Subscribe to Updates
Get the latest creative news from FooBar about art, design and business.
- ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
- ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
- ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
- ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
- ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
- ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
- ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
- ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
Author: admin
ತುರುವೇಕೆರೆ: ಲಯನ್ಸ್ ಕ್ಲಬ್, ಕಲ್ಪತರು ಚಾರಿಟಬಲ್ ಟ್ರಸ್ಟ್, ಬಿಡಬ್ಲ್ಯು ಲಯನ್ಸ್ ಹಾಸ್ಪಿಟಲ್ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಕೇಂದ್ರ, ತಾಲ್ಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ಹೆಗ್ಗೆರೆಯ ಶ್ರೀ ವೆಂಕಟೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಮೇ 10 ರಂದು ಬೆಳಿಗ್ಗೆ 9 ಗಂಟೆಯಿಂದ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ, ರಕ್ತದೊತ್ತಡ, ಶುಗರ್ ಮತ್ತಿತರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಶ್ರೀ ವೆಂಕಟೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಎಚ್.ಎನ್.ಗಂಗಾಧರಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಈ ಸಂದರ್ಭದಲ್ಲಿ ಡಾ.ಚೌದ್ರಿ ನಾಗೇಶ್, ಡಾ.ಹರ್ಷಿತ್, ಎಚ್.ಆರ್.ರಂಗನಾಥ್, ಡಾ.ಎ.ನಾಗರಾಜು, ಕೀಲು ಮತ್ತು ಮೂಳೆ ತಜ್ಞರಾದ ಡಾ.ಸುನೀಲ್‌ಕುಮಾರ್ ಮತ್ತಿತರರು ಭಾಗವಹಿಸುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ರಾಘವೇಂದ್ರ ಅಡಿಗ ಎಚ್ಚೆನ್. ನಾದಯೋಗಿ ಡಾ. ರಾಜಕುಮಾರ್ ಅವರ ಜೀವನ, ವ್ಯಕ್ತಿತ್ವ ಹಾಗೂ ಒಡನಾಟವನ್ನು ಒಳಗೊಂಡಿರುವ “ನಾದಯೋಗಿ” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಬೆಂಗಳೂರಿನ ಚಾಮರಾಜಪೇಟೆಯ ಡಾ. ರಾಜ್‌ಕುಮಾರ್ ಭವನದಲ್ಲಿ ನಡೆಯಿತು. ಡಾ.ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಪುಸ್ತಕವನ್ನು ಅನಾವರಣ ಮಾಡಿದರು. ಡಾ.ರಾಜಕುಮಾರ್ ಸಹೋದರ ವರದಪ್ಪ ಅವರ ಪುತ್ರಿ ಡಾ.ಲತಾ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಲಹರಿ ಸಂಸ್ಥೆಯ ಮನೋಹರ ನಾಯ್ಡು, ಲಹರಿ ವೇಲು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಾವೇರಿ ಕನ್ನಡ ಸಂಘ ಧಾರ್ ಎಸ್ ಸಲಾಂ ತಾಂಜಾನಿಯಾ ಪೂರ್ವ ಆಫ್ರಿಕಾ ಪ್ರತಿನಿಧಿ ಗೌಡ ಅವರು ಈ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿದ್ದರು . ಕಾರ್ಯಕ್ರಮದಲ್ಲಿ ಮಾತನಾಡಿದ ಆರ್. ಮಂಜುನಾಥ್ ಚವಾಣ್, “1990ರಲ್ಲಿ ಡಾ. ರಾಜ್ ಕುಮಾರ್ ಅವರನ್ನು ಭೇಟಿ ಮಾಡಿದಾಗ, ಅವರೊಳಗೆ ‘ಮುತ್ತುರಾಜ್’ ಎಂಬ ಸರಳ ವ್ಯಕ್ತಿತ್ವವನ್ನು ಕಂಡೆ. ತೆರೆ ಮೇಲೆ ರಾಜ್‌ಕುಮಾರ್ ಇದ್ದರೂ, ಅಂತರಂಗದಲ್ಲಿ ಮುತ್ತುರಾಜ್ ಬದುಕುತ್ತಿದ್ದರು,” ಎಂದು ಸ್ಮರಿಸಿದರು. “ನಾದಯೋಗಿ” ಪುಸ್ತಕದಲ್ಲಿ 25 ಅಧ್ಯಾಯಗಳ ಮೂಲಕ ಡಾ.ರಾಜ್…
ಕಾರವಾರ: ರಾಷ್ಟ್ರ ಕಟ್ಟುವಲ್ಲಿ ಕಾರ್ಮಿಕರು ಪ್ರಮುಖ ಪಾತ್ರ ವಹಿಸುತ್ತಿದ್ದು, ಕಾರ್ಮಿಕರು ಸರ್ಕಾರದಿಂದ ದೊರೆಯುವ ಯೋಜನೆ, ಸೌಲಭ್ಯಗಳ ಬಗ್ಗೆ ಅರಿತು ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಿ.ಜೆ.ಎಮ್. ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಕವಿತಾ ಎಸ್.ಉಂಡೋಡಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ನ್ಯಾಯವಾದಿಗಳ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ಪಿಂಚಣಿ ಸೌಲಭ್ಯ, ಕುಟುಂಬ ಸೌಲಭ್ಯ, ದುರ್ಬಲತೆ ಪಿಂಚಣಿ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ಅಪಘಾತ ಪರಿಹಾರ ಇತರೆ ಸೌಲಭ್ಯಗಳನ್ನು ಕಾರ್ಮಿಕರಿಗೆ ನೀಡಲಾಗುತ್ತಿದ್ದು, ಕಾರ್ಮಿಕರು ಈ ಯೋಜನೆ, ಸೌಲಭ್ಯಗಳನ್ನು ಹಾಗೂ ಹಕ್ಕುಗಳನ್ನು ಅರಿತುಕೊಡು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ಸಾಗಿಸಬೇಕು. ಕಾರ್ಮಿಕರು ತಮ್ಮ ಮಕ್ಕಳನ್ನು…
ಧಾರವಾಡ: ಪ್ರಸ್ತುತ ಬೇಸಿಗೆ ಅವಧಿಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಇಂದು (ಮೇ 8) ಬೆಳಿಗ್ಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ (ಗೂಗಲ್ ಮೀಟ್)ದ ಮೂಲಕ ಸಭೆ ಜರುಗಿಸಿ, ಅವರು ಮಾತನಾಡಿದರು. ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಕೃಷಿಯೇತರ ಚಟುವಟಿಕೆಗಳಿಗೆ ಸಾರ್ವಜನಿಕರು ಕಾಲುವೆ ನೀರು ಬಳಸದಂತೆ ತಡೆಯಲು ಮತ್ತು ನಿಗಾವಹಿಸಲು ರಚಿಸಿರುವ ನೋಡಲ್ ಅಧಿಕಾರಿಗಳ ತಂಡವು ಉತ್ತಮವಾಗಿ ಕಾರ್ಯ ಮಾಡುತ್ತಿವೆ. ಉಳಿದಂತೆ ಗ್ರಾಮೀಣ ಭಾಗದಲ್ಲಿ ಜನ–ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಮತ್ತು ಜಾನುವಾರುಗಳಿಗೆ ಮೇವಿನ ಅಭಾವ ಆಗದಂತೆ ಮುನ್ನಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿಗಳು…
ಕೊರಟಗೆರೆ: ತಾಲ್ಲೂಕಿನ ವಡೇರಹಳ್ಳಿ ಗ್ರಾಮದ ಸಮೀಪ ಎತ್ತಿನಹೊಳೆಯ ಬಫರ್ ಡ್ಯಾಂ ನಿರ್ಮಾಣ ವಿರೋಧಿಸಿ ರೈತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಸ್ಥಳೀಯ ರೈತರು ಪ್ರತಿಭಟನೆ ನಡೆಸಿದರು. ಕೊರಟಗೆರೆ ಪಟ್ಟಣದ ಪಪಂ ಮುಂಭಾಗದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಕಾಲ್ನಡಿಗೆಯಲ್ಲಿ ತೆರಳಿದ ರೈತರು ರಾಜ್ಯ ಸರಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ವಡೇರಹಳ್ಳಿ ರೈತ ಮುಖಂಡ ವಿ.ಪಿ.ನಂಜೇಗೌಡ ಮಾತನಾಡಿ, ನಮ್ಮ ವಡೇರಹಳ್ಳಿ ಗ್ರಾಮದ ಬಳಿ ನಿರ್ಮಾಣಕ್ಕೆ ಉದ್ದೇಶ ಮಾಡಿರುವ ಎತ್ತಿನಹೊಳೆ ಯೋಜನೆಯ ಬಫರ್ ಡ್ಯಾಂ ಅವೈಜ್ಞಾನಿಕ. ನಾವು ನಮ್ಮ ಪ್ರಾಣ ಬೇಕಾದ್ರು ನೀಡ್ತೀವಿ ಆದರೇ ನಮ್ಮ ಕೃಷಿ ಜಮೀನು ಮಾತ್ರ ಬಫರ್ ಡ್ಯಾಂಗೆ ನೀಡೋದಿಲ್ಲ. ರಾಜ್ಯ ಸರಕಾರ ಪರಿಶೀಲನೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಬೇಕಿದೆ ಎಂದು ಆಗ್ರಹಿಸಿದರು. ವಡೇರಹಳ್ಳಿ ರೈತ ಮುಖಂಡ ಡಿ.ಹನುಮಂತೇಗೌಡ ಮಾತನಾಡಿ, ದುರ್ಗದಹಳ್ಳಿ, ಬೈರಗೊಂಡ್ಲು ಆಯ್ತು ಈಗ ನಮ್ಮ ವಡೇರಹಳ್ಳಿಗೆ ಬಫರ್ ಡ್ಯಾಂ ಬಂದಿದೆ. ರೈತರ ಪರವಾನಗಿ ಪಡೆಯದೇ ಏಕಾಏಕಿ ಸರಕಾರದ ನಿರ್ಧಾರಕ್ಕೆ ನಮ್ಮ ವಿರೋಧವಿದೆ. ಪ್ರಾಣ ಬೇಕಾದ್ರು ನೀಡ್ತೀವಿ…
ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು, ಕೂಡಲೇ ಆತನನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದಾಗ ಅಲ್ಲಿ ಚಿಕಿತ್ಸೆ ಫಲಿಸದೆ ಸದರಿ ವ್ಯಕ್ತಿ ಮೃತಪಟ್ಟಿರುತ್ತಾರೆ. ಕೋಲು ಮುಖ, ತೆಳ್ಳನೆಯ ಶರೀರ, ಗೋಧಿ ಮೈಬಣ್ಣ, ಮೀಸೆ ಬಿಟ್ಟಿರುತ್ತಾನೆ. ಈತನ ಮೈಮೇಲೆ ಬಿಳಿ ಬಣ್ಣದ ಟೀ ಶರ್ಟ್, ನೀಲಿ ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಅದೇ ರೀತಿ ಮಹಾಲಕ್ಷ್ಮಿ ನಗರ ಬಡಾವಣೆಯ ಅಂಗಡಿ ಮಳಿಗೆ ಮುಂಭಾಗ ಸುಮಾರು 70 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾರೆ. ಕೋಲು ಮುಖ, ತೆಳ್ಳನೆಯ ಶರೀರ, ಕಪ್ಪು ಮೈಬಣ್ಣ ಹೊಂದಿದ್ದಾನೆ. ಇವರ ಮೈಮೇಲೆ ಕಂದು ಬಣ್ಣದ ಬರ್ಮುಡಾ ನಿಕ್ಕರ್ ಧರಿಸಿದ್ದಾನೆ. ಈ ಇಬ್ಬರು ಮೃತ ವ್ಯಕ್ತಿಗಳ ವಾರಸುದಾರರು ಯಾರಾದರೂ ಇದ್ದಲ್ಲಿ ಹೊಸ ಬಡಾವಣೆ ಪೊಲೀಸರನ್ನಾಗಲಿ ಅಥವಾ 9480802951 ಇವರನ್ನು ಸಂಪರ್ಕಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಆಗಸ್ಟ್ 21 ರಿಂದ 3 ದಿನಗಳು ನಡೆಯುವ ಸುಪ್ರೀಂ ಕೋರ್ಟ್‌ನ ವಿಶೇಷ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಕ್ಷಿದಾರರು ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾ. ಅನು ಶಿವರಾಮನ್ ತಿಳಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಾದ್ಯಂತ ಸುದ್ದಿಗೋಷ್ಠಿ ನಡೆಸಿದ ಅವರು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳು ಬಾಕಿಯಿದ್ದು, ಹೊರ ರಾಜ್ಯದ ಕಕ್ಷಿದಾರರು ನ್ಯಾಯಾಲಯಕ್ಕೆ ಸಕಾಲಕ್ಕೆ ಹಾಜರಾಗದೆ ಪ್ರಕರಣಗಳು ಬಾಕಿಯಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದ ಕಕ್ಷಿದಾರರಿಗೆ ಅನುಕೂಲವಾಗಬೇಕೆಂಬ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಆದೇಶದಂತೆ ಲೋಕ ಅದಾಲತ್ ಕಾರ್ಯಕ್ರಮದ ಮೂಲಕ ಆಗಸ್ಟ್ 21 ರಿಂದ 3 ದಿನಗಳು ವಿಶೇಷ ಲೋಕ್ ಅದಾಲತ್ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪೂರ್ವ ಸಂಧಾನ ಕಾರ್ಯಕ್ರಮಗಳು ನಡೆದು ಆಗಸ್ಟ್ 21 ರಿಂದ…
ತುರುವೇಕೆರೆ: ನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಸ್ತಿಗಳ ಮಾರಾಟ ಸೇರಿದಂತೆ ವಿವಿಧ ವಹಿವಾಟುಗಳನ್ನು ಪೇಪರ್ ಲೆಸ್ ಮಾಡಲಾಗುತ್ತಿದೆ. ಕಾವೇರಿ ತಂತ್ರಾಂಶದ ಮೂಲಕ ಪೇಪರ್ ಲೆಸ್ ಮಾಡಿ ಕೇವಲ ತಂತ್ರಾಂಶದ ಮೂಲಕ ನೋಂದಣಿ ಮಾಡಿಸುವ ಕ್ರಮ ಸರಿಯಲ್ಲ ಎಂದು ಜಿಲ್ಲಾ ಪತ್ರ ಬರಹಗಾರರ ಸಂಘದ ಸಂಘಟನಾಕಾರ ಬಿ.ಎನ್.ಮಂಜುನಾಥ್ ತಿಳಿಸಿದರು. ಪಟ್ಟಣದ ಸಂಘದ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಗದ ರಹಿತ ಡಿಜಿಟಲ್ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಚಾಮರಾಜನಗರದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿದ್ದು ತರುವಾಯ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಈ ಕಾನೂನು ರಾಜ್ಯಾದ್ಯಂತ ಜಾರಿಗೆ ಬಂದಲ್ಲಿ ಸಾರ್ವಜನಿಕರ ಗೋಳು ಹೇಳತೀರದು. ಈಗಿರುವ ವ್ಯವಸ್ಥೆಯಲ್ಲೇ ನೂರಾರು ತೊಂದರೆಗಳು ಇವೆ. ಇವುಗಳನ್ನು ಬಗೆಹರಿಸಲು ಹರಸಾಹಸ ಮಾಡಲಾಗುತ್ತಿದೆ. ಈಗ ಪೇಪರ್ ಲೆಸ್ ವ್ಯವಸ್ಥೆ ಜಾರಿಗೆ ಬಂದರೆ ಸಾರ್ವಜನಿಕರ ಆತಂಕ ಮತ್ತಷ್ಟು ಹೆಚ್ಚಲಿದೆ. ಈ ಕುರಿತು ನ್ಯಾಯಾಲಯದಲ್ಲೂ ಪ್ರಶ್ನೆ ಮಾಡುವವರಿದ್ದೇವೆ ಎಂದರು. “ಈಗಿನ ವ್ಯವಸ್ಥೆಯಲ್ಲಿ ಮಾರಾಟಗಾರರು ಮತ್ತು ಕೊಳ್ಳುವವರು ಎದುರು ಇದ್ದರೂ ಸಹ ಮೋಸ ಮಾಡಬಹುದಾಗಿದೆ. ಇನ್ನು ಕೇವಲ ಪೇಪರ್…
ತುಮಕೂರು: ಮಹಾಮಾರಿ ಎಚ್ 5ಎನ್ 1 ಸೋಂಕಿಗೆ ಮತ್ತೆ ಮೂರು ನವಿಲುಗಳು ಸಾವಿಗೀಡಾಗಿವೆ. ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಹಿಂಭಾಗ ಆರು ನವಿಲುಗಳು ಹಕ್ಕಿ ಜ್ವರ ಸೋಂಕಿಗೆ ಮಂಗಳವಾರ ಮೃತಪಟ್ಟಿರುವುದು ಪತ್ತೆಯಾದ ಬೆನ್ನಿಗೇ ಹಿರೇಹಳ್ಳಿ ಸುತ್ತ ಮುತ್ತ ಮೂರು ನವಿಲುಗಳು ಮೃತಪಟ್ಟಿರುವುದು ಬುಧವಾರ ಸಂಜೆ ಪತ್ತೆಯಾಗಿರುವುದಾಗಿ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಶಿವಪ್ರಸಾದ್ ಖಚಿತಪಡಿಸಿದ್ದಾರೆ. ನವಿಲುಗಳ ಮೃತ ದೇಹವನ್ನು ನಿಯಮಾನುಸಾರ ಆರು ಅಡಿ ಆಳದಲ್ಲಿ ಭೂಮಿಯಲ್ಲಿ ಹೂತು ಪಂಚನಾಮೆ ಪ್ರಕ್ರಿಯೆ ನಡೆಸಿರುವುದಾಗಿ ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತಿಪಟೂರು: ತಾಲೂಕಿನ ಕೆ.ಬಿ ಕ್ರಾಸ್ ನಲ್ಲಿ ಸಿನಿಮೀಯ ರೀತಿಯಲ್ಲಿ ಎಟಿಎಂ ಡಿಜಿಟಲ್ ಲಾಕರ್ ಒಡೆದು ಹಣ ಕಳವು ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮೇ 5ರ ರಾತ್ರಿ, ಕೆ.ಬಿ ಕ್ರಾಸ್ ನ ಮಾತಾ ರೆಸಿಡೆನ್ಸಿ ಆವರಣದಲ್ಲಿ ಇರುವ ಎಸ್ ಬಿಐ ಬ್ಯಾಂಕ್ ಗೆ ಸೇರಿದ ಎಟಿಎಂ ಕೇಂದ್ರಕ್ಕೆ ನುಗ್ಗಿದ ಕಳ್ಳರ ಗುಂಪು, ಎಟಿಎಂ ಯಂತ್ರವನ್ನು ಹಾನಿಗೊಳಿಸಿ ಅದರ ಡಿಜಿಟಲ್ ಲಾಕರ್ ಒಡೆದು ಹಾಕಿದೆ. ಬಳಿಕ ಯಂತ್ರದಲ್ಲಿದ್ದ ಸುಮಾರು 5,94,400 ನಗದು ಹಣವನ್ನು ದರೋಡೆ ಮಾಡಿ ಪರಾರಿಯಾಗಿದೆ ಎಂದು ತಿಳಿದುಬಂದಿದೆ. ಘಟನೆ ಮೇ 6ರ ಬೆಳಿಗ್ಗೆ ಬೆಳಕಿಗೆ ಬಂದಿದ್ದು, ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಕೆ.ಬಿ.ಕ್ರಾಸ್ ಪೊಲೀಸರು ಹಾಗೂ ಎಸ್ ಬಿಐ ಬ್ಯಾಂಕ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ತನಿಖೆಯನ್ನು ಮುಂದುವರಿಸಿದರು. ತಿಪಟೂರು ಡಿವೈಎಸ್ಪಿ ಉಮೇಶ್ ಅವರ ನೇತೃತ್ವದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್, ಸಬ್ ಇನ್ಸ್‌ಪೆಕ್ಟರ್ ನಾಗರಾಜು…