Subscribe to Updates
Get the latest creative news from FooBar about art, design and business.
- 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ | ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
- ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್” ಆಗಸ್ಟ್ 7ರಂದು ಅದ್ದೂರಿ ರಿಲೀಸ್
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
Author: admin
ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 30ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005, ದೂ.ವಾ.ಸಂ.1902 ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಈ ಕಾಲದಲ್ಲಿ ಆಲ್ಕೋಹಾಲ್ ಸೇವನೆ ಮಾಡಲ್ಲ ಅಂದ್ರೆ ನೀನು ಮಾಡರ್ನ್ ಅಲ್ಲ ಅಂತಾರೆ. ಆದರೂ ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಉತ್ತಮವಲ್ಲ. ಮದ್ಯದ ಬಾಟಲಿಯ ಮೇಲೆಯೇ ಆಲ್ಕೋಹಾಲ್ ಆರೋಗ್ಯಕ್ಕೆ ಹಾನಿಕಾರಕ ಎಂದು ಬರೆದಿದ್ದರೂ, ಮದ್ಯ ಸೇವನೆ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗ್ತಲೇ ಇದೆ. ಇಂತಹ ಸಂದರ್ಭದಲ್ಲಿ ಆರೋಗ್ಯ ಹದಗೆಡದಂತೆ ಮದ್ಯ ಸೇವನೆ ಮಾಡಬೇಕಾದರೆ, ವಾರದಲ್ಲಿ ಎಷ್ಟು ಬಾರಿ ಮದ್ಯ ಸೇವನೆ ಮಾಡಬಹುದು ಎನ್ನುವುದನ್ನು ತಿಳಿದುಕೊಳ್ಳೋಣ. ನೀವು ಪಾರ್ಟಿ, ಸಮಾರಂಭಗಳಲ್ಲಿ ಈ ಕಡಿಮೆ ಅಪಾಯಕಾರಿ ಮದ್ಯವನ್ನು ಸೇವನೆ ಮಾಡುವವರಾದರೆ, ಆಸ್ಟ್ರೇಲಿಯಾ ಮತ್ತು ಫ್ರಾನ್ಸ್‌ನಲ್ಲಿ, ಪುರುಷರು ಮತ್ತು ಮಹಿಳೆಯರು ವಾರಕ್ಕೆ 10 ಕ್ಕಿಂತ ಹೆಚ್ಚು ಡ್ರಿಂಕ್ಸ್ ಸೇವಿಸಬಾರದು ಎಂದು ತಜ್ಞರು ಶಿಫಾರಸು ಮಾಡುತ್ತಾರೆ. ಕೆನಡಾದ ನಿಯಮಗಳಿಗೆ ಅನುಸಾರವಾಗಿ ಸ್ತ್ರೀಯಾಗಲಿ ಪುರುಷರಾಗಲಿ ವಾರಕ್ಕೆ ಎರಡು ಡ್ರಿಂಕ್ ಗಳಿಗಿಂತ ಹೆಚ್ಚು ಆಲ್ಕೋಹಾಲ್ ಸೇವಿಸಬಾರದು ಎಂದು ಸೂಚಿಸಲಾಗಿದೆ. ಭಾರತದಲ್ಲಿ ಮಾಡರೇಟ್ ಡ್ರಿಂಕಿಂಗ್ ಅನ್ನು ಸೂಚಿಸುವ ಯಾವುದೇ ಸಮಿತಿಗಳಿಲ್ಲ ಹಾಗಾಗಿ ದಿನಕ್ಕೆ ಇಂತಿಷ್ಟೇ ಡ್ರಿಂಕ್ಸ್ ಸೇವನೆ ಮಾಡಬೇಕು ಎನ್ನುವ ಕಟ್ಟುಪಾಡುಗಳನ್ನು…
ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುವುದು ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಡಿಎ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಈ ಮೂಲಕ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕ ಪ್ರಹಸನಕ್ಕೆ ಬಹುತೇಕ ತೆರೆಬಿದ್ದಂತಾಗಿದೆ. ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೋರಲು ಮಾವು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ. ಗುಂಡಮ್ಮ (60) ಮತ್ತು ಭುವನೇಶ್ವರಿ (10) ಮೃತ ದುರ್ದೈವಿಗಳಾಗಿದ್ದಾರೆ. ಗ್ರಾಮದ ಗುಂಡಮ್ಮ ವಾಂತಿಬೇದಿಯಿಂದ ಮಂಗಳವಾರ ಮನೆಯಲ್ಲಿ ಮೃತಪಟ್ಟಿದ್ದರು. ಭಾನುವಾರ ಬಾಲಕಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳು ಖಚಿತಪಡಿಸಿದ್ದಾರೆ. ರತ್ನಮ್ಮ ಎಂಬ ಮಹಿಳೆ ತೀವ್ರ ಅಸ್ವಸ್ಥಗೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ವೈದ್ಯಕೀಯ ಮಹಾವಿದ್ಯಾಲಯಕ್ಕೆ ಕಳುಹಿಸಲಾಗಿದೆ. ಇನ್ನು ರೇಣುಕಯ್ಯ ನೇತ್ರಾವತಿ ರತ್ನಮ್ಮ ಬಸವರಾಜು ಉಮೇಶ್ ಶ್ರೀಧರ್ ರುದ್ರಮ್ಮ ಸೇರಿದಂತೆ 10ಕ್ಕೂ ಹೆಚ್ಚು ಮಂದಿಗೆ ವಾಂತಿಭೇದಿ ಕಾಣಿಸಿಕೊಂಡಿದ್ದು ಚಿಕ್ಕನಾಯಕನಹಳ್ಳಿ ತಾಲೂಕು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ ಸಂಬಂಧ ಸ್ಪಷ್ಟನೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಚಂದ್ರಶೇಖರ್ ಅವರು, ಸೋರಲು ಮಾವು ಗ್ರಾಮದಲ್ಲಿ ಕಳೆದ ಎರಡು ದಿನಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಇಬ್ಬರಿಗೆ ಚಿಕ್ಕನಾಯಕನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ…
ಕಳೆದ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಉತ್ತರ ಕರಾವಳಿ, ಶಿವಮೊಗ್ಗ ಭಾಗಗಳಲ್ಲಿ ರಾತ್ರಿ ಅನಿರೀಕ್ಷಿತ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ. ಅರಬ್ಬಿ ಸಮುದ್ರದ ಕರಾವಳಿ ತೀರದಲ್ಲಿ ಗಾಳಿಯ ತಿರುಗುವಿಕೆಯ ಪರಿಣಾಮದಿಂದ ಈ ಮಳೆ ಇದ್ದಿರಬಹುದು. ಇವತ್ತು ಈಗಿನಂತೆ ಅಂತಹ ಗಾಳಿಯ ಚಲನೆ ಕಾಣಿಸುತ್ತಿಲ್ಲವಾದ್ದರಿಂದ ಭಾರಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಕರಾವಳಿ : ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಕ್ಟೊಬರ್ 25ರಿಂದ ಮಳೆ ಕಡಿಮೆಯಾಗಿ 26ರಿಂದ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಬಹುದು. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ…
ಬೆಂಗಳೂರು ನಗರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು, ಕರ್ನಾಟಕ ಸಂಭ್ರಮ–50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಿಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು “ಯುವಕವಿ ಗೋಷ್ಠಿ” ಗಳನ್ನು ಆಯೋಜಿಸುತ್ತಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಭಾಗದ ಆಸಕ್ತ ಯುವ ಕವಿಗಳು ಅಕ್ಟೋಬರ್ 30 ರೊಳಗೆ ಕನಿಷ್ಠರ 3 ಕವಿತೆಗಳನ್ನು ಕಳುಹಿಸಿಕೊಡಬಹುದಾಗಿದೆ. ಕವಿಗಳು ಕವಿತೆಗಳನ್ನು ಸಲ್ಲಿಸಲು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ http://karnatakasahithyaacademy.org ನಿಂದ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ ರಸ್ತೆ, ಬೆಂಗಳೂರು-560 002 ಅಥವಾ ದೂರವಾಣಿ ಸಂಖ್ಯೆ 080–2221 1730 / 2210 6460, 29601730 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಅಪಾರ ಆರ್ಥಿಕ ನಷ್ಟ ಉಂಟು ಮಾಡುತ್ತಿರುವ ಕಾಲು ಬಾಯಿ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿ 6 ತಿಂಗಳಿಗೊಮ್ಮೆ ದನ/ಎಮ್ಮೆ ಹಂದಿಗಳಿಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ವೈ.ಜಿ.ಕಾಂತರಾಜು ಎಂದು ಮಾಹಿತಿ ನೀಡಿದ್ದಾರೆ. ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಅ.21ರಿಂದ ನವೆಂಬರ್ 20 ರವರೆಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಲಸಿಕೆ ನೀಡುವುದರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಲ್ಲಾ ರೈತರು, ಪಶುಪಾಲಕರು, ಜಾನುವಾರು ಸಾಕಾಣಿಕೆದಾರರಿಗೆ ಅರಿವು ಮೂಡಿಸಬೇಕು ಎಂದರು. ತುಮಕೂರು ತಾಲ್ಲೂಕಿನ ಎಲ್ಲಾ ದನ/ಎಮ್ಮೆ ಹಂದಿಗಳಿಗೆ ಲಸಿಕೆ ಹಾಕಲು ತಾಲ್ಲೂಕು ಪಶುಪಾಲನಾ ಇಲಾಖೆಯು 20 ಪಶುವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಲಸಿಕೆ ಹಾಕಲು 60 ಲಸಿಕಾದಾರರನ್ನು ನಿಯೋಜಿಸಲಾಗಿದ್ದು, ಲಸಿಕೆದಾರರು ಮನೆಮನೆಗೆ ತೆರಳಿ…
ತುಮಕೂರು: ಭಾರತ ಚುನಾವಣಾ ಆಯೋಗವು ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ವೇಳಾಪಟ್ಟಿಯನ್ವಯ ನವೆಂಬರ್ 6ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನವೆಂಬರ್ 12 ಕಡೆಯ ದಿನವಾಗಿದ್ದು, ನವೆಂಬರ್ 13ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ನವೆಂಬರ್ 15ರವರೆಗೂ ಅವಕಾಶವಿದ್ದು, ನವೆಂಬರ್ 23ರಂದು(ಮತದಾನದ ಅವಶ್ಯವಿದ್ದರೆ) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮರು ಮತದಾನದ ಅವಶ್ಯವಿದ್ದರೆ ನವೆಂಬರ್ 25ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುವುದು. ನಂತರ ನವೆಂಬರ್ 26ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಜಿಲ್ಲೆಯ 9 ತಾಲ್ಲೂಕಿನ 27 ಗ್ರಾಮ ಪಂಚಾಯತಿಗಳ 30 ಸದಸ್ಯ ಸ್ಥಾನಕ್ಕೆ ನವೆಂಬರ್ 23ರಂದು ಚುನಾವಣೆ ನಡೆಯಲಿದ್ದು, ಗ್ರಾಮ ಪಂಚಾಯತಿಗಳ ವಿವರ ಇಂತಿದೆ. ಜಿಲ್ಲೆಯ ಚಿಕ್ಕನಾಯಕಹಳ್ಳಿ ತಾಲ್ಲೂಕು ದೊಡ್ಡ ಎಣ್ಣೇಗೆರೆ…
ತುಮಕೂರು: ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯನ್ನು ನವೆಂಬರ್ 10ರಂದು ನಡೆಸಲು ನಿಗದಿಪಡಿಸಿ ಅಕ್ಟೋಬರ್ 14ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಒಟ್ಟು 1,383 ಹಾಲು ಉತ್ಪಾದಕರ ಸಹಕಾರ ಸಂಘಗಳು ಸದಸ್ಯತ್ವ ಹೊಂದಿದ್ದು, ಈ ಪೈಕಿ 1,146 ಹಾಲು ಉತ್ಪಾದಕರ ಸಹಕಾರ ಸಂಘಗಳು ಈ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹವಿರುತ್ತವೆ. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 28(ಎ)5ರಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು; ತು.ಜಿ.ಸ.ಹಾ.ಒ., ಉಪವಿಧಿ ಸಂಖ್ಯೆ:15.2ರಲ್ಲಿ ವಿವರಿಸಿದಂತೆ ಒಕ್ಕೂಟದೊಡನೆ ಮಾಡಿಕೊಂಡಿರುವ ಒಪ್ಪಂದ ಮತ್ತು ಷರತ್ತುಗಳ ಪ್ರಕಾರ ಒಕ್ಕೂಟಕ್ಕೆ ಪ್ರತಿ ಸಹಕಾರ ವರ್ಷದಲ್ಲಿ ಎರಡು(2) ಪಾಳಿಯೂ ಸೇರಿ ಕನಿಷ್ಠ 270 ದಿವಸಗಳು ಸರಾಸರಿ ದಿನಕ್ಕೆ 150 ಕೆ.ಜಿ. ಹಾಲನ್ನು ಸರಬರಾಜು ಮಾಡಲು ತಪ್ಪಿರುವುದು; ಲೋಕಸಭಾ ಚುನಾವಣೆ 2024 ರ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸರ್ಕಾರದ…
ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಜಯಲಕ್ಷ್ಮೀಪುರ ರಂಜಿತಾ ವೆಂಕಟರಾಮು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಹಿಂದಿನ ಅಧ್ಯಕ್ಷ ಲಕ್ಷಿಮಾದಪ್ಪನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಗೆ ರಂಜಿತಾ ವೆಂಕಟರಾಮು ಮಾತ್ರ ನಾಮ ಪತ್ರ ಸಲ್ಲಿಸಿದ್ದರು. ಬೇರೆ ನಾಮಪತ್ರಗಳು ಸಲ್ಲಿಕೆಯಾಗದ ಕಾರಣ ಚುನಾವಣಾಧಿಕಾರಿ ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಅಧಿಕಾರಿ ಕೆ. ಉಷಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ಅವಿರೋಧ ಆಯ್ಕೆ ಪ್ರಕಟಿಸಿ ರಂಜಿತಾ ವೆಂಕಟರಾಮು ಗೆ ಅಧಿಕಾರ ವಹಿಸಿಕೊಟ್ಟರು. 12 ಮಂದಿ ಸದಸ್ಯರು ಹಾಜರಿದ್ದರು. ಮಾಜಿ ಅಧ್ಯಕ್ಷೆ ಲಕ್ಷ್ಮೀಮಾದಪ್ಪ ಗೈರು ಹಾಜರಾಗಿದ್ದರು. ನೂತನ ಅಧ್ಯಕ್ಷೆ ರಂಜಿತಾ ವೆಂಕಟರಾಮು ಮಾತನಾಡಿ, ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು. ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸುತ್ತೇನೆ. ಪಕ್ಷಾತೀತ ನೆಲೆಯಲ್ಲಿ ಅಭೀವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಚುನಾವಣಾಧಿಕಾರಿ ಕೆ. ಉಷಾ ಮಾತನಾಡಿ, ಸದಸ್ಯರು ಮತ್ತು ಅಧ್ಯಕ್ಷರು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ…