Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸಂದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮುಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ…
ತುಮಕೂರು: ಜಿಲ್ಲಾ ಸವಿತಾ ಸಮಾಜ ಯುವಪಡೆ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ವಿದ್ಯಾರ್ಥಿಗಳಿಗೆ 2025–26ನೇ ಸಾಲಿನಲ್ಲಿ ಶೇ. 80% ಕ್ಕಿಂತ ಅಧಿಕ ಶ್ರೇಣಿಯಲ್ಲಿ ಉತ್ತೀರ್ಣರಾದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಫೋಟೋ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಜಿಲ್ಲೆಯ ಆಯಾ ತಾಲ್ಲೂಕಿನವರುಗಳಾದ ತುಮಕೂರು ನಗರ ಶ್ರೀಧರ್ ಮೊ. 8660933076, ತುಮಕೂರು ತಾ.ಹರೀಶ್ ಹೆಚ್.ಜಿ. ಮೊ. 9964089979, ಗುಬ್ಬಿ ಕಾರ್ತಿಕ್ ಜಿ.ಡಿ. ಮೊ. 9986355045, ತಿಪಟೂರು ವರದರಾಜು (ಡೈನಾಮಿಕ್) ಮೊ. 9743061676, ಚಿ.ನಾ.ಹಳ್ಳಿ ಪ್ರವೀಣ್ ಸಿ ಮೊ. 8951293964, ಪಾವಗಡ ನೀಲಕಂಠ ಮೊ. 9743942255, ತುರುವೇಕೆರೆ ಲೋಕೇಶ್ ಆರ್ ಮೊ. 9113288994, ಕೊರಟಗೆರೆ ಉಮೇಶ್ ಬಿ ಮೊ. 9663660050, ಕುಣಿಗಲ್ ಹೇಮಂತ್ ಯು., ಮೊ. 7090318733, ಮಧುಗಿರಿ ಪ್ರದೀಪ್ ಮೊ. 9902849448 ಇವರುಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಗಳನ್ನು ಆಗಸ್ಟ್ 11ರ (ಮಂಗಳವಾರ) ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಸವಿತಾ ಸಮಾಜ ಯುವಪಡೆಯ ಅಧ್ಯಕ್ಷ ಕಟ್‌ವೆಲ್ ರಂಗನಾಥ್…
ಹಾಸನ: ರಾಜಕೀಯದ ಮಹಾ ಚದುರಂಗದಾಟದಲ್ಲಿ ಗೆದ್ದು ಬೀಗುವ ನಾಯಕರ ಯಶಸ್ಸಿನ ಹಿಂದೆ, ಪ್ರಚಾರದ ಬೆಳಕಿನಿಂದ ದೂರ ಸರಿದು ನಿಲ್ಲುವ ಕೆಲವು ಮಹಾನ್ ಚೇತನಗಳಿರುತ್ತವೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 72 ವರ್ಷಗಳ ಸುದೀರ್ಘ ರಾಜಕೀಯ ಮತ್ತು ವೈಯಕ್ತಿಕ ಪಯಣದಲ್ಲಿ ಅಂತಹ ಮೌನ ಶಕ್ತಿಯಾಗಿ ನಿಂತವರು ಅವರ ಧರ್ಮಪತ್ನಿ ಚೆನ್ನಮ್ಮ. ಚೆನ್ನಮ್ಮ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದು, ಇದರೊಂದಿಗೆ ಗೌಡರ ದಂಪತಿಯ 7 ದಶಕಗಳಿಗೂ ಹೆಚ್ಚಿನ ಸುಧೀರ್ಘ ದಾಂಪತ್ಯ ಜೀವನಕ್ಕೆ ತೆರೆ ಬಿದ್ದಿದೆ. ರಾಜಕೀಯ ವೇದಿಕೆಯಲ್ಲಿ ಎಂದಿಗೂ ಮುಂಚೂಣಿಯಲ್ಲಿ ಕಾಣಿಸಿಕೊಳ್ಳದ ಅವರು, ಕುಟುಂಬದ ಸಂಪೂರ್ಣ ಜವಾಬ್ದಾರಿ ಹೊತ್ತು, ಕಷ್ಟ-ಸುಖಗಳಲ್ಲಿ ದೇವೇಗೌಡರಿಗೆ ಅಚಲ ಬೆಂಬಲವಾಗಿ ನಿಂತಿದ್ದರು. ಬಾಲ್ಯ ಮತ್ತು ಮದುವೆ: 1937ರಲ್ಲಿ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮುತ್ತಿಗೆಹಿರೇಹಳ್ಳಿ ಗ್ರಾಮದಲ್ಲಿ ಜನಿಸಿದ ಚೆನ್ನಮ್ಮ, ಆ ಕಾಲದ ಶ್ರೀಮಂತ ಹಾಗೂ ದಾನಶೀಲ ಕುಟುಂಬದ ಪುತ್ರಿಯಾಗಿದ್ದರು. ಇವರ ತಾತ ಪಟೇಲ್ ಸುಬ್ಬೇಗೌಡ ಅವರು ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿದ್ದ ಸಮಾಜಸೇವಕರಾಗಿದ್ದರು. ಅಷ್ಟೇ ಅಲ್ಲದೆ, ಮುಂದಿನ ದಿನಗಳಲ್ಲಿ…
ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್-ಜಿ’ ಯೋಜನೆಯ ಸೌಲಭ್ಯಗಳನ್ನು ಅರ್ಹ ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಗ್ರಾಮೀಣ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಹಲವು ಮಹತ್ವದ ಮತ್ತು ಜನಸ್ನೇಹಿ ಬದಲಾವಣೆಗಳನ್ನು ಜಾರಿಗೆ ತಂದಿದೆ ಎಂದು ವಿವರಿಸಿದರು. ಯೋಜನೆಯಡಿ ಕಾರ್ಮಿಕರ ದಿನಗೂಲಿ ಮೊತ್ತವನ್ನು ರೂ. 370 ರಿಂದ ರೂ. 382 ಕ್ಕೆ ಹೆಚ್ಚಳ ಮಾಡಲಾಗಿದ್ದು, ವಾರ್ಷಿಕ ಉದ್ಯೋಗ ಖಾತರಿ ದಿನಗಳನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದೆ. ಇದರ ಪರಿಣಾಮವಾಗಿ ಗ್ರಾಮೀಣ್ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಒಂದು ಕುಟುಂಬವು ವರ್ಷಕ್ಕೆ ಗರಿಷ್ಠ ರೂ. 47,750 ರವರೆಗೆ ಆದಾಯ ಗಳಿಸಲು ಸುವರ್ಣ ಅವಕಾಶ ದೊರೆತಂತಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದೇ ವೇಳೆ ಕೃಷಿ ಚಟುವಟಿಕೆಗಳಿಗಾಗಿ 60 ದಿನಗಳ ವಿರಾಮದ ಅವಕಾಶವನ್ನು…
ಬೀದರ್: ಜಿಲ್ಲೆಯಲ್ಲಿ ಪ್ರಸ್ತುತ ತಲೆದೂರಿರುವ ಬರಗಾಲದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಜಾರಿಯಲ್ಲಿರುವ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆಯಡಿ ಸ್ಥಳೀಯ ಮಟ್ಟದಲ್ಲೇ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದ್ದು, ಆಸಕ್ತರು ತಮ್ಮ ಗ್ರಾಮ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಿ ಯೋಜನೆಯ ಸೌಲಭ್ಯವನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ. ಈ ಯೋಜನೆಯಡಿ ಕೇವಲ ಉದ್ಯೋಗ ನೀಡುವುದಷ್ಟೇ ಅಲ್ಲದೆ, ಗ್ರಾಮೀಣ ಭಾಗದಲ್ಲಿ ಶಾಶ್ವತ ಮತ್ತು ಬಾಳಿಕೆ ಬರುವ ಮೂಲಸೌಕರ್ಯಗಳ ನಿರ್ಮಾಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಫಲಾನುಭವಿಗಳು ತಮ್ಮ ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅನುಮೋದಿತ ಕಾಮಗಾರಿಗಳಲ್ಲಿ ಈಗಾಗಲೇ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ. ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ವೈಯಕ್ತಿಕ ಕಾಮಗಾರಿಗಳಲ್ಲಿ…
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಒಂದು ಕಾಲದಲ್ಲಿ ಕೇವಲ ಒಲೆ ಉರಿಸುವ ಉರುವಲಿಗೆ ಅಥವಾ ಕಸವೆಂದು ಎಸೆಯಲ್ಪಡುತ್ತಿದ್ದ ಕೊಬ್ಬರಿ ಚಿಪ್ಪಿಗೆ (ಕರಟ) ಈಗ ಎಲ್ಲಿಲ್ಲದ ಬೇಡಿಕೆ ಬಂದಿದೆ. ಎಳನೀರು ಹಾಗೂ ತೆಂಗಿನಕಾಯಿ ದರ ಏರಿಕೆಯ ಬೆನ್ನಲ್ಲೇ ಕೊಬ್ಬರಿ ಚಿಪ್ಪಿನ ಬೆಲೆಯೂ ಗಗನಕ್ಕೇರಿದ್ದು, ಸಾವಿರ ಚಿಪ್ಪಿಗೆ ಬರೋಬ್ಬರಿ ₹4,500 ವರೆಗೆ ದರ ಸಿಗುವ ಮೂಲಕ ಕಲ್ಪತರು ನಾಡಿನ ರೈತರ ಕೈ ಹಿಡಿದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತೋವಿನಕೆರೆ ಹೋಬಳಿಯ ರೈತರೊಬ್ಬರು ತೆಂಗಿನಕಾಯಿ ಚಿಪ್ಪಿನಿಂದಲೇ ಬಂಪರ್ ಲಾಭ ಪಡೆದು ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಇದ್ದಕ್ಕಿದ್ದಂತೆ ಕರಟದ ಬೆಲೆ ದುಪ್ಪಟ್ಟಾಗಿರುವುದು ತೆಂಗು ಬೆಳೆಗಾರರಲ್ಲಿ ಹೊಸ ಭರವಸೆ ಮೂಡಿಸಿದೆ. ₹27 ಸಾವಿರಕ್ಕೆ ಮಾರಾಟವಾದ 6 ಸಾವಿರ ಚಿಪ್ಪು! ಜಿಲ್ಲೆಯ ರೈತರಾದ ಟಿ.ಎಸ್. ಲೋಕೇಶ್ ಅವರು ತಮ್ಮ ತೋಟದ 6 ಸಾವಿರ ಕೊಬ್ಬರಿ ಚಿಪ್ಪುಗಳನ್ನು ಬರೋಬ್ಬರಿ ₹27 ಸಾವಿರಕ್ಕೆ ಮಾರಾಟ ಮಾಡಿ ಭರ್ಜರಿ ಲಾಭ ಗಳಿಸಿದ್ದಾರೆ. ಜಿಲ್ಲೆಯ ಇತಿಹಾಸದಲ್ಲೇ ಇಷ್ಟು ಹೆಚ್ಚಿನ ದರಕ್ಕೆ ಕೊಬ್ಬರಿ ಚಿಪ್ಪು ಮಾರಾಟವಾಗಿರುವುದು…
ಮಧುಗಿರಿ: ಪ್ರತಿ ವ್ಯಕ್ತಿಯ ಬದುಕು ಉಜ್ವಲವಾಗಲು ಶಿಕ್ಷಣ ಅತ್ಯಂತ ಪ್ರಮುಖವಾದ ಅಸ್ತ್ರವಾಗಿದೆ ಎಂದು ಶಾಸಕ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ವತಿಯಿಂದ ಆಯೋಜಿಸಲಾಗಿದ್ದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಕನ್ನಡ ಭಾಷೆಯಲ್ಲಿ ಶೇ. 100 ರಷ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿದವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡ ವಿಷಯದಲ್ಲಿ ಶೇ. 100 ರಷ್ಟು ಅಂಕ ಗಳಿಸುವುದು ಸಾಮಾನ್ಯದ ಮಾತಲ್ಲ. ವಿದ್ಯಾರ್ಥಿಗಳು ಸ್ವಚ್ಛ ಹಾಗೂ ವ್ಯಾಕರಣಬದ್ಧವಾಗಿ ಕನ್ನಡ ಬರೆಯುವುದನ್ನು ಮತ್ತು ಮಾತನಾಡುವುದನ್ನು ಕಲಿಯಬೇಕು. ಶಿಕ್ಷಣದ ಜೊತೆಗೆ ಮೌಲ್ಯಯುತ ಜ್ಞಾನ ಹಾಗೂ ಗುರು-ಹಿರಿಯರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. “ವಿದ್ಯೆ ಯಾರಪ್ಪನ ಸ್ವತ್ತಲ್ಲ, ಅದು ಸಾಧಕರ ಸ್ವತ್ತು. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರು ದೇಶದ…
ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಇಂದಿನ ದುಬಾರಿ ದಿನಗಳಲ್ಲಿ ಹೋಟೆಲ್ ನಲ್ಲಿ ಒಂದು ಹೊತ್ತು ಹೊಟ್ಟೆತುಂಬಾ ಊಟ ಮಾಡಬೇಕಾದರೆ ಜೇಬಿನಲ್ಲಿ ನೂರಾರು ರೂಪಾಯಿ ಇರಬೇಕು. ಆದರೆ ಕೊರಟಗೆರೆ ಪಟ್ಟಣದಲ್ಲಿರುವ ಒಂದು ಹೋಟೆಲ್ ಮಾತ್ರ ಕಳೆದ 35–40 ವರ್ಷಗಳಿಂದ ಬಡವರ, ಮಧ್ಯಮ ವರ್ಗದವರ ಹಾಗೂ ವಿದ್ಯಾರ್ಥಿಗಳ ಹಸಿವನ್ನು ಅತ್ಯಂತ ಕಡಿಮೆ ಬೆಲೆಗೆ ನೀಗಿಸುತ್ತಾ ‘ಬಡವರ ಹೋಟೆಲ್’ ಎಂದೇ ಪ್ರಸಿದ್ಧಿ ಪಡೆದಿದೆ. ಅದೇ ಕೊರಟಗೆರೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಮುಖ್ಯರಸ್ತೆಯ ಪಕ್ಕದಲ್ಲಿರುವ ‘ಶ್ರೀ ದುರ್ಗಾಪರಮೇಶ್ವರಿ ಸಸ್ಯಹಾರಿ ಹೋಟೆಲ್’. ಇದನ್ನು ಸ್ಥಳೀಯರು ಪ್ರೀತಿಯಿಂದ ‘ದತ್ತು ಹೋಟೆಲ್’ ಎಂದೇ ಕರೆಯುತ್ತಾರೆ. ಕೊರಟಗೆರೆಯ ಜನರ ಮನಗೆದ್ದ ಕುಟುಂಬ: ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಈ ಕುಟುಂಬ ಕೊರಟಗೆರೆಗೆ ಬಂದು ಸುಮಾರು 35-40 ವರ್ಷಗಳಾಗಿವೆ. ಮೊದಲು ದತ್ತು ಅವರ ತಂದೆಯವರಾದ ನಾಗಭೂಷಣ್ ರವರು ಈ ಹೋಟೆಲ್ ನಡೆಸಿಕೊಂಡು ಹೋಗುತ್ತಿದ್ದರು. ತದನಂತರ ಅವರ ಮಗ ದತ್ತಾತ್ರೇಯ (ದತ್ತು) ರವರು ತಮ್ಮ ವಿದ್ಯಾಭ್ಯಾಸ ಮುಗಿದ ನಂತರ ತಂದೆಯ ಹಾದಿಯಲ್ಲೇ ಹೋಟೆಲ್ ಜವಾಬ್ದಾರಿಯನ್ನು ವಹಿಸಿಕೊಂಡು…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಸನಿವಾಸ ಪ್ರೌಢ ಶಾಲೆಯ ವಿದ್ಯಾರ್ಥಿ — ವಿದ್ಯಾರ್ಥಿನಿಯರಿಗೆ ನೇಗಲಾಲ ಗ್ರಾಮದ ಹಳೆ ವಿದ್ಯಾರ್ಥಿನಿಯಾದ ಧನಲಕ್ಷ್ಮಿ ಕೃಷ್ಣಮೂರ್ತಿ ರವರು ಸಮವಸ್ತ್ರ ವಿತರಣೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧನಲಕ್ಷ್ಮಿ ಕೃಷ್ಣಮೂರ್ತಿ ರವರು ಬಡ ವಿದ್ಯಾರ್ಥಿ — ವಿದ್ಯಾರ್ಥಿನಿಯರಿಗೆ ಅನುಕೂಲವಾಗಲೆಂದು ಸಮವಸ್ತ್ರ ವಿತರಣೆ ಮಾಡುತ್ತಿದ್ದೇವೆ, ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ಯಾವುದೇ ಕಾರಣಕ್ಕೂ ವಂಚಿತರಾಗಬಾರದು, ಶಾಲೆಯ ಅಭಿವೃದ್ಧಿಗೆ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಹೆಚ್ಚಿನದಾಗಿ ಸಹಕಾರ ಮಾಡುತ್ತೇವೆ ಎಂದರು. ನಂತರ ಧನಲಕ್ಷ್ಮಿ ಕೃಷ್ಣಮೂರ್ತಿ ಅವರಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಆರ್ ನಾಗರಾಜ್, ಸಹ ಶಿಕ್ಷಕರಾದ ಎನ್.ಪಿ. ಮಂಜುಳಾ, ಪಿ. ಮುದ್ದಮ್ಮ, ಎಸ್ ಡಿ ಎ ರಂಗನಾಥ್, ಗ್ರಾಮಸ್ಥರಾದ ರಮೇಶ್, ಪತ್ರಕರ್ತರಾದ ಮಂಜುಸ್ವಾಮಿ ಎಂ ಎನ್, ಸುರೇಶ್ ಎನ್ ಎಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರು ನಿವಾಸಿ ಶ್ರೀಕಾಂತ್ (28ವರ್ಷ) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಅವರು ತಮ್ಮ ಸ್ನೇಹಿತರ ತಂಡದೊಂದಿಗೆ ಜುಲೈ 17ರಂದು ಕೊಡಚಾದ್ರಿ ವೀಕ್ಷಣೆಗಾಗಿ ಆಗಮಿಸಿದ್ದರು. ಹೊಸನಗರ ತಾಲೂಕಿನ ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆ ಗ್ರಾಮದಲ್ಲಿರುವ ಸ್ನೇಹಿತರೊಬ್ಬರ ಮನೆಯಲ್ಲಿ ಇಡೀ ತಂಡ ತಂಗಿತ್ತು. ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರವನ್ನು ಏರಲು ಇವರೆಲ್ಲರೂ ಯೋಜಿಸಿದ್ದರು. ಆದರೆ, ಶುಕ್ರವಾರ ರಾತ್ರಿ ತಂಗಿದ್ದ ಮನೆಯಲ್ಲಿದ್ದಾಗಲೇ ಶ್ರೀಕಾಂತ್ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡು, ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಎಚ್ಚೆತ್ತ ಸ್ನೇಹಿತರು ಅವರನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಶ್ರೀಕಾಂತ್ ಅವರು ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಕುಟುಂಬಸ್ಥರು ಶಿವಮೊಗ್ಗಕ್ಕೆ ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆ ಸೇರಿದಂತೆ ಮುಂದಿನ…