Subscribe to Updates
Get the latest creative news from FooBar about art, design and business.
- ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
- ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
- ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಸಂಕಲ್ಪ ಯಾತ್ರೆ
- ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
- ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
- ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
- ಮಹಾರಾಜವಾಡಿಯಲ್ಲಿ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ: ಜನಸ್ನೇಹಿ ಆಡಳಿತಕ್ಕೆ ಮುನ್ನುಡಿ
- ಬೀದರ್: ಔರಾದ್ ತಾಲೂಕಿನ ಕೊಳ್ಳುರ ಗ್ರಾಮದಲ್ಲಿ ಕ್ರಿಸ್ಮಸ್ ಹಬ್ಬದ ಸಡಗರ
Author: admin
ಓಸ್ಲೋ: ವೆನೆಜುವೆಲಾದ ಜನರ ಪ್ರಜಾಪ್ರಭುತ್ವದ ಹಕ್ಕುಗಳಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವವನ್ನು ರಕ್ಷಿಸಿ, ನ್ಯಾಯಯುತ ಹಾಗೂ ಶಾಂತಿಯುತ ಪರಿವರ್ತನೆ ತರಲು ಹೋರಾಡಿದ್ದಕ್ಕಾಗಿ ರಾಜಕಾರಣಿ, ಹಕ್ಕುಗಳ ಹೋರಾಟಗಾರ್ತಿ ಮಾರಿಯಾ ಕೊರಿನಾ ಮಚಾದೊ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಲಾಗಿದೆ. ಮಾರಾ ಕೊರಿನಾ ಮಚಾದೊ ಅವರು ವೆನೆಜುವೆಲಾದ ಖ್ಯಾತ ರಾಜಕಾರಣಿ, ಕೈಗಾರಿಕಾ ಎಂಜಿನಿಯರ್ ಮತ್ತು ಮಾನವ ಹಕ್ಕುಗಳ ವಕೀಲರು. 1967ರ ಅಕ್ಟೋಬರ್ 7ರಂದು ಕ್ಯಾರಕಾಸ್‌ನಲ್ಲಿ ಜನಿಸಿದರು. ಮನಶ್ಶಾಸ್ತ್ರಜ್ಞೆ ಕೊರಿನಾ ಪ್ಯಾರಿಸ್ಕಾ ಮತ್ತು ಉದ್ಯಮಿ ಹೆನ್ರಿಕ್ ಮಚಾದೊ ಜುಲೋಗಾ ದಂಪತಿಯ ಹಿರಿಯ ಪುತ್ರಿಯಾಗಿದ್ದಾರೆ. ಬೆಲ್ಲೊ ಕ್ಯಾಥೋಲಿಕ್ ವಿಶ್ವವಿದ್ಯಾನಿಲಯದಿಂದ ಕೈಗಾರಿಕಾ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಕ್ಯಾರಕಾಸ್ ನಲ್ಲಿರುವ ಇನ್ ಸ್ಟಿಟ್ಯೂಟೊ ಡಿ ಎಸ್ಟುಡಿಯೋಸ್ ಸುಪೀರಿಯರ್ಸ್ ಡಿ ಅಡ್ಮಿನಿಸ್ಟ್ರೇಷಿಯನ್ (ಐಇಎಸ್‌ಎ) ನಿಂದ ಫೈನಾನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಔರಾದ್ : ನಗರದ ಪಟ್ಟಣ ಪಂಚಾಯತಿಯನ್ನು ಪುರಸಭೆ ಮೇಲ್ದರ್ಜೆಗೇರಿಸಲು ಕಾಂಗ್ರೆಸ್ ಸರಕಾರ ನಿರ್ಣಯ ಕೈಗೊಂಡಿದೆ ಎಂದು ನಿವೃತ್ತ ಸಿಎಂ ಅಪರ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಈ ಹಿಂದೆ ಬಿಜೆಪಿ ಅವಧಿಯಲ್ಲಿ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಲು ಆಗಲಿಲ್ಲ. ಈ ಭಾಗದ ಜನರ ಬಹುದಿನಗಳ ಬೇಡಿಕೆ ಸರಕಾರದ ಗಮನಕ್ಕೆ ತಂದಿದ್ದೇನೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರ ಪ್ರಯತ್ನದ ಫಲದಿಂದ ಔರಾದ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡದ ಕೆಲಸಗಳು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಆದರೆ ಕೆಲವರು ಎಲ್ಲವೂ ನಾನೇ ಮಾಡುತ್ತಿದ್ದೇನೆ ಎಂದು ಪ್ರಚಾರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿ ಅವರು ಯಾಕೆ ಮಾಡಿಲ್ಲ ಎಂದು…
ತುಮಕೂರು: ಹಿರಿಯ ನಾಗರಿಕರಿಗಾಗಿ ತಂದಿರುವ ಹಿರಿಯ ನಾಗರಿಕರ ಹಾಗೂ ಪಾಲಕರ ಜೀವನ ಸಂರಕ್ಷಣಾ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಗುರುವಾರ ವಿಷಾದಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಿರಿಯ ನಾಗರಿಕರ ಕಾಯ್ದೆಯು ಹಿರಿಯ ಜೀವಗಳಿಗೆ ನೆರವಾಗುತ್ತಿಲ್ಲ ಎಂದರು. ಹಿರಿಯ ನಾಗರಿಕರು ಚರ, ಸ್ಥಿರಾಸ್ತಿಯನ್ನು ತಮ್ಮ ಅಂತ್ಯ ಕಾಲದವರೆಗೂ ಯಾರಿಗೂ ವರ್ಗಾಯಿಸಬಾರದು. ಮಕ್ಕಳಿಗೆ ಆಸ್ತಿ ವಿಲೇವಾರಿಯಾದ ನಂತರ ನೋಡಿಕೊಳ್ಳಲು ನಿರ್ಲಕ್ಷ್ಯ ವಹಿಸಿದರೆ ಅವರ ಹೆಸರಿಗೆ ಮಾಡಿರುವ ಖಾತೆ ರದ್ದುಪಡಿಸುವ, ಮರು ನೋಂದಣಿ ಮಾಡುವ ಷರತ್ತನ್ನು ಹಕ್ಕು ಪತ್ರದಲ್ಲಿ ಸೇರಿಸಬೇಕು ಎಂದು ಸಲಹೆ ನೀಡಿದರು. ಮೌಲ್ಯರಹಿತ ಶಿಕ್ಷಣದಿಂದ ಮಕ್ಕಳು ಹಿರಿಯರನ್ನು ಅಸಡ್ಡೆಯಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಮೌಲ್ಯಯುತ…
ತುಮಕೂರು: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ ನಡೆದು 13 ವರ್ಷಗಳಾದರೂ ಈವರೆಗೆ ನ್ಯಾಯ ಸಿಕ್ಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು. ‘ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ’ಯು ರಾಜ್ಯವ್ಯಾಪಿ ‘ನ್ಯಾಯಕ್ಕಾಗಿ ಜನಾಗ್ರಹ ದಿನ’ಕ್ಕೆ ಕರೆ ನೀಡಿತ್ತು. ಈ ಕೆರೆಯ ಮೇರೆಗೆ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಲಾಯಿತು. ಧರ್ಮಸ್ಥಳದಲ್ಲಿ ದಾಖಲಾದ ನೂರಾರು ಅಸಹಜ ಸಾವು, ಕೊಲೆ, ಅತ್ಯಾಚಾರ, ಭೂ ಹಗರಣ, ದಲಿತರಿಗೆ ಸೇರಿದ ಭೂಮಿ ಕಬಳಿಕ ನಡೆಯುತ್ತಿದ್ದರೂ ಸಂತ್ರಸ್ತರಿಗೆ ಈವರೆಗೂ ನ್ಯಾಯ ಸಿಕ್ಕಿಲ್ಲ. ಸಾಲದ ಹೆಸರಿನಲ್ಲಿ ಬಡ್ಡಿ ದಂಧೆ ನಡೆಸುವವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ಕಿಡಿಕಾರಿದರು. ಲೇಖಕಿ ಬಾ.ಹ.ರಮಾಕುಮಾರಿ, ಸೌಜನ್ಯ ಅತ್ಯಾಚಾರ, ಕೊಲೆಯಾಗಿ 13 ವರ್ಷಗಳು ಸಂದರೂ ನೈಜ ಆರೋಪಿಗಳನ್ನು ಬಂಧಿಸದಿರುವುದು ನಾಗರಿಕ ಸಮಾಜಕ್ಕೆ ಮಾಡಿರುವ ಅಪಮಾನ. ಈಗ ಆರ೦ಭವಾಗಿರುವ ಎಸ್‌ಐಟಿ…
ಚಿಕ್ಕಮಗಳೂರು: ರಾಜ್ಯದಲ್ಲಿ ಸಾಮಾಜಿಕ–ಶೈಕ್ಷಣಿಕ ಸರ್ವೆ ಹಿನ್ನೆಲೆ ಸರ್ವೆಗೆ ಹೋದ ಶಿಕ್ಷಕನ ಮೇಲೆ ಬೀದಿ ನಾಯಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ (54) ನಾಯಿ ದಾಳಿಗೆ ಒಳಗಾದ ಶಿಕ್ಷಕರಾಗಿದ್ದಾರೆ. ಬೀದಿನಾಯಿ ಕಾಲಿನ ಭಾಗಕ್ಕೆ ಕಡಿದಿದೆ. ಸುಮಾರು ಒಂದು ಇಂಚು ಆಳಕ್ಕೆ ಬೀದಿ ನಾಯಿ ಹಲ್ಲು ನಾಟಿತ್ತು. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮಕ್ಕೆ ಸರ್ವೆಗೆ ಹೋದಾಗ ಘಟನೆ ನಡೆದಿದೆ. ಗಾಯಾಳು ಕೃಷ್ಣಪ್ಪಗೆ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹಲವು ಮನೆಗಳಲ್ಲಿ U.H.I.D. ನಂಬರ್ ಪಂಡಿಂಗ್ ತೋರಿಸುತ್ತಿದೆ. ಮೀಟರ್ ಬೋರ್ಡಿನ ಆರ್.ಆರ್. ನಂಬರ್ ತರಲು ಹೋದಾಗ ನಾಯಿ ದಾಳಿ ನಡೆಸಿದೆ. ಸರ್ವೇಯಲ್ಲಿನ ತಾಂತ್ರಿಕ ದೋಷದ ಹಿನ್ನೆಲೆ ಸರ್ಕಾರದ ವಿರುದ್ದ ಶಿಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮೈಸೂರು: ದಸರಾ ಹಬ್ಬದ ಸಂದರ್ಭದಲ್ಲಿ ಬಲೂನ್ ಗಳನ್ನು ಮಾರಾಟ ಮಾಡಲು ಕಲಬುರಗಿಯಿಂದ ಮೈಸೂರಿಗೆ ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ದಸರಾ ವೇಳೆ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಕಲಬುರಗಿಯ ಸೂಕ್ಷ್ಮ ಅಲೆಮಾರಿ ಸಮುದಾಯಕ್ಕೆ ಸೇರಿದ ಸುಮಾರು 50 ಕುಟುಂಬಗಳು ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಾತ್ಕಾಲಿಕವಾಗಿ ಡೇರೆ ಹಾಕಿ ತಂಗಿದ್ದವು. ಈ ಪೈಕಿ ಒಂದು ಕುಟುಂಬಕ್ಕೆ ಸೇರಿದ 10 ವರ್ಷದ ಬಾಲಕಿಯೊಬ್ಬಳು ರಾತ್ರಿ ವೇಳೆ ಕಾಣೆಯಾಗಿದ್ದಳು. ಡೇರೆಯೊಳಗೆ ಮಲಗಿದ್ದ ವೇಳೆ ರಾತ್ರಿ ಮಳೆ ಬಂದಿದ್ದು, ಹೀಗಾಗಿ ಬಾಲಕಿಯ ಪೋಷಕರು ಎದ್ದು ನೋಡಿದಾಗಿ ಬಾಲಕಿ ನಾಪತ್ತೆಯಾಗಿರುವುದು ಗೊತ್ತಾಗಿದೆ. ಕೂಡಲೇ ಕುಟುಂಬಸ್ಥರು ಮಳೆಯಲ್ಲೇ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಸ್ವಲ್ಪ ಸಮಯದ ನಂತರ ಬಾಲಕಿ ಡೇರೆಯಿಂದ ಸುಮಾರು 50 ಮೀಟರ್ ದೂರದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಮಣ್ಣಿನಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು, ಅಪ್ರಾಪ್ತೆ ಮೈ ಮೇಲೆ ಬಟ್ಟೆ ಇರದ ಕಾರಣ ಬಾಲಕಿ…
ಬೆಂಗಳೂರು: ‘ಬಿಗ್ ಬಾಸ್ ಕನ್ನಡ’ ಚಿತ್ರೀಕರಣ ನಡೆಯುತ್ತಿರುವ “ಜಾಲಿವುಡ್ ಆವರಣದ ಮೇಲಿನ ಬೀಗ ಮುದ್ರೆಯನ್ನು ತೆರವುಗೊಳಿಸಲು ನೆರವಾದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನಟ ಮತ್ತು ನಿರೂಪಕ ಕಿಚ್ಚ ಸುದೀಪ್ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಿಚ್ಚ ಸುದೀಪ್, ಸಮಯಕ್ಕೆ ಸರಿಯಾಗಿ ಬೆಂಬಲ ಸೂಚಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ. ಇತ್ತೀಚಿನ ಅವ್ಯವಸ್ಥೆ ಅಥವಾ ಅಡಚಣೆಗಳಲ್ಲಿ ಬಿಗ್ ಬಾಸ್ ಕನ್ನಡ ಭಾಗಿಯಾಗಿಲ್ಲ ಅಥವಾ ಭಾಗವಾಗಿರಲಿಲ್ಲ ಎಂಬುದನ್ನು ಒಪ್ಪಿಕೊಂಡಿದ್ದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸಲು ಬಯಸುತ್ತೇನೆ. ನನ್ನ ಕರೆಗೆ ತಕ್ಷಣ ಸ್ಪಂದಿಸಿದ್ದಕ್ಕಾಗಿ ಡಿಸಿಎಂ ಅವರಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ನಲ್ಪಾಡ್ ಅವರ ಸಮರ್ಪಿತ ಪ್ರಯತ್ನಗಳಿಗಾಗಿಯೂ ಬಹಳ ಧನ್ಯವಾದಗಳು. ಬಿಬಿಕೆ12 ಈಸ್ ಹಿಯರ್ ಟು ಸ್ಟೇ” ಎಂದು ಟ್ವೀಟ್ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಹೆಚ್ ಹೆಚ್ ಪಡಿತರಕ್ಕೆ ಪರ್ಯಾಯವಾಗಿ ಫಲಾನುಭವಿಗಳಿಗೆ ಇಂದಿರಾ ಆಹಾರ ಕಿಟ್ ಗಳನ್ನು (ಪೌಷ್ಠಿಕ ಆಹಾರದ ಕಿಟ್) ವಿತರಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೆಚ್ಚುವರಿಯಾಗಿ ನೀಡಲಾಗುವ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ (ಪೌಷ್ಠಿಕ ಆಹಾರ ಕಿಟ್) ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ. ಇಂದಿರಾ ಕಿಟ್ ನಲ್ಲಿ 1 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ’ ನೀಡಲು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ. ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ. ನೂತನ ನೀತಿಯ ಅನ್ವಯ ಇದರನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ರಾಮನಗರ: ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ಕೊನೆಗೂ ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮದ ಉಲ್ಲಂಘನೆ ಮೇರೆಗೆ ಮುಚ್ಚಲ್ಪಟ್ಟಿದ್ದ ಬಿಗ್ ಬಾಸ್ ಮನೆ ಕೊನಗೂ ತೆರೆಯಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಮನೆಯನ್ನು ತೆರೆಯಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್.ಪಿ.ಶ್ರೀನಿವಾಸ್ ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್ ಸ್ಟುಡಿಯೋದ ಗೇಟ್ ಸೀಲ್ ಓಪನ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC