Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಮಾರ್ಕೋನಹಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಜಲಾಶಯವು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಶಿಂಷಾ ನದಿಗೆ ನೀರನ್ನು ಬಿಡುವ ಸಾಧ್ಯತೆ ಇದೆ. ಯಾವುದೇ ಸಮಯದಲ್ಲಿ ಒಳ ಹರಿವಿಗೆ ತಕ್ಕಂತೆ ಜಲಾಶಯದಿಂದ ಶಿಂಷಾ ನದಿಗೆ ನೀರನ್ನು ಹರಿಸಲಾಗುವುದು. ಜಲಾಶಯದ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುವ ಸಂಭವವಿದ್ದು ಮಾರ್ಕೋನಹಳ್ಳಿ ಜಲಾಶಯದ ಕೆಳಭಾಗದ ಹಾಗೂ ನದಿ ಪಾತ್ರದ ಕುಣಿಗಲ್ ತಾಲ್ಲೂಕಿನ ಮಾರ್ಕೋನಹಳ್ಳಿ, ಕಾಡಶೆಟ್ಟಿಹಳ್ಳಿ, ಬಿಸಿನೆಲೆ, ತೊರೆಹಳ್ಳಿ, ಶಾನುಭಾಗೋನಹಳ್ಳಿ, ಕಿರಂಗೂರು, ಪಡುವಗೆರೆ, ಬೆಟ್ಟೆಹಳ್ಳಿ, ದೊಡ್ಡಕಲ್ಲಹಳ್ಳಿ, ವಳಗೆರಪುರ, 14ನೇ ಮೈಲಿ ಬಂಗಲಿ, ಚಂದನಹಳ್ಳಿ, ಅಂಚಿಪುರ, ಕೀಲಾರ, ಉಂಗ್ರ, ತೊರೆಬೊಮ್ಮನಹಳ್ಳಿ, ಕೊಡವತ್ತಿ, ಹನುಮಂತನಗರ ಹಾಗೂ ನಾಗಮಂಗಲ ತಾಲ್ಲೂಕಿನ ಮಲ್ಲನಕೊಪ್ಪಲು, ದೊಡ್ಡ ಉಪ್ಪಳ, ತಿಗಳರಕೊಪ್ಪಲು, ಬಳ್ಳೆಕೆರೆ, ಹದಮಗೆರೆ, ಅರಕೆರೆ, ಚೊಟ್ಟನಹಳ್ಳಿ, ಕೂಡಗಬಾಳು, ಕೌಡ್ಲೆ, ಯಡವನಹಳ್ಳಿ, ಬೆಕ್ಕಳಲೆ, ಪಟೇಲನಕೊಪ್ಪಲು, ಕಿರಂಗೂರು ಹಾಗೂ ಇನ್ನಿತರೆ ಶಿಂಷಾ ನದಿ ಪಾತ್ರದ ಗ್ರಾಮಗಳ ಸಾರ್ವಜನಿಕರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾವೇರಿ ನೀರಾವರಿ ನಿಗಮ ನಿಯಮಿತ ಹೇಮಾವತಿ…
ತುಮಕೂರು: ಜಿಲ್ಲಾಡಳಿತದ ವತಿಯಿಂದ ಮೊದಲ ಬಾರಿಗೆ ಆಚರಿಸಲಾದ ತುಮಕೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಕರಿಬಸವೇಶ್ವರ ಮಠದ ಲಕ್ಷ್ಮೀ ಆನೆಯ ಮಾವುತ ಸಲೀಮ್ ಬಾಷ ಹಾಗೂ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ ನೊಣವಿನಕೆರೆ ಮಠದ ಲಕ್ಷ್ಮೀ ಆನೆಯ ಮಾವುತ ಗಂಗಾಧರ್ ಅವರನ್ನು ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಉಪ ವಲಯ ಅರಣ್ಯಾಧಿಕಾರಿ ರಬ್ಬಾನಿ, ವಲಯ ಅರಣ್ಯಾಧಿಕಾರಿ ನಮಿತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಹಾಗೂ ಸಿದ್ಧಗಂಗಾ ಮಠದ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಅಕ್ಟೋಬರ್ 17 ರಿಂದ 19ರವರೆಗೆ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಗಂಗಾ ಸನಿವಾಸ ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟದ ಬ್ಯಾಂಡ್ ವಾದನ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಮನಮೋಹನ್ ತಿಳಿಸಿದ್ದಾರೆ. ಈ ಸ್ಪರ್ಧೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 900 ಸ್ಪರ್ಧಾಳುಗಳನ್ನೊಳಗೊಂಡ 30 ತಂಡಗಳು ಭಾಗವಹಿಸಲಿದ್ದು, ಅಕ್ಟೋಬರ್ 17ರಂದು ಸಂಜೆ 4:30 ಗಂಟೆಗೆ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸ್ಪರ್ಧೆಯನ್ನು ಉದ್ಘಾಟಿಸುವರು. ಶ್ರೀ ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ.ಸ್ವ. ಪರಮಪೂಜ್ಯ ಶ್ರೀ ಸಿದ್ಧಲಿಂಗಮಹಾಸ್ವಾಮಿಗಳ ದಿವ್ಯ ಸಾನಿಧ್ಯವಹಿಸುವರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಧ್ವಜಾರೋಹಣ ನೆರವೇರಿಸುವರು. ನವದೆಹಲಿಯ…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟೀಮೆಕ್(TMEIC), ಸಿಗ್ನಲ್ ಸ್ವಿಚ್ ಡಿವೈಸಸ್ ಅಂಡ್ ಸಿಸ್ಟಮ್ ಹಾಗೂ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ(Fitter, Electrician, Welder and painter), ಡಿಪ್ಲೊಮಾ(Electrical and Electronics, Electronics and communication and Mechanical) ಹಾಗೂ ಬಿ.ಎ., ಬಿ.ಎಸ್ಸಿ., ಎಂ.ಕಾಂ. & ಬಿ.ಎಡ್. ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143 / 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ನಿರಂತರ ಸುರಿದ ಮಳೆಗೆ ನಗರ ವ್ಯಾಪ್ತಿಯ ಕುರಿಪಾಳ್ಯದಲ್ಲಿ ಹಳೆಯ ಮನೆಗಳು ಕುಸಿದಿದ್ದು, ನಿರಾಶ್ರಿತರನ್ನು ಗಂಜಿ ಕೇಂದ್ರಕ್ಕೆ ಕೂಡಲೇ ಸ್ಥಳಾಂತರಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಹಶೀಲ್ದಾರ್ ಹಾಗೂ ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅವರು, ಕುರಿಪಾಳ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗಂಜಿ ಕೇಂದ್ರ ತೆರೆಯಬೇಕು. ಜಿಲ್ಲೆಯಾದ್ಯಂತ ಜಿಟಿ–ಜಿಟಿ ಮಳೆಯಾಗುತ್ತಿರುವುದರಿಂದ ಬೀಳುವ ಹಂತದ ಮನೆಗಳಲ್ಲಿರುವವರನ್ನೂ ಸಹ ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸಬೇಕು ಎಂದು ತಿಳಿಸಿದರಲ್ಲದೆ, ಹಾನಿಗೊಳಗಾಗಿರುವ ಮನೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಜೀವ ಹೋದರೆ ಮರಳಿ ಬರೋದಿಲ್ಲ. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯಬೇಕೆಂದು ಮನೆ ಕಳೆದುಕೊಂಡು ನಿರಾಶ್ರಿತರಾದವರಲ್ಲಿ ಮನವಿ ಮಾಡಿದರು. ಗಂಜಿ ಕೇಂದ್ರದಲ್ಲಿ ಆಶ್ರಯ ಪಡೆಯುವ ನಿರಾಶ್ರಿತರಿಗೆ ಗುಣಮಟ್ಟದ ಆಹಾರ, ಕುಡಿಯುವ ನೀರಿನ ವ್ಯವಸ್ಥೆ, ಹಾಸಿಗೆ, ಹೊದಿಕೆ, ವಿದ್ಯುತ್ ಸಂಪರ್ಕ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕುರಿಪಾಳ್ಯ ಪ್ರದೇಶದಲ್ಲಿ ಬಹುಪಾಲು ಪೌರ…
ತುಮಕೂರು: ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (NLM) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ ನಡೆಸಿ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು. ದಯಾಕರ್ ರೆಡ್ಡಿ ಮತ್ತು ತಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ 5 ಕಾಮಗಾರಿಗಳನ್ನು ಪರಿಶೀಲನೆ ನಡೆಸಿತು. ತದನಂತರ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ 5 ಫಲಾನುಭವಿಗಳನ್ನು ಭೇಟಿ ಮಾಡಿ ನರೇಗಾ ಸೌಲಭ್ಯಗಳನ್ನು ಪಡೆದಿರುವ, ಯೋಜನೆಯ ಸದುಪಯೋಗದ ಬಗ್ಗೆ ಮಾಹಿತಿ ಕಲೆ ಹಾಕಿತು. ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಸಂಘದ ಕಾರ್ಯಕ್ರಮಗಳ ಸದ್ಬಳಕೆ ಕುರಿತು ಮಾಹಿತಿ ಪಡೆಯಿತು. ನಂತರ ಸ್ವಸಹಾಯ ಸಂಘಗಳ ಲಾಭದಾಯಕ ಚಟುವಟಿಕೆಗಳ ಬಗ್ಗೆ ಫಲಾನುಭವಿಗಳಿಗೆ ಮಾರ್ಗದರ್ಶನ ನೀಡಿತು. PMAY(G) ಯೋಜನೆಯಡಿ ಪ್ರಗತಿಯಲ್ಲಿರುವ ಹಾಗೂ ಮುಕ್ತಾಯಗೊಂಡಿರುವ ವಸತಿ ಯೋಜನೆಯ 5 ಫಲಾನುಭವಿಗಳನ್ನು ಭೇಟಿ…
ಅಕ್ಕ ಧಾರಾವಾಹಿ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ, ರಿಯಾಲಿಟಿ ಶೋ ನಿರೂಪಕಿ ಅನುಪಮಾ ಗೌಡ ಹೊಸ ಟ್ಯಾಟೋ ಹಾಕಿಸಿಕೊಂಡಿದ್ದು, ತನ್ನ ತಂದೆಯ ನೆನಪಿಗಾಗಿ ಈ ಟ್ಯಾಟೋ ಹಾಕಿಸಿಕೊಂಡಿದ್ದಾರಂತೆ! ಅಪ್ಪ. ನನ್ನ ಜೊತೆ ದೈಹಿಕವಾಗಿ ಇಲ್ಲದಿದ್ದರೂ ನನ್ನ ಬೆನ್ನ ಹಿಂದೆ ಸದಾ ಇರುತ್ತಾರೆ. ನನ್ನ ಟ್ಯಾಟ್ಯೂ ಅದ್ಭುತವಾಗಿ ಮೂಡಿ ಬಂದಿದೆ. ನನ್ನ ಜೀವನ ಪೂರ್ತಿ ಈ ಟ್ಯಾಟೂ ಜೊತೆಯಾಗಿ ಇರುತ್ತದೆ ಎಂದು ಫೋಟೋ ಶೇರ್ ಮಾಡಿಕೊಂಡು ಅನುಪಮಾ ಗೌಡ ಬರೆದುಕೊಂಡಿದ್ದಾರೆ. ತಮ್ಮ ತಂದೆಯ ಜೊತೆ ಬಾಲ್ಯದಲ್ಲಿ ಕ್ಲಿಕ್ ಮಾಡಿಕೊಂಡಿರುವ ಫೋಟೋದ ಔಟ್ ಲೈನ್ ನ ತಮ್ಮ ಬೆನ್ನ ಹಿಂದೆ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಟ್ಯಾಟೂ ತುಂಬಾ ಸರಳವಾಗಿದ್ದರು, ಅದ್ಭುತವಾಗಿದೆ ಎಂದು ಫಾಲೋವರ್ಸ್ ಕಾಮೆಂಟ್ ಮಾಡಿದ್ದಾರೆ. ಇತ್ತೀಚೆಗೆ ಹೊಸ ಮನೆ ಗೃಹ ಪ್ರವೇಶ ಮಾಡಿದ್ದ ಅನುಪಮಾ ಗೌಡ ಸುದ್ದಿಯಲ್ಲಿದ್ದರು. ಈ ಮನೆಗೆ ನಮ್ಮನೆ ಎಂದು ಹೆಸರಿಟ್ಟಿದ್ದಾರೆ. ಗೃಹ ಪ್ರವೇಶ ದಿನ ತಂದೆ ಇಲ್ಲ ಎನ್ನುವುದು ಮನಸಿಗ ಬರಬಾರದು ಅಂತ ಟ್ಯಾಟೋ ಹಾಕಿಸಿಕೊಂಡಿದ್ದಾರೆ ಅಂತ ನೆಟ್ಟಿಗರು…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಪಂಚಾಂಗದ ಪ್ರಕಾರ, ದೀಪಾವಳಿಯನ್ನು ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಅವಧಿಯಲ್ಲಿ ಸುಮಾರು 500 ವರ್ಷಗಳ ನಂತರ, ಶನಿಯು ತನ್ನ ಮೂಲ ತ್ರಿಕೋನ ಚಿಹ್ನೆಯಾದ ಕುಂಭದಲ್ಲಿ ಹಿಮ್ಮೆಟ್ಟುತ್ತಾನೆ. ಅಲ್ಲದೆ, ಈ…
ಸರಗೂರು: ಕರ್ನಾಟಕ ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಚಾರದ ಕೊರತೆಯಿಂದಾಗಿ ಬೆರೆಣಿಕೆಯಷ್ಟು ಮಂದಿ ಸಾರ್ವಜನಿಕರು ಮಾತ್ರ ಭಾಗಿಯಾಗಿದ್ದರು. ಇದರಿಂದಾಗಿ ವಿವಿಧ ಇಲಾಖೆಗಳಿಗೆ ಕೇವಲ 29 ಅರ್ಜಿಗಳು ಮಾತ್ರ ಸಲ್ಲಿಕೆಯಾದವು. ಹೀಗಾಗಿ ಬೇಸರಗೊಂಡ ಸಾರ್ವಜನಿಕರು ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದ ಶುರುವಿನಲ್ಲಿ ಕೇವಲ 8–10 ಮಂದಿ ಸಾರ್ವಜನಿಕರು ಮಾತ್ರ ಬಂದಿದ್ದರು. ಇನ್ನುಳಿದಂತೆ ಅಧಿಕಾರಿಗಳೇ ಹೆಚ್ಚು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಾಕಲಾದ ಕುರ್ಚಿಗಳು ಖಾಲಿಯಾಗಿದ್ದವು. ಬೆಳಗ್ಗೆ 11ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ಗಲಾಟೆ, ಗದ್ದಲದ ನಡುವೆಯೇ ಮುಕ್ತಾಯವಾಯಿತು. ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರಿಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಸಾರ್ವಜನಿಕರು ಕುಂದು ಕೊರತೆಗಳ ಸಭೆ ಮಾಡಬೇಕಾದ ತಾಲೂಕು ಆಡಳಿತ ಅಧಿಕಾರಿಗಳ ಸಭೆ ನಡೆಸುತ್ತಿದೆ ಎಂದು ಆರೋಪಿಸಿದ ಸಂಘ…
ಪಾವಗಡ: ತಾಲೂಕಿನ ಜೆಡಿಎಸ್ ಪಕ್ಷದ ನಾಯಕರು, ಪಿ ಎಲ್ ಡಿ ಬ್ಯಾಂಕ್ ಮತ್ತು ಎಪಿಎಂಸಿ ಮಾಜಿ ಅಧ್ಯಕ್ಷರು ಕರ್ನಾಟಕ ಮಾರ್ಕೆಟಿಂಗ್ ಫೆಡರೇಶನ್ ಮಾಜಿ ನಿರ್ದೇಶಕರು ಲಿಂಗದಹಳ್ಳಿ ಎಲ್.ಎಸ್.ನರಸರೆಡ್ಡಿ ಅವರು ಇಂದು ದೈವಾಧೀನರಾಗಿದ್ದಾರೆ. 75 ವರ್ಷದ ಹಿರಿಯ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾದ ಇವರು, ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ್ದು, ಅಪಾರ ಬಂಧು–ಬಳಗ ಆತ್ಮೀಯ ಮತ್ತು ರಾಜಕೀಯ ಅಭಿಮಾನಿಗಳನ್ನು ಅಗಲಿದ್ದಾರೆ. ಪ್ರಗತಿಪರ ರೈತರದ ಇವರ ಪಾರ್ಥಿವ ಶರೀರವು ದಿನಾಂಕ 17.10.2024ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಲಿಂಗದಹಳ್ಳಿ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಅಂತ್ಯಕ್ರಿಯೆ ನಡೆಯಲಿದೆ ತಾಲೂಕಿನ ಎಲ್ಲಾ ರಾಜಕೀಯ ಪಕ್ಷಗಳ ಅನೇಕ ಗಣ್ಯರು ಇವರ ಅಂತಿಮ ದರ್ಶನ ಪಡೆದಿದ್ದಾರೆ. ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಆರ್.ಸಿ.ಅಂಜನಪ್ಪ ರಾಜ್ಯ ಜೆಡಿಎಸ್ ಪಾರ್ಲಿಮೆಂಟರಿ ಸದಸ್ಯರಾದ ಎನ್. ತಿಮ್ಮರೆಡ್ಡಿ ಮಾಜಿ ಶಾಸಕರಾದ ಕೆ.ಎಂ. ತಿಮ್ಮರಾಯಪ್ಪ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಎನ್.ಎ.ಈರಣ್ಣ ಮಹಾ ಪ್ರಧಾನ ಕಾರ್ಯದರ್ಶಿ ಮತ್ತು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಸೊಗಡು ವೆಂಕಟೇಶ್ ಬಲರಾಮರೆಡ್ಡಿ, ಎಸ್ ಕೆ…