Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು–ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ: ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು–ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ…
ತಿಪಟೂರು: ಎಪಿಎಂಸಿಯಲ್ಲಿ ಅಕ್ಟೋಬರ್ 01ರಿಂದ ಕೊಬ್ಬರಿ ಮಾರಾಟಕ್ಕೆ ಹೊಸ ನಿಯಮಗಳು ಜಾರಿಯಾಗಲಿವೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ ತಿಳಿಸಿದರು ತುಮಕೂರು ಜಿಲ್ಲೆ ತಿಪಟೂರು ಎಪಿಎಂಸಿ ಏಷ್ಯಾಖಂಡದಲ್ಲಿಯೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ರೈತರಿಗೆ ಅನುಕೂವಾಗುವ ದೃಷ್ಠಿಯಿಂದ ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗಲಿವೆ ಎಂದು ಶಾಸಕ ಕೆ.ಷಡಕ್ಷರಿ ತಿಳಿಸಿದರು ನಗರದ ಎಪಿಎಂಸಿ ಮಾರುಕಟ್ಟೆ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಪಟೂರು ಎಪಿಎಂಸಿ ಏಷ್ಯಾಖಂಡದಲ್ಲಿ ದೊಡ್ಡದಾದ ಕೊಬ್ಬರಿ ಮಾರುಕಟ್ಟೆಯಾಗಿದು ತಿಪಟೂರು ಕೊಬ್ಬರಿ ವಿಶಿಷ್ಠಗುಣಗಳನ್ನು ಒಳಗೊಂಡಿದ್ದು ನಮ್ಮ ರೈತರಿಗೆ ಅನುಕೂಲವಾಗಬೇಕು ಎನ್ನುವ ದೃಷ್ಠಿಯಿಂದ ನವಂಬರ್ 01ರಿಂದ ಹೊಸ ನಿಯಮಗಳನ್ನ ಜಾರಿಗೊಳಿಸಲಾಗುತ್ತಿದೆ, ನವೆಂಬರ್ 01ರಿಂದ ಆನ್ ಲೈನ್ ನಿಯಮಬದಲಾವಣೆಗೆ ರೈತರು ಹಾಗೂ ವರ್ತಕರೊಂದಿಗೆ ಚರ್ಚಿಸಿ ನಿರ್ಧಾರ ಮಾಡಿದ್ದು ಹೊಸ ನಿಯಮಗಳು ಜಾರಿಯಾಗಲಿವೆ ಎಂದು ತಿಳಿಸಿದರು. ಬುಧವಾರ ಹಾಗೂ ಶನಿವಾರದ ಬದಲಾಗಿ ಸೋಮವಾರ ಮತ್ತು ಗುರುವಾರ ಎರಡು ದಿನಗಳು ಆನ್ ಲೈನ್ ಟೆಂಡರ್ ನಡೆಯಲಿದ್ದು , ಮಧ್ಯಾಹ್ನ 2ಗಂಟೆ ಬದಲಾಗಿ 3ಗಂಟೆಗೆ ಟೆಂಡರ್ ನಡೆಯುತ್ತದೆ. ರೈತರು ಎಪಿಎಂಸಿಗೆ ಕೊಬ್ಬರಿ…
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿದ್ದ ಸರೋಜಾ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಕಿಚ್ಚ ಸುದೀಪ್ ಅವರ ತಾಯಿ ಮಂಗಳೂರು ಮೂಲದವರಾಗಿದ್ದಾರೆ. ಅವರ ಮಾತೃ ಭಾಷೆ ತುಳುವಾಗಿದೆ. ತಾಯಿಯ ಮಾತೃಭಾಷೆ ಕಿಚ್ಚ ಸುದೀಪ್ ಅವರಿಗೆ ಬಹಳ ಇಷ್ಟ ಅಂತ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಸೆಪ್ಟೆಂಬರ್ ಮಾಹೆಯಲ್ಲಿ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು. ಹೊಸ ಮತಗಟ್ಟೆಗಳ ವಿವರ: ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಮತಗಟ್ಟೆ ಹಾಗೂ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಮತಗಟ್ಟೆಗಳನ್ನು ಸ್ಥಾಪಿಸಲು…
ಗುಜರಾತ್: ಸಿಡಿಲು ಬಡಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಗುಜರಾತ್ನ ಅಮ್ರೇಲಿ ಜಿಲ್ಲೆಯ ಲಾಠಿ ತಾಲೂಕಿನ ಅಂಬರಡಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ. ಸಂಜೆ 6 ಗಂಟೆ ಸುಮಾರಿಗೆ ಅಂಬರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ದಾಮ್ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲವು ಕೃಷಿ ಕಾರ್ಮಿಕರು ಮತ್ತು ಅವರ ಮಕ್ಕಳು ಹತ್ತಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಸಿಡಿಲು ಬಡಿದ ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು. ಮೃತರನ್ನು ಭಾರತಿಬೆನ್ ಸಂತಾಲಿಯಾ(35), ಶಿಲ್ಪಾ ಸಂತಾಲಿಯಾ(18), ರೂಪಾಲಿ ವನೋಡಿಯಾ(8), ರಿದ್ಧಿ(5) ಮತ್ತು ರಾಧೆ(5) ಎಂದು ಗುರುತಿಸಲಾಗಿದೆ. ಇಂದು ಈ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಪಾಲಕರನ್ನು ಕಳೆದುಕೊಂಡು ಅನಾಥಳಾಗಿದ್ದ ಯುವತಿಗೆ “ಮಂಡ್ಯ ಟೂ ಇಂಡಿಯಾ’ ಬೃಹತ್ ಉದ್ಯೋಗ ಮೇಳದಲ್ಲಿ ಉದ್ಯೋಗ ಲಭಿಸಿದೆ. ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಯೋಗ ನೇಮಕಾತಿ ಪತ್ರ ವಿತರಿಸಿದರು. ಜು. 16ರಂದು ಸಂಭವಿಸಿದ ಶಿರೂರು ಗುಡ್ಡ ಕುಸಿತದಲ್ಲಿ ಮೃತರಾದ ಜನಾರ್ದನ್ ನಾಯ್ಕ ಪುತ್ರಿ ಕೃತ್ತಿಕಾ ಜೆ.ನಾಯ್ಕಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪೆನಿ (ಬಿಎಚ್ ಇಲ್)ಯಲ್ಲಿ ಉದ್ಯೋಗ ದೊರೆತಿದೆ. ಈ ಹಿಂದೆ ದುರಂತ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಕೃತ್ತಿಕಾಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. 6,150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ. ಉಳಿದವರಿಗೂ ಡಿಸೆಂಬರ್ ವೇಳೆಗೆ ಉದ್ಯೋಗ ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಕೋಳಿ ಕತ್ತರಿಸುವ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಸುಧಾ (50) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಪತಿ ಶ್ರೀನಿವಾಸ್ (52) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಯಲಹಂಕ ತಾಲ್ಲೂಕು ಬೂದಿಗೆರೆ ಹೋಬಳಿ ಸಿಂಗಹಳ್ಳಿ ಗ್ರಾಮದಲ್ಲಿ ಚಿಕನ್ ಅಂಗಡಿ ಇಟ್ಟುಕೊಂಡು ಆರೋಪಿ ಪತಿ ಶ್ರೀನಿವಾಸ್ ಜೀವನ ಮಾಡಿಕೊಂಡಿದ್ದ. ಹಲವು ವರ್ಷಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಮನಸ್ತಾಪವಿದ್ದುದರಿಂದ ಪತಿಯನ್ನು ತೊರೆದು ತನ್ನ ತವರು ಮನೆ ಹೊಸಕೋಟೆಗೆ ಸುಧಾ ಹೋಗಿದ್ದರು. ಇವರ ಇಬ್ಬರು ಮಕ್ಕಳು ತಾಯಿಯನ್ನು ಸಮಾಧಾನಪಡಿಸಿ ಮನೆಗೆ ವಾಪಾಸ್ ಕರೆತಂದಿದ್ದರು. ಸ್ವಲ್ಪ ದಿನ ಇವರ ಮನೆಯಲ್ಲಿ ಶಾಂತಿ ನೆಲೆಸಿತ್ತು. ತದನಂತರದಲ್ಲಿ ಶ್ರೀನಿವಾಸ್ ಮತ್ತೆ ತನ್ನ ಹಳೇ ಚಾಳಿ ಮುಂದುವರೆಸಿ ಪತ್ನಿ ಶೀಲ ಶಂಕಿಸಿ ಜಗಳವಾಡಿದ್ದಾನೆ. ನಿನ್ನ ಬೆಳಿಗ್ಗೆ ಸುಧಾ ಅವರ ಪುತ್ರ ಅರ್ಜುನ್ ಸಿಂಗಹಳ್ಳಿಯಲ್ಲಿರುವ ಹಾಲಿನ ಡೈರಿ ಬಳಿಗೆ ಲಾರಿಗೆ ಹಾಲು ತುಂಬಿಸಲು ಹೋಗಿದ್ದಾರೆ.ಆ ವೇಳೆ ಸುಧಾ ಅವರು ಮನೆ ಹಿಂಬದಿ…
ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಮಾಡಿದ್ದ ಆರೋಪದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ಪರಾರಿಯಾಗಿದ್ದ ಗೋಪಾಲ್ ಜೋಶಿಯನ್ನು ಕೊಲ್ಲಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಿನ್ನೆಯೇ ಸೋಮಶೇಖರ್ ನಾಯಕ್ ಹಾಗೂ ವಿಜಯಕುಮಾರಿ ಎಂಬುವವರನ್ನು ಬಂಧಿಸಲಾಗಿದೆ. ಕರ್ನಾಟಕದಿಂದ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಶಿ, ಮಹಾರಾಷ್ಟ್ರದ ಕೊಲ್ಲಾಪುರದ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ 5:30ಕ್ಕೆ ಲಾಡ್ಜ್ಗೆ ತೆರಳಿ ಬಂಧಿಸಿರುವ ಪೊಲೀಸರು ನೇರವಾಗಿ ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಪೆಪ್ಪರ್ ಸ್ಪ್ರೇ ಮಾಡಿ ಸಾಫ್ಟ್‌ವೇರ್ ಎಂಜಿನಿಯರ್ ವೊಬ್ಬರ ಮೊಬೈಲ್ ಕಳವಿಗೆ ಯತ್ನಿಸಿರುವ ಘಟನೆ ಹೊಸಹಳ್ಳಿ ಮೆಟ್ರೋ ನಿಲ್ದಾಣ ಸಮೀಪ ರಾತ್ರಿ ನಡೆದಿದೆ. ಸಾಫ್ಟ್‌ವೇರ್ ಎಂಜಿನಿಯರ್ ಅಭಿಜಿತ್ ಮೆಟ್ರೋದಿಂದ ಇಳಿದು ಸ್ನೇಹಿತನ ಜೊತೆಗೆ ಮಾತನಾಡುತ್ತಾ ತೆರೆಳುತ್ತಿದ್ದರು. ಇದೇ ವೇಳೆ ಒಂದು ಬೈಕ್ ನಲ್ಲಿ ಬಂದ ಮೂವರು ದರೋಡೆಕೋರರು, ಅಭಿಜಿತ್ ಜೊತೆಗೆ ಜಗಳವಾಡಿ ಹಲ್ಲೆ ಮಾಡಿ, ಪೆಪ್ಪರ್ ಸ್ಪ್ರೇ ಮಾಡಿದ್ದಾರೆ. ಅವರ ಮೊಬೈಲ್ ನ್ನು ಕಳವು ಮಾಡಲು ಯತ್ನಿಸುತ್ತಿದ್ದ ವೇಳೆ ಅಭಿಜಿತ್ ಸಹಾಯಕ್ಕಾಗಿ ಕೂಗಿದ್ದಾರೆ. ಈ ವೇಳೆ ದರೋಡೆಕೋರರು ಪರಾರಿಯಾಗಿದ್ದಾರೆ. 10.45ರ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಬಗ್ಗೆ ಅಭಿಜಿತ್ ಅವರು ಗೋವಿಂದರಾಜ ನಗರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೃತ್ಯ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ದರೋಡೆಕೋರರ ಪತ್ತೆಗೆ ಬಲೆಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು. ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…