Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು : ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜೈಲಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ವಿಚಾರಣಾ ದಿನ ಕೈದಿಗಳ ಸಮಸ್ಯೆಯನ್ನು ಕೂಡ ಆಲಿಸಿದರು. ಜೈಲಿನ ವ್ಯವಸ್ಥೆಗಳ ಬಗ್ಗೆ ಖೈದಿಗಳನ್ನು ವಿಚಾರಿಸಿದ ಅವರು ಯಾವುದೋ ಅನಿರೀಕ್ಷಿತ ಸಂದರ್ಭದಲ್ಲಿ ಆಕಸ್ಮಿಕವಾಗಿ ಅಪರಾಧಗಳಲ್ಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗಿದ್ದೀರಿ. ಇನ್ನು ಮುಂದೆ ಮನಃ ಪರಿವರ್ತನೆ ಮಾಡಿಕೊಂಡು ಸರಿ ದಾರಿಯಲ್ಲಿ ನಡೆದು ಸತ್ಪ್ರಜೆಗಳಾಗಬೇಕು ಎಂದು ಬುದ್ಧಿ ಮಾತುಗಳನ್ನು ಹೇಳಿದರು ಜೈಲಿನಲ್ಲಿರುವ ಖೈದಿಗಳ ಕೊಠಡಿ, ಅಡುಗೆ ಕೋಣೆ, ಆಹಾರ ಸಾಮಗ್ರಿಗಳ ಗುಣ ಮಟ್ಟವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಲೋಕಾಯುಕ್ತ ಅಧೀಕ್ಷಕ ಎ ವಿ ಲಕ್ಷ್ಮೀ ನಾರಾಯಣ, ಜೈಲಿನ ಅಧೀಕ್ಷಕ ಮಲ್ಲಿಕಾರ್ಜುನ ಎಸ್ ಮಾಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು ಹೊರವಲಯದ ಹೆಬ್ಬೂರು ಹೋಬಳಿಯ ಬಿದರಕಟ್ಟೆ, ತಿಮ್ಮಸಂದ್ರ ಹಾಗೂ ದೊಮ್ಮನಕುಪ್ಪೆ ಗ್ರಾಮಗಳ ವ್ಯಾಪ್ತಿಗೆ ಬರುವ 240 ಎಕರೆ ವಿಸ್ತೀರ್ಣದ ‘ಜ್ಞಾನಸಿರಿ’ ಕ್ಯಾಂಪಸ್. 17 ಕೋಟಿ 50 ಲಕ್ಷ ರೂಪಾಯಿ ವೆಚ್ಚದ, ತಲಾ 2927 ಚದರ ಮೀಟರ್ ವಿಸ್ತೀರ್ಣದ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಎರಡು ಪ್ರತ್ಯೇಕ ಹಾಸ್ಟೆಲ್‌ಗಳು, 2995 ಚದರ ಮೀಟರ್ ವಿಸ್ತೀರ್ಣದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳ ಹಾಸ್ಟೆಲ್ ಕಾಮಗಾರಿ ಈಗಾಗಲೇ ಪೂರ್ಣಗೊಂಡು ಬಳಕೆಗೆ ಸಿದ್ಧವಾಗಿವೆ. 5 ಕೋಟಿ 53 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 2722 ಚದರ ಮೀಟರ್ ವಿಸ್ತೀರ್ಣದ ಸ್ನಾತಕೋತ್ತರ ಬಾಲಕರ ಹಾಸ್ಟೆಲ್, 1 ಕೋಟಿ 19 ಲಕ್ಷ ರುಪಾಯಿ ರೂಸಾ ಅನುದಾನದಲ್ಲಿ 360 ಚದರ ಮೀಟರ್ ವಿಸ್ತೀರ್ಣದ ಗ್ರಂಥಾಲಯ ಮತ್ತ ಮಾಹಿತಿ ವಿಜ್ಞಾನ ವಿಭಾಗದ ಪ್ರಯೋಗಾಲಯ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ 2 ಕೋಟಿ ರುಪಾಯಿ ಅನುದಾನದಲ್ಲಿ 1760 ಚದರ ಮೀಟರ್ ವಿಸ್ತೀರ್ಣದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ…
ತುಮಕೂರು: ಬೆಸ್ಕಾಂ ನಗರ ಉಪವಿಭಾಗ–2ರ ಕಚೇರಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 19ರಂದು ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಸಂವಾದ ಸಭೆ ನಡೆಯಲಿದೆ. ಈ ಉಪವಿಭಾಗ ವ್ಯಾಪ್ತಿಯ ಎಸ್‌ಎಸ್‌ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದ ಕುಂದು ಕೊರತೆ/ಸಲಹೆಗಳನ್ನು ನೀಡಬಹುದಾಗಿದೆ ಎಂದು ಇಂಜಿನಿಯರ್ ಮಹಬೂಬ್ ಷರೀಫ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು : ರುಡ್‌ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತವಾಗಿ 30 ದಿನಗಳ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್‌ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇಲೆಕ್ಟಾçನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಏ ಟಿವಿ ಐಇಆ ಮತ್ತು ಐಅಆ ಟಿವಿ, ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೆöÊ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟಾçನಿಕ್ ವಸ್ತುಗಳ ರಿಪೇರಿ ಬಗ್ಗೆ ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 20…
ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರ ಕಳೆದ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಶಾಸಕರೊಬ್ಬರಿಗೆ ವಂಚನೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪ್ರಲ್ಹಾದ ಜೋಶಿ ಸಹೋದರ ಗೋಪಾಲ್ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ ಎಫ್ ಐ ಆರ್ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಪತಿ ದೇವಾನಂದ ಪುಲ್ ಸಿಂಗ್ ಚೌಹ್ಹಾಣ್ ಅವರಿಗೆ ಪ್ರಹ್ಲಾದ್ ಜೋಷಿ ಪ್ರಭಾವ ಬಳಸಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹೋದರ ಗೋಪಾಲ ಜೋಷಿ ಮತ್ತು ಸಹೋದರಿ ವಿಜಯ್ ಲಕ್ಷ್ಮಿ ಜೋಷಿ ಹಾಗೂ ಗೋಪಾಲ್ ಜೋಷಿ ಮಗ ಅಜಯ್ ಜೋಷಿ ಭರವಸೆ ನೀಡಿ…
ಬೆಂಗಳೂರು: ಜನ ಸರ್ಕಾರ ವಿರುದ್ಧ ದಂಗೆ ಏಳುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನ ಜನತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ದಂಗೆ ಏಳುವ ಮುನ್ನ, ರಸ್ತೆ ಗುಂಡಿಗಳಿಂದ ಇನ್ನಷ್ಟು ಅಪಘಾತಗಳು, ಸಾವು-ನೋವು ಸಂಭವಿಸುವ ಮುನ್ನ ಸಮರೋಪಾದಿಯಲ್ಲಿ ರಸ್ತೆಗಳ ದುರಸ್ತಿ ಮಾಡಬೇಕು ಎಂದಿದ್ದಾರೆ. ಬೆಂಗಳೂರು ನಗರಕ್ಕೆ 25,000 ಕೋಟಿ ವಿಶೇಷ ಅನುದಾನ ನೀಡಿ, ರಸ್ತೆಗಳು, ರಾಜಕಾಲುವೆಗಳನ್ನು ಸರಿಪಡಿಸುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಯಲಾಯ್ತು ಬ್ರ್ಯಾಂಡ್ ಬೆಂಗಳೂರಿನ ಮುಖವಾಡ, ಬೀದಿಗೆ ಬಂತು ಕಾಂಗ್ರೆಸ್ ಸರ್ಕಾರದ ಬಂಡವಾಳ. ಇಷ್ಟಕ್ಕೂ ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಕಾಂಗ್ರೆಸ್ ಸರ್ಕಾರ ಕಳೆದ 15 ತಿಂಗಳ ಆಡಳಿತದಲ್ಲಿ ಬೆಂಗಳೂರಿಗೆ ಬಿಡಿಗಾಸು ಅನುದಾನ ಸಹ ನೀಡಿಲ್ಲ ಎಂದು ಕಿಡಿಕಾರಿದರು. ಒಂದೇ ಮಳೆಗೆ ಬೆಂಗಳೂರಿನ ತುಂಬಾ ಬಾಯ್ತೆರೆದಿರುವ ಯಮಸ್ವರೂಪಿ ರಸ್ತೆ ಗುಂಡಿಗಳು ಭ್ರಷ್ಟ ಕಾಂಗ್ರೆಸ್…
ಬೆಂಗಳೂರು: ಭಾರತೀಯ ಅಂಚೆ ಮೂಲಕ ವಿದೇಶಗಳಿಂದ ಮಾದಕ ವಸ್ತುಗಳನ್ನು ನಗರಕ್ಕೆ ಸರಬರಾಜು ಮಾಡಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 21.17 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿ ತಂಡವು ಭಾರತೀಯ ಅಂಚೆ ಮೂಲಕ ವಿವಿಧ ವಿದೇಶಗಳಿಂದ ಮಾದಕ ವಸ್ತು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ನಿಗಾ ಇಟ್ಟಿತ್ತು. ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿಕೊಂಡು ಆರೋಪಿಗಳನ್ನು ಬಂಧಿಸಿ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲು ಮಾಡಿಕೊಳ್ಳಲಾಗಿದೆ. ಕಳೆದ ತಿಂಗಳು ನಗರದ ಎಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಇಂತಹದ್ದೇ ಎರಡು ಪ್ರಕರಣಗಳು ಮತ್ತು ಸಿಸಿಬಿ ಠಾಣೆಯಲ್ಲಿ ಒಂದು ಪ್ರಕರಣ ದಾಖಲಿಸಿದ್ದು ಈ ಪ್ರಕರಣಗಳಲ್ಲಿ ಮೂವರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿತ್ತು. ನಿಷೇಧ ಮಾದಕ ವಸ್ತುವನ್ನು ಸಂಪೂರ್ಣವಾಗಿ ಬೇರು ಸಮೇತ ಕಿತ್ತೊಗೆಯಲು ಸಿಸಿಬಿಯ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಚಾಮರಾಜಪೇಟೆಯ ಫಾರೀನ್ ಪೋಸ್ಟ್ ಆಫೀಸ್ನಲ್ಲಿ…
ಬಿಗ್ ಬಾಸ್ ಕನ್ನಡ ಸೀಜನ್ 11 ಆರಂಭವಾಗಿದ್ದು, ಮೂರನೇ ವಾರ ನಡೆಯುತ್ತಿದೆ. ಬಿಗ್ ಬಾಸ್ ಎಂದರೆ ಪ್ರೇಕ್ಷಕರಿಗೆ ಅಚ್ಚುಮೆಚ್ಚಿನ ಕಾರ್ಯಕ್ರಮ ಕೂಡ ಹೌದು.ಆದರೆ ಇತ್ತೀಚಿಗೆ ಬಿಗ್ ಬಾಸ್ ಕನ್ನಡ ಪ್ರೇಕ್ಷರನ್ನು ಭಾರೀ ನಿರಾಸೆಗೊಳಿಸುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಕಾರ್ಯಕ್ರಮ ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ಬಾರಿಯ ಸೀಜನ್ ಗಂತೂ ಜನ ಕ್ಯಾರೇ ಎನ್ನದೇ ಅಸಮಾಧಾನ ಹೊರಹಾಕುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ಸೀಜನ್ 11 ಆರಂಭವಾದ ದಿನದಿಂದಲೂ ಜಗಳ, ಬೈಗುಳ ಹೊಡೆದಾಟ ಮಿತಿ ಮೀರಿದ ವರ್ತನೆಯೇ ಹೆಚ್ಚಾಗಿದೆ. ದೈಹಿಕ ಹಲ್ಲೆ, ಕೊಳಕು ಮಾತು, ಕೆಟ್ಟ ವರ್ತನೆಗಳೇ ಹೆಚ್ಚಾಗಿದೆ. ಒಂದೆಡೆ ಮಹಿಳೆಯರಿಗೆ ಅಪಮಾನವಾಗುವಂತೆ ಒಬ್ಬ ಸ್ಪರ್ಧಿ ಬೈದರೆ, ಮತ್ತೊಂದೆಡೆ ಆ ಸ್ಪರ್ಧಿಯನ್ನು ಪ್ರಚೋದಿಸುವ ಮಾತುಗಳನ್ನು ಮಹಿಳಾ ಸ್ಪರ್ಧಿಗಳೇ ಆಡುತ್ತಾರೆ. ಇದರಿಂದ ಜಗಳ ಆರಂಭವಾಗಿ ಮೊದಲು ಇಬ್ಬರು ಕೊನೆಗೆ ಎಲ್ಲರೂ ಸೇರಿ ಅದು ಅತಿರೇಖಕ್ಕೆ ಹೋಗಿ ಕೈ ಕೈ ಮಿಲಾಯಿಸಿದ ಪ್ರಸಂಗ ಕೂಡ ನಡೆದಿದೆ. ಹುಚ್ಚ ವೆಂಕಟ್ ಸೇರಿದಂತೆ ಕೆಲವು ಸ್ಪರ್ಧಿಗಳು ಮಿತಿ ಮೀರಿದ ವರ್ತನೆ…
ಬೆಂಗಳೂರು: ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಹಸ್ತದ ಗುರುತೇ ಅಭ್ಯರ್ಥಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಲಿಂಗಾಯತರ ಮೀಸಲಾತಿ ವಿಚಾರವಾಗಿ ಸಮುದಾಯದ ನಾಯಕರುಗಳ ಜತೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಭೆಯ ಕುರಿತು ಮಾತನಾಡಿ, ಯಾವುದೇ ಸಮುದಾಯಕ್ಕೆ ಅನ್ಯಾಯವಾಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮೀಸಲಾತಿ ವಿಚಾರ ನ್ಯಾಯಾಲಯದಲ್ಲಿದ್ದು ನಾವು ಹಸ್ತಕ್ಷೇಪ ಮಾಡಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಪಂಚಮಸಾಲಿ ಸಮುದಾಯದ ಜತೆ ಮತ್ತೆ ಚರ್ಚೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಲಮಿತಿಯಲ್ಲಿ ಮೀಸಲಾತಿ ನೀಡಬೇಕು ಎಂದರೆ, ಅದು ಸಾಧ್ಯವಾಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಬೇರೆ ಸಮಾಜಗಳಿಗೆ ನೋವಾಗುವಂತೆ ತೀರ್ಮಾನ ಮಾಡಿತ್ತು. ನಂತರ ಆ ಸರ್ಕಾರವೇ ನಾವು ಯಾವುದೇ ಮೀಸಲಾತಿ ಜಾರಿ ಮಾಡುವುದಿಲ್ಲ ಎಂದು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವಾಗ ನಾವು ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.…
ಬಿಗ್ ಬಾಸ್ ಕನ್ನಡ 11ನೇ ಆವೃತ್ತಿ ಈವರೆಗಿನ ಎಲ್ಲ ಸೀಸನ್ ಗಿಂತಲೂ ಹೆಚ್ಚು ವಿವಾದಕ್ಕೀಡಾಗಿದೆ. ಇದಕ್ಕೆ ಪ್ರಮುಖ ಕಾರಣ ಲಾಯರ್ ಜಗದೀಶ್ ಎಂಟ್ರಿ ಅಂತ ಬಿಗ್ ಬಾಸ್ ವೀಕ್ಷಕರು ಹೇಳುತ್ತಿದ್ದಾರೆ. ಈ ನಡುವೆ ಒಂದೇ ಬಾರಿ ಬಿಗ್ ಬಾಸ್ ಮನೆಯಿಂದ ಇಬ್ಬಿಬ್ಬರು ಸ್ಪರ್ಧಿಗಳು ಒಂದೇ ಬಾರಿಗೆ ಔಟ್ ಆಗಿದ್ದಾರೆ. ವಕೀಲ್ ಸಾಬ್ ಎಂದೇ ಖ್ಯಾತರಾಗಿರುವ ಜಗದೀಶ್ ಮತ್ತು ರಂಜಿತ್‌ರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳಿಸಲಾಗಿದ್ದು, ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಬಿಗ್ ಬಾಸ್ ಮನೆಯಲ್ಲಿ ಲಾಯರ್ ಜಗದೀಶ್ ವಿರುದ್ಧ ಉಳಿದ 15 ಅಭ್ಯರ್ಥಿಗಳು ಒಟ್ಟಾಗಿ ಜಗಳವಾಡಿದ್ದು, ಎಲ್ಲರಿಗೂ ಜಗದೀಶ್ ತಿರುಗೇಟು ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಜಗದೀಶ್ ಮಹಿಳಾ ಅಭ್ಯರ್ಥಿಗಳಿಗೆ ಗೌರವ ಕೊಡದೆ ಮಾತನಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಜಗಳ ವಿಕೋಪಕ್ಕೆ ಹೋಗಿದ್ದು, ರಂಜಿತ್ ಜಗದೀಶ್‌ರನ್ನು ತಳ್ಳಿದ್ದಾರೆ. ಇದನ್ನೆಲ್ಲಾ ಗಂಭೀರವಾಗಿ ಪರಿಗಣಿಸಿ ಇಬ್ಬರನ್ನು ಕಾರ್ಯಕ್ರಮದಿಂದ ಹೊರಹಾಕಲಾಗಿದೆ. ಇದೀಗ ಲಾಯರ್ ಜಗದೀಶ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದ್ದು, ಮಹಿಳೆಯಾದ ಮಾತ್ರಕ್ಕೆ ಏನು ಬೇಕಾದರೂ…