Subscribe to Updates
Get the latest creative news from FooBar about art, design and business.
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
Author: admin
ತುಮಕೂರು: ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ ಶ್ರೇಷ್ಠ ತೋಟಗಾರಿಕೆ ರೈತ / ರೈತ ಮಹಿಳೆಯನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಯಸುವವರು ನಿಗಧಿತ ಅರ್ಜಿ ನಮೂನೆಯನ್ನು ತೋ. ವಿ. ವಿ. ಯ ವೆಬ್ ಸೈಟ್ www.uhsbagalkot.karnataka.gov.in ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 5ರೊಳಗಾಗಿ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರ ಕಚೇರಿ, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋ.ವಿ.ವಿ. ಆವರಣ ಜಿ.ಕೆ.ವಿ.ಕೆ. ಅಂಚೆ, ಬೆಂಗಳೂರು-560065 ಇವರಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ. ಇಟಿಗಿ ಪ್ರಭಾಕರ, ವಿಸ್ತರಣಾ ಮುಂದಾಳು, ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಬೆಂಗಳೂರು (9538771475), ಡಾ. ದೊಡ್ಡಬಸಪ್ಪ ಬಿ. ಸಹಾಯಕ ಪ್ರಾಧ್ಯಾಪಕರು, ಕೃಷಿ ಕೀಟಶಾಸ್ತ್ರ, ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು (7795072699), ಸೀಮಾ ಎಂ. ಪ್ರಾ.ತೋ.ಸಂ.ವಿ.ಕೇಂದ್ರ, ಬೆಂಗಳೂರು (7411228096) ಅಥವಾ ಸಹಾಯವಾಣಿ 18004257910ಗೆ ಸಂಪರ್ಕಿಸಬಹುದು. ನಮ್ಮತುಮಕೂರಿನ…
ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಸಾಂಸ್ಥಿಕೇತರ(ಆಸ್ಪತ್ರೆ ಹೊರತುಪಡಿಸಿ ಮನೆ ಹಾಗೂ ಇತರೆ ಸ್ಥಳ) ಮರಣ ಘಟನೆ ಸಂಭವಿಸಿದ 21 ದಿನದೊಳಗಾಗಿ ನಿಗದಿತ ನಮೂನೆ 4ಎಯಲ್ಲಿ ಮರಣ ಕಾರಣದ ಮಾಹಿತಿಯನ್ನು ಭರ್ತಿ ಮಾಡಿ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಪಾಲಿಕೆಯ ಜನನ ಮರಣ ಶಾಖೆಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ. ಸಂಬಂಧಿತರು ನಿಗದಿತ ಅವಧಿಯೊಳಗೆ ಪಾಲಿಕೆಯ ಜನನ ಮರಣ ಶಾಖೆಗೆ ಅರ್ಜಿ ಸಲ್ಲಿಸುವ ಮೂಲಕ ಉಚಿತ ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ. ನಿಗದಿತ ಅವಧಿ ನಂತರ ಮರಣ ಪ್ರಮಾಣ ಪತ್ರ ಪಡೆಯಲು ತಡ ಶುಲ್ಕವನ್ನು ಸಂದಾಯ ಮಾಡಬೇಕು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ 20 ವರ್ಷ ಮೇಲ್ಪಟ್ಟವರಲ್ಲಿ ಫೈಲೇರಿಯ ರೋಗ ಪತ್ತೆ ಹಚ್ಚುವ ಉದ್ದೇಶದಿಂದ ಅಕ್ಟೋಬರ್ 23 ರಿಂದ 25ರವರೆಗೆ ಫೈಲೇರಿಯ ರಕ್ತಲೇಪನ ಸಂಗ್ರಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ. ರಕ್ತಲೇಪನ ಸಂಗ್ರಹಣಾ ಕಾರ್ಯಕ್ಕಾಗಿ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ತಲಾ 2 ತಂಡಗಳನ್ನು ನಿಯೋಜಿಸಲಾಗಿದ್ದು, ಸಂಗ್ರಹಣಾ ಕಾರ್ಯಕ್ಕಾಗಿ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಕ್ಟೋಬರ್ 24 ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬAಧಿಸಿದAತೆ ಫಲಾನುಭವಿಗಳ ಕುಂದು-ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಅಕ್ಟೋಬರ್ 24ರಂದು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ; ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ; ತಿಪಟೂರು ತಾಲೂಕಿನ ಹೊನ್ನವಳ್ಳಿ; ಮಧುಗಿರಿ ತಾಲ್ಲೂಕಿನ ಬಿಜವರ; ತುಮಕೂರು ತಾಲೂಕಿನ ಸೊರೆಕುಂಟೆ; ಚಿಕ್ಕನಾಯಕನಹಳ್ಳಿ ತಾಲೂಕಿನ ಹೊಯ್ಸಳಕಟ್ಟೆ; ಕುಣಿಗಲ್ ತಾಲ್ಲೂಕಿನ ಸಂತೆಮಾವತ್ತೂರು; ಕೊರಟಗೆರೆ ತಾಲೂಕಿನ ತೀತಾ; ಪಾವಗಡ ತಾಲೂಕಿನ ಸಿದ್ದಾಪುರ; ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಸೇರಿ 10 ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಉದ್ಯಮಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕ್ ಸಹಯೋಗದೊಂದಿಗೆ)ಯಡಿ ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ. 70ರಷ್ಟು ಸಹಾಯಧನ ಅಥವಾ ಗರಿಷ್ಟ 2 ಲಕ್ಷ ರೂ.ಗಳ ಸಾಲ ನೀಡಲಾಗುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕ ವೆಚ್ಚದ ಶೇ. 75ರಷ್ಟು ಸಹಾಯಧನ ಅಥವಾ ಗರಿಷ್ಟ 4 ಲಕ್ಷ ರೂ.ಗಳ ಸಾಲ ಸೌಲಭ್ಯವನ್ನು ಒದಗಿಸಲಾಗುವುದು. ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಘಟಕ ವೆಚ್ಚ 1 ಲಕ್ಷ ರೂ.ಗಳಿಗೆ 50,000 ರೂ.ಗಳ ಸಹಾಯಧನ ಹಾಗೂ ಶೇ. 4ರಷ್ಟು ಬಡ್ಡಿದರದಲ್ಲಿ 50,000 ರೂ.ಗಳ ಸಾಲ ಮಂಜೂರು ಮಾಡಲಾಗುವುದು. ಪ್ರೇರಣಾ(ಮೈಕ್ರೋ ಕ್ರೆಡಿಟ್ ಫೈನಾನ್ಸ್) ಯೋಜನೆಯಡಿ ನೋಂದಾಯಿತ ಸ್ವ–ಸಹಾಯ ಮಹಿಳಾ ಸಂಘದ 10 ಸದಸ್ಯರು ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು…
ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗ ವ್ಯಾಪ್ತಿಯಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಅಕ್ಟೋಬರ್ 24ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ತಾಳೆಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಇರಕಸಂದ್ರ, ಚೇಳೂರು ಟೌನ್, ಜಾಲಗುಣಿ, ಅರಿವೇಸಂದ್ರ, ನಿಂಬೇಕಟ್ಟೆ, ಮಾದೇನಹಳ್ಳಿ, ಇಡಕನಹಳ್ಳಿ, ಸಿ. ಅರಿವೇಸಂದ್ರ, ನಲ್ಲೂರು, ಕೊಡಿಯಾಲ ಉಪಸ್ಥಾವರಕ್ಕೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಅನ್ನಭಾಗ್ಯ ಈ ತಿಂಗಳು ವ್ಯತ್ಯಯವಾಗುವ ಸಾಧ್ಯತೆ ಕಂಡು ಬರುತ್ತಿತ್ತು, ಸರ್ವರ್ ಸಮಸ್ಯೆಯಿಂದ ಜನತೆ ಬೆಳಿಗ್ಗೆಯಿಂದ ರಾತ್ರಿವರೆಗೂ ನ್ಯಾಯಬೆಲೆ ಅಂಗಡಿಗಳ ಮುಂದೆ ರೇಷನ್ ಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ವ್ಯವಸ್ಥೆಯ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಕೊರಟಗೆರೆ ತಾಲೂಕಿನಲ್ಲಿ 85 ನ್ಯಾಯಬೆಲೆ ಅಂಗಡಿಗಳಿದ್ದು, ಪ್ರತಿ ತಿಂಗಳು 5 ನೇ ತಾರೀಖಿನಿಂದ ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರಿ ಗೋಡನ್ ಗಳಿಂದ ರೇಷನ್ ಸರಬರಾಜು ಆದರೆ, 30ನೇ ತಾರೀಕಿನ ಒಳಗೆ ವಿತರಣೆಯಾಗುತ್ತಿತ್ತು. ಆದರೆ ಈ ಬಾರಿ ಸರ್ವರ್ ಸಮಸ್ಯೆಯಿಂದ ಎರಡು ಮೂರು ದಿನಗಳಿಂದ ಬಿಪಿಎಲ್ ಕಾರ್ಡುದಾರರು ನ್ಯಾಯಬೆಲೆ ಅಂಗಡಿಯ ಮುಂಭಾಗ ಕುಳಿತು ಸರ್ವರ್ ಸಮಸ್ಯೆಯಿಂದ ಹಿಂತಿರುಗಿ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿ ವ್ಯವಸ್ಥೆಯ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಂದರೆ ಬಡತನ ರೇಖೆಗಿಂತ ಕೆಳಗಿನವರಿಗೆ (ಬಿಪಿಎಲ್ ಕಾರ್ಡುದಾರರು) ಈ ಸಲ ಸಮಯಕ್ಕೆ ಪಡಿತರ ದೊರೆಯುವುದು ಸಂದೇಹ, 5 ಕೆ.ಜಿ.…
ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯ ಕಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಬಿಜೆಪಿ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಆಗಿರುವ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸ್ವಾಗತಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಇವತ್ತು ಬೆಳಗ್ಗೆ 8 ಗಂಟೆಗೆ ಯೋಗೇಶ್ವರ್ ನನ್ನ ಭೇಟಿ ಮಾಡಿದ್ದರು. ನನ್ನ ರಾಜಕೀಯ ಕಾಂಗ್ರೆಸ್ ಪಕ್ಷದಿಂದ ಶುರುವಾಗಿದೆ, ನಾನು ಕಾಂಗ್ರೆಸ್ ನಲ್ಲಿ ಉಳಿದುಕೊಳ್ಳಬೇಕು ಎಂದರು. ತಕ್ಷಣ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿಚಾರ ತಿಳಿಸಿದೆ, ನಮ್ಮ ಪಕ್ಷದ ನಾಯಕನ ಸಮ್ಮುಖದಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದೇವೆ. ಮುಖ್ಯಮಂತ್ರಿಗಳ ಜೊತೆ ವಯಾನಾಡ್ ಗೆ ಹೋಗಬೇಕಿತ್ತು, ತುರ್ತು ಕಾರಣಕ್ಕೆ ನಾನು ವಯಾನಾಡಿಗೆ ಹೋಗುತ್ತಿಲ್ಲ. ಇವತ್ತು ಮರಳಿ ಗೂಡಿಗೆ ಯೋಗೇಶ್ವರ್ ಬಂದಿದ್ದಾರೆ, ಅವರಿಗೆ ಸ್ವಾಗತ ಎಂದ…
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ BSNL ಈಗ ಬಿಎಸ್ ಎನ್ ಎಲ್ ಹೊಸ 4G ಸೇವೆಗಳನ್ನು ಪರಿಚಯಿಸಿದ್ದು, 5G ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಈ ಹಿನ್ನೆಲೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಹೊಸ ಲೋಗೋ ಪರಿಚಯಿಸಿದರು. ರಾಷ್ಟ್ರೀಯ ಧ್ವಜವನ್ನು ಪ್ರತಿಬಿಂಬಿಸುವ ಕೇಸರಿ ಬಣ್ಣವನ್ನು ಮುಂಚೂಣಿಯಲ್ಲಿಟ್ಟುಕೊಂಡು ತ್ರಿವರ್ಣ ಮಾದರಿಯಲ್ಲಿ ಲೋಗೋ ಸಿದ್ಧಪಡಿಸಲಾಗಿದೆ. ಇದರೊಂದಿಗೆ 7 ಹೊಸ ಯೋಜನೆಗಳನ್ನು ಪರಿಚಯಿಸಲಾಗಿದೆ. ಅಲ್ಲದೇ, ಲೋಗೋದಲ್ಲಿನ ಕನೆಕ್ಟಿಂಗ್ ಇಂಡಿಯಾ ಅನ್ನು ಕನೆಕ್ಟಿಂಗ್ ಭಾರತ್ ಎಂದು ಬದಲಾಯಿಸಲಾಗಿದೆ. ಈ ಹಿಂದೆ ಇತರ ಕಂಪನಿಗಳ ರೀಚಾರ್ಜ್ ಯೋಜನೆಗಳಲ್ಲಿ ಬೆಲೆ ಏರಿಕೆಯಿಂದಾಗಿ ಜನರು ಬಿಎಸ್ ಎನ್ ಎಲ್ ನೆಟ್ ವರ್ಕ್‌ಗೆ ಬದಲಾಯಿಸುತ್ತಿದ್ದರು. ಈ ಸಂದರ್ಭದಲ್ಲಿ ಹಲವೆಡೆ ನೆಟ್ ವರ್ಕ್ ಸಮಸ್ಯೆ ತಲೆದೋರಿದೆ. ಕಂಪನಿಯು ಈ ಸಮಸ್ಯೆಗಳನ್ನು ನಿಭಾಯಿಸುತ್ತಿದೆ ಮತ್ತು ದೇಶದಲ್ಲಿ 5ಜಿ ಸೇವೆಗಳನ್ನು ಪರಿಚಯಿಸಲು ಪ್ರಯತ್ನಿಸುತ್ತಿದೆ. ಬಿಎಸ್ ಎನ್ ಎಲ್ ಖಾಸಗಿ ಸ್ಪರ್ಧಿಗಳಿಗಿಂತ ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದ್ದರೂ, ನೆಟ್‌ವರ್ಕ್ ಸಮಸ್ಯೆಗಳನ್ನು ಸರಿಪಡಿಸಿದರೆ ಅದು ಹೆಚ್ಚು…
ಸರಗೂರು: ತಾಲೂಕಿನ ಪಟ್ಟಣದ ಅಖಿಲ ಭಾರತ ವೀರಶೈವ ಮಹಾಸಭಾ ಕಚೇರಿಯಲ್ಲಿ ಮಂಗಳವಾರದಂದು ನಡೆದ ಸಭೆಯಲ್ಲಿ ತಾಲೂಕು ಘಟಕದ ನೂತನ ನಿರ್ದೇಶಕರು, (ಅಜೀವ ಸದಸ್ಯತ್ವ ) ಸಿದ್ದಪ್ಪ ಬಾಡಿಗೆ, ಜಯಕುಮಾರ್ ಶಿವಪುರ, ಶಿವಕುಮಾರ್ ಚಾಮಲಾಪುರ, ಶಿವಾನಂದಮೂರ್ತಿ ದಡದಹಳ್ಳಿ, ಕೆ.ಎಂ.ಸತೀಶ್ ತೆರಣೆಮುಂಟಿರವರನ್ನು ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಮಂಡಳಿರವರು ಸನ್ಮಾನಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಧ್ಯಕ್ಷ ವೀರಭದ್ರಪ್ಪ ( ನಟರಾಜ್ ) ಮಾತನಾಡಿ, ಎಲ್ಲರೂ ಜೊತೆಗೂಡಿ ಸಮಾಜ ಕಟ್ಟುವ ಕಡೆ ಹೆಜ್ಜೆ ಇಡೋಣ, ಎಲ್ಲಾ ಗ್ರಾಮದ ಯಜಮಾನರು ಹಾಗೂ ಮುಖಂಡರು ಮತ್ತು ಯುವಕರನ್ನು ಜೊತೆಗೂಡಿಸಿಕೊಂಡು ಸಮಾಜ ಏಳಿಗೆಗಾಗಿ ದುಡಿಯೋಣ ಎಂದು ಕಿವಿಮಾತು ಹೇಳಿದರು. ಸಭೆಯಲ್ಲಿ ಹಾಜರಿದ್ದ ಕಾರ್ಯಾಧ್ಯಕ್ಷರಾದ ಸಿ.ಕೆ.ಗಿರೀಶ್, ಕೋಶ ಅಧ್ಯಕ್ಷ ಎಸ್.ಎನ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ, ಉಪಾಧ್ಯಕ್ಷ ಸಿದ್ದಪ್ಪ, ಬಸವ ಬಳಗ ಸಮಿತಿ ಅಧ್ಯಕ್ಷ ಹಂಚೀಪುರ ಗಣಪತಿ,ಕಾರ್ಯದರ್ಶಿ ಬಸವರಾಜು, ನಿರ್ದೇಶಕರುಗಳಾದ ಬಾಡಗ ಮಾದಪ್ಪ, ಮಂಜು, ಶ್ರೀಕಂಠಪ್ಪ, ಸುರೇಶ್, ವಿಕೇಶ್, ಸಿದ್ದಪ್ಪ, ಮಹದೇವಪ್ಪ, ಯುವ ಸಮಿತಿ ಅಧ್ಯಕ್ಷ ನಂದೀಶ್, ಸಮಾಜದ ಮುಖಂಡರು ಭಾಗವಹಿಸಿದರು. ವರದಿ:…