Author: admin

ಚಿಕ್ಕನಾಯಕನಹಳ್ಳಿ: ಭಾರತದ ಸಮಗ್ರ ನೇತ್ರ ಚಿಕಿತ್ಸಾ ಸೇವೆಗಳ ಪೂರೈಕೆದಾರರಲ್ಲಿ ಒಂದಾಗಿರುವ ಡಾ.ಅಗರ್ವಾಲ್ಸ್ ಗ್ರೂಪ್ ಆಫ್ ಐ ಹಾಸ್ಪಿಟಲ್ಸ್, ಗುರುವಾರ ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ತನ್ನ ಪ್ರಾಥಮಿಕ ನೇತ್ರ ಚಿಕಿತ್ಸಾ ಕೇಂದ್ರವಾದ ಡಾ.ಅಗರವಾಲ್ ನೇತ್ರ ಚಿಕಿತ್ಸಾಲಯ ಉದ್ಘಾಟನೆಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕನಾಯಕನಹಳ್ಳಿ ಜನಪ್ರಿಯ ಶಾಸಕ ಸಿ.ಬಿ ಸುರೇಶ್ ಬಾಬು, “ಈ ಹೊಸ ಚಿಕಿತ್ಸಾಲಯವನ್ನು ಉದ್ಘಾಟಿಸಲು ನನಗೆ ಗೌರವವಿದೆ. ಈ ರೀತಿಯ ಸೌಲಭ್ಯಗಳು ಚಿಕ್ಕನಾಯಕನಹಳ್ಳಿಯ ಜನತೆಯ ಆರೋಗ್ಯ ಹೆಚ್ಚಿಸುತ್ತವೆ, ಜನರು ತಮ್ಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತಾರೆ. ಜೀವನದ ಪ್ರತಿಯೊಂದು ಹಂತದಲ್ಲೂ ಕಣ್ಣಿನ ಆರೋಗ್ಯವು ನಿರ್ಣಾಯಕವಾಗಿದೆ ಮತ್ತು ಉತ್ತಮ ದೃಷ್ಟಿಯನ್ನು ಕಾಪಾಡಿಕೊಳ್ಳಲು ನಿಯಮಿತ ತಪಾಸಣೆ ಅತ್ಯಗತ್ಯ ಎಂದರು. ಚಿಕ್ಕನಾಯಕನಹಳ್ಳಿಯ ಡಾ.ಅಗರ್ವಾಲ್ಸ್ ಐ ಕ್ಲಿನಿಕ್ ಸಮಗ್ರ ಕಣ್ಣಿನ ಆರೋಗ್ಯ ಸೇವೆಗಳನ್ನು ನೀಡುತ್ತದೆ, ಇದರಲ್ಲಿ ನಿಖರವಾದ ಕಣ್ಣಿನ ಒತ್ತಡ ಮಾಪನ, ವಕ್ರೀಭವನ ಪರೀಕ್ಷೆ, ದೃಷ್ಟಿ ತೀಕ್ಷ್ಣತೆ ತಪಾಸಣೆ ಮತ್ತು ಆರಂಭಿಕ ಕಣ್ಣಿನ ಪೊರೆ ಪತ್ತೆ ಸೇರಿವೆ. ಆಯ್ದ ಫ್ರೇಮ್‌ಗಳಲ್ಲಿ ಸಾರ್ವಜನಿಕ ಮತ್ತು ವಿಶೇಷ…

Read More

ತುಮಕೂರು: ಪ್ರೀತಿ, ಪ್ರೇಮದ ಹೆಸರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ (FTSC POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷದ 30 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಹರೀಶ್(31) ಎಂಬಾತ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ. ಈತ ನೊಂದ ಬಾಲಕಿಯ ಸಂಬಂಧಿಯಾಗಿದ್ದಾನೆ. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಕೂಡ 14 ವರ್ಷದ ಬಾಲಕಿಯನ್ನು ಪ್ರೀತಿ, ಪ್ರೇಮ ಎಂದು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳಂಬೆಳ್ಳ ಪೊಲೀಸ್ ಠಾಣಾ ಅಧಿಕಾರಿ ರವಿಕುಮಾರ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಈ ಪ್ರಕರಣವನ್ನು ಕೋರ್ಟ್ ವಿಚಾರಣೆ ನಡೆಸಿದ ವೇಳೆ, ಪತ್ನಿ ಇದ್ದು ಇಬ್ಬರು ಮಕ್ಕಳಿರುವ ಅಪರಾಧಿ ಬಾಲಕಿಗೆ ಸಂಬಂಧಿಯಾಗಿರುವ ಹಿನ್ನೆಲೆ ರಾಜಿ ಪಂಚಾತಿಕೆ ಮಾಡಿಸಿಕೊಂಡು ನೊಂದ ಬಾಲಕಿಯನ್ನು ಅಪರಾಧಿಗೆ ಎರಡನೇ ಮದುವೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ವಿಚಾರಣೆ ನಡೆಸಲಾದ ಸಾಕ್ಷಿಯಿಂದ ಆರೋಪಿಯ ಅಪರಾಧ ಸಾಬೀತಾದ ಹಿನ್ನೆಲೆ ಅಪರಾಧಿಗೆ…

Read More

ಬೆಂಗಳೂರು: ಕೌಟುಂಬಿಕ ಕಲಹಕ್ಕೆ ಇಡೀ ಕುಟುಂಬವೇ ಅಂತ್ಯ ಕಂಡ ಘಟನೆಯೊಂದು ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿ ಇಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಇದನ್ನು ಕಂಡು ಪತಿ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ  ನಡೆದಿದೆ. ಕಲಬುರಗಿ ಮೂಲದ ಅವಿನಾಶ್(38), ಪತ್ನಿ ಮಮತಾ(30), ಮಕ್ಕಳಾದ ಅಧಿರಾ(5) ಮತ್ತು ಅಣ್ಣಯ್ಯ(3) ಮೃತಪಟ್ಟವರು. ಮೊದಲು ತನ್ನಿಬ್ಬರು ಮಕ್ಕಳಿಗೆ ಮಮತಾ ವಿಷವುಣಿಸಿ ಸಾಯಿಸಿ ನಂತರ ನೇಣು ಹಾಕಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಹೊರಗೆ ಹೋಗಿದ್ದ ಅವಿನಾಶ್ ಮನೆಗೆ ಬಂದಾಗ ನೇಣು ಹಾಕಿಕೊಂಡಿದ್ದ ಪತ್ನಿಯನ್ನು ಕೆಳಗಿಳಿಸಿ ನೋಡಿದಾಗ ಪತ್ನಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವುದು ಕಂಡುಬಂದಿದೆ. ನಂತರ ನೋವು ತಾಳಲಾರದೆ ಆತನೂ ಕೂಡ ನೇಣು ಹಾಕಿಕೊಂಡಿದ್ದಾರೆ. ಅವಿನಾಶ್ ಮತ್ತು ಮಮತಾ ಅವರು ಮದುವೆಯಾದ ನಂತರ ಬೆಂಗಳೂರಿಗೆ ಬಂದು ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಕಾರು ಖರೀದಿಸಿ ಅವಿನಾಶ್ ಟ್ಯಾಕ್ಸಿ ಚಾಲಕ ವೃತ್ತಿ ಮಾಡುತ್ತಿದ್ದರು. ಪತ್ನಿ ಮಮತಾ ಅವರು ತನ್ನಿಬ್ಬರು ಮಕ್ಕಳನ್ನು…

Read More

ಥಾಣೆ: ಮೊಬೈಲ್ ನೋಡಿದ್ದಕ್ಕೆ ತಾಯಿ ನಿಂದಿಸಿದರು ಎಂದು ನೊಂದು 15 ವರ್ಷ ಬಾಲಕಿ ಸಾವಿಗೆ ಶರಣಾದ ಘಟನೆ ಅಂಬರ್ನಾಥ್ ಪ್ರದೇಶದಲ್ಲಿ ನಡೆದಿದೆ. ಅಂಬರ್ನಾಥ್ ಪ್ರದೇಶದ ನಿವಾಸಿಯಾಗಿರುವ 15 ವರ್ಷದ ಬಾಲಕಿ ಮೃತಪಟ್ಟ ಬಾಲಕಿಯಾಗಿದ್ದಾಳೆ.  ಬಾಲಕಿ ಇಲಿ ಪಾಷಾಣ ಸೇವಿಸಿರುವುದು ತಿಳಿದ ನಂತರ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ. ಅಮ್ಮ ಹೇಳಿದ ಬುದ್ಧಿ ಮಾತು ಬಾಲಕಿಗೆ ಬೇಸರವನ್ನುಂಟು ಮಾಡಿತ್ತು ಎನ್ನಲಾಗಿದೆ. ಇದರಿಂದ ನೊಂದು ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ಅಂಬರನಾಥ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೈದ್ಯಕೀಯ ವರದಿ ಆಧರಿಸಿ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿ ಮುಂದಿನ ತನಿಖೆಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬಾಲಿವುಡ್ನ ಖ್ಯಾತ ನಟಿ ಪೂಜಾ ಹೆಗ್ಡೆ ತಮ್ಮ ಸುಂದರವಾದ ಫೋಟೋಗಳನ್ನು ಶೇರ್ ಮಾಡಿದ್ದಾರೆ. ಶ್ರೀಲಂಕಾದಲ್ಲಿ ಪೂಜಾ ಹೆಗ್ಡೆ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ತಮ್ಮ ಬರ್ತ್ಡೇ ಭಾಗವಾಗಿ ದ್ವೀಪರಾಷ್ಟ್ರಕ್ಕೆ ಪ್ರವಾಸ ಹೋದಂತೆ ಕಾಣಿಸುತ್ತಿದೆ. ನಟಿ ಅಲ್ಲಿಯೇ ಬರ್ತ್ಡೇ ಆಚರಿಸಿಕೊಂಡಿದ್ದು ಚಂದದ ಫೋಟೋಗಳನ್ನು ಇನ್ ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ. ನಟಿ ಬಿಳಿ ಹಾಗೂ ಕೆಂಪು ಬಣ್ಣದ ಕಾಂಬಿನೇಷನ್ ಇರುವಂತಹ ಫ್ರಾಕ್ಟ್ ಧರಿಸಿದ್ದು ಆಕರ್ಷಕವಾದ ಸ್ಥಳದಲ್ಲಿ ಪೂಲ್ ಸೈಡ್ ಕುಳಿತು ಪೋಸ್ ಕೊಟ್ಟಿದ್ದಾರೆ. ನಟಿ ಬೋಲ್ಡ್ & ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪೂಜಾ ಹೆಗ್ಡೆ ಅವರಿಗೆ ಅಂಥಹ ದೊಡ್ಡ ಅವಕಾಶಗಳು ಬರುತ್ತಿರಲಿಲ್ಲ. ನಟಿ ತೆಲುಗಿನಲ್ಲಿ ಸಿನಿಮಾ ಅವಕಾಶ ಕಳೆದುಕೊಂಡಿದ್ದಾರೆ. ಪೂಜಾ ಹೆಗ್ಡೆ ಬಾಲಿವುಡ್ ನಲ್ಲಿ ನಟಿಸಿದ್ದರೂ ಕೂಡಾ ಅಲ್ಲಿಯೂ ಅದೃಷ್ಟ ಕೈಗೂಡಲಿಲ್ಲ. ಇನ್ನು ತೆಲುಗು ಚಿತ್ರರಂಗದಲ್ಲಿ ಒಂದೆರಡು ಸಿನಿಮಾ ಫ್ಲಾಪ್ ಆದರೆ ನಟಿಯರನ್ನು ಮತ್ತೆ ಕೇಳೋರೆ ಇಲ್ಲ ಎಂಬಂತಹ ಪರಿಸ್ಥಿತಿಯಿದೆ. ಸದ್ಯ ಪೂಜಾಗೆ ಟಾಲಿವುಡ್ ಬಾಗಿಲು ಮುಚ್ಚಿದೆ. ಆದರೆ ನಟಿಗೆ ಬಂಪರ್ ಅವಕಾಶ ಬಂದಿದ್ದು…

Read More

ಗದಗ: ನಟ ದರ್ಶನ್ ಅಭಿಮಾನಿಗಳಿಂದ ಶ್ರವಣ ಶಕ್ತಿಯನ್ನೇ ಕಳೆದುಕೊಂಡೆ ಎಂದು ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಹೇಳಿಕೊಂಡಿದ್ದಾರೆ. ಗದಗನ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮಗಾದ ಭೀಕರ ಅನುಭವವನ್ನು ಹೇಳಿಕೊಂಡಿದ್ದಾರೆ. ಇಂದು ಪ್ರತಿನಿತ್ಯ ಮಾಧ್ಯಮಗಳಲ್ಲಿ ಪ್ರಚಲಿತದಲ್ಲಿರುವ ಪುಣ್ಯಾತ್ಮ ದರ್ಶನ್ ಜನ್ಮದಿನ ಸಂದರ್ಭ, ಈ ವೇಳೆ ಬೆಂಗಳೂರಿನ ನನ್ನ ನಿವಾಸದ ಪಕ್ಕ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದರು. ನಟ ದರ್ಶನ್ ಜನ್ಮದಿನ ಹಿನ್ನೆಲೆ ಭಾರೀ ಪ್ರಮಾಣದಲ್ಲಿ ಸಿಡಿಮದ್ದು ಹಾರಿಸಿದ್ದರು. ಆದರೆ ಭಾರೀ ಸಿಡಿಮದ್ದಿನಿಂದ ನಾನು ನನ್ನ ಶ್ರವಣ ಶಕ್ತಿ ಕಳೆದುಕೊಳ್ಳಬೇಕಾಯಿತು ಎಂದು ನಾಡೋಜ ಡಾ.ಗೊರೂರು ಚೆನ್ನಬಸಪ್ಪ ಬೇಸರ ಹೊರ ಹಾಕಿದ್ದಾರೆ. 97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ನಾನು ಮಾತನಾಡಬಲ್ಲೆ, ನಡೆದಾಡಬಲ್ಲೆ ಆದರೆ ತಾವೆಲ್ಲರೂ ಮಾತನಾಡುವ ಪದಗಳನ್ನ ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷ ಅನುಭವಿಸುತ್ತಿದ್ದೇನೆ ಎಂದು ಗೊರೂರು ಚೆನ್ನಬಸಪ್ಪ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬಿಗ್ ಬಾಸ್ ತೊರೆಯುವುದಾಗಿ ನಟ ಕಿಚ್ಚ ಸುದೀಪ್ ನಿನ್ನೆ ಟ್ವೀಟ್ ಮಾಡಿದ್ದರು. ಇದು ನನ್ನ ಕೊನೆಯ ಬಿಗ್ ಬಾಸ್ ಶೋ ಎಂದೂ ಹೇಳಿದ್ದರು. ಈ ನಡುವೆ ಕನ್ನಡಪರ ಹೋರಾಟಗಾರರು ಸುದೀಪ್ ಗೆ ಅವಮಾನಿಸಲಾಗಿದೆ ಎಂದು ಬಿಗ್ ಬಾಸ್ ಆಯೋಜಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕಿಚ್ಚ ಸುದೀಪ್ ಅವರ ಅಸಮಾಧಾನವನ್ನು ಸರಿಪಡಿಸಲು ಆಯೋಜಕರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ಟ್ವೀಟ್ ಮಾಡಿದ್ದ ಕಿಚ್ಚ ಸುದೀಪ್, ಬಿಗ್ಬಾಸ್ ಸೀಸನ್ 11ರ ಮೇಲೆ ನೀವು ತೋರಿದ ಸ್ಪಂದನೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ನೀವು ತೋರಿದ ಪ್ರೀತಿ ಮತ್ತು ಗೌರವ ಎಂಥದ್ದು ಎಂಬುದನ್ನು ಟಿಆರ್ಪಿ ನಂಬರ್ ಹೇಳುತ್ತಿದೆ. ಸುಮಾರು 11 ವರ್ಷಗಳ ಕಾಲ ಒಟ್ಟಿಗೆ ನಡೆದಿದ್ದೇನೆ. ಇನ್ನು ಮುಂದೆ ನಾನು ಮಾಡಬೇಕಾಗಿರುವುದನ್ನು ಮಾಡುವ ಸಮಯ ಬಂದಿದೆ. ಬಿಗ್ಬಾಸ್ ನಿರೂಪಕನಾಗಿ ಇದು ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ಈ ನಿರ್ಧಾರವನ್ನು ಕಲರ್ಸ್ ಕನ್ನಡ ಮತ್ತು ಈ ಎಲ್ಲಾ ವರ್ಷಗಳಿಂದ ಬಿಗ್ಬಾಸ್ ಶೋ ಅನುಸರಿಸಿದ…

Read More

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತು ಬಿಜೆಪಿಯ ಒಕ್ಕಲಿಗ ನಾಯಕರನ್ನು ವ್ಯವಸ್ಥಿತವಾಗಿ ಮುಗಿಸಲು ಹೊರಟ್ಟಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ಚನ್ನಪಟ್ಟಣ ವಿಧಾನ ಸಭಾ ಉಪ ಚುನಾವಣೆ ಹಿನ್ನೆಲೆ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ಆರಂಭಗೊಂಡಿದ್ದು, ಹೆಚ್ ಡಿಕೆ ಪುತ್ರ ಪ್ರೇಮ ಇದೀಗ ಮೈತ್ರಿ ನಾಯಕರಿಗೆ ಸಂಕಟ ತಂದಿಟ್ಟಿದೆ. ಈ ನಡುವೆ ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬಿಜೆಪಿಗೆ ಜೆಡಿಎಸ್ ಅನಿವಾರ್ಯವಲ್ಲ. ಆದರೆ, ಜೆಡಿಎಸ್‌ಗೆ ಬಿಜೆಪಿ ಆನಿವಾರ್ಯ ಎನ್ನುವುದನ್ನು ಮನಗಾಣಬೇಕು ಎಂದೂ ತೀಕ್ಷ್ಯವಾಗಿ ಯೋಗೇಶ್ವರ್ ಪ್ರತಿಕ್ರಿಯಿಸಿದ್ದಾರೆ. ನಾನು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಕುಮಾರಸ್ವಾಮಿ ನನಗೆ ಮೋಸ ಮಾಡಿದ ಮೇಲೆ ನಾನು ಸ್ಪರ್ಧಿಸಲೇಬೇಕು. ಬುಧವಾರ ಚನ್ನಪಟ್ಟಣದಲ್ಲಿ ಪಕ್ಷದ ಪ್ರಮುಖರ ಸಭೆ ಕರೆದಿದ್ದೇನೆ. ಅಲ್ಲಿ ನನ್ನ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ…

Read More

ತುಮಕೂರು: ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚಿಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಸಾರ್ವಜನಿಕರು ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಬಲ ಪಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬ ಮಾಡದೆ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದರು. ಜಿಲ್ಲೆಯು ಆಧಾರ್ ಸೀಡಿಂಗ್‌ನಲ್ಲಿ ಶೇಕಡಾ 85.9 ಗುರಿ ಸಾಧಿಸಿದ್ದು, ಬಾಕಿ ಇರುವ ಆಧಾರ್ ಸೀಡಿಂಗ್ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಬಗರ್ ಹುಕುಂ ಸಂಬಂಧಿಸಿದಂತೆ 496, ಸಕಾಲಕ್ಕೆ ಸಂಬಂಧಿಸಿದಂತೆ 281, ಪಿಂಚಣಿ 1284, ಆರ್ ಟಿಸಿ ತಿದ್ದುಪಡಿ 2932 ಅರ್ಜಿಗಳು ಬಾಕಿ ಇದ್ದು ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡುವಂತೆ ತಿಳಿಸಿದರು. ಸಾಗುವಳಿ ಮಾಡುತ್ತಿರುವ ದುರಸ್ತಿಯಾಗದ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಮಹಾನಗರ ಪಾಲಿಕೆ ವತಿಯಿಂದ ನಗರದ ಬಾಲ ಭವನದಲ್ಲಿ ಅಕ್ಟೋಬರ್ 17ರಂದು ಜಗದ ಕವಿ–ಯುಗದ ಕವಿ ಸರ್ವಧರ್ಮಕ್ಕೆ ಮಹಾನ್ ಗ್ರಂಥ ರಾಮಾಯಣ ರಚಿಸಿದ ವಿಶ್ವಕವಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು ತಿಳಿಸಿದ್ದಾರೆ. ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಉದ್ಘಾಟಿಸಲಿದ್ದು, ನಗರ ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಆಗಮಿಸಲಿದ್ದು, ಸಮುದಾಯದ ಮುಖಂಡರು, ವಿವಿಧ ಸಂಘಟನೆ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮಹರ್ಷಿ ವಾಲ್ಮೀಕಿ…

Read More