Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ತಾವು ಬೆಳೆಯುವ ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸಲಿಚ್ಛಿಸುವ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಅನುಷ್ಟಾನ ಮಾಡಲು ಓರಿಯಂಟಲ್ ಜನರಲ್ ಇನ್ಯೂರೆನ್ಸ್ ಕಂಪನಿಯನ್ನು ನಿಗದಿ ಮಾಡಲಾಗಿದೆ. ಅನಿಶ್ಚಿತ ಕೃಷಿಯಲ್ಲಿ ನಿಶ್ಚಿತ ಆದಾಯ ತರುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು 2024–25ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮಳೆ ಅಥವಾ ಇತರ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಠ ಶೇ.25ರಷ್ಟು ಬೆಳೆ ವಿಮೆ ನಷ್ಟ ಹಾಗೂ ಸ್ಥಳ ನಿರ್ಧಿಷ್ಠ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟವನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು. ಸ್ಥಳ ನಿರ್ಧಿಷ್ಟ ಪ್ರಕೃತಿ…
ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ವಾರ್ಷಿಕ 5,000 ರೂ.ಗಳ ಆರ್ಥಿಕ ನೆರವು ನೀಡಲು ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗದ ನೇಕಾರರಿಂದ ಅರ್ಜಿ ಆಹ್ವಾನಿಸಿದೆ. ನೇಕಾರರ ಸಮ್ಮಾನ್ ಯೋಜನೆಯಡಿ ಈ ಹಿಂದೆ ನೋಂದಣಿಯಾಗಿರುವ ಕೈಮಗ್ಗ ನೇಕಾರರು/ ಮಗ್ಗ ಪೂರ್ವ ನೇಕಾರರು / ಮಗ್ಗ ಪೂರ್ವ ಚಟುವಟಿಕೆ ಮಾಡುತ್ತಿರುವ ವಿದ್ಯುತ್ ಮಗ್ಗ ಹಾಗೂ ಕೈಮಗ್ಗ ನೇಕಾರರು/ ಕಾರ್ಮಿಕರು ಆರ್ಥಿಕ ನೆರವನ್ನು ಪಡೆಯಬಹುದಾಗಿದೆ. ಆಸಕ್ತರು ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30ರೊಳಗಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಕ್ರಾಸ್, ಸಿದ್ದಗಂಗಾ ಬಡಾವಣೆ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2275370ಯನ್ನು ಸಂಪರ್ಕಿಸಬಹುದಾಗಿದೆ. ಕೈಮಗ್ಗ ನೇಕಾರರು ತಮ್ಮ ಅರ್ಜಿಯೊಂದಿಗೆ ಆಧಾರ್ ಚೀಟಿ, ಪಡಿತರ ಚೀಟಿ, ನೇಕಾರ ಸಮ್ಮಾನ್ ಐ.ಡಿ/ಪೆಹಚಾನ್ ಕಾರ್ಡ್, ಆಧಾರ ಲಿಂಕ್ಡ್ ಹಾಗೂ ಎನ್ಪಿಸಿಐ(NPCI) ಮ್ಯಾಪಿಂಗ್ ಇರುವ ಬ್ಯಾಂಕ್ ಪಾಸ್ ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ ವೃತ್ತಿಯಲ್ಲಿರುವ ಫೋಟೋ, ಕೈಮಗ್ಗದಲ್ಲಿ ಕಾರ್ಯನಿರ್ವಹಿಸುವ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪ್ರಕರಣಗಳ ತನಿಖೆ ಮತ್ತು ವಿಲೇವಾರಿ ಸಭೆಯಲ್ಲಿ ಈ ಪ್ರಸಂಗ ಜರುಗಿತು. ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಪಿಡಿಓ ವಿನಾಯಕ ಅವರಿಗೆ ಎಚ್ಚರಿಕೆ ನೀಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸಾರ್ವಜನಿಕ ಸೇವೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಂಚಿಸುವುದು ಅಪರಾಧ. ಇಂತಹ ಅಪರಾಧಗಳನ್ನು ಲೋಕಾಯುಕ್ತ ಸಹಿಸುವುದಿಲ್ಲ. ಸಾರ್ವಜನಿಕರನ್ನು ವಂಚಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು. ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ…
ತುಮಕೂರು: ತುಮಕೂರಿನಲ್ಲಿ ಶನಿವಾರ ಕರೆಯಲಾಗಿದ್ದ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆಯನ್ನು ಅಧಿಕಾರಿಗಳ ಅಲಭ್ಯತೆ ಕಾರಣ ಸಮಿತಿಯ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಮುಂದೂಡಿದರು. ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಕೈಗೊಳ್ಳಲಾದ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಇನ್ನಿತರೆ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸುವ ಸಂಬಂಧ ಶನಿವಾರ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಸಮಿತಿ ಸಭೆ ಅಪರಾಹ್ನ ನಿಗಧಿಯಾಗಿತ್ತು. ಸಮಿತಿ ಸದಸ್ಯರು ಚಿತ್ರದುರ್ಗ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ತುಮಕೂರು ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸುವ ಹಾಗೂ ಹಳೆಯ ಪ್ರಕರಣಗಳ ವಿಲೇವಾರಿ ಸಂಬಂಧಿಸಿದಂತೆ ನಿನ್ನೆಯಿಂದ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಲವು ಅಧಿಕಾರಿಗಳು ಲೋಕಾಯುಕ್ತರ ಸಭೆಯಲ್ಲಿ ಹಾಜರಿರುವುದಾಗಿ ಹಿರಿಯ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಮಾಹಿತಿ ಪಡೆದು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡು ಹಿಡಿಯುವುದು ಸಮಿತಿಯ ಉದ್ದೇಶವಾಗಿತ್ತು. ಆದರೆ…
ಮೀರತ್ ನ ಸರ್ದಾರ್ ವಲ್ಲಭಾಯಿ ಪಟೇಲ್ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನದ ರೈತರ ಮೇಳ ಹಾಗೂ ಕೃಷಿ ಮೇಳದಲ್ಲಿ ಭಾಗವಹಿಸಿದ್ದ ಅನ್ಮೋಲ್ ಎಂಬ ಕೋಣದ ಬೆಲೆ 2 ರೋಲ್ಸ್ ರಾಯ್ಸ್ ಹಾಗೂ 10 ಮರ್ಸಿಡಿಸ್ ಬೆಂಜ್ ಕಾರುಗಳು ಸೇರಿದರೆ ಎಷ್ಟು ಬೆಲೆಯಾಗುತ್ತದೆಯೋ ಅಷ್ಟಂತೆ. ಹರಿಯಾಣದ ಸಿರ್ಸಾದಿಂದ ಬಂದಿದ್ದ ಈ ಕೋಣದ ಮಾಲೀಕ ಜಗತ್ ಸಿಂಗ್. ಇವರು ಹರ್ಯಾಣ ಮೂಲದವರಂತೆ. ಈ ಕೋಣವನ್ನು ಆರೋಗ್ಯಕರವಾಗಿ ನೋಡಿಕೊಳ್ಳಲು ಕೋಣಕ್ಕೆ 5 ಲೀಟರ್ ಹಾಲು, 4 ಕೆಜಿ ದಾಳಿಂಬೆ, 30 ಬಾಳೆಹಣ್ಣು, 20 ರಿಚ್ ಪ್ರೊಟೀನ್ ಇರುವ ಮೊಟ್ಟೆ ಹಾಗೂ ಮೇವು ಕೊಡುತ್ತಿದ್ದಾರಂತೆ. ಇಷ್ಟೇ ಅಲ್ಲದೇ ಕಾಲ್ ಕೆಜಿ ಬಾದಾಮಿ ಗುಲ್ಕಂದ್ ಕೂಡ ನೀಡುತ್ತಿದ್ದಾರೆ. ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿಯಾಗಿದೆ. ಇದು ಯಾವುದೇ ಕೃಷಿ ಮೇಳಕ್ಕೆ ಹೋದರೂ ಅಲ್ಲಿ ಕೋಣವನ್ನು ನೋಡಲು ಜನರು ಮುಗಿಬೀಳುತ್ತಾರೆ. ಅಷ್ಟೊಂದು ಆಕರ್ಷಣಿಯವಾಗಿದೆ ಈ ಅನ್ಮೋಲ್ ಕೋಣ. ಇನ್ನೂ ಕೋಣದ ಮಾಲೀಕ ಜಗತ್ ಸಿಂಗ್ ಈ ಕೋಣದಿಂದ …
ಅಮರಾವತಿ: ದಕ್ಷಿಣ ಭಾರತ ರಾಜ್ಯಗಳ ಜನರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಕರೆ ನೀಡಿದ್ದಾರೆ. ದಕ್ಷಿಣ ಭಾರತ ರಾಜ್ಯಗಳಲ್ಲಿ ವಯಸ್ಸಾದವರ ಸಂಖ್ಯೆ ಹೆಚ್ಚಳವಾದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಹೆಚ್ಚಿನ ಮಕ್ಕಳಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಹೊಸ ಕಾನೂನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಜನಸಂಖ್ಯೆ ನಿರ್ವಹಣೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ಹೇಳಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಮಾತ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗುವ ಕಾನೂನು ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ನಾಯ್ಡು ತಿಳಿಸಿದ್ದಾರೆ. 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸದಂತೆ ರಾಜ್ಯವು ಈ ಹಿಂದೆ ಕಾನೂನನ್ನು ಅಂಗೀಕರಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ನಾವು ಆ ಕಾನೂನನ್ನು ರದ್ದುಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಈಗ ಅದನ್ನು ಹಿಂತೆಗೆದುಕೊಳ್ಳಲು ನಾವು ಪರಿಗಣಿಸುತ್ತಿದ್ದೇವೆ. ಹೆಚ್ಚು ಮಕ್ಕಳನ್ನು ಹೊಂದಿರುವ ಕುಟುಂಬಗಳಿಗೆ ಸರ್ಕಾರವು ಹೆಚ್ಚಿನ ಪ್ರಯೋಜನಗಳನ್ನು ಒದಗಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ದಾಳಿಂಬೆ ಸಿಪ್ಪೆಯಿಂದ ತಯಾರಿಸಿದ ಫೇಸ್ ಪ್ಯಾಕ್ ಸಹಾಯದಿಂದ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡಬಹುದು. ಅದು ಹೇಗೆ ಎನ್ನುವ ವಿವರ ಇಲ್ಲಿದೆ ನೋಡಿ… ದಾಳಿಂಬೆ ಸಿಪ್ಪೆ ತೆಗೆದು ಶುದ್ಧ ನೀರಿನಿಂದ ತೊಳೆಯಿರಿ. ನಂತರ ಅವುಗಳನ್ನು ಎರಡು ದಿನಗಳ ಕಾಲ ಬಿಸಿಲಿನಲ್ಲಿ ಒಣಗಿಸಬೇಕು. ಒಣಗಿದ ಸಿಪ್ಪೆಯನ್ನು ಮಿಕ್ಸರ್ ಗೆ ಹಾಕಿ ಪುಡಿಯಾಗಿ ಪುಡಿಮಾಡಿ. ನಂತರ ದಾಳಿಂಬೆ ಪುಡಿಯಲ್ಲಿ ಮೊಸರು, ಜೇನುತುಪ್ಪ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ ಮತ್ತು ನುಣ್ಣಗೆ ಪೇಸ್ಟ್ ಮಾಡಿ. ಈ ಪೇಸ್ಟ್ ಅನ್ನು ಮುಖಕ್ಕೆ ಚೆನ್ನಾಗಿ ಹಚ್ಚಿಕೊಳ್ಳಿ. ಇದನ್ನು 15 ರಿಂದ 20 ನಿಮಿಷಗಳ ಕಾಲ ಬಿಡಿ. ಅದರ ನಂತರ ನಿಮ್ಮ ಮುಖವನ್ನು ತಣ್ಣೀರಿನಿಂದ ತೊಳೆಯಿರಿ. ಇದನ್ನು ನಿಯಮಿತವಾಗಿ ಮಾಡುವುದರಿಂದ ನಿಮ್ಮ ಮುಖವು ಹೊಳೆಯುತ್ತದೆ. ಉಪಯೋಗ ಏನು? ದಾಳಿಂಬೆ ಸಿಪ್ಪೆಯಲ್ಲಿರುವ ಆಂಟಿಆಕ್ಸಿಡೆಂಟ್ ಗಳು ಚರ್ಮವನ್ನು ಸ್ವತಂತ್ರ ರಾಡಿಕಲ್ ಗಳಿಂದ ರಕ್ಷಿಸುತ್ತದೆ. ಸುಕ್ಕುಗಳನ್ನು ಕಡಿಮೆ ಮಾಡುತ್ತದೆ ಮತ್ತು ಚರ್ಮವನ್ನು ಬಿಗಿಗೊಳಿಸುತ್ತದೆ. ಈ ಫೇಸ್ ಪ್ಯಾಕ್ ಮೊಡವೆಗಳನ್ನು ಕಡಿಮೆ ಮಾಡಲು ಹಾಗೂ ಕಲೆಗಳನ್ನು…
ಶಿವಮೊಗ್ಗ: ಮನೆಯೊಂದರಲ್ಲಿ ಹೂತಿಟ್ಟಿದ್ದ ಒಂದೂವರೆ ಕೆಜಿ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಮಾಗಡಿ ಪೋಲೀಸರು ತೀವ್ರ ಶೋಧ ನಡೆಸಿ ಕೆಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ತಾಲೂಕಿನಲ್ಲಿ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ತಾಲೂಕು ಕಮ್ಮರಡಿ ಮೂಲದ ಅಮೀರ್ ಹಂಜಾನನ್ನು ಬಂಧಿಸಲಾಗಿದೆ. ಆತನ ವಿಚಾರಣೆ ವೇಳೆ ನೀಡಿದ ಮಾಹಿತಿ ಮೇರೆಗೆ ಮಾಗಡಿ ಪೊಲೀಸರು ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಅಮೀರ್ ಹಂಜಾ 2002ರಲ್ಲಿ ನಡೆದ ಹೊಸಹಳ್ಳಿ ವೆಂಕಟೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನಂತರ ವಿವಿಧ ಹೆಸರುಗಳಲ್ಲಿ 80ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಕುರಿತಂತೆ ಪೊಲೀಸರು ತೀವ್ರ ತನಿಖೆ ಕೈಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಅನೇಕ ಗ್ರಾಮಗಳಿಗೆ ಮೂರು ದಿನಗಳಿಂದ ಭೇಟಿ ನೀಡಿ ತನಿಖೆ ನಡೆಸಿದ ಮಾಗಡಿ ಪೊಲೀಸರು ಅಮೀರ್ ಹಂಜಾನಿಂದ ಮಾಹಿತಿ ಸಂಗ್ರಹಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ರಾಮನಗರ: ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಂಗಮ ಬಳಿ ನಡೆದಿದೆ. ಘಟನೆಯಲ್ಲಿ 15 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಚಾಲಕನ ಅತಿಯಾದ ವೇಗವೇ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಬೀಳಲು ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಿಸಿದ್ದು, ಚುನಾವಣಾ ಪ್ರಕ್ರಿಯೆಯ ವೇಳಾಪಟ್ಟಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯ 10 ಗ್ರಾಪಂ ಸದಸ್ಯರ ಸ್ಥಾನಗಳಿಗೆ ನ.23ರಂದು ಮತದಾನ ನಡೆಯಲಿದ್ದು, ನ.26ರಂದು ಮತ ಎಣಿಕೆ ಮಾಡಿ, ಫಲಿತಾಂಶ ಘೋಷಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ರಾಜೀನಾಮೆ, ಸದಸ್ಯರ ನಿಧನ ಸೇರಿ ನಾನಾ ಕಾರಣಗಳಿಂದ ವಿವಿಧ ಗ್ರಾಪಂಗಳಲ್ಲಿ ಹಲವು ತಿಂಗಳಿಂದಲೂ ಸದಸ್ಯತ್ವ ಸ್ಥಾನ ಖಾಲಿ ಇದ್ದು, ಈಗ ಅಯ್ಕೆಗೆ ಚುನಾವಣೆ ಘೋಷಿಸಲಾಗಿದೆ. ಇದರಿಂದ ಆಯಾ ಗ್ರಾಮೀಣ ಭಾಗದ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಮುಖಂಡರು ರಾಜಕೀಯ ಪಕ್ಷಗಳ ಪರೋಕ್ಷ ಬೆಂಬಲದೊಂದಿಗೆ ರಾಜಕೀಯ ಚಟುವಟಿಕೆಗಳನ್ನು ಪ್ರಾರಂಭಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q