Author: admin

ರಾಮನಗರ: ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯನ್ನು ಕೊನೆಗೂ ತೆರೆಯಲಾಗಿದ್ದು, ರಾತ್ರೋ ರಾತ್ರಿಯೇ ಸ್ಪರ್ಧಿಗಳೂ ಕೂಡ ವಾಪಸ್ ಆಗಿದ್ದಾರೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮದ ಉಲ್ಲಂಘನೆ ಮೇರೆಗೆ ಮುಚ್ಚಲ್ಪಟ್ಟಿದ್ದ ಬಿಗ್ ಬಾಸ್ ಮನೆ ಕೊನಗೂ ತೆರೆಯಲಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯ ಪ್ರವೇಶದ ಬೆನ್ನಲ್ಲೇ ಮಧ್ಯರಾತ್ರಿಯೇ ಸೀಜ್ ಮಾಡಲಾಗಿದ್ದ ಬಿಗ್ ಬಾಸ್ ಮನೆಯನ್ನು ತೆರೆಯಲಾಗಿದೆ. ನಸುಕಿನ ಜಾವ 2:45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌.ಪಿ.ಶ್ರೀನಿವಾಸ್ ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಆಗಮಿಸಿ ಜಾಲಿವುಡ್‌ ಸ್ಟುಡಿಯೋದ ಗೇಟ್‌ ಸೀಲ್‌ ಓಪನ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ರಾಜ್ಯದಲ್ಲಿ 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ ಹೊಂದಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ನಗರದ ಹೊರವಲಯದ ಎಚ್‌.ಎಂ.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ, ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಡಿ 101 ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಗುರುತಿಸಲಾಗಿದೆ. ರಾಜ್ಯದಲ್ಲಿ 25 ಲಕ್ಷ. ಜಿಲ್ಲೆಯಲ್ಲಿ 1.17 ಲಕ್ಷ ಕಾರ್ಮಿಕರನ್ನು ನೋಂದಾಯಿಸಿ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಜೂಮ್ಯಾಟೊ, ಸ್ಟಿಗ್ಗಿ, ಫ್ಲಿಪ್‌ ಕಾರ್ಟ್‌ ಸಂಸ್ಥೆಗಳ ಡೆಲಿವರಿ ಕಾರ್ಮಿಕರಿಗೆ 2 ಲಕ್ಷ ಅಪಘಾತ ಪರಿಹಾರ ಹಾಗೂ ಜೀವವಿಮೆ ಸೇರಿದಂತೆ 4 ಲಕ್ಷ ವಿಮೆ ಸೌಲಭ್ಯ ಒದಗಿಸುವ ಸಲುವಾಗಿ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 30,256, ಜಿಲ್ಲೆಯ 809…

Read More

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿನ ಮುಖ್ಯ ರಸ್ತೆಯಾದ ನೀಲಮಠದಿಂದ ಅಂಬೇಡ್ಕರ್ ವೃತ್ತವರೆಗಿನ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ರಸ್ತೆ ದುರಸ್ತಿ ಪಡಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು ಸಾರ್ವಜನಿಕರು ಓಡಾಡುವುದಕ್ಕೆ ಕಷ್ಟವಾಗುತ್ತಿದೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೀರೆಲ್ಲ ರಸ್ತೆ ಮೇಲೆಯೇಹರಿಯುತ್ತಿವೆ. ರಸ್ತೆ ಅಕ್ಕ ಪಕ್ಕದಲ್ಲಿಯೇ ಮನೆಗಳಿದ್ದು, ಸೊಳ್ಳೆಗಳು ಕಾಟ ಹೆಚ್ಚಾಗಿದೆ. ಇದರಿಂದಾಗಿ ಗ್ರಾಮಸ್ಥರು ರೋಗಗಳು ಬರುವ ಆತಂಕದಲ್ಲಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ರಸ್ತೆ ಮೇಲೆ ಮಕ್ಕಳು ಮತ್ತು ವೃದ್ಧರಿಗೆ ನಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನ ಸವಾರರು ಕೂಡ ಹೆದರಿಕೊಂಡೆ ವಾಹನ ಚಲಾವಣೆ ಮಾಡುವ ಪರಿಸ್ಥಿತಿ ಎದುರಾಗಿದೆ. ರಸ್ತೆ ದುರಸ್ತಿ ಮಾಡಲು ಪಿಡಿಒ ಅವರಿವೆ ಮನವಿ ಮಾಡಿದ್ದರೂ ಕೂಡ ಅವರು ಸಂಪೂರ್ಣವಾಗಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರವೇ  ರಸ್ತೆಯ ಮತ್ತು ಚರಂಡಿಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮಸ್ಥರ ಆರೋಗ್ಯ ಕಾಪಾಡಿ, ಸುಗಮವಾಗಿ ಓಡಾಟಕ್ಕೂ ಅನುಕೂಲ ಮಾಡಿ ಕೊಡಬೇಕು ಎಂದು ಸಾರ್ವಜನಿಕರು…

Read More

ತುಮಕೂರು: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಈವರೆಗೂ ಒಂದು ರೂಪಾಯಿ ಅನುದಾನ ನೀಡಿಲ್ಲ. ಸರ್ಕಾರ ಈಡಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದೆ ಎಂದು ಕರದಾಳ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಇಲ್ಲಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈಡಿಗ, ಬಿಲ್ಲವ, ನಾಮದಾರಿ ಸಮುದಾಯಕ್ಕೆ ಎರಡು ಮಂತ್ರಿ ಸ್ಥಾನ, ಮೂರು ನಿಗಮಗಳ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಈಗಿನ ಸರ್ಕಾರ ಕೇವಲ ಒಂದೇ ಮಂತ್ರಿ ಸ್ಥಾನ ಕೊಟ್ಟಿದೆ. ಇದುವರೆಗೆ ಬೆಂಗಳೂರಿನಲ್ಲಿ ನಾರಾಯಣ ಗುರು ಪುತ್ಥಳಿ ಅನಾವರಣ ಮಾಡಲಿಲ್ಲ. ಈಡಿಗರು ರಾಜಕೀಯಕ್ಕೆ ಬರಬಾರದು ಎಂಬ ಉದ್ದೇಶದಿಂದ ಸೇಂದಿ ಮಾರಾಟ ಬಂದ್‌ ಮಾಡಿಸಿದರು. ಕುಲ ಕಸುಬು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 6ರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ಬೆಂಗಳೂರು ವರೆಗೆ ಪಾದಯಾತ್ರೆ ನಡೆಸಲಾಗುವುದು. ಪ್ರತಿ ದಿನ 20 ಕಿಲೊ ಮೀಟರ್‌ನಂತೆ 700 ಕಿ.ಮೀ ಪಾದಯಾತ್ರೆ ನಡೆಯಲಿದೆ.…

Read More

ತಿಪಟೂರು: ನಗರದ ತಾಲ್ಲೂಕು ಆಸ್ಪತ್ರೆ ಹಾಗೂ ನೊಣವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ 108 ಅಂಬುಲೆನ್ಸ್ ಸೇವೆ ಕೆಲವು ದಿನಗಳಿಂದ ಸ್ಥಗಿತಗೊಂಡಿದೆ. ತಾಲ್ಲೂಕಿನಲ್ಲಿದ್ದ ಎರಡು 108 ಅಂಬುಲೆನ್ಸ್‌ ಗಳನ್ನು ದುರಸ್ತಿ ಮತ್ತು ತಾಂತ್ರಿಕ ಸಮಸ್ಯೆಯಿಂದಾಗಿ ಆಸ್ಪತ್ರೆ ಹಿಂಬಾಗದಲ್ಲಿ ನಿಲ್ಲಿಸಲಾಗಿದೆ.  ಕಳೆದ ವಾರ ತಾಲ್ಲೂಕಿನಲ್ಲಿ ಅಂಬುಲೆನ್ಸ್ ಸೇವೆ ಹಾಗೂ ತುರ್ತು ಚಿಕಿತ್ಸೆ ಸಿಗದೆ ಕರೀಕೆರೆ ಗ್ರಾಮದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಸಾರ್ವಜನಿಕರು ತುರ್ತು ಸೇವೆಗಾಗಿ ಖಾಸಗಿ ಅಂಬುಲೆನ್ಸ್ ಮತ್ತು ವಾಹನಗಳ ಮೊರೆ ಹೋಗುವ ಅನಿವಾರ್ಯ ಎದುರಾಗಿದೆ. ತಿಪಟೂರು ತಾಲ್ಲೂಕು ಆಸ್ಪತ್ರೆಗೆ ಸುತ್ತಲಿನ ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಅರಸೀಕೆರೆ, ಹುಳಿಯಾರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಗರ್ಭಿಣಿ, ಬಾಣಂತಿಯರ ಬರುತ್ತಿದ್ದಾರೆ. ಹೆರಿಗೆ ಸಮಯದಲ್ಲಿ 108′ ಸೇವೆಯಿಲ್ಲದೆ ತಾಯಿ ಹಾಗೂ ಶಿಶುವಿನ ಜೀವಕ್ಕೆ ಅಪಾಯವಾದ ನಿದರ್ಶನಗಳಿವೆ. ನಗರವಷ್ಟೇ ಅಲ್ಲದೆ ಸುತ್ತಲಿನ ಗ್ರಾಮಗಳ ಜನರು 108 ಸೇವೆಯಿಲ್ಲದೆ ಸಮಸ್ಯೆಯಿಂದ ನರಳುತ್ತಿದ್ದಾರೆ. ದೂರದ ಗ್ರಾಮಗಳಿಂದ ಆಸ್ಪತ್ರೆಗೆ ಬರಲು ಅಂಬುಲೆನ್ಸ್‌ಗಳು ಲಭ್ಯವಿಲ್ಲದ ಕಾರಣ ರೋಗಿಗಳು ಜೀವ ಉಳಿಸಿಕೊಳ್ಳಲು ಹೆಣಗಾಡುವಂತಾಗಿದೆ. ಕೆಲವೊಮ್ಮೆ ಸಕಾಲಕ್ಕೆ ಆಸ್ಪತ್ರೆ ತಲುಪದೆ ಮಾರ್ಗಮಧ್ಯೆ…

Read More

ಕುಣಿಗಲ್ : ಮಾರ್ಕೋನಹಳ್ಳಿ ಜಲಾಶಯದ ನೀರಿನಲ್ಲಿ ಕೊಚ್ಚಿ ಹೋಗಿದ್ದ ನಾಲ್ವರ ಪೈಕಿ ಬುಧವಾರ ಇಬ್ಬರ ಶವ ಪತ್ತೆಯಾಗಿವೆ. ಮತ್ತಿಬ್ಬರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ  ಶೋಧ ಮುಂದುವರಿಸಿದ್ದಾರೆ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶಶಿಧರ್ ನೇತೃತ್ವದ ತಂಡ ಬುಧವಾರ ಸಂಜೆವರೆಗೂ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಶೋಧ ನಡೆಸಿದ್ದು ನಿಫ್ರಾ (4) ಮತ್ತು ಶಬನಾ (44) ಎಂಬುವರ ಶವಗಳು ಪತ್ತೆಯಾಗಿವೆ. ಮೋಹಿಬ್ (11) ಮತ್ತು ತಬಸ್ಸಮ್ (46) ಇನ್ನೂ ಪತ್ತೆಯಾಗಿಲ್ಲ. ಮಾರ್ಕೋನಹಳ್ಳಿ ಜಲಾಶಯಕ್ಕೆ ವಿಹಾರಕ್ಕೆ ಹೋಗಿದ್ದ ಕುಟುಂಬದ ಸದಸ್ಯರು ಬೆಟ್ಟಗೊಂಡನಹಳ್ಳಿ ಕಾಲುವೆಯಲ್ಲಿ ನೀರಿಗೆ ಇಳಿದಿದ್ದರು. ಹತ್ತು ಮಂದಿ ಕೊಚ್ಚಿಕೊಂಡು ಹೋಗಿದ್ದರು. ಆ ಪೈಕಿ ಮೂವರು ಪಾರಾಗಿದ್ದರು. ಇಬ್ಬರ ಶವ ಮಂಗಳವಾರ ಪತ್ತೆಯಾಗಿದ್ದವು. ನಾಲ್ವರು ಕಾಣೆಯಾಗಿದ್ದರು. ಕತ್ತಲಾಗಿದ್ದರಿಂದ ಶೋಧ ಕಾರ್ಯ ನಿಲ್ಲಿಸಲಾಗಿತ್ತು. ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಆರು ಜನರ ಪೈಕಿ ನಾಲ್ವರ ಶವ ಸಿಕ್ಕಿದ್ದು, ಇನ್ನೂ ಇಬ್ಬರು ಪತ್ತೆಯಾಗಿಲ್ಲ. ಅವರು ಬದುಕುಳಿದಿರುವ ಸಾಧ್ಯತೆ ಕ್ಷೀಣ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದ್ದಾರೆ. ಗುರುವಾರ ಮತ್ತೆ ಶೋಧ…

Read More

ತುಮಕೂರು: ಪರಿಶಿಷ್ಟ ಪಂಗಡದ ಪಟ್ಟಿಗೆ ಕುರುಬರ ಸೇರ್ಪಡೆಗೆ ನನ್ನ ಅಭ್ಯಂತರವಿಲ್ಲ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದ್ದರೆ, ಅವರ ಪತ್ನಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಎಸ್.ಆರ್.ಶಾಂತಲಾ ರಾಜಣ್ಣ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೋರಾಟ ನಮ್ಮದು, ಹಕ್ಕು ಇನ್ನೊಬ್ಬರದ್ದು ಎಂಬಂತಾಗಿದೆ. ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ಸುಮಾರು 40 ವರ್ಷ ಹೋರಾಟ ನಡೆಸಿತು. ಶೇ 7.5ರಷ್ಟು ಮೀಸಲಾತಿ ದೊರೆತ ನಂತರ ಅನ್ಯಜಾತಿಗಳನ್ನು ಎಸ್.ಟಿ. ಪಟ್ಟಿಗೆ ಸೇರಿಸುವುದು ಎಷ್ಟು ಸರಿ ಎಂದು ಶಾಂತಲಾ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಂಗಳವಾರ ಜಿಲ್ಲಾ ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಿರುವ ಜನಸಂಖ್ಯೆಗೆ ಸರ್ಕಾರದಿಂದ ಅಗತ್ಯ ಸೌಲಭ್ಯ ಸಿಗುತ್ತಿಲ್ಲ. ವಿದ್ಯಾರ್ಥಿ ವೇತನ ಸಕಾಲಕ್ಕೆ ತಲುಪುತ್ತಿಲ್ಲ. ಬುಡಕಟ್ಟು ಉಪಯೋಜನೆ ಅನುದಾನ ಸರಿಯಾಗಿ ಬಳಕೆಯಾಗುತ್ತಿಲ್ಲ. ಇದೆಲ್ಲದರ ಮಧ್ಯೆ ಅನ್ಯ ಸಮಾಜವನ್ನು ಎಸ್‌.ಟಿ.ಗೆ ಸೇರಿಸಲು ಮುಂದಾಗಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಸ್ಪಷ್ಟಪಡಿಸಿದರು. ವಾಲ್ಮೀಕಿ ಸಮುದಾಯ ಭವನದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಸಮುದಾಯದ ಜನರು ಎಲ್ಲರಂತೆ ಶುಲ್ಕ…

Read More

ಕುಣಿಗಲ್: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಗಳ ಆರೋಗ್ಯ ಸರಿ ಇಲ್ಲದಿದ್ದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೆ. ಆಗ 8 ತಿಂಗಳ ಗರ್ಭಿಣಿ ಎಂಬುವುದು ಗೊತ್ತಾಯಿತು. ಆಕೆಯನ್ನು ವಿಚಾರಿಸಿದಾಗ ಎಲ್ಲ ವಿಷಯ ಹೇಳಿದಳು. ಕೂಡಲೇ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಪತ್ನಿ, ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಮರಳೂರು ದಿಣ್ಣೆಯ ನಿವಾಸಿ ಸಲ್ಮಾನ್ ಪಾಷ (30) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಲ್ಮಾನ್ ಆಟೊ ಚಾಲಕರಾಗಿದ್ದಾರೆ. ಮನೆಯಲ್ಲಿ ವಿಷ ಸೇವಿಸಿದ್ದು, ಸದ್ಯ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆತ್ಮಹತ್ಯೆಗೂ ಮುನ್ನ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ. `ಹೆಂಡತಿ ಫಿರ್ದೋಸ್ ಮತ್ತು ಅತ್ತೆ ಮಹಿಳಾ ಪೊಲೀಸ್ ಠಾಣೆಗೆ ಪದೇ ಪದೇ ಕರೆಸಿ, ನನಗೆ ಹೊಡೆಯುತ್ತಾರೆ. ಪೊಲೀಸರ ಎದುರೇ ಹಲ್ಲೆ ನಡೆಸಿದ್ದಾರೆ. ಇದಕ್ಕೆ ಎಐಎಂಐಎಂ ಪಕ್ಷ ಅಧ್ಯಕ್ಷ ಸೈಯದ್ ಬುರ್ಹನ್ ಉದ್ದೀನ್ ಕುಮ್ಮಕ್ಕು ನೀಡುತ್ತಿದ್ದಾರೆ. ಜಯನಗರ ಠಾಣೆಗೆ ದೂರು ನೀಡಿದರೂ ಪ್ರಕರಣ ದಾಖಲಿಸಿಲ್ಲ’ ಎಂದು ಆರೋಪಿಸಿದ್ದಾರೆ. ಸಲ್ಮಾನ್ ವಿಷ ಸೇವಿಸಿದ ನಂತರ ಆತನ ತಾಯಿ ರಕೀಬ್ ಉನ್ನೀಸಾ ಜಯನಗರ ಠಾಣೆಗೆ ದೂರು ನೀಡಿದ್ದಾರೆ. `ಫಿರ್ದೋಸ್, ಅವರ ತಾಯಿ ಮತ್ತು ಸೈಯದ್ ಮಗನ ಆತ್ಮಹತ್ಯೆಗೆ ಪ್ರೇರೇಪಿಸಿದ್ದಾರೆ. ಸೈಯದ್‌ ನನಗೆ ರಾಜಕೀಯ ಬಲ ಇದೆ ಎಂದು ದೌರ್ಜನ್ಯ ಎಸಗುತ್ತಿದ್ದಾರೆ. ಈ ಹಿಂದೆ…

Read More

ತುಮಕೂರು : ಯುಜಿಸಿ ನಿರ್ದೇಶನದ ಮೇರೆಗೆ ಕರಾಮುವಿಯ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಅಕ್ಟೋಬರ್ 15 ಅಂತಿಮ ದಿನಾಂಕವಾಗಿದ್ದು,  ತುಮಕೂರಿನಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯಬಹುದಾಗಿದೆ.  ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2025ರ ಅಕ್ಟೋಬರ್ 15ರ ವರಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಶನಿವಾರ ಮತ್ತು ಭಾನುವಾರದಂದು ಕರಾಮುವಿ ತುಮಕೂರು ಪ್ರಾದೇಶಿಕ…

Read More