Author: admin

ತುಮಕೂರು: ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯಲ್ಲಿ ನಡೆದಿದೆ ಎನ್ನಲಾದ ವ್ಯಕ್ತಿಯೊಬ್ಬರ ಸಾವಿನ (ಲಾಕಪ್ ಡೆತ್) ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಈ ಬಗ್ಗೆ ಸಿಐಡಿ ತನಿಖೆಗೆ ಶುಕ್ರವಾರ ಆದೇಶಿಸಿದ್ದಾರೆ. ಯಳನಾಡು ಗ್ರಾಮದ ಕಾಂತರಾಜು (50) ಎಂಬುವವರನ್ನು ಜೂಜಾಟದ ಆರೋಪದ ಮೇಲೆ ಪೊಲೀಸರು ವಿಚಾರಣೆಗೆಂದು ಠಾಣೆಗೆ ಕರೆತಂದಿದ್ದರು. ಬೆಳಗಿನ ಜಾವ ಸುಮಾರು 1:30ರ ಸುಮಾರಿಗೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂತರಾಜು ಮೃತಪಟ್ಟಿದ್ದಾರೆ. ಈ ಸಾವು ಪೊಲೀಸ್ ದೌರ್ಜನ್ಯದಿಂದಲೇ ಸಂಭವಿಸಿದೆ ಎಂದು ಆರೋಪಿಸಿರುವ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ಹುಳಿಯಾರು ಪೊಲೀಸ್ ಠಾಣೆಯ ಮುಂದೆ ಶವವನ್ನಿಟ್ಟು ಪ್ರತಿಭಟನೆ ನಡೆಸಿದರು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ನಂತರ ತುಮಕೂರು ಎಸ್ಪಿ ಅವರು ಸೂಕ್ತ ತನಿಖೆಯ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರಕರಣದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, “ವಿಚಾರಣೆಯ ಸಮಯದಲ್ಲಿ ಸಾವು ಸಂಭವಿಸಿರುವುದು ದುರದೃಷ್ಟಕರ. ಸಾವಿಗೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.…

Read More

ಹುಳಿಯಾರು (ಚಿಕ್ಕನಾಯಕನಹಳ್ಳಿ): ಪೊಲೀಸ್ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ನಡೆದಿದೆ. ಪೊಲೀಸರ ಹೊಡೆತದಿಂದಲೇ ಈ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಪೊಲೀಸ್ ಠಾಣೆಯ ಮುಂದೆ ಶವವಿಟ್ಟು ಗುರುವಾರ ರಾತ್ರಿ ಪ್ರತಿಭಟನೆ ನಡೆಸಿದರು. ಯಳನಡು ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ ಇಸ್ಪೀಟ್ ಆಟವಾಡುತ್ತಿದ್ದವರ ಮೇಲೆ ದಾಳಿ ನಡೆಸಿದ್ದ ಹುಳಿಯಾರು ಪೊಲೀಸರು, ಕಾಂತರಾಜು (50) ಸೇರಿದಂತೆ ಐದು ಮಂದಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದಿದ್ದರು. ವಿಚಾರಣೆ ಮುಗಿಸಿ ಹೊರಬಂದ ಕಾಂತರಾಜು ಅವರು ಠಾಣೆಯ ಮುಂದೆಯೇ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕಾಂತರಾಜು ಅವರ ಸಾವಿಗೆ ಪೊಲೀಸರ ಕಿರುಕುಳ ಮತ್ತು ಹಲ್ಲೆಯೇ ಕಾರಣ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಪೊಲೀಸರು ಭಯ ಹುಟ್ಟಿಸಿ ಹೊಡೆದಿದ್ದರಿಂದಲೇ ಈ ಸಾವು ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು ಮತ್ತು ಯಳನಡು ಗ್ರಾಮಸ್ಥರು, ಠಾಣೆಯ ಮುಂದೆ ಜಮಾಯಿಸಿ…

Read More

ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಸಮೀಪದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ ಶುಕ್ರವಾರ ನಸುಕಿನ ವೇಳೆ ಘೋರ ದುರಂತವೊಂದು ಸಂಭವಿಸಿದೆ. ದಿನನಿತ್ಯದ ತಪಾಸಣೆಯ ಭಾಗವಾಗಿ ನೀರಾನೆಯನ್ನು ಪರೀಕ್ಷಿಸಲು ತೆರಳಿದ್ದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (26) ಅವರು ನೀರಾನೆ ದಾಳಿಗೆ ಒಳಗಾಗಿ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರಿನ ಬನ್ನೇರುಘಟ್ಟದವರಾದ ಡಾ.ಸಮೀಕ್ಷಾ ರೆಡ್ಡಿ ಅವರು ಇತ್ತೀಚೆಗಷ್ಟೇ ತ್ಯಾವರೆಕೊಪ್ಪ ಮೃಗಾಲಯಕ್ಕೆ ಪಶುವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದರು. ಗುರುವಾರ ತಡರಾತ್ರಿ ಸುಮಾರು 11:30 ರ ಸುಮಾರಿಗೆ ಅವರು ಗರ್ಭಿಣಿಯಾಗಿದ್ದ ನೀರಾನೆಯ ಆರೋಗ್ಯ ತಪಾಸಣೆಗಾಗಿ ಅದರ ಆವರಣದ ಒಳಗೆ ತೆರಳಿದ್ದರು. ಈ ಸಂದರ್ಭದಲ್ಲಿ ನೀರಾನೆ ದಿಢೀರ್ ಎಂದು ಅವರ ಮೇಲೆ ದಾಳಿ ಮಾಡಿದೆ. ದಾಳಿಯ ತೀವ್ರತೆಗೆ ಸಮೀಕ್ಷಾ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ ಸುಮಾರು 6:30ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಈ ದುರ್ಘಟನೆಯ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತೀವ್ರ ಆಘಾತ…

Read More

ತಿಪಟೂರು:  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ ನಾಲ್ಕು ದಿನಗಳ ಕಾಲ ನಡೆಯಲಿದೆ ಅಂತರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕ್ರೀಡಾಕೂಟಕ್ಕೆ ಮಾರ್ಚ್ 26ರಂದು ಕೇಂದ್ರ ಸಚಿವ ವಿ.ಸೋಮಣ್ಣ ಚಾಲನೆ ನೀಡಲಿದ್ದಾರೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆ ರುದ್ರಪ್ಪನವರ ಸಮ್ಮುಖದಲ್ಲಿ ಟಿ.ಎಸ್. ಶಿವಪ್ರಸಾದ್ ತಿಳಿಸಿದರು. 2.0 ಅಂತರವಿಟಿಯು ಕ್ರೀಡಾಕೂಟವನ್ನು ಆಯೋಜಿಸಲು ನಮ್ಮ ಸಂಸ್ಥೆ ತಯಾರಿ ನಡೆಸುತ್ತಿದೆ, ಹಾಗೂ ವಿದ್ಯಾರ್ಥಿಗಳ ಪ್ರದರ್ಶನಕ್ಕೆ ಈ ಕ್ರೀಡಾಕೂಟ ಮಹತ್ವದ ವೇದಿಕೆಯಾಗಿದೆ ಎಂದರು. ಮಾರ್ಚ್26ರಂದು ಮಧ್ಯಾಹ್ನ 3 ಗಂಟೆಗೆ ತಿಪಟೂರು ಕೆಂಪಮ್ಮ ದೇವಿ ದೇವಾಲಯದಿಂದ ಭವ್ಯ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಈ ಕ್ರೀಡಾ ಕೂಟದಲ್ಲಿ  2 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ, 250 ಕೋಚ್ ಗಳು ಆಗಮಿಸಲಿದ್ದಾರೆ. ರಾತ್ರಿ ಎಂಟು ಗಂಟೆವರೆಗೆ ಪೈಡ್ಲಲೈಟ್ ಕ್ರೀಡಾಕೂಟ ನಡೆಯಲಿದೆ ಎಂದರು. ಕೇಂದ್ರ ಸಚಿವ ವಿ.ಸೋಮಣ್ಣ  ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದು, ಸಂಸ್ಥೆ ಅಧ್ಯಕ್ಷ ಪಿ.ಕೆ.,ತಿಪ್ಪೇರುದ್ರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಷಡಕ್ಷರಿ, ಇಲಾಖೆ ಆಯುಕ್ತ ಆರ್.ಚೇತನ್  ಏಕಲವ್ಯ ಪ್ರಶಸ್ತಿ ವಿಜೇತ…

Read More

ನವದೆಹಲಿ: ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದು, “ಅವರಿಬ್ಬರಿಗೂ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ವಿಶಾಲ ಹೃದಯವಿರಲಿಲ್ಲ” ಎಂದು ಟೀಕಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವಗಳನ್ನು ಎತ್ತಿಹಿಡಿಯುವ ಉದ್ದೇಶದಿಂದ ದೇವೇಗೌಡರನ್ನು ಪ್ರಧಾನಿಯನ್ನಾಗಿ ಮತ್ತು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿತ್ತು. ನಮ್ಮ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಆದರೆ, ತಮಗೆ ಸಿಕ್ಕ ಅಧಿಕಾರ ಮತ್ತು ಸ್ಥಾನಮಾನಗಳನ್ನು ನಿಭಾಯಿಸುವ ಸಾಮರ್ಥ್ಯ ಹಾಗೂ ಧೈರ್ಯ ಅವರಿಬ್ಬರಲ್ಲೂ ಇರಲಿಲ್ಲ ಎಂದು ಕಿಡಿಕಾರಿದರು. “ಮೈತ್ರಿ ಸರ್ಕಾರವನ್ನು ತಾಳ್ಮೆ ಮತ್ತು ಸಂತೋಷದಿಂದ ಮುನ್ನಡೆಸುವುದು ಅವರ ಜವಾಬ್ದಾರಿಯಾಗಿತ್ತು. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗದ ಕಾರಣಕ್ಕಾಗಿಯೇ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು” ಎಂದು ಶಿವಕುಮಾರ್ ವಿಶ್ಲೇಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಅಂತಿಮ…

Read More

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿರುವ ಜಗದ್ಗುರು ಶಿವಾನಂದ ಮಠದ ಸ್ವಾಮೀಜಿ ದೇವೇಂದ್ರಪ್ಪ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದ ನಡುವೆಯೇ ಈ ಘಟನೆ ಸಂಭವಿಸಿರುವುದು ಭಕ್ತರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೃತ ದೇವೇಂದ್ರಪ್ಪ ಅವರು ಈ ಹಿಂದೆ ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಂತರ ಜೀವನದಲ್ಲಿ ವೈರಾಗ್ಯ ತಾಳಿದ ಅವರು ದೀಕ್ಷೆ ಪಡೆದು ಮಠವನ್ನು ಸ್ಥಾಪಿಸಿದ್ದರು. ಬಸ್ಸಾಪುರ ಮಠದ ಭಜನಾ ಕೋಣೆಯಲ್ಲಿ ಸ್ವಾಮೀಜಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.  ಮಠದ ಭಕ್ತರು ಮತ್ತು ಗ್ರಾಮಸ್ಥರು ಈ ಅನಿರೀಕ್ಷಿತ ಘಟನೆಯಿಂದ ಆತಂಕಕ್ಕೊಳಗಾಗಿದ್ದಾರೆ. ನಮ್ಮತುಮಕೂರಿನ…

Read More

ಸರಗೂರು: ತಾಲೂಕಿನ ಶಕ್ತಿದೇವತೆ ಶ್ರೀ ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಅಂಗವಾಗಿ ಗುರುವಾರ ಕಪಿಲ ನದಿ ದಡದಲ್ಲಿ ಹಾಲುಗಡ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಚಂದ್ರಮಾನ ಯುಗಾದಿ ಹಬ್ಬದ ದಿನದಂದು ಬೆಳಿಗ್ಗೆಯೇ ದೇವತೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಚಿಕ್ಕದೇವಮ್ಮನ ಬೆಟ್ಟದಿಂದ ಅಮ್ಮನವರ ಉತ್ಸವ ಮೂರ್ತಿಯನ್ನು ಕರೆತಂದು ನದಿ ಬಳಿಯ ಹಾಲುಗಡುವಿನ ಜಪದಕಟ್ಟೆಯಲ್ಲಿ ಕೂರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಜಪದಕಟ್ಟೆಯಲ್ಲಿ ಕೂರಿಸಿದ ಬಳಿಕ ದೇವರಿಗೆ ಹೋಮ–ಹವನಗಳು ನಡೆದವು. ನಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ವಾದ್ಯಗೋಷ್ಠಿಗಳು ಮೊಳಗಿದವು. ಸುಮಾರು 10ಕ್ಕೂ ಹೆಚ್ಚು ಸತ್ತಿಗೆಗಳು ಮೆರವಣಿಗೆ ನಡೆಸಲಾಯಿತು. ಭಕ್ತರು ಇಷ್ಟಾರ್ಥ ಸಿದ್ಧಿಗಾಗಿ ಮಾಡಲಾದ ಹರಕೆಯನ್ನು ತೀರಿಸಿದರು. ಸರಗೂರಿನ ಪೊಲೀಸ್ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಪಿಎಸ್‌ ಐ ಕಿರಣ್, ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಜಾತ್ರಾ ಸಮಿತಿಯಿಂದ ಜಾತ್ರಾವರಣದಲ್ಲಿ ಯಾವುದೇ ಪ್ರಾಣಿಬಲಿ ಮಾಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಾಗೃತಿ ಮೂಡಿಸಿದ್ದು,…

Read More

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ದಿನಕ್ಕೆ ಬೇಕಿರುವ 44,000 ಸಿಲಿಂಡರ್‌ ಗಳ ಪೈಕಿ ಕೇವಲ 9,000 ಸಿಲಿಂಡರ್‌ಗಳು ಮಾತ್ರ ಲಭ್ಯವಾಗುತ್ತಿವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬುಧವಾರ ವಿಧಾನ ಪರಿಷತ್ತಿನಲ್ಲಿ ಸಿಲಿಂಡರ್ ಲಭ್ಯತೆ ಕುರಿತು ಮಾಹಿತಿ ನೀಡಿದ ಸಚಿವರು, ಗೃಹ ಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ದಿನಕ್ಕೆ ಅಗತ್ಯವಿರುವ 3,52,921 ಗೃಹ ಬಳಕೆಯ ಸಿಲಿಂಡರ್‌ಗಳನ್ನು ತೈಲ ಕಂಪನಿಗಳು ಸಮರ್ಪಕವಾಗಿ ಪೂರೈಸುತ್ತಿವೆ. ಆದರೆ, ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಮಾತ್ರ ಶೇ. 20ರಷ್ಟು ಮಾತ್ರ ಲಭ್ಯತೆ ಇದೆ ಎಂದು ಸ್ಪಷ್ಟಪಡಿಸಿದರು. ಸಂಕಷ್ಟದಲ್ಲಿ ಹೋಟೆಲ್ ಉದ್ಯಮ: ವಾಣಿಜ್ಯ ಸಿಲಿಂಡರ್‌ಗಳ ಕೊರತೆಯಿಂದಾಗಿ ಹೋಟೆಲ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ಹೋಟೆಲ್ ಮಾಲೀಕರಿಗೆ ತಾತ್ಕಾಲಿಕವಾಗಿ ವಿದ್ಯುತ್ ಸ್ಟೌವ್ ಅಥವಾ ಇತರ ಪರ್ಯಾಯ ವ್ಯವಸ್ಥೆಗಳನ್ನು ಬಳಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಇರಾನ್‌ನಿಂದ ಬರಬೇಕಿರುವ 16 ಎಲ್‌ಪಿಜಿ ಟ್ಯಾಂಕರ್ ಹಡಗುಗಳು ಭಾರತ…

Read More

ಬೀದರ್: ಬೇಸಿಗೆಯ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಔರಾದ್ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು ತಿಳಿಸಿದ್ದಾರೆ. ತಾಲೂಕು ಮಟ್ಟದ ಸಂಪರ್ಕ: ಸಾರ್ವಜನಿಕರು ತಾಲೂಕು ಪಂಚಾಯತ್ ಸಹಾಯವಾಣಿ ಕೇಂದ್ರದ ಅಧಿಕಾರಿ ರಾಜಶೇಖರ (ಮೊಬೈಲ್ ಸಂಖ್ಯೆ: 9448196200) ಅವರನ್ನು ಸಂಪರ್ಕಿಸಿ ತಮ್ಮ ದೂರುಗಳನ್ನು ದಾಖಲಿಸಬಹುದು. ಗ್ರಾಮ ಪಂಚಾಯತಿವಾರು ಅಭಿವೃದ್ಧಿ ಅಧಿಕಾರಿಗಳ (PDO) ಸಂಪರ್ಕ ವಿವರ: ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಈ ಕೆಳಗಿನ ಆಯಾ ಗ್ರಾಮ ಪಂಚಾಯತಿ ಪಿಡಿಒಗಳನ್ನು ಸಂಪರ್ಕಿಸಲು ಕೋರಲಾಗಿದೆ: ಬಾದಲಗಾಂವ: ಸಂಗಾರೆಡ್ಡಿ — 9731175395 ಬೆಳಕೂಣಿ(ಚೌ): ಆತ್ಮಾರಾಮ ಪಾಟೀಲ್ — 7676140609 ಭಂಡಾರಕಮಟಾ: ಮಲ್ಲಿಕಾರ್ಜುನ — 9611810466 ಬೋಂತಿ: ರಮೇಶಕುಮಾರ — 9591585111 ಚಿಕ್ಲಿ(ಜೆ): ದತ್ತಾತ್ರಿ ಪಾಟೀಲ — 9620308566 ಚಿಂತಾಕಿ: ನಿರ್ಮಾಲಾ — 8861232759 ಧೂಪತಮಹಾಗಾಂವ: ನಂದಕೀಶೋರ — 8553169547 ಎಕಂಬಾ: ಶಶಿಕಪೂರ — 9739748009…

Read More

ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತಂಗಿ ಜವರಮ್ಮ (88) ಅವರು ಗುರುವಾರ (ಮಾರ್ಚ್ 19) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜವರಮ್ಮ ಅವರಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮ್ಮ ಪ್ರೀತಿಯ ತಂಗಿಯ ಅಗಲಿಕೆಗೆ ಹೆಚ್.ಡಿ. ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಕಂಬನಿ ಮಿಡಿದಿದ್ದಾರೆ. ಕುಟುಂಬದ ಸದಸ್ಯರು ಮತ್ತು ಜೆಡಿಎಸ್ ಕಾರ್ಯಕರ್ತರು ಜವರಮ್ಮ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ. ಮೃತ ಜವರಮ್ಮ ಅವರ ಅಂತ್ಯಕ್ರಿಯೆಯು ಇಂದು ಸಂಜೆ ಹೊಳೆನರಸೀಪುರ ತಾಲ್ಲೂಕಿನ ಬಸವನಾಯಕನಹಳ್ಳಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More