Author: admin

ತುಮಕೂರು: ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯು 2024–25ನೇ ಸಾಲಿಗೆ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೆಟ್ರಿಕ್ ಪೂರ್ವ/ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ನೀಡಲು ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ http://ssp.postmetric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿರಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಕೌಶಲ್ಯ ಉನ್ನತೀಕರಣ ತರಬೇತಿ, ವಸತಿ ನೇರ ಸಾಲ, ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಚರ್ಮಶಿಲ್ಪಿ ಯೋಜನೆ ಮತ್ತು ಮಾರುಕಟ್ಟೆ ಸಹಾಯ ಯೋಜನೆಗಳ ಸೌಲಭ್ಯಕ್ಕಾಗಿ ಚರ್ಮ ಕುಶಲ ಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ಸಂಯೋಜಕ ಕಲ್ಯಾಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಸೌಲಭ್ಯಕ್ಕಾಗಿ ಸುವಿಧಾ ಪೋರ್ಟಲ್ https://sevasindu.karnataka.gov.in ನಲ್ಲಿ ಅಕ್ಟೋಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಆನ್ ಲೈನ್ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ನಗರದ ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲಿಡ್ ಕರ್)ದ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2270592ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು : ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಪೋಕ್ಸೊ ಕಾಯ್ದೆಯಡಿ ಸಂತ್ರಸ್ತ ಮಕ್ಕಳ ವ್ಯಾಸಂಗ ಹಾಗೂ ಭವಿಷ್ಯದ ದೃಷ್ಟಿಯಿಂದ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುವವರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರು ಸಮಾಜ ಕಾರ್ಯ ವಿಷಯದಲ್ಲಿ ಪದವಿ ಹೊಂದಿದ್ದು, ಮಕ್ಕಳೊಂದಿಗೆ ಕೆಲಸ ಮಾಡಿದ ಕನಿಷ್ಟ 3 ವರ್ಷಗಳ ಅನುಭವ ಹೊಂದಿರಬೇಕು. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು/ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.\ ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯ ನಿರ್ವಹಿಸಲು ಹಾಗೂ ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25ರೊಳಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮೊದಲನೇ ಮಹಡಿ, ಮಹಾತ್ಮಗಾಂಧಿ ಕ್ರೀಡಾಂಗಣ, ತುಮಕೂರು ಇವರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 2:30 ಗಂಟೆಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು. ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ವೀಕೃತ ಮನವಿಗಳನ್ನು ಜಿಲ್ಲಾಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಅಧ್ಯಕ್ಷರಿಗೆ ಸಲ್ಲಿಸಲಿದ್ದಾರೆ. ಸಮಿತಿ ಸದಸ್ಯರಾದ ರಮೇಶ್ ಲಕ್ಷ್ಮಣರಾವ್ ಜಾರಕಿಹೋಳಿ, ಡಾ.ಎಂ.ಚಂದ್ರಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ಎಸ್.ಎನ್. ಸುಬ್ಬಾರೆಡ್ಡಿ(ಚಿನ್ನಕಾಯಲಪಲ್ಲಿ), ಬಸವಗೌಡ ತುರುವಿಹಾಳ್, ಅಬ್ಬಯ್ಯ ಪ್ರಸಾದ, ಬಸವರಾಜ್ ಮತ್ತಿಮೂಡ್, ನೇಮಿರಾಜ್ ನಾಯ್ಕ, ಎನ್. ಶ್ರೀನಿವಾಸಯ್ಯ, ಬಿ. ದೇವೇಂದ್ರಪ್ಪ, ಕೆ.ಸಿ. ವೀರೇಂದ್ರ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು  ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಈ ವರ್ಷ ದೀಪಾವಳಿಯು ಅಕ್ಟೋಬರ್ 31 ರಂದು ಮತ್ತು ಶನಿದೇವನು ನಿಖರವಾಗಿ 15 ದಿನಗಳ ನಂತರ ಅಂದರೆ 15 ನವೆಂಬರ್ 2024 ರಂದು ನೇರವಾಗಿ ತಿರುಗುತ್ತಾನೆ. ಶನಿದೇವನು ನೇರವಾಗಿರುವುದರಿಂದ, ಇದು ಖಂಡಿತವಾಗಿಯೂ ಎಲ್ಲಾ ರಾಶಿಚಕ್ರ…

Read More

ಪಾವಗಡ: ಪಟ್ಟಣದ ಸಿರಾ ರಸ್ತೆ ನಾಗರಕಟ್ಟೆ ಬಳಿ ಬಸ್ ಗಾಗಿ ಕಾದು ಕುಳಿತಿದ್ದ ಓರ್ವ ವ್ಯಕ್ತಿಯ ಮೇಲೆ ದುರಸ್ತಿ ಕಾರ್ಯದ ವಾಣಿಜ್ಯ ಮಳಿಗೆಯ ದೊಡ್ಡ ಡಿಮ್ಮಿ ಕಳಚಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಭಾನುವಾರ ನಡೆದಿದೆ. ಚರಂಡಿ ನಿರ್ಮಾಣಕ್ಕಾಗಿ ವಾಣಿಜ್ಯ ಮಳಿಗೆ ಒತ್ತುವರಿ ತೆರವುಗೊಳಿಸಲು  ಮಳಿಗೆಯ ಕೆಲ ಭಾಗ ದುರಸ್ತಿಕಾರ್ಯ ನಡೆಯುತ್ತಿದ್ದೂ  ಸುಮಾರು ಆರು ತಿಂಗಳುಗಳಿಂದ  ಕೆಲ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿದ್ದು , ಈ ಸ್ಥಳದ ಮುಂಭಾಗದಲ್ಲಿ ಪ್ರತಿನಿತ್ಯ ಬಸ್ ಗಾಗಿ ಕಾಯುತ್ತಿರುವುದು ಸರ್ವೇಸಾಮಾನ್ಯವಾಗಿದೆ. ಭಾನುವಾರ ಸಂಜೆ ನಾಲ್ಕು ಗಂಟೆ ಸಮಯದಲ್ಲಿ ವಾಣಿಜ್ಯ ಮಳಿಗೆಯ  ಮೇಲ್ಛಾವಣಿಯ ದೊಡ್ಡ ಡಿಮ್ಮಿ  ಆಧಾರ ಸ್ಥಂಭವಿಲ್ಲದೆ  ಏಕಾಏಕಿ ನೆಲಕ್ಕುರುಳಿದೆ.  ಇದೇ ವೇಳೆ ಬಸ್ ಗಾಗಿ ಕಾಯುತ್ತಿದ್ದ ವ್ಯಕ್ತಿಯ ತಲೆಗೆ ದೊಡ್ಡ ಡಿಮ್ಮಿ ಉರುಳಿದೆ. ಪರಿಣಾಮವಾಗಿ ಅವರ ತಲೆ, ಕೈ ಕಾಲುಗಳಿಗೆ ಗಾಯವಾಗಿತ್ತು. ತಕ್ಷಣವೇ ಸ್ಥಳೀಯ ಆಟೋ ಚಾಲಕರು 108 ವಾಹನಕ್ಕೆ ಕರೆ ಮಾಡಿ, ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ವಾಣಿಜ್ಯ ಮಳಿಗೆಯ…

Read More

ತುಮಕೂರು:  ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ವೈಭವಯುತವಾಗಿ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಮೆರವಣಿಗೆ ನಡೆಸುವ, ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ದ ಚಿತ್ರ ಪಾಲ್ಗೊಳ್ಳುವಿಕೆ, ಕನ್ನಡ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟ, ಕನ್ನಡ ಕವಿ, ಸಾಹಿತಿಗಳ ಭಾವಚಿತ್ರ, ಬ್ಯಾನರ್‌ಗಳ ಅಳವಡಿಕೆಗೆ ಅನುಮತಿ ನೀಡಬೇಕು. ಕನ್ನಡ ನಾಡು–ನುಡಿಗಾಗಿ ಸೇವೆ ಸಲ್ಲಿಸಿದವರನ್ನು ಮಾತ್ರ ಸನ್ಮಾನಿಸಬೇಕು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಅಧೀನ ಅಧಿಕಾರಿಗಳು, ಸಿಬ್ಬಂದಿ ತಪ್ಪದೇ ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕೆಂದು ಕನ್ನಡಪರ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ,…

Read More

ತುಮಕೂರು ಜಿಲ್ಲಾಡಳಿತದ ವತಿಯಿಂದ ಪ್ರಪ್ರಥಮ ಬಾರಿಗೆ ತುಮಕೂರು ಆಯೋಜಿಸಲಾಗಿದ್ದ ತುಮಕೂರು ದಸರಾ ಉತ್ಸವದಲ್ಲಿ ಧಾರ್ಮಿಕ ಆಚರಣೆಗಳಿಂದ ಅಭೂತಪೂರ್ವ ಯಶಸ್ಸಿಗೆ ಕಾರಣಕರ್ತರಾದ ಜಿಲ್ಲಾ ಅರ್ಚಕರ ಸಂಘಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ದಸರಾ ಉತ್ಸವದ ಪ್ರಯುಕ್ತ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಚಾಮುಂಡೇಶ್ವರಿ ದೇವಿಗೆ ಶರನ್ನವರಾತ್ರಿಯ 9 ದಿನಗಳ ಕಾಲ ವಿವಿಧ ಅಲಂಕಾರ ಪೂಜೆ, ಪುಣ್ಯಾಹ, ಹೋಮ, ಪೂರ್ಣಾಹುತಿ, ಮತ್ತಿತರ ಪೂಜಾ ಸೇವೆಗಳು ಹಾಗೂ ವಿಜಯ ದಶಮಿಯ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ದೇವಿಯ ಕೃಪಾಶೀರ್ವಾದಕ್ಕೆ ಪಾತ್ರರಾಗಿದ್ದಾರೆ. ದಸರಾ ಉತ್ಸವದ ಸಕಲ ಧಾರ್ಮಿಕ ಪೂಜಾ ಸೇವೆಗಳ ನೇತೃತ್ವ ವಹಿಸಿಕೊಂಡಿದ್ದ ಜಿಲ್ಲಾ ಅರ್ಚಕರ ಸಂಘದ ಅಧ್ಯಕ್ಷ ವಿ. ರಾಮತೀರ್ಥನ್ ಅವರಿಗೂ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಪ್ರತಿ ದಿನ ಪೂಜಾ ಕೈಂಕರ್ಯಗಳನ್ನು ನಿರ್ವಿಘ್ನವಾಗಿ ನಡೆಸಲು ಸಹಕರಿಸಿದ ದಸರಾ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಡಾ:…

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಯಡಿಯೂರು ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಜಯದಶಮಿ ದಿನದಂದು ಅಪರ ಜಿಲ್ಲಾಧಿಕಾರಿ ಹಾಗೂ ದೇವಸ್ಥಾನದ ಆಡಳಿತಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅವರು ಕದಳೀ ಛೇದನದ ಮೂಲಕ ಬನ್ನಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಕ್ತಾಧಿಗಳು ಉಪಸ್ಥಿತರಿದ್ದು, ಪೂಜಾ ಸೇವೆಯನ್ನು ಕಣ್ತುಂಬಿಕೊಂಡು ಸಂಭ್ರಮಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ, ಲೋಕಾಯುಕ್ತ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ, ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ, ಜಿಲ್ಲೆಯಲ್ಲಿ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರಲ್ಲದೆ, ಈವರೆಗೆ ನೋಂದಣಿಯಾದ ದೂರು ಪ್ರಕರಣಗಳ ಮಾಹಿತಿ ಪಡೆದ ಅವರು, ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ…

Read More