಳೆಯಾಗಿದೆ. ಸಿಡಿಲಿನಿಂದ ಶಿರಾ ಹಾಗೂ ತುರುವೇಕೆರೆ ತಾಲ್ಲೂಕಿನ 2 ಹಸು/ಎಮ್ಮೆ ಹಾಗೂ ಪಾವಗಡ ತಾಲ್ಲೂಕಿನ 6 ಕುರಿ ಮತ್ತು ತುರುವೇಕೆರೆ ತಾಲ್ಲೂಕಿನ 17(13 ಮೇಕೆ + 4 ಕುರಿ) ಸೇರಿ ಒಟ್ಟು 25 ಜಾನುವಾರುಗಳ ಪ್ರಾಣ ಹಾನಿಯಾಗಿದೆ. ಈ ಪೈಕಿ ಜಾನುವಾರು ಮಾಲೀಕರಿಗೆ 37,500 ರೂ.(ತಲಾ ಒಂದು ಜಾನುವಾರಿಗೆ)ಗಳ ಪರಿಹಾರ ಹಾಗೂ 4000 ರೂ.ಗಳ (ತಲಾ ಒಂದು ಕುರಿ/ಮೇಕೆ) ಪರಿಹಾರವನ್ನು ವಿತರಿಸಲಾಗಿದೆ. ಮಳೆಯಿಂದ ಜಿಲ್ಲೆಯ ಒಟ್ಟು 59.52 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಬೆಳೆ ಪರಿಹಾರ ನೀಡಲು ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೆ 133 ಮನೆ ಹಾನಿ, 3 ಸಂಪೂರ್ಣ/ತೀವ್ರ ಮನೆ ಹಾನಿ ಹಾಗೂ 130…
ತಿಪಟೂರು: ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ತಾಲೂಕು ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ನೌಕರರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಅಕ್ಟೋಬರ್ 27 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಎಸ್ .ಎಮ್.ಸ್ವಾಮಿ ತಿಳಿಸಿದರು. ಸಂಘದ ಅಧ್ಯಕ್ಷರು ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಅಕ್ಟೋಬರ್ 27 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಪಿ.ಜಿ.ಎಮ್ .ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಮತ್ತು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿರುಷಭ ದೇಶಿ ಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು. ಶಾಸಕ ಕೆ. ಷಡಕ್ಷರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಸಮಾರಂಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಸನ್ಮಾನಿಸಲಾಗುತ್ತದೆ. ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ನೌಕರರಿಗೆ ಸನ್ಮಾನಿಸಲಾಗುವುದು ಎಂದರು. ಈ ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಸ್.ಆರ್.ಸುರೇಶ್ ನಿರ್ದೇಶಕ ಚಂದ್ರಶೇಖರ್ ಹಾಗೂ ಖಜಾಂಚಿ ಚಿದಾನಂದ್ ತೋಂಟರಾಧೃ ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ನಿಷೇಧಕ್ಕೆ ಸೂಚನೆ ನೀಡಲಾಗಿದೆ. ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬೇಕು. ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿಗಳನ್ನು ಸಿಡಿಸುವುದು, ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳ ಮಾರಾಟವನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತ–ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಳಸಬಾರದು. ಸಾರ್ವಜನಿಕರು ನಗರ ಮತ್ತು ಪಟ್ಟಣದ ಚಿಕ್ಕ–ಚಿಕ್ಕ ಬೀದಿಗಳಲ್ಲಿ ಪಟಾಕಿ, ಸಿಡಿಮದ್ದು ಹಾಗೂ ಬಾಣ–ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಅಥವಾ…
ತುಮಕೂರು: ಹೊಟೇಲ್ ಉದ್ಯಮಿ ಹಾಗೂ ಜೆಡಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಕೆ.ಜಿ.ಎಲ್.ರವಿ(ಕ್ಯಾತ್ಸಂದ್ರ ಗಂಗಣ್ಣ,ಲಿಂಗಣ್ಣ ರವಿ) 57 ವರ್ಷ, ಬುಧವಾರ ಮಧ್ಯಾಹ್ನ 12 ರ ಹೊತ್ತಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ಇತ್ತೀಚೆಗೆ ಜಿಲ್ಲಾ ಜೆಡಿಯು ಕಚೇರಿಯನ್ನು ಸಹ ಕರಿಬಸವೇಶ್ವರ ವೃತ್ತದಲ್ಲಿ ತೆರೆದಿದ್ದರು. ರಾಮಕೃಷ್ಣ ಹೆಗಡೆ ಅವರ ಕಾಲದಿಂದಲೂ ಜೆಡಿಯು ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ಜೆ.ಹೆಚ್.ಪಟೇಲ್, ಎಂ.ಪಿ.ನಾಡಗೌಡ, ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಜ.ಪಟೇಲ್ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಮೂಲತಃ ತುಮಕೂರಿನವರೇ ಆದ ಕೆಜಿಎಲ್ ರವಿ ಅವರು ನಗರದ ಅರಳೇಪೇಟೆಯಲ್ಲಿ ವಾಸವಾಸವಾಗಿದ್ದ ಹೊರಪೇಟೆ ಸರ್ಕಲ್ ನಿಂದ ಕೆ.ಆರ್.ಬಡಾವಣೆಗೆ ಹೋಗುವ ರಸ್ತೆಯಲ್ಲಿ ಚಂದ್ರಮೌಳೇಶ್ವರ ಹೆಸರಿನ ಹೊಟೇಲ್ ಒಂದನ್ನು ತಮ್ನ ಕುಟುಂಬದ ಸದಸ್ಯರೊಂದಿಗೆ ನಡೆಸುತ್ತಿದ್ದರು. ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದು, ಹೆಂಡತಿ, ಸಹೋದರರು, ಬಂಧು, ಬಳಗವನ್ನು ಆಗಲಿದ್ದಾರೆ. ಇವರ ಅಂತ್ಯಕ್ರಿಯೆ ಅಕ್ಟೋಬರ್ 24ರ ಗುರುವಾರ ಬೆಳಗ್ಗೆ ಕುಣಿಗಲ್ ರಸ್ತೆಯ ರುದ್ರಭೂಮಿಯಲ್ಲಿ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯು ಗೋವಾ ಮಾದರಿಯಲ್ಲಿ ಕರ್ನಾಟಕದ ಬೀಚ್ ಗಳಲ್ಲಿಯೂ ಮದ್ಯ ಮಾರಾಟಕ್ಕೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ರಾಜ್ಯದ ಬೀಚ್ಗಳಿಗೆ ಪ್ರವಾಸಿಗರನ್ನು ಸೆಳೆಯುವ ಮತ್ತು ಪ್ರವಾಸೋದ್ಯಮವನ್ನು ಇನ್ನಷ್ಟು ಲಾಭದಾಯಕವನ್ನಾಗಿಸುವ ಉದ್ದೇಶದೊಂದಿಗೆ ಮಹತ್ವದ ಕ್ರಮಕ್ಕೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ. ರಾಜ್ಯದ ಕರಾವಳಿಯ ಬೀಚ್ಗಳಲ್ಲಿ ಕೂಡ ಗೋವಾದ ಮಾದರಿಯಲ್ಲಿ ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ಗಳನ್ನು ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ ಎನ್ನಲಾಗಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆ.ವಿ. ಬೀಚ್ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದು ಹೇಳಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಮಹಿಳೆಯೊಬ್ಬಳು ತನ್ನ ಪತಿಗೆ ದಿನದಲ್ಲಿ ಮೂರು ಬಾರಿ 10ರಿಂದ 15 ನಿಮಿಷಗಳ ಕಾಲ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದು, ಆಕೆಯ ಆಸೆ ಪೂರೈಸಲು ಅಸಮರ್ಥನಾದ ಪತಿ, ಇದೀಗ ಡಿವೋರ್ಸ್ ಗಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದಾನೆ. ಪತ್ನಿ ಮೊಬೈಲ್‍ನಲ್ಲಿ ಪೋರ್ನ್ ವಿಡಿಯೋ ನೋಡುವ ಚಟ ಹೊಂದಿದ್ದಾಳೆ ಎಂದು ಪಂಜಾಬ್ ಹರಿಯಾಣ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಆತ ಹೇಳಿದ್ದಾನೆ. ಅಲ್ಲದೇ ಪತ್ನಿ ತನ್ನ ಆಸೆ ಪೂರೈಸಲು ಅಸಮರ್ಥನಾದರೆ ತನ್ನನ್ನು ನಪುಂಸಕ ಎಂದು ಪತ್ನಿ ಹೀಯಾಳಿಸುತ್ತಾಳೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾನೆ. ಪತ್ನಿಯು ಪತಿಯ ತಾಯಿಯನ್ನು ಕೂಡ ನಿಂದಿಸಿದ್ದು, ಎಂತಹ ನಪುಂಸಕನಿಗೆ ಜನ್ಮ ನೀಡಿದ್ದೀಯಾ ಎಂದು ಕರೆದಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ನ್ಯಾಯಪೀಠವು ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೆಂಡತಿ ತನ್ನ ಗಂಡನನ್ನು ನಪುಂಸಕ ಎಂದು ಕರೆದರೆ ಅದು ಮಾನಸಿಕ…
ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತ ನಡೆದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ. ಈ ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುತ್ತೇವೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೃತದೇಹವನ್ನು ಅವರ ಜಾಗಗಳಿಗೆ ಕಳುಹಿಸಲಾಗುತ್ತದೆ. ಕಳಪೆ ಕಾಮಗಾರಿಯಿಂದ ಈ ಅವಘಡ ನಡೆದಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳಿಗೆ ನೋಟಿಸ್ ನೀಡಲಾಗಿದೆ ಎಂದರು. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಅ.22ರ ಸಂಜೆ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದುಬಿದ್ದು ದುರಂತ ಸಂಭವಿಸಿತ್ತು. ಅವಶೆಷಗಳಡಿಯಲ್ಲಿ ಸಿಲುಕಿದ್ದ 8 ಜನರ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚನ್ನಪಟ್ಟಣ: ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿತ್ತು. ರಾಜಕೀಯವಾಗಿ ನನ್ನ ಮುಗಿಸುವ ಯತ್ನ ನಡೆದಿತ್ತು ಎಂದು ನಿನ್ನೆಯಷ್ಟೇ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಆರೋಪಿಸಿದ್ದಾರೆ. ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್, ಒಂದೆರಡು ದಿನ ನಾನು ತಡ ಮಾಡಿದ್ರೇ ರಾಜಕೀಯವಾಗಿಯೇ ನನ್ನನ್ನು ಮುಗಿಸುವ ಕಾರ್ಯ ನಡೆದಿತ್ತು ಎಂದು ಹೇಳಿದ್ದಾರೆ. ಟಿಕೆಟ್ ಕೊಡ್ತೀನಿ, ಕೊಡ್ತೀನಿ ಅಂತಾ ಸತಾಯಿಸಿದ್ರು. ಅಧ್ಯಕ್ಷರು ಟಿಕೆಟ್ ಕೊಡಿಸಿದ್ರೆ ನಾನ್ಯಾಕೆ ಕಾಂಗ್ರೆಸ್ ಸೇರ್ತಿದ್ದೆ? ಎಂದು ಬಿಜೆಪಿ ವಿರುದ್ಧ ಯೋಗೇಶ್ವರ್ ಗುಡುಗಿದ್ದಾರೆ. ಚನ್ನಪಟ್ಟಣದ ಟಿಕೆಟ್ ಕೇಳಿದಾಗ ಹೆಚ್.ಡಿ.ಕುಮಾರಸ್ವಾಮಿ ಕೂಡ ಹಾರಿಕೆ ಉತ್ತರ ನೀಡಿದರು. ಚನ್ನಪಟ್ಟಣ ಅಲ್ಲೇ ಇದೆ ಎಲ್ಲಿ ಹೋಗಿದೆ…ಅಂತ ಕೇಳಿದರು. ಅಲ್ಲಿಗೆ ನಿಖಿಲ್ ಅವರನ್ನು ಸ್ಪರ್ಧೆಗೆ ಇಳಿಸುವುದು ನಿಖರವಾಗಿ ತಿಳಿದಿತ್ತು. ಹಾಗಾಗಿ ತಡ ಮಾಡದೇ ನಾನು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು : ನಿರಂತರ ಮಳೆಯಿಂದಾಗಿ ಅಮಾನಿಕೆರೆ ಹರಿದು ಕೋಡಿ ಬಿದ್ದಿರುವುದರಿಂದ ಜನರು ಕೆರೆಯಲ್ಲಿ ಮೀನು ಹಿಡಿಯುವುದರಲ್ಲಿ ಮುಗಿಬಿದ್ದಿದ್ದಾರೆ. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು. ಇತ್ತ ಕಡೆ ಪೊಲೀಸ್ ಇಲಾಖೆ ವತಿಯಿಂದ ಒಬ್ಬ ಪೊಲೀಸ್ ಪೇದೆಯನ್ನು ನೇಮಿಸಿ ಸಮಸ್ಯೆಯನ್ನು ಬಗೆಹರಿಸಬೇಕಾಗಿ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕೋಡಿ ಬಿದ್ದ ಕೆರೆಯಲ್ಲಿ ಮೀನು ಹಿಡಿಯುವುದು ಅಪಾಯಕಾರಿಯಾಗಿದೆ. ಇದರಿಂದ ಸಾಕಷ್ಟು ಅಪಾಯಗಳು ಸಂಭವಿಸುವ ಸಾಧ್ಯತೆಗಳಿರುವುದರಿಂದ ಅಧಿಕಾರಿಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಬೇಕು ಎನ್ನುವ ಒತ್ತಾಯಗಳು ಕೇಳಿ ಬಂದಿವೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296