Subscribe to Updates
Get the latest creative news from FooBar about art, design and business.
- ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್?
- ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್ ಆರ್ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
- ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
- ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್ ನಲ್ಲಿ ಬಂಡಾಯದ ಕಾವು
- ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್ ಲೈನ್ ಅರ್ಜಿ
- ಗ್ಯಾಸ್ ಸಿಲಿಂಡರ್ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್ ವಶ | ನಾಲ್ವರು ಆರೋಪಿಗಳ ಬಂಧನ
- 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
- ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
Author: admin
ಮಧುಗಿರಿ: 2024–25 ನೇ ಸಾಲಿನ ವಿಜ್ಞಾನ ಪ್ರಶ್ನೆ ಪತ್ರಿಕೆ ಸರಳವಾಗಿ ಮೂಡಿ ಬರಲು ಮತ್ತು ಪ್ರಶ್ನೆಪತ್ರಿಕೆಯ ವಿನ್ಯಾಸ ಬದಲಾವಣೆಗಾಗಿ KSEAB ಮಂಡಳಿಗೆ ಕಳುಹಿಸಿ ಕೊಡುವಂತೆ ಮಧುಗಿರಿಯ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಮನವಿ ಪತ್ರ ನೀಡಲಾಯಿತು. ಅದೇ ಸಮಯದಲ್ಲಿ ಅಲ್ಲಿಯೇ ಹಾಜರಿದ್ದ ಡಯಟ್ ನ ಪ್ರಾಂಶುಪಾಲರಿಗೂ ಮನವಿ ಪತ್ರ ದ ಇನ್ನೊಂದು ಪ್ರತಿ ನೀಡಲಾಯಿತು ಉಪನಿರ್ದೇಶಕರಿಗೆ ಜಿಲ್ಲಾ ಪ್ರೌಢಶಾಲಾ ವಿಜ್ಞಾನ ಶಿಕ್ಷಕರ ವೇದಿಕೆಯ ಅಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಉಪಾಧ್ಯಕ್ಷರು ಅರುಣ್ ಕುಮಾರ್, ಕಾರ್ಯದರ್ಶಿ ನಾಗೇಂದ್ರ ಬಾಬು, ಲಕ್ಷ್ಮಣ್ ಮತ್ತು ಇತರೆ ಶಿಕ್ಷಕರ ನಿಯೋಗ ಮನವಿ ನೀಡಿತು. ವರದಿ: ನಂದೀಶ್, ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದು ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 69ರ ಶಿರಾ, ಮಧುಗಿರಿ, ಭೈರನಹಳ್ಳಿ ವಿಭಾಗದ 52 ಕಿಮೀ. ಚತುಷ್ಪಥ ರಸ್ತೆ ಅಭಿವೃದ್ಧಿಗೆ 2024–25ರ ಆಯವ್ಯಯದಲ್ಲಿ 1,000 ಕೋಟಿ ರೂ. ಮೀಸಲಿಟ್ಟಿದ್ದು, ಈ ರಸ್ತೆ ಕಾಮಗಾರಿ ಅನುಮೋದನೆಗೆ ಸಹಕರಿಸಿದ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಮತ್ತು ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ತುಮಕೂರು-ಶಿವಮೊಗ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು ನಗರ ಹಾಗೂ ಮಲ್ಲಸಂದ್ರ ಭಾಗದಲ್ಲಿ ಬೈಪಾಸ್ ನಿರ್ಮಾಣ ಮಾಡುವುದರಿಂದ ಸಾರಿಗೆ ದಟ್ಟಣೆ ಹಾಗೂ ಅಪಘಾತಗಳು ಕಡಿಮೆ ಮಾಡಬಹುದಾಗಿದೆ. ಜಿಲ್ಲೆಯು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು ಜಿಲ್ಲೆಯ ಹೆದ್ದಾರಿಗಳ ಅಭಿವೃದ್ಧಿ ಅನಿವಾರ್ಯವಾಗಿದೆ ಎಂದು ಕೇಂದ್ರ ಮಂತ್ರಿಗಳಿಗೆ ತಿಳಿಸಿದರಲ್ಲದೆ. ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು…
ಹೆಚ್.ಡಿ.ಕೋಟೆ: ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ರವರ ಏಳು ಜನರ ಸಮಿತಿಯ ಆದೇಶದ ಮೇರೆಗೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ತಾಲೂಕು ಪತ್ರಕರ್ತರ ಸಂಘದ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಮಾಡಬೇಕು. ಬ್ಯಾಕ್ ಲಾಗ್ ಹುದ್ದೆಗಳನ್ನು ತಡೆಹಿಡಿಯಬೇಕು ಇಲ್ಲವಾದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಒಳ ಮೀಸಲಾತಿ ಜಾರಿ ಮಾಡಿ ನಂತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಸಮುದಾಯ ಮುಖಂಡ ಶಿವಯ್ಯ ಮಾತನಾಡಿ, ರಾಜ್ಯದಲ್ಲಿ ಬಹುಸಂಖ್ಯಾತ ಜನ ಮಾದಿಗ ಸಮುದಾಯ. ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿ ಮಾಡಿ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ರಾಜ್ಯ ಸರ್ಕಾರ ಯಥಾವತ್ತಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಬೂದನೂರು ವೆಂಕಟೇಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ಸ್…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಪೂರ್ವ(10+2), ಸ್ನಾತಕ ಪದವಿ(10+2+3) ವಿದ್ಯಾರ್ಹತೆ ಹೊಂದಿರುವವರು ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ.(ಜನರಲ್ ಅಂಡ್ ಐಟಿ), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: 0816- 2955580, 9844506629, 9886112434, 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಆರ್.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಕೋಳಿ ಸಾಕಾಣಿಕೆ ಕುರಿತು ಅಕ್ಟೋಬರ್ 18 ಮತ್ತು 19ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816-2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತದ ವತಿಯಿಂದ 2024–25ನೇ ಸಾಲಿನ ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹನೀಯರಿಗೆ “ತುಮಕೂರು ಜಿಲ್ಲಾ ಕನ್ನಡ ರಾಜ್ಯೋತ್ಸವ ಗೌರವ ಸನ್ಮಾನ” ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಅರ್ಜಿಯನ್ನು ಸ್ವವಿವರಗಳೊಂದಿಗೆ ಅಕ್ಟೋಬರ್ 24ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹತ್ತಿರ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2275204ನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ನಗರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಸಮಿತಿ ಗಮನಕ್ಕೆ ತರಬಹುದಾದ ಎಸ್ ಸಿಪಿ/ಟಿಎಸ್ ಪಿ ಯೋಜನೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಅಕ್ಟೋಬರ್ 18ರೊಳಗಾಗಿ ಜಿಲ್ಲಾಧಿಕಾರಿಗಳ ಅಥವಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಅವಕಾಶವಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ಸಮಿತಿ ಭೇಟಿ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 19ರಂದು ಮಧ್ಯಾಹ್ನ 2:30 ಗಂಟೆಗೆ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದ್ದು, ಸಮಿತಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಅಹವಾಲುಗಳನ್ನು ಸಲ್ಲಿಸಲಿಚ್ಛಿಸುವವರು…
ತುಮಕೂರು: ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ(NIELIT), ನ್ಯಾಷನಲ್ ಕೆರಿಯರ್ ಸರ್ವಿಸ್(NCS), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಯೋಗದಲ್ಲಿ ಬೆಂಗಳೂರಿನ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಅಕ್ಟೋಬರ್ 20ರಂದು ಉದ್ಯೋಗಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆಂಪಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಜಾಲತಾಣ: https://jobfair.calicut.nielit.in ಮೂಲಕ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲೆಟಿನ್ ಸ್ಪೋಟದಿಂದ ನಗರದ ಗಂಗಾ ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲೆಯ ಗುಬ್ಬಿ ತಾಲ್ಲೂಕು ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದ ಸರ್ಕಾರಿ ಹಿರಿಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೋಮವಾರ ಸಂಜೆ ಭೇಟಿ ಮಾಡಿ ಧೈರ್ಯ ತುಂಬಿದರು. ಶಾಲೆಯಲ್ಲಿ ದಸರಾ ರಜೆ ಹಿನ್ನೆಲೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಯುತ್ತಿದ್ದು, ಅಕ್ಟೋಬರ್ 9ರಂದು ವಿಶೇಷ ತರಗತಿಗೆಂದು ತೆರಳಿದ್ದ ಮೋನಿಶ್ ಗೌಡ ಅವರು ಶಾಲೆ ಸಮೀಪ ಕಲ್ಲಿನ ರಾಶಿ ಬಳಿಯಿದ್ದ ಜಿಲೆಟಿನ್ ಕಡ್ಡಿಯನ್ನು ಕುತೂಹಲದಿಂದ ತೆಗೆದುಕೊಂಡ ವೇಳೆ ಸ್ಫೋಟ ಸಂಭವಿಸಿದ್ದು, ಸ್ಪೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಗರದ ಗಂಗಾ ಆಸ್ಪತ್ರೆಗೆ ತೆರಳಿ ವಿದ್ಯಾರ್ಥಿ ಮತ್ತು ಆತನ ತಾಯಿ ನಳಿನ ಅವರಿಗೆ ಸಾಂತ್ವನ ಹೇಳಿದ ಜಿಲ್ಲಾಧಿಕಾರಿಗಳು ಚೆನ್ನಾಗಿ ಓದಿ ಉತ್ತಮ ಅಧಿಕಾರಿಯಾಗುವಂತೆ ವಿದ್ಯಾರ್ಥಿಗೆ ಕಿವಿ ಮಾತು ಹೇಳಿದರು. ವಿದ್ಯಾರ್ಥಿಯ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ…
ತುಮಕೂರು: ಜಿಲ್ಲಾಡಳಿತದ ವತಿಯಿಂದ ದಸರಾ ಮಾದರಿಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ಆಚರಿಸಲಾದ ದಸರಾ ಉತ್ಸವದ ಮಾದರಿಯಲ್ಲೇ ಕನ್ನಡ ರಾಜ್ಯೋತ್ಸವವನ್ನೂ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯೋತ್ಸವ ದಿನದಂದು ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿಯ ಪ್ರತಿಮೆಯನ್ನು ಅಲಂಕೃತ ಬೆಳ್ಳಿರಥದಲ್ಲಿರಿಸಿ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಗಳ ಸ್ತಬ್ಧಚಿತ್ರದೊಂದಿಗೆ ಮೆರವಣಿಗೆ ಏರ್ಪಡಿಸಬೇಕು. ಮೆರವಣಿಗೆಯಲ್ಲಿ ಸರ್ಕಾರದ 5 ಗ್ಯಾರಂಟಿಗಳ ಜೊತೆಗೆ ಜಿಲ್ಲಾ ಪಂಚಾಯತ್, ಕೃಷಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಆಹಾರ, ಮೀನುಗಾರಿಕೆ, ತೋಟಗಾರಿಕೆ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಪಶುವೈದ್ಯಕೀಯ, ರೇಷ್ಮೆ ಇಲಾಖೆಗಳ ಪ್ರಸ್ತುತ ಯೋಜನೆಗಳು ಮತ್ತು ಸಾಧನೆಗಳ ಮಾಹಿತಿಯುಳ್ಳ ಉತ್ತಮ ಸ್ತಬ್ಧಚಿತ್ರಗಳನ್ನು ಸೃಜನಾತ್ಮಕವಾಗಿ ರೂಪಿಸಬೇಕು ಎಂದು…